ಬಿಗ್ ನ್ಯೂಸ್
Dr. Harikrishna Panaje-ಡಾ। ಹರಿಕೃಷ್ಣ ಪಾಣಾಜೆ ಇವರಿಗೆ “ಆಯುರ್ಭೂಷಣ” ಕಿರೀಟ; ಪುತ್ತೂರಿನ ಆಯುರ್ವೇದ ವೈದ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಡಾ. ಹರಿಕೃಷ್ಣ ಪಾಣಾಜೆಗೆ ಕನ್ನಡ ಪ್ರಭ–ಏಷ್ಯಾನೆಟ್ ಸುವರ್ಣ ನ್ಯೂಸ್ ಗೌರವ
ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಪಾರಂಪರಿಕ ಜ್ಞಾನವನ್ನು ಉಳಿಸಿ ಬೆಳೆಸುವುದರ ಜೊತೆಗೆ, ಔಷಧ ಸಂಶೋಧನೆ, ಉತ್ಪಾದನೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ ಹಾಗೂ ಕಲೆ–ಸಂಸ್ಕೃತಿಯ ಪೋಷಣೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಪುತ್ತೂರಿನ ಖ್ಯಾತ ಆಯುರ್ವೇದ ವೈದ್ಯ, ಉದ್ಯಮಿ ಹಾಗೂ ಕಲಾಪೋಷಕ ಡಾ. ಹರಿಕೃಷ್ಣ ಪಾಣಾಜೆ ಅವರು ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯುರ್ವೇದ ಕ್ಷೇತ್ರದ ಅಪ್ರತಿಮ ಸಾಧಕರಿಗೆ ಜಂಟಿಯಾಗಿ ನೀಡಲ್ಪಡುವ ಪ್ರತಿಷ್ಠಿತ ‘ಆಯುರ್ಭೂಷಣ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಪುತ್ತೂರು: ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಪಾರಂಪರಿಕ ಜ್ಞಾನವನ್ನು ಉಳಿಸಿ ಬೆಳೆಸುವುದರ ಜೊತೆಗೆ, ಔಷಧ ಸಂಶೋಧನೆ, ಉತ್ಪಾದನೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ ಹಾಗೂ ಕಲೆ–ಸಂಸ್ಕೃತಿಯ ಪೋಷಣೆಯಲ್ಲಿ ವಿಶಿಷ್ಟ ಕೊಡುಗೆ ನೀಡಿರುವ ಪುತ್ತೂರಿನ ಖ್ಯಾತ ಆಯುರ್ವೇದ ವೈದ್ಯ, ಉದ್ಯಮಿ ಹಾಗೂ ಕಲಾಪೋಷಕ ಡಾ. ಹರಿಕೃಷ್ಣ ಪಾಣಾಜೆ ಅವರು ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯುರ್ವೇದ ಕ್ಷೇತ್ರದ ಅಪ್ರತಿಮ ಸಾಧಕರಿಗೆ ಜಂಟಿಯಾಗಿ ನೀಡಲ್ಪಡುವ ಪ್ರತಿಷ್ಠಿತ ‘ಆಯುರ್ಭೂಷಣ’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಹರಿಕೃಷ್ಣ ಪಾಣಾಜೆ ಅವರಿಗೆ ಈ ಪ್ರತಿಷ್ಠಿತ ಗೌರವವನ್ನು ಪ್ರದಾನ ಮಾಡಲಾಗುವುದು. ಮಾಧ್ಯಮ, ವೈದ್ಯಕೀಯ, ಉದ್ಯಮ, ಕಲೆ–ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಗಣ್ಯರು ಹಾಗೂ ಗಣ್ಯ ಅತಿಥಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.
