ಸ್ಥಳೀಯ
High Court-ದಿಡುಪೆ ಫಾಲ್ಸ್ ಡಿಜಿಟಲ್ ಶುಲ್ಕ ಕೇಳಿದಕ್ಕೆ ದಂಡ; ಸರಕಾರದ ವಿರುದ್ದ ಹೈಕೋರ್ಟ್ ಗರಂ; ವಿವರಣೆ ಕೊಡಲು ಅಧಿಕಾರಿಗಳಿಗೆ ಖುದ್ದು ಹಾಜರಾಗಲು ಸೂಚನೆ
ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ ಪ್ರವಾಸಿಗರು ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ಕೇಳಿದ್ದಕ್ಕೆ ದಂಡ ಪಾವತಿ ರಸೀದಿ ನೀಡಿದ ಹಾಗೂ ಹಲ್ಲೆ ನಡೆಸಿ ಹಣ ಕಿತ್ತುಕೊಂಡ ಆರೋಪದಡಿ ಎಫ್‌ಐಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ ಪ್ರವಾಸಿಗರು ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ಕೇಳಿದ್ದಕ್ಕೆ ದಂಡ ಪಾವತಿ ರಸೀದಿ ನೀಡಿದ ಹಾಗೂ ಹಲ್ಲೆ ನಡೆಸಿ ಹಣ ಕಿತ್ತುಕೊಂಡ ಆರೋಪದಡಿ ಎಫ್‌ಐಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ಎಸ್. ಪ್ರತಾಪ್ ಸೇರಿದಂತೆ ಐವರು ಯುವಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠ, ಪ್ರಕರಣದ ಕುರಿತು ವಿವರಣೆ ನೀಡಲು ನವೆಂಬರ್ 6ರಂದು ಮಂಗಳೂರು ವಲಯ ಅರಣ್ಯಾಧಿಕಾರಿ ಖುದ್ದಾಗಿ ಹಾಜರಾಗುವಂತೆ ಸೂಚಿಸಿದೆ.
ಅಲ್ಲದೆ, ಪ್ರಕರಣದ ತನಿಖಾಧಿಕಾರಿಯಾಗಿರುವ ಬೆಳ್ತಂಗಡಿ ಠಾಣೆಯ ಪೊಲೀಸ್ ಅಧಿಕಾರಿ ಕೂಡ ಮುಂದಿನ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ. ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ತಡೆಯಾಜ್ಞೆಯನ್ನೂ ನೀಡಿದೆ.
ಡಿಜಿಟಲ್ ಬಿಲ್ ಕೇಳಿದ್ದಕ್ಕೆ ದಂಡದ ರಸೀದಿ?
ಪ್ರವಾಸಿಗರು ದಿಡುಪೆ ಜಲಪಾತಕ್ಕೆ ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ನೀಡುವಂತೆ ಕೇಳಿದ್ದರು. ಈ ವೇಳೆ ಬಿಲ್ಲಿಂಗ್ ಯಂತ್ರ ಕೆಟ್ಟಿದೆ ಎಂದು ಸಿಬ್ಬಂದಿ ತಿಳಿಸಿದ್ದರು ಎನ್ನಲಾಗಿದೆ. ಕೈಬರಹದ ಬಿಲ್ ನೀಡುವಂತೆ ಕೇಳಿದಾಗಲೂ ದಂಡ ಪಾವತಿ ರಸೀದಿ ನೀಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಬಿಲ್ಲಿಂಗ್ ಕೌಂಟರ್‌ನಲ್ಲಿ ಅರಣ್ಯ ವಾಚರ್ ಹಣ ಸ್ವೀಕರಿಸುತ್ತಿದ್ದ ವಿಚಾರವೂ ವಿಚಾರಣೆ ವೇಳೆ ಪ್ರಸ್ತಾಪವಾಗಿದ್ದು, ಇದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಅಭಿಯೋಜಕರನ್ನು ಉದ್ದೇಶಿಸಿ ನ್ಯಾಯಮೂರ್ತಿಗಳು, ಡಿಜಿಟಲ್ ಬಿಲ್ ಕೇಳಿದರೆ ಯಂತ್ರ ಕೆಟ್ಟಿದೆ ಎನ್ನುತ್ತೀರಿ. ಕೈಬರಹದ ಬಿಲ್ ಕೇಳಿದರೆ ದಂಡದ ರಸೀದಿ ನೀಡುತ್ತೀರಾ? ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಕ್ಕೆ ಬಂದರೆ ದಂಡ ವಿಧಿಸುತ್ತೀರಾ? ಬಿಲ್ಲಿಂಗ್ ಕೌಂಟರ್‌ನಲ್ಲಿ ಅರಣ್ಯ ವಾಚರ್ ಏಕೆ ಕೆಲಸ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಜಲಪಾತಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದು, ಅವರಿಂದ ಸಂಗ್ರಹಿಸಲಾಗುವ ಪ್ರವೇಶ ಶುಲ್ಕದ ಲೆಕ್ಕಾಚಾರ ಹೇಗೆ ನಡೆಯುತ್ತಿದೆ ಎಂಬ ಬಗ್ಗೆಯೂ ನ್ಯಾಯಪೀಠ ಪ್ರಶ್ನೆಗಳನ್ನು ಎತ್ತಿದೆ.
ಪ್ರಕರಣದ ಕುರಿತು ಪ್ರವಾಸೋದ್ಯಮ ಸಚಿವರು ಹಾಗೂ ಅರಣ್ಯ ಇಲಾಖೆ ಕಾರ್ಯದರ್ಶಿಯನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸುವುದಾಗಿ ನ್ಯಾಯಮೂರ್ತಿಗಳು ಮೌಖಿಕವಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣದ ಹಿನ್ನೆಲೆ ಏನು?
2026ರ ಜುಲೈ 19ರಂದು ಚಿಕ್ಕಮಗಳೂರಿನ ಎಸ್. ಪ್ರತಾಪ್ ಸೇರಿದಂತೆ 16 ಮಂದಿ ಸ್ನೇಹಿತರ ತಂಡ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆ ಜಲಪಾತಕ್ಕೆ ಭೇಟಿ ನೀಡಿತ್ತು. ಈ ವೇಳೆ ತಲಾ ₹200ರಂತೆ ಒಟ್ಟು ಸುಮಾರು ₹3,000 ಪ್ರವೇಶ ಶುಲ್ಕ ಪಾವತಿಸಿದ್ದರು ಎನ್ನಲಾಗಿದೆ.
ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ನೀಡುವಂತೆ ಪ್ರತಾಪ್ ಹಾಗೂ ಇತರರು ಸಿಬ್ಬಂದಿ ಭರತೇಶ್ ಅವರನ್ನು ಕೇಳಿದ್ದರು. ಈ ವಿಚಾರದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.
ಬಳಿಕ ಅರಣ್ಯ ವಾಚರ್ ಗೋಪಾಲ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅರ್ಜಿದಾರರು ಭರತೇಶ್ ಅವರ ಮೇಲೆ ಹಲ್ಲೆ ನಡೆಸಿ, ₹50,500 ಇದ್ದ ಬ್ಯಾಗ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ಆದರೆ ಅರ್ಜಿದಾರರು ಆರೋಪಗಳನ್ನು ನಿರಾಕರಿಸಿದ್ದು, ಘಟನೆ ವೇಳೆ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ತಾವು ಹಲ್ಲೆ ನಡೆಸಿಲ್ಲ ಹಾಗೂ ಹಣದ ಬ್ಯಾಗ್ ಕಿತ್ತುಕೊಂಡಿಲ್ಲ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ಸ್ಥಳದಲ್ಲಿ ಸ್ವತಂತ್ರ ಸಾಕ್ಷಿಗಳ ಕೊರತೆ ಹಾಗೂ ತನಿಖೆಯಲ್ಲಿನ ಕೆಲವು ಅಂಶಗಳನ್ನು ಪರಿಗಣಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ವಿವರಣೆ ಪಡೆಯಲು ಸೂಚಿಸಿದೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















