Uncategorized
Protest-ಸೌಜನ್ಯ ಮರುತನಿಖೆಗೆ ರಚಿಸಿದ SIT ಬಗ್ಗೆ ಕುಸುಮಾವತಿ ಅಸಮಾಧಾನ; ಪುನರ್ರಚನೆಗೆ ಆಗ್ರಹಿಸಿ ‘ಕೊಂದವರು ಯಾರು?ʼ ತಂಡದಿಂದ ಪ್ರತಿಭಟನೆ | SITಯ ಇಬ್ಬರ ಬಗ್ಗೆ ಶೇಖರ್ ಲಾಯಿಲ ಗಂಭೀರ ಆರೋಪ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸೌಜನ್ಯ ಅವರ ತಾಯಿ ಕುಸುಮಾವತಿ, ತನಿಖಾ ತಂಡವನ್ನು ಪುನರ್ರಚಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು, ಸೆ.25: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ರಚಿಸಲಾಗಿರುವ ವಿಶೇಷ ತನಿಖಾ ದಳ (SIT)ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸೌಜನ್ಯ ಅವರ ತಾಯಿ ಕುಸುಮಾವತಿ, ತನಿಖಾ ತಂಡವನ್ನು ಪುನರ್ರಚಿಸುವಂತೆ ಆಗ್ರಹಿಸಿದ್ದಾರೆ.
‘ನನ್ನ ಮಗಳಿಗೆ ಸಂಭವಿಸಿದ ದುರಂತದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್ಗೆ ನಾವು ಎಂದಿಗೂ ಆಭಾರಿಯಾಗಿರುತ್ತೇವೆ. ಆದರೆ, ಮರುತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ಬಗ್ಗೆ ನಮಗೆ ಅಸಮಾಧಾನವಿದೆ’ ಎಂದು ಕುಸುಮಾವತಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶಿಸಿದಂತೆ ಪರಿಣತರ ತಂಡವನ್ನು ರಚಿಸಲಾಗಿಲ್ಲ ಎಂದಿದ್ದಾರೆ.

ಸೌಜನ್ಯ ಪ್ರಕರಣದ ಎಸ್ಐಟಿಯನ್ನು ಪುನರ್ರಚಿಸುವಂತೆ ಆಗ್ರಹಿಸಿ ‘ಕೊಂದವರು ಯಾರು?’ ಆಂದೋಲನದ ವತಿಯಿಂದ ಸೆ.25ರಂದು ಸಂಜೆ 4.30ರಿಂದ 6 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಂದೋಲನದ ವತಿಯಿಂದ ಬಹಿರಂಗ ಪತ್ರ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ಆದೇಶದ ಆಶಯಕ್ಕೆ ಅನುಗುಣವಾಗಿ ಎಸ್ಐಟಿಯನ್ನು ಕೂಡಲೇ ಪುನರ್ರಚಿಸುವಂತೆ ಒತ್ತಾಯಿಸಲಾಗಿದೆ.
ಆಂದೋಲನದ ಪ್ರಮುಖ ಬೇಡಿಕೆಗಳಲ್ಲಿ ಎಸ್ಐಟಿಗೆ ಡಿಜಿ ಅಥವಾ ಎಡಿಜಿಪಿ ದರ್ಜೆಯ ಅಧಿಕಾರಿಯನ್ನು ಮುಖ್ಯಸ್ಥರನ್ನಾಗಿ ನೇಮಿಸುವುದು, ತನಿಖೆಯಲ್ಲಿ ಫೋರೆನ್ಸಿಕ್ ಪರಿಣತಿ ಹೊಂದಿರುವ ಅಧಿಕಾರಿಗಳನ್ನು ಸೇರ್ಪಡೆಗೊಳಿಸುವುದು ಹಾಗೂ ಭ್ರಷ್ಟಾಚಾರ, ಕರ್ತವ್ಯಲೋಪ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸಿರುವ ಅಧಿಕಾರಿಗಳನ್ನು ತಂಡದಿಂದ ಹೊರಗಿಡುವುದು ಸೇರಿದೆ.