ಆರು ದಶಕಗಳ ಆಯುರ್ವೇದ ಪರಂಪರೆ
ಭಾರತೀಯ ಪಾರಂಪರಿಕ ಆಯುರ್ವೇದ ವೈದ್ಯಕೀಯ ಪದ್ಧತಿಯ ಸಂರಕ್ಷಣೆ ಮತ್ತು ಅಭಿವೃದ್ಧಿ, ಔಷಧ ಸಂಶೋಧನೆ ಹಾಗೂ ಉತ್ಪಾದನೆ, ವೈದ್ಯಕೀಯ ಸೇವೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ, ಶಿಕ್ಷಣ ಮತ್ತು ಕಲೆ–ಸಂಸ್ಕೃತಿಯ ಪೋಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಾಲ್ಕು ದಶಕಗಳಿಗೂ ಅಧಿಕ ಕಾಲ ವಿಶಿಷ್ಟ ಸೇವೆ ಸಲ್ಲಿಸಿರುವ ಬಹುಮುಖ ವ್ಯಕ್ತಿತ್ವ ಡಾ. ಹರಿಕೃಷ್ಣ ಪಾಣಾಜೆ.
ಪಾಣಾಜೆಯಲ್ಲಿ 1962ರಿಂದ ಖ್ಯಾತ ಆಯುರ್ವೇದ ವೈದ್ಯರು ಹಾಗೂ ಯಕ್ಷಗಾನ ಕಲಾವಿದರು ಆದ ಶ್ರೀ ಕಣ್ಣ ವೈದ್ಯರು ಪಾಣಾಜೆಯಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಔಷಧಾಲಯದ ಮೂಲಕ ಆರಂಭಿಸಿದ ಚಿಕಿತ್ಸಾ ಪರಂಪರೆಯನ್ನು ಮುಂದುವರಿಸಿಕೊಂಡು, ಡಾ. ಹರಿಕೃಷ್ಣ ಪಾಣಾಜೆ ಅವರು 1986ರಲ್ಲಿ ಪರ್ಲಡ್ಕದಲ್ಲಿ ಶ್ರೀ ದುರ್ಗಾ ಕ್ಲಿನಿಕ್ ತೆರೆಯುವ ಮೂಲಕ ತನ್ನ ವೈದ್ಯಕೀಯ ಜೀವನವನ್ನು ಆರಂಭಿಸಿದರು. 40 ವರ್ಷಗಳ ದೀರ್ಘ ವೈದ್ಯಕೀಯ ಅನುಭವ ಅವರದ್ದಾಗಿದೆ .ನಂತರ 1988ರಲ್ಲಿ SDP Remedies & Research Centre ಅನ್ನು ಸ್ಥಾಪಿಸಿ, ಪಾರಂಪರಿಕ ಆಯುರ್ವೇದ ಜ್ಞಾನವನ್ನು ಆಧುನಿಕ ತಂತ್ರಜ್ಞಾನ, ಗುಣಮಟ್ಟದ ಉತ್ಪಾದನಾ ವ್ಯವಸ್ಥೆ ಮತ್ತು ಸಂಶೋಧನಾ ದೃಷ್ಟಿಕೋನದೊಂದಿಗೆ ಸಂಯೋಜಿಸುವ ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.
ಇಂದು SDP Ayurveda ಸಂಸ್ಥೆಯು 60ಕ್ಕೂ ಅಧಿಕ ವರ್ಷಗಳ ಆಯುರ್ವೇದ ಪರಂಪರೆಯನ್ನು ಮುಂದುವರಿಸಿಕೊಂಡು, 160ಕ್ಕೂ ಅಧಿಕ Classical Ayurvedic Preparations ಹಾಗೂ 40ಕ್ಕೂ ಅಧಿಕ Patented Preparationsಗಳನ್ನು ಹೊಂದಿರುವ ಪ್ರಮುಖ ಆಯುರ್ವೇದ ಔಷಧ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.
