ಬಿಗ್ ನ್ಯೂಸ್
‘Puttur Deepotsava’-ಡಿ.8ರಂದು ʻಪುತ್ತೂರು ದೀಪೋತ್ಸವʼ: ಸಮಿತಿ ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್. ಬಲರಾಮ ಆಚಾರ್ಯ, ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.8ರಂದು ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.8ರಂದು ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ದೇರ್ಲ ಕರುಣಾಕರ ರೈ, ಪರ್ಲಡ್ಕ ಎಸ್ಡಿಪಿ ರೆಮಿಡೀಸ್ನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಾಧ್ಯಾಪಕರೂ ಆಗಿರುವ ದೈವನರ್ತಕ ಡಾ|ರವೀಶ್ ಪಡುಮಲೆ, ಸಂಚಾಲಕರಾಗಿ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ, ಕೋಶಾಧಿಕಾರಿಯಾಗಿ ಯಸ್.ದಾಮೋದರ ಪಾಟಾಳಿ, ಜೊತೆ ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಚೆಲ್ಯಡ್ಕ, ಸಹಕೋಶಾಧಿಕಾರಿಯಾಗಿ ಶ್ರೀಧರ್ ತೆಂಕಿಲ ಅವರನ್ನು ಆಯ್ಕೆ ಮಾಡಲಾಗಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ನಿವೃತ್ತ ಎಸ್ಪಿ ರಾಮದಾಸ್ ಗೌಡ ನೆಲ್ಲಿಕಟ್ಟೆ, ರೋಟರಿ ಕ್ಲಬ್ನ ಜಗಜೀವನ್ ದಾಸ್ ರೈ, ನೇಮಾಕ್ಷ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು, ರವಿ ಆಚಾರ್ಯ, ಚೇತನ್ ಉಪ್ಪಳಿಗೆ, ವಿರೂಪಾಕ್ಷ ಭಟ್, ಡಾ.ಗೋಪಾಲಕೃಷ್ಣಎಂ, ಪದ್ಮಾಸೋಲಾರ್ನ ಮಾಲಕ ಪದ್ಮನಾಭ ಶೆಟ್ಟಿ ಉಪೇಂದ್ರ ಬಲ್ಯಾಯ ದೇವಸ್ಯ, ನಿತಿನ್ ಪಕ್ಕಳ, ರಂಜಿತ್ ಬಂಗೇರ, ಜಗದೀಶ್ ಶೆಟ್ಟಿನೆಲ್ಲಿಕಟ್ಟೆ, ಡಾ|ರಾಜೇಶ್ ಬೆಜ್ಜಂಗಳ, ಜಗಮ್ಮೋಹನ್ ರೈ ಸೂರಂಬೈಲು, ಜೈರಾಜ್ ಭಂಡಾರಿ ನೋಣಾಲುಗುತ್ತು, ಪ್ರವೀಣ್ ಭಂಡಾರಿ, ಜಯಾನಂದ ಎಂ, ಮನೋಜ್ ಟಿ.ವಿ ಬೆದ್ರಾಳ, ಸದಾಶಿವ ಪೈ ದರ್ಬೆ, ರಾಧಾಕೃಷ್ಣಬೋರ್ಕರ್, ಕಿರಣ್ ಶೆಟ್ಟಿ ಪೆರ್ನೆ, ಆದರ್ಶ ಶೆಟ್ಟಿ ಉಪ್ಪಿನಂಗಡಿ, ಮನೋಹರ್ ಪಾಟಾಳಿ, ಮನ್ಮಥ ಶೆಟ್ಟಿ, ಶೇಖರ್ ಬ್ರಹ್ಮನಗರ, ಪವಿತ್ರ ರೈ ಬಾಳಿಲ, ವಾಸುದೇವ ಸಾಲ್ಯಾನ್, ರಮೇಶ್ ಪಜಿಮಣ್ಣು, ಸುಧಾಕರ್ ಕುಲಾಲ್, ಗೋಪಾಲಕೃಷ್ಣ ಭಟ್ ಶ್ರೀನಿಧಿ ದರ್ಬೆ ಅವರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಇತ್ತೀಚೆಗಷ್ಟೆ ದೇವಸ್ಥಾನದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗಿತ್ತು.
ಪುತ್ತೂರು ದೀಪೋತ್ಸವ ಕಾರ್ಯಕ್ರಮದ ವಿವರ:
ಬೆಳಿಗ್ಗೆ 6 ಗಂಟೆಗೆ ಭಜನಾ ಕಾರ್ಯಕ್ರಮ ಆರಂಭಗೊಳ್ಳಲಿದೆ. 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ, 11 ಗಂಟೆಗೆ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಮಧ್ಯಾಹ್ನ 2 ಗಂಟೆಯಿಂದ ತೆಂಕು ಮತ್ತು ಬಡಗು ತಿಟ್ಟುಗಳ ಕಲಾ ವೈಭವವನ್ನು ಒಟ್ಟುಗೂಡಿಸುವ ವಿಶೇಷ ಕಾರ್ಯಕ್ರಮ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದ್ದು ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸತೀಶ್ ಶೆಟ್ಟಿ ಪಟ್ಟ ಮತ್ತು ಜನಾಲೆ ರಾಘವೇಂದ್ರ ಆಚಾರ್ಯ ಅವರ ಭಾಗವತಿಕೆ ಪ್ರಮುಖ ಆಕರ್ಷಣೆಯಾಗಲಿದೆ.
ಸಂಜೆ ಗಂಟೆ 6ಕ್ಕೆ ಧರ್ಮ ಸಭೆ ನಡೆಯಲಿದ್ದು, ರಾತ್ರಿ ಗಂಟೆ 8ರಿಂದ ಖ್ಯಾತ ಸಂಗೀತ ಕಲಾವಿದ ಡಾ. ವಿದ್ಯಾಭೂಷಣ್ ಮತ್ತು ಅವರ ಪುತ್ರಿಯಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ತಿಳಿಸಿದ್ದಾರೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ24 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ3 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಶಿಕ್ಷಣ24 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಅಪರಾಧ2 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
Uncategorized4 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















