ಮಂಗಳೂರು
SIT investigation-ಸೌಜನ್ಯ ಪ್ರಕರಣ ಮರುತನಿಖೆ: SIT ತನಿಖೆಯ ಪ್ರತಿಯೊಂದು ನಿರ್ದೇಶನವೂ ಲಿಖಿತವಾಗಿರಲಿ-ಸೌಜನ್ಯ ತಾಯಿ ಪರ ವಕೀಲರ ಮನವಿ
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರ ಪರ ಸುಪ್ರೀಂ ಕೋರ್ಟ್ ವಕೀಲ ಅಶುತೋಷ್ ದುಬೆ ಮಹತ್ವದ ಮನವಿ ಸಲ್ಲಿಸಿದ್ದಾರೆ.
ಮಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರ ಪರ ಸುಪ್ರೀಂ ಕೋರ್ಟ್ ವಕೀಲ ಅಶುತೋಷ್ ದುಬೆ ಮಹತ್ವದ ಮನವಿ ಸಲ್ಲಿಸಿದ್ದಾರೆ.
ಹೊಸದಾಗಿ ನಡೆಯಲಿರುವ De-novo ತನಿಖೆಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ಅಧಿಕಾರಿಗಳು ನೀಡುವ ಯಾವುದೇ ನಿರ್ದೇಶನ, ಸಲಹೆ ಅಥವಾ ಮಾರ್ಗದರ್ಶನ ಕಡ್ಡಾಯವಾಗಿ ಲಿಖಿತ ರೂಪದಲ್ಲಿರಬೇಕು. ಅವುಗಳನ್ನು ಅಧಿಕೃತ ಕಡತಗಳಲ್ಲಿ ದಾಖಲಿಸಿ ಸಂರಕ್ಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಿಂದೆ ಬೆಳ್ತಂಗಡಿ ಪೊಲೀಸರು, ಸಿಐಡಿ ಹಾಗೂ ಸಿಬಿಐ ನಡೆಸಿದ ತನಿಖೆಯಲ್ಲಿನ ಕೆಲವು ಅಂಶಗಳನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಹಿಂದಿನ ತನಿಖಾ ವೈಖರಿ ಕುರಿತು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ನಿಜವಾದ ಆರೋಪಿಗಳು ತನಿಖೆಯನ್ನು ಹಳಿ ತಪ್ಪಿಸಿರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊರಗಿಟ್ಟು ಹೊಸ SIT ಮೂಲಕ ಮರುತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಹಿಂದಿನ ತನಿಖೆಯ ಲೋಪಗಳ ಬಗ್ಗೆ ಉಲ್ಲೇಖ
ಹಿಂದಿನ ತನಿಖೆಯ ವೇಳೆ ನಡೆದ ಹಲವು ಲೋಪಗಳನ್ನು ವಕೀಲರು SITಗೆ ಸಲ್ಲಿಸಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಆರಂಭಿಕ ತನಿಖಾಧಿಕಾರಿಗಳಲ್ಲಿ ಒಬ್ಬರಾಗಿದ್ದ ಅಂದಿನ ಪಿಎಸ್‌ಐ ಯೋಗೇಶ್ ಕುಮಾರ್ (PW-25) ಅವರ ಸಾಕ್ಷ್ಯದಲ್ಲಿ ತನಿಖೆಯ ಕೆಲವು ಪ್ರಮುಖ ಅಂಶಗಳು ಬೆಳಕಿಗೆ ಬಂದಿವೆ ಎಂದು ಪತ್ರದಲ್ಲಿ ಹೇಳಲಾಗಿದೆ.
ಶವಪರೀಕ್ಷೆಯ ಸಂದರ್ಭದಲ್ಲಿ ವಿಸೆರಾ ಸಂಗ್ರಹಿಸಿ ಸಂರಕ್ಷಿಸುವಂತೆ ವೈದ್ಯರಿಗೆ ಸೂಚಿಸದಿರುವ ಕುರಿತು ಯೋಗೇಶ್ ಕುಮಾರ್ ನೀಡಿದ ಸಾಕ್ಷ್ಯವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕುತ್ತಿಗೆಯ ಮೇಲೆ ಹಗ್ಗದ ಗುರುತು ಕಂಡುಬಂದಿದ್ದರಿಂದ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ಭಾವಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಸೆರಾ ಸಂರಕ್ಷಿಸದಿರಲು ‘ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ’ ನಿರ್ಧರಿಸಲಾಗಿತ್ತು ಎಂದು ಅವರು ಸಾಕ್ಷ್ಯ ನೀಡಿದ್ದರು ಎನ್ನಲಾಗಿದೆ.
