ಸ್ಥಳೀಯ
Dharmasthala-ಧರ್ಮಸ್ಥಳ: ಸೆ.28ರಿಂದ ಅ.4ರವರೆಗೆ 28ನೇ ವರ್ಷದ ಭಜನ ಕಮ್ಮಟ
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ.
ಬೆಳ್ತಂಗಡಿ, ಸೆ.25: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ವತಿಯಿಂದ 28ನೇ ವರ್ಷದ ಭಜನ ಕಮ್ಮಟ ಸೆ.28ರಿಂದ ಅ.4ರವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಜನ ಕಮ್ಮಟ ಆಯೋಜಿಸಲಾಗಿದೆ.
ಸೆ.28ರಂದು ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಜನ ಕಮ್ಮಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ಉಪಾಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅ.4ರಂದು ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಭಜನ ಕಮ್ಮಟದ ಸಮಾರೋಪ ಸಮಾರಂಭ ನಡೆಯಲಿದೆ. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ದಿವ್ಯ ಉಪಸ್ಥಿತಿ ವಹಿಸಲಿದ್ದು, ಶಾಸಕ ಹರೀಶ್ ಪೂಂಜಾ, ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಡಾ. ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಹಾಗೂ ಉಜಿರೆ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಭಜನ ಕಮ್ಮಟದ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ. ಶೆಟ್ಟಿ, ಶ್ರೀ ಧರ್ಮಸ್ಥಳ ಭಜನ ಪರಿಷತ್ನ ಪ್ರಾದೇಶಿಕ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಹಾಗೂ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬನ್ನೂರು ಉಪಸ್ಥಿತರಿರುವರು.
6 ಸಾವಿರಕ್ಕೂ ಅಧಿಕ ಭಜನ ಪಟುಗಳ ಸಂಗಮ
ಅ.4ರಂದು ಬೆಳಗ್ಗೆ 9.30ಕ್ಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕಾಸರಗೋಡು ಜಿಲ್ಲೆಗಳ ಆಯ್ದ ಭಜನ ಮಂಡಳಿಗಳ ಸುಮಾರು 400 ತಂಡಗಳ 6,000ಕ್ಕೂ ಅಧಿಕ ಭಜನ ಪಟುಗಳಿಂದ ಶೋಭಾಯಾತ್ರೆ ನಡೆಯಲಿದೆ. ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ಭಜನೆಯೊಂದಿಗೆ ನೃತ್ಯ ಭಜನ ಕಾರ್ಯಕ್ರಮ ಆಯೋಜಿಸಲಾಗಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