ಸಂಸ್ಥೆಯ ಉತ್ಪನ್ನ ಶ್ರೇಣಿಯಲ್ಲಿ ಅಸನಾದಿ ಗಣ ಪ್ಲಸ್, ತುಳಸಿ ಕಂಠಕಾರಿ,ಅಮೃತಾರಿಷ್ಟ, ದ್ರಾಕ್ಷಾರಿಷ್ಟ, ದಶಮೂಲಾರಿಷ್ಟ, ಚ್ಯವನಪ್ರಾಶ, ಅಶ್ವಗಂಧಾದಿ ಲೇಹ ಮುಂತಾದ ಶ್ರೇಷ್ಠ ತಯಾರಿಕೆಗಳು ಸೇರಿದಂತೆ ವಿವಿಧ ಚೂರ್ಣ, ಅರಿಸ್ಟ ,ಕಷಾಯ, ಗುಗ್ಗುಳು, ತೈಲ, ಲೇಹ, ಅರ್ಕ,ಮಾತ್ರೆ ಹಾಗೂ Proprietary formulationsಗಳು ಸೇರಿವೆ. ಈ ಮೂಲಕ ಆಯುರ್ವೇದದ ಪಾರಂಪರಿಕ ಔಷಧ ತಯಾರಿಕಾ ಪದ್ಧತಿಗಳನ್ನು ಆಧುನಿಕ ಗುಣಮಟ್ಟದ ಮಾನದಂಡಗಳೊಂದಿಗೆ ಮುಂದುವರಿಸಲಾಗುತ್ತಿದೆ.
ಇದು ಕೇವಲ ಒಂದು ಔಷಧ ತಯಾರಿಕಾ ಸಂಸ್ಥೆಯ ಬೆಳವಣಿಗೆಯಲ್ಲ, ತಲೆಮಾರುಗಳಿಂದ ಬಂದ ಭಾರತೀಯ ವೈದ್ಯಕೀಯ ಜ್ಞಾನವನ್ನು ಆಧುನಿಕ ಕಾಲಘಟ್ಟದಲ್ಲಿಯೂ ಜೀವಂತವಾಗಿರಿಸಿ, ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿರಂತರ ಪ್ರಯತ್ನದ ಫಲವಾಗಿದೆ.
ಪರಂಪರೆ ಮತ್ತು ಆಧುನಿಕತೆಯ ಸಮನ್ವಯ
ಭಾರತದ ಸಾವಿರಾರು ವರ್ಷಗಳ ಆಯುರ್ವೇದ ಜ್ಞಾನವನ್ನು ಕೇವಲ ಪುರಾತನ ಪರಂಪರೆಯಾಗಿ ಉಳಿಸದೆ, ಆಧುನಿಕ ಸಮಾಜಕ್ಕೂ ಉಪಯುಕ್ತವಾಗುವ ರೀತಿಯಲ್ಲಿ ಮುಂದಿನ ಪೀಳಿಗೆಗೆ ತಲುಪಿಸುವುದು ಡಾ. ಪಾಣಾಜೆ ಅವರ ಪ್ರಮುಖ ಆಶಯವಾಗಿದೆ.
ಆಯುರ್ವೇದ ಚಿಕಿತ್ಸೆಯೊಂದಿಗೆ ಮರ್ಮ ಚಿಕಿತ್ಸಾ ಪದ್ಧತಿ ಹಾಗೂ ಅಕ್ಯುಪಂಕ್ಚರ್ ಚಿಕಿತ್ಸೆಯನ್ನೂ ಅಧ್ಯಯನ ಮಾಡಿ, ಅವುಗಳ ಜ್ಞಾನವನ್ನು ತಮ್ಮ ಚಿಕಿತ್ಸಾ ಕಾರ್ಯದಲ್ಲಿ ಅಳವಡಿಸಿಕೊಂಡಿದ್ದಾರೆ. ಇದು ಅವರ ನಿರಂತರ ಅಧ್ಯಯನಶೀಲತೆ, ವಿಶಾಲ ವೈದ್ಯಕೀಯ ದೃಷ್ಟಿಕೋನ ಹಾಗೂ ಸಮಗ್ರ ಆರೋಗ್ಯದ ಬದ್ಧತೆಗೆ ಸಾಕ್ಷಿಯಾಗಿದೆ.