ಮೃತದೇಹದ ಹೊಟ್ಟೆಯಲ್ಲಿ ಜೀರ್ಣವಾಗದ ಆಹಾರವಿತ್ತು ಎಂಬುದನ್ನು ಒಪ್ಪಿಕೊಂಡಿದ್ದರೂ, ವಿಸೆರಾ ಅಥವಾ ಆಹಾರ ಪದಾರ್ಥಗಳನ್ನು ಸಂರಕ್ಷಿಸುವಂತೆ ವೈದ್ಯರಿಗೆ ಯಾವುದೇ ಲಿಖಿತ ಮನವಿ ಮಾಡಿರಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇಂತಹ ಪ್ರಮುಖ ಸಾಕ್ಷ್ಯ ಸಂಗ್ರಹಕ್ಕೆ ಸಂಬಂಧಿಸಿದ ನಿರ್ಧಾರದಲ್ಲಿ ಯಾರೆಲ್ಲ ಭಾಗವಹಿಸಿದ್ದರು, ಯಾವ ಸಲಹೆ ನೀಡಲಾಗಿತ್ತು ಹಾಗೂ ಸಾಕ್ಷ್ಯ ಸಂಗ್ರಹಿಸದಿರಲು ಕಾರಣವೇನು ಎಂಬುದಕ್ಕೆ ಯಾವುದೇ ಲಿಖಿತ ದಾಖಲೆಗಳಿಲ್ಲ ಎಂದು ವಕೀಲರು ಪ್ರಶ್ನಿಸಿದ್ದಾರೆ.
ಒಳಉಡುಪು ಸಂಗ್ರಹದ ಬಗ್ಗೆಯೂ ಪ್ರಶ್ನೆ
ಮೃತ ಯುವತಿಯ ಒಳಉಡುಪು ಆಕೆಯ ಕುಟುಂಬದಿಂದ ತರಿಸಿಕೊಂಡ ವಿಚಾರವನ್ನೂ ವಕೀಲರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.
ಯೋಗೇಶ್ ಕುಮಾರ್ ಅವರ ಸಾಕ್ಷ್ಯದ ಪ್ರಕಾರ, ‘ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ’ ಮೃತಳು ಯಾವ ರೀತಿಯ ಒಳಉಡುಪು ಧರಿಸುತ್ತಿದ್ದಳು ಎಂಬುದನ್ನು ವಿಠಲ ಗೌಡ ಅವರ ಬಳಿ ವಿಚಾರಿಸಲಾಗಿತ್ತು. ಬಳಿಕ ಆಕೆಯ ಮನೆಯಿಂದ ಒಳಉಡುಪು ತರಿಸಿಕೊಳ್ಳಲಾಗಿತ್ತು ಹಾಗೂ ಅದನ್ನು ಮರಳಿ ನೀಡುವಂತೆ ಸಿಬ್ಬಂದಿಗೆ ಸೂಚಿಸಲಾಗಿತ್ತು ಎಂದು ಅವರು ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಈ ಬೆಳವಣಿಗೆಯಲ್ಲೂ ಹಿರಿಯ ಅಧಿಕಾರಿಗಳ ಸೂಚನೆ ಅಥವಾ ಚರ್ಚೆಯ ಆಧಾರದ ಮೇಲೆ ತನಿಖಾ ನಿರ್ಧಾರ ಕೈಗೊಳ್ಳಲಾಗಿತ್ತೇ ಹೊರತು, ಅದಕ್ಕೆ ಸಂಬಂಧಿಸಿದ ಲಿಖಿತ ದಾಖಲೆಗಳಿಲ್ಲ ಎಂದು ವಕೀಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ವೇಳೆ ಶವಪರೀಕ್ಷೆ ನಡೆಸಿದ್ದ ವೈದ್ಯೆ ಡಾ. ರಶ್ಮಿ (PW-34) ಅವರು ನ್ಯಾಯಾಲಯದ ಮುಂದೆ ‘ಒತ್ತಡದಲ್ಲಿ ಶವಪರೀಕ್ಷೆ ನಡೆಸಿದ್ದು ನಿಜ’ ಎಂದು ಸಾಕ್ಷ್ಯ ನೀಡಿದ್ದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹೊಸ ತನಿಖೆಯಲ್ಲಿ ಪಾರದರ್ಶಕತೆಗೆ ಆಗ್ರಹ
ಹಿಂದಿನ ವಿಚಾರಣೆಯಲ್ಲಿ ‘ಒತ್ತಡ’, ‘ಹಿರಿಯ ಅಧಿಕಾರಿಗಳ ಸೂಚನೆ’ ಹಾಗೂ ‘ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ’ ಎಂಬ ಉಲ್ಲೇಖಗಳು ಬಂದಿದ್ದರೂ, ಆ ಸೂಚನೆಗಳನ್ನು ಯಾರು ನೀಡಿದ್ದರು, ಏಕೆ ನೀಡಿದ್ದರು ಹಾಗೂ ಅವು ಮೌಖಿಕವಾಗಿದ್ದವೋ ಅಥವಾ ಲಿಖಿತವಾಗಿದ್ದವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ವಕೀಲರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊಸ ತನಿಖೆಯಲ್ಲಿ ಇಂತಹ ಅಸ್ಪಷ್ಟತೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು SITಗೆ ಮನವಿ ಮಾಡಲಾಗಿದೆ.