ಪ್ರಸ್ತುತ ಎಸ್ಐಟಿಗೆ ಐಜಿಪಿ ಎನ್. ಶಶಿಕುಮಾರ್ ನೇತೃತ್ವ ವಹಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಸಿಐಡಿ ಎಸ್ಪಿ ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಸದಸ್ಯರಾಗಿದ್ದಾರೆ.
ಎಸ್ಐಟಿ ರಚನೆಯ ಬೆನ್ನಲ್ಲೇ ಅದರಲ್ಲಿರುವ ಕೆಲವು ಅಧಿಕಾರಿಗಳ ನೇಮಕಾತಿ ಕುರಿತು ಆಕ್ಷೇಪ ವ್ಯಕ್ತವಾಗಿದೆ. ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರು ಎಸ್ಐಟಿ ಮುಖ್ಯಸ್ಥ ಎನ್. ಶಶಿಕುಮಾರ್ ಹಾಗೂ ಸದಸ್ಯ ವೆಂಕಟೇಶ್ ಪ್ರಸನ್ನ ಅವರನ್ನು ತಂಡದಿಂದ ಕೈಬಿಟ್ಟು, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ಕರ್ತವ್ಯಲೋಪ ಸೇರಿದಂತೆ ವಿವಿಧ ಆರೋಪಗಳು ಹಾಗೂ ತನಿಖೆಗಳು ನಡೆದಿವೆ ಎಂದು ಅವರು ಆರೋಪಿಸಿದ್ದಾರೆ.
14 ವರ್ಷಗಳ ನ್ಯಾಯದ ಹೋರಾಟಕ್ಕೆ ನ್ಯಾಯ ಸಿಗುವಂತಾಗಲು ತಕ್ಷಣ ಈ ಇಬ್ಬರೂ ಅಧಿಕಾರಿಗಳನ್ನು ಕೈಬಿಟ್ಟು ರಾಜ್ಯದ ಅತ್ಯಂತ ದಕ್ಷ , ಪ್ರಾಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೋರಾಟಗಾರ ಶೇಖರ್ ಲಾಯಿಲ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ಸೆ.21ರಂದು ಸೌಜನ್ಯ ಪ್ರಕರಣದ ಮರುತನಿಖೆಗೆ ಹೊಸ ಎಸ್ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
Uncategorized
Modi visit effect-ಮೋದಿ ಭೇಟಿ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಟ್ರಾಫಿಕ್ ಜಾಮ್, ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು..!
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಭದ್ರತಾ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿದ್ದರಿಂದ ದಕ್ಷಿಣ ಬೆಂಗಳೂರಿನಾದ್ಯಂತ ತೀವ್ರ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ಪರದಾಡುವಂತಾಯಿತು.
ಬನ್ನೇರುಘಟ್ಟ ಮುಖ್ಯರಸ್ತೆ, ಆಡುಗೋಡಿ, ಜಯನಗರ, ಜೆ.ಪಿ.ನಗರ, ತಲಘಟ್ಟಪುರ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿತ್ತು.
ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿತ್ತು.
ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಐಐಎಂಬಿ ಹಾಗೂ ಜಯದೇವ ಆಸ್ಪತ್ರೆ ಮಾರ್ಗವಾಗಿ ಸಂಚರಿಸುವವರು ತೀವ್ರ ತೊಂದರೆ ಅನುಭವಿಸಿದರು. ಮುಖ್ಯ ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದರಿಂದ ವಾಹನ ಸವಾರರು ಬಿಟಿಎಂ ಬಡಾವಣೆ, ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳ ಮೂಲಕ ಸಂಚರಿಸಬೇಕಾಯಿತು. ಇದರಿಂದ ಕಿರಿದಾದ ವಸತಿ ಪ್ರದೇಶಗಳ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಹಲವು ಜಂಕ್ಷನ್ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು, ಬಿಟಿಎಂ ಬಡಾವಣೆ ಒಳರಸ್ತೆಗಳಲ್ಲಿ ತೀವ್ರ ಸಂಚಾರ ದಟ್ಟಣೆ ಕಂಡುಬಂದಿತು. ಡೇರಿ ವೃತ್ತ, ಮೈಕೋ ಲೇಔಟ್, ಹುಳಿಮಾವು ಹಾಗೂ ಜಯನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಚಲಿಸಿದವು.
ಬೆಳಿಗ್ಗೆ 9 ಗಂಟೆಗೆ ಹುಳಿಮಾವಿನಿಂದ ಹೊರಟು ಡೇರಿ ವೃತ್ತದಲ್ಲಿ 11 ಗಂಟೆಗೆ ನಡೆಯಬೇಕಿದ್ದ ಸಭೆಗೆ ತೆರಳುತ್ತಿದ್ದರೂ ಮಧ್ಯಾಹ್ನ 1 ಗಂಟೆಯಾದರೂ ತಲುಪಲು ಸಾಧ್ಯವಾಗಲಿಲ್ಲ ಎಂದು ಪ್ರಯಾಣಿಕ ರಮೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಪರ್ಯಾಯ ಮಾರ್ಗಗಳಲ್ಲಿಯೂ ವಾಹನ ದಟ್ಟಣೆ ಇತ್ತು. ಯಾವ ರಸ್ತೆಯಲ್ಲಿ ಸಂಚರಿಸಬೇಕು ಎಂಬುದರ ಕುರಿತು ಸ್ಪಷ್ಟ ಸೂಚನಾ ಫಲಕಗಳಿರಲಿಲ್ಲ ಎಂದು ಅವರು ದೂರಿದರು.
ಸಂಚಾರ ನಿರ್ಬಂಧದಿಂದ ಉದ್ಯೋಗಿಗಳಿಗೆ ತೊಂದರೆಯಾಗುವುದನ್ನು ಗಮನದಲ್ಲಿಟ್ಟುಕೊಂಡು ನಗರದ ಹಲವು ಐಟಿ ಕಂಪನಿಗಳು ಶುಕ್ರವಾರ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ (ವರ್ಕ್ ಫ್ರಂ ಹೋಮ್) ಸೂಚಿಸಿದ್ದವು.
ಮಾರ್ಗ ಬದಲಾವಣೆ ಕುರಿತು ಎಫ್ಎಂ ರೇಡಿಯೊ, ಸುದ್ದಿವಾಹಿನಿಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮುಂಚಿತವಾಗಿಯೇ ಮಾಹಿತಿ ನೀಡಲಾಗಿತ್ತು. ಆದರೂ ಪರ್ಯಾಯ ಮಾರ್ಗಗಳ ಪರಿಚಯವಿಲ್ಲದವರು ಕಿರಿದಾದ ಒಳರಸ್ತೆಗಳಿಗೆ ಪ್ರವೇಶಿಸಿದ್ದರಿಂದ ಗೊಂದಲ ಉಂಟಾಗಿ ಸಂಚಾರ ದಟ್ಟಣೆ ಹೆಚ್ಚಾಯಿತು ಎಂದು ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್ಚು ಸಂಚಾರ ದಟ್ಟಣೆ ಕಂಡುಬಂದ ಪ್ರದೇಶಗಳು:
ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಪರ್ಕ ರಸ್ತೆಗಳು
ಬಿಟಿಎಂ ಬಡಾವಣೆ ಒಳರಸ್ತೆಗಳು
ಜೆ.ಪಿ.ನಗರ ಮತ್ತು ಜಯನಗರದ ಒಳರಸ್ತೆಗಳು
ಮೈಕೋ ಲೇಔಟ್ ಜಂಕ್ಷನ್ಗಳು
ಹುಳಿಮಾವು ಜಂಕ್ಷನ್ಗಳು
ಡೇರಿ ವೃತ್ತ
ಜಯದೇವ ಆಸ್ಪತ್ರೆ ಮತ್ತು ಐಐಎಂಬಿ ಮುಂಭಾಗದ ರಸ್ತೆಗಳು
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್3 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