ಅಲ್ಲದೆ ಔಷಧೀಯ ಸಸ್ಯಗಳು, ಅವುಗಳ ಗುಣಧರ್ಮ ಹಾಗೂ ಆಯುರ್ವೇದದ ಮಹತ್ವದ ಕುರಿತು ಪತ್ರಿಕೆಗಳಲ್ಲಿ ನಿರಂತರವಾಗಿ ಲೇಖನ ಮತ್ತು ಮಾಹಿತಿಯನ್ನು ಪ್ರಕಟಿಸುವ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಆ ಮೂಲಕ ಅವರ ಜ್ಞಾನ ಮತ್ತು ಅನುಭವ ಚಿಕಿತ್ಸಾಲಯದ ವ್ಯಾಪ್ತಿಯನ್ನು ಮೀರಿ ಸಮಾಜದ ಆರೋಗ್ಯ ಜಾಗೃತಿಗೂ ತಲುಪುತ್ತಿದೆ.
ಗುಣಮಟ್ಟ ಮತ್ತು ಉದ್ಯಮಶೀಲತೆಗೆ ಮಾನ್ಯತೆ
SDP Ayurveda ಸಂಸ್ಥೆಯ ಗುಣಮಟ್ಟ ಮತ್ತು ಉದ್ಯಮಶೀಲತೆಗೆ ಹಲವು ಮಹತ್ವದ ಮಾನ್ಯತೆಗಳು ದೊರೆತಿವೆ.
2018ರಲ್ಲಿ ಪುತ್ತೂರಿನ ಮೂಂಡೂರು ಎಂಬಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕವನ್ನು ಆರಂಭಿಸುವುದರ ಜೊತೆಗೆ Sir ‘M. Visvesvaraya Manufacturing Excellence Award’ ಪಡೆದಿರುವುದು ಸಂಸ್ಥೆಯ ಉತ್ಪಾದನಾ ಶ್ರೇಷ್ಠತೆಗೆ ದೊರೆತ ಮಹತ್ವದ ಗೌರವವಾಗಿದೆ. 2019ರಲ್ಲಿ KSFC ‘Best Entrepreneur Award’ ಹಾಗೂ 2022ರಲ್ಲಿ ISO ಪ್ರಮಾಣೀಕರಣ ಸಂಸ್ಥೆಯ ಗುಣಮಟ್ಟ ಮತ್ತು ಉದ್ಯಮಶೀಲತೆಗೆ ಮತ್ತಷ್ಟು ಮನ್ನಣೆ ನೀಡಿವೆ.
ಇವರ ಈ ಎಲ್ಲ ಸೇವಾ ಸಾಧನೆ ಗಾಗಿ ‘ಸಮಾಜ ರತ್ನ’ ಅವಾರ್ಡ್, ‘ವೈದ್ಯ ರತ್ನ’ ಅವಾರ್ಡ್, ‘ಆಯುಷ್ ಶ್ರೀ’ ಪ್ರಶಸ್ತಿ, ‘ಆಯುರ್ವೇದ ವಿಶ್ವ ರತ್ನ’ “ಕಲಾಶ್ರಯ “ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಸಂದಿದೆ.
ಡಾ. ಪಾಣಾಜೆ ಅವರು ಕಳೆದ 23 ವರ್ಷಗಳಿಂದ ರೋಟರಿ ಕ್ಲಬ್‌ನ ಸದಸ್ಯರಾಗಿ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು, ರೋಟರಿ ಕ್ಲಬ್‌ನ ಪೂರ್ವಾಧ್ಯಕ್ಷರಾಗಿ, ಪಾಣಾಜೆ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರಾಗಿ ಅಲ್ಲದೆ ಆಯುಷ್ ಫೆಡರೇಶನ್ ಆಫ್ ಇಂಡಿಯಾ, ಪುತ್ತೂರು ಘಟಕದ ಅಧ್ಯಕ್ಷರಾಗಿ ಆಯುರ್ವೇದ ಹಾಗೂ ಆಯುಷ್ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿ ಮತ್ತು ಜನಜಾಗೃತಿಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
22 ವರ್ಷಗಳ ‘ಕಲೋಪಾಸನಾ’ – ಪುತ್ತೂರಿನ ಸಾಂಸ್ಕೃತಿಕ ಹೆಮ್ಮೆ
ಡಾ. ಹರಿಕೃಷ್ಣ ಪಾಣಾಜೆ ಅವರ ವ್ಯಕ್ತಿತ್ವದ ಮತ್ತೊಂದು ವಿಶಿಷ್ಟ ಆಯಾಮವೆಂದರೆ ಕಲೆ ಮತ್ತು ಸಂಸ್ಕೃತಿಯ ಮೇಲಿನ ಅವರ ಅಪಾರ ಪ್ರೀತಿ ಹಾಗೂ ನಿರಂತರ ಪೋಷಣೆ.
