ಸ್ಥಳೀಯ
Beltangadi-ಬೆಳ್ತಂಗಡಿ : ಪತ್ನಿಯ ಶಂಕಾಸ್ಪದ ಸಾವಿನ 5 ದಿನದ ಬಳಿಕ ಪತಿಯೂ ನೇಣಿಗೆ ಶರಣು – ಅಕ್ಕನ ಸಾವಿನ ಬಗ್ಗೆ ಸಹೋದರನ ಅನುಮಾನ | ದೂರು
ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ (ಮೃತ) ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ. 23ರಂದು ಬೆಳಕಿಗೆ ಬಂದಿದೆ. ಕೆಲವೇ ದಿನಗಳ ಹಿಂದೆ ಅವರ ಪತ್ನಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿದ್ದು, ಇದೀಗ ಪತಿಯೂ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಬೆಳ್ತಂಗಡಿ, ಸೆ.23: ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ (ಮೃತ) ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ. 23ರಂದು ಬೆಳಕಿಗೆ ಬಂದಿದೆ. ಕೆಲವೇ ದಿನಗಳ ಹಿಂದೆ ಅವರ ಪತ್ನಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿದ್ದು, ಇದೀಗ ಪತಿಯೂ ಮೃತಪಟ್ಟಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಕಳೆದ ಎರಡು–ಮೂರು ದಿನಗಳಿಂದ ತನಿಯಪ್ಪ ಗೌಡ ಅವರು ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು. ಈ ವೇಳೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ರಾಧಾಕೃಷ್ಣ ಗುತ್ತು, ಕುಶಾಲಪ್ಪ ಗೌಡ ಬದ್ರಿಜಾಲು, ಸುಬ್ರಾಯ ಗೌಡ ಬದ್ರಿಜಾಲು ಹಾಗೂ ಶೀನಪ್ಪ ನಾಯ್ಕ ಮುಚ್ಚಿರಡ್ಕ ಅವರು ಹುಡುಕಾಟ ನಡೆಸಿದಾಗ, ತನಿಯಪ್ಪ ಗೌಡ ಅವರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇದಕ್ಕೂ ಐದು ದಿನಗಳ ಹಿಂದೆ ತನಿಯಪ್ಪ ಗೌಡ ಅವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಮನೆಯ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಿನ್ನಮ್ಮ ಅವರ ಸಹೋದರ ಗಂಗಾಧರ ಗೌಡ ಅವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಪತ್ನಿಯ ಸಾವಿನ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪತಿಯೂ ಮನೆಯಲ್ಲಿ ನೇಣಿಗೆ ಶರಣಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಎರಡೂ ಸಾವುಗಳಿಗೆ ಪರಸ್ಪರ ಸಂಬಂಧವಿದೆಯೇ ಅಥವಾ ಪ್ರತ್ಯೇಕ ಕಾರಣಗಳಿವೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
-
ಅಂತರ ರಾಜ್ಯ5 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