SITಗೆ ಪ್ರಮುಖ ಬೇಡಿಕೆಗಳೇನು?
ಡಿಜಿ-ಐಜಿಪಿ, ಗೃಹ ಇಲಾಖೆ ಅಥವಾ ಉನ್ನತ ಪೊಲೀಸ್ ಅಧಿಕಾರಿಗಳು ಸೇರಿದಂತೆ SIT ಹೊರಗಿನ ಯಾವುದೇ ಸರ್ಕಾರಿ ಪ್ರಾಧಿಕಾರದಿಂದ ಬರುವ ಸೂಚನೆಗಳು ಮತ್ತು ನಿರ್ದೇಶನಗಳನ್ನು ಲಿಖಿತ ರೂಪದಲ್ಲಿ ಪಡೆಯಬೇಕು.
ತುರ್ತು ಸಂದರ್ಭದಲ್ಲಿ ಮೌಖಿಕವಾಗಿ ಸೂಚನೆ ನೀಡಿದರೆ, ಸೂಚನೆ ನೀಡಿದವರ ಹೆಸರು, ಹುದ್ದೆ, ದಿನಾಂಕ ಮತ್ತು ಸಮಯ ಸೇರಿದಂತೆ ಸಂಪೂರ್ಣ ವಿವರಗಳನ್ನು ತಕ್ಷಣವೇ ಲಿಖಿತವಾಗಿ ದಾಖಲಿಸಬೇಕು.
ಅಡ್ವಕೇಟ್ ಜನರಲ್, ಹೆಚ್ಚುವರಿ ಅಡ್ವಕೇಟ್ ಜನರಲ್, ಸರ್ಕಾರಿ ಅಭಿಯೋಜಕರು ಅಥವಾ ಇತರ ಸರ್ಕಾರಿ ವಕೀಲರಿಂದ ಪಡೆಯುವ ಕಾನೂನು ಅಭಿಪ್ರಾಯ ಹಾಗೂ ಸಲಹೆಗಳನ್ನು ಲಿಖಿತ ರೂಪದಲ್ಲಿ ದಾಖಲಿಸಬೇಕು.
SIT ತನಿಖಾಧಿಕಾರಿಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಆಂತರಿಕ ನಿಯಮಾವಳಿಗಳನ್ನು ರೂಪಿಸಬೇಕು.
ಯಾವುದೇ ಬಾಹ್ಯ ಹಸ್ತಕ್ಷೇಪವಿಲ್ಲದೆ ಪಾರದರ್ಶಕ ಹಾಗೂ ವೈಜ್ಞಾನಿಕ ರೀತಿಯಲ್ಲಿ ತನಿಖೆ ನಡೆಸಲು ಎಲ್ಲಾ SIT ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು.
ವಕೀಲರು ಸಲ್ಲಿಸಿರುವ ಈ ಪತ್ರದ ಪ್ರತಿಯನ್ನು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ವಿಶೇಷ ಕಾರ್ಯದರ್ಶಿ ಹಾಗೂ ರಾಜ್ಯ ಡಿಜಿ-ಐಜಿಪಿ ಕಚೇರಿಗೂ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್19 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized24 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ22 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಶಿಕ್ಷಣ18 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ


