2005ರಲ್ಲಿ ಆರಂಭವಾದ “ಕಲೋಪಾಸನಾ” ಇಂದು 22 ವರ್ಷಗಳ ನಿರಂತರ ಕಲಾಸೇವೆಯ ಪರಂಪರೆಯಾಗಿ ಬೆಳೆದಿದೆ. ದೇಶದ ವಿವಿಧ ಭಾಗಗಳ ರಾಷ್ಟ್ರಮಟ್ಟದ ಶ್ರೇಷ್ಠ ಸಂಗೀತ ಕಲಾವಿದರನ್ನು ಪುತ್ತೂರಿಗೆ ಆಹ್ವಾನಿಸಿ, ಜನಸಾಮಾನ್ಯರಿಗೆ ಉಚಿತವಾಗಿ ಉನ್ನತ ಮಟ್ಟದ ಕಲಾ–ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸುವ ಅವಕಾಶ ಕಲ್ಪಿಸುತ್ತಿರುವುದು ಅಪೂರ್ವ ಸೇವೆಯಾಗಿದೆ.
ಕಲೋಪಾಸನಾ ವೇದಿಕೆಯಲ್ಲಿ ಎಂ. ಬಾಲಮುರಳಿಕೃಷ್ಣ, ಉನ್ನಿಕೃಷ್ಣ, ಬಾಂಬೆ ಜಯಶ್ರೀ, ಸಂಜಯ್ ಸುಬ್ರಹ್ಮಣ್ಯ, ಟಿ.ಎಂ. ಕೃಷ್ಣ, ತ್ರಿಶೂರ್ ಬ್ರದರ್ಸ್, ಮಲ್ಲಾಡಿ ಬ್ರದರ್ಸ್, ಹೈದರಾಬಾದ್ ಬ್ರದರ್ಸ್, ರಂಜನಿ–ಗಾಯತ್ರಿ, ಅನಹಿತಾ–ಅಪೂರ್ವ, ಸಂದೀಪ್ ನಾರಾಯಣ್, ಜಯತೀರ್ಥ ಮೇವುಂಡಿ, ಸುಧಾ ರಘುನಾಥನ್ ಸೇರಿದಂತೆ ರಾಷ್ಟ್ರಮಟ್ಟದ ಅನೇಕ ಮೇರು ಕಲಾವಿದರು ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.
ಭರತನಾಟ್ಯ ಕ್ಷೇತ್ರದ ಶ್ರೇಷ್ಠ ಕಲಾವಿದರು ಹಾಗೂ ಚಿತ್ರರಂಗದ ಕಲಾವಿದರಾದ ಶ್ರೀಧರ, ಲಕ್ಷ್ಮಿ ಗೋಪಾಲಸ್ವಾಮಿ, ನವ್ಯ ನಾಯರ್, ಪಾರ್ಶ್ವನಾಥ್, ಶಿಜು ನಂಬಿಯಾರ್ ಸೇರಿದಂತೆ ಅನೇಕ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲಾಗಿದೆ.
ಜೊತೆಗೆ ಯಕ್ಷಗಾನದ ತೆಂಕುತಿಟ್ಟು ಹಾಗೂ ಬಡಗುತಿಟ್ಟು ಎರಡೂ ಪರಂಪರೆಗಳ ಪ್ರಯೋಗಗಳಿಗೂ ಕಲೋಪಾಸನಾ ವೇದಿಕೆ ಒದಗಿಸಿದೆ.
ಪುತ್ತೂರಿನಂತಹ ನಗರದಲ್ಲಿ ದೇಶದ ವಿವಿಧ ಭಾಗಗಳ ಶ್ರೇಷ್ಠ ಕಲಾವಿದರನ್ನು ಕರೆಸಿ, ಯಾವುದೇ ಪ್ರವೇಶ ಶುಲ್ಕವಿಲ್ಲದೆ ಜನಸಾಮಾನ್ಯರಿಗೆ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಯಕ್ಷಗಾನ ಹಾಗೂ ಪಾರಂಪರಿಕ ಕಲಾಪ್ರಕಾರಗಳನ್ನು ತಲುಪಿಸಿರುವುದು ಎರಡು ದಶಕಗಳಿಗೂ ಮೀರಿದ ಅಪೂರ್ವ ಸಾಂಸ್ಕೃತಿಕ ಚಳವಳಿಯಾಗಿದೆ.
ಕಲಾವಿದರನ್ನು ಗೌರವಿಸುವುದರ ಜೊತೆಗೆ, ಹೊಸ ತಲೆಮಾರಿನ ಕಲಾರಸಿಕರಲ್ಲಿ ಭಾರತೀಯ ಶಾಸ್ತ್ರೀಯ ಮತ್ತು ಪಾರಂಪರಿಕ ಕಲೆಗಳ ಬಗ್ಗೆ ಆಸಕ್ತಿ ಹಾಗೂ ಅಭಿರುಚಿಯನ್ನು ಬೆಳೆಸುವ ಮಹತ್ವದ ಕಾರ್ಯವೂ ಈ ಮೂಲಕ ನಡೆಯುತ್ತಿದೆ.
ವೈದ್ಯರಾಗಿ ಆರೋಗ್ಯ ಸೇವೆ, ಉದ್ಯಮಿಯಾಗಿ ಗುಣಮಟ್ಟದ ಔಷಧ ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿ, ಸಂಶೋಧಕರಾಗಿ ಆಯುರ್ವೇದದ ಅಭಿವೃದ್ಧಿ, ಜ್ಞಾನಿಯಾಗಿ ಔಷಧೀಯ ಸಸ್ಯಗಳ ಅರಿವು, ಸಾರ್ವಜನಿಕ ಸೇವಕರಾಗಿ ಸಮುದಾಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆ, ಆಯುಷ್ ಕ್ಷೇತ್ರದ ಸಂಘಟಕರಾಗಿ ಆಯುರ್ವೇದದ ಪ್ರಸಾರ, ಹಾಗೂ ಕಲಾಪೋಷಕರಾಗಿ ಭಾರತೀಯ ಕಲೆ–ಸಂಸ್ಕೃತಿಯ ಸಂರಕ್ಷಣೆ—ಈ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹೆಜ್ಜೆ ಗುರುತು ಮೂಡಿಸಿರುವ ಡಾ. ಹರಿಕೃಷ್ಣ ಪಾಣಾಜೆ ಅವರು ಪುತ್ತೂರಿನ ಹೆಮ್ಮೆಯ ಬಹುಮುಖ ಸಾಧಕರಾಗಿದ್ದಾರೆ.
ಅವರ ಸೇವೆ ಮತ್ತು ಸಾಧನೆ ಕೇವಲ ಒಬ್ಬ ವ್ಯಕ್ತಿಯ ಯಶೋಗಾಥೆಯಲ್ಲ. ಅದು ಭಾರತೀಯ ಆಯುರ್ವೇದ ಪರಂಪರೆ, ಆರೋಗ್ಯ ಸೇವೆ, ಉದ್ಯಮಶೀಲತೆ, ಸಾರ್ವಜನಿಕ ಸೇವೆ ಹಾಗೂ ನಮ್ಮ ಶ್ರೀಮಂತ ಕಲೆ–ಸಂಸ್ಕೃತಿಯ ಮೇಲಿನ ನಿರಂತರ ಬದ್ಧತೆಯ ಪ್ರತೀಕವಾಗಿದೆ.
ಆಯುರ್ವೇದದ ಪಾರಂಪರಿಕ ಜ್ಞಾನವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಬದ್ಧತೆ, ವೈದ್ಯಕೀಯ ಕ್ಷೇತ್ರದಲ್ಲಿನ ನಿರಂತರ ಅಧ್ಯಯನಶೀಲತೆ, ಔಷಧ ಸಂಶೋಧನೆ ಮತ್ತು ಉತ್ಪಾದನೆಯಲ್ಲಿನ ಸಾಧನೆ, ಉದ್ಯಮಶೀಲತೆ, ಸಾರ್ವಜನಿಕ ಹಾಗೂ ಶೈಕ್ಷಣಿಕ ಸೇವೆ ಮತ್ತು ಭಾರತೀಯ ಕಲೆ–ಸಂಸ್ಕೃತಿಯ ಮೇಲಿನ ಅಪಾರ ಅಭಿಮಾನವನ್ನು ಮೇಳೈಸಿಕೊಂಡಿರುವ ಡಾ. ಹರಿಕೃಷ್ಣ ಪಾಣಾಜೆ ಅವರು ‘ಆಯುರ್ಭೂಷಣ’ ಪುರಸ್ಕಾರಕ್ಕೆ ಆಯ್ಕೆಯಾಗಿರುವುದು ಪುತ್ತೂರಿನ ಆಯುರ್ವೇದ ಪರಂಪರೆಗೆ, ವೈದ್ಯಕೀಯ ಕ್ಷೇತ್ರಕ್ಕೆ ಹಾಗೂ ಸಾಂಸ್ಕೃತಿಕ ಲೋಕಕ್ಕೆ ಸಂದಿರುವ ಹೆಮ್ಮೆಯ ಗೌರವವಾಗಿದೆ.
ಪಾಣಾಜೆಯವರು ಹಲವು ದಶಕಗಳ ಆಯುರ್ವೇದ ಪರಂಪರೆಯನ್ನು ಮುಂದುವರಿಸಿಕೊಂಡು, ವೈದ್ಯರಾಗಿ ಆರೋಗ್ಯ ಸೇವೆ, ಉದ್ಯಮಿಯಾಗಿ ಗುಣಮಟ್ಟದ ಔಷಧ ಉತ್ಪಾದನೆ, ಸಂಶೋಧಕರಾಗಿ ಆಯುರ್ವೇದದ ಅಭಿವೃದ್ಧಿ, ಸಾರ್ವಜನಿಕ ಸೇವಕರಾಗಿ ಸಮಾಜಮುಖಿ ಕಾರ್ಯ ಹಾಗೂ ಕಲಾಪೋಷಕರಾಗಿ 22 ವರ್ಷಗಳ ‘ಕಲೋಪಾಸನಾ’ ಮೂಲಕ ಭಾರತೀಯ ಶಾಸ್ತ್ರೀಯ ಮತ್ತು ಪಾರಂಪರಿಕ ಕಲೆಗಳಿಗೆ ನಿರಂತರ ವೇದಿಕೆ ಕಲ್ಪಿಸಿರುವ ಅವರ ಬಹುಮುಖ ಸೇವೆಗೆ ಸಂದಿರುವ ಈ ಗೌರವವು ಪುತ್ತೂರು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಗೂ ಹೆಮ್ಮೆಯ ವಿಷಯವಾಗಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
ಮಂಗಳೂರು
Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ
ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ
ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?
ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.
-
ಮಂಗಳೂರು7 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ10 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ12 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್12 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ12 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ11 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಅಪರಾಧ7 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಬಿಗ್ ನ್ಯೂಸ್11 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ


















