[…]" /> […]"> Arrested-ಬಟ್ಟೆಯ ‘ಬಾರ್‌ಕೋಡ್’ ಕೊಟ್ಟ ಸುಳಿವು: ಪತ್ನಿಯನ್ನು ಕೊಂದು ಮೂರು ದಿನ ಮೃತದೇಹದೊಂದಿಗೇ ಇದ್ದ ಪತಿ ಬಂಧನ - Nikhara News | Kannada News Website
Connect with us

ಕ್ರೈಂ

Arrested-ಬಟ್ಟೆಯ ‘ಬಾರ್‌ಕೋಡ್’ ಕೊಟ್ಟ ಸುಳಿವು: ಪತ್ನಿಯನ್ನು ಕೊಂದು ಮೂರು ದಿನ ಮೃತದೇಹದೊಂದಿಗೇ ಇದ್ದ ಪತಿ ಬಂಧನ

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್‌ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್‌ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ.

Ad Widget

Ad Widget alt="Ad Widget"/>

Ad Widget

ಒಡಿಶಾ ಮೂಲದ ಅನಸೂಯ (28) ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಆಕೆಯ ಪತಿ ಸಾಗರ್ ಚಂದ್ರ ರಾವತ್ (32) ಬಂಧಿತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಹಣಕಾಸಿನ ವಿಚಾರಕ್ಕೆ ಗಲಾಟೆ
ಅನಸೂಯ ಮತ್ತು ಸಾಗರ್ ಚಂದ್ರ ರಾವತ್ ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಈ ವಿಚಾರ ಎರಡೂ ಕುಟುಂಬಗಳ ಸದಸ್ಯರಿಗೆ ತಿಳಿದಿರಲಿಲ್ಲ. ಕೆಲ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ದಂಪತಿ ಎಂ.ಎಸ್. ನಗರ ಅಗ್ರಹಾರ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರೂ ಪ್ರತ್ಯೇಕ ಹೋಟೆಲ್‌ಗಳಲ್ಲಿ ಕೆಲಸ ಮಾಡುತ್ತಿದ್ದರು.

ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಅನಸೂಯ ಪತಿ ಕೆಲಸ ಮಾಡುತ್ತಿದ್ದ ಹೋಟೆಲ್‌ಗೂ ತೆರಳಿ ಗಲಾಟೆ ಮಾಡಿದ್ದಳು ಎನ್ನಲಾಗಿದೆ. ಆಗಸ್ಟ್ 11ರಂದು ಜಗಳ ವಿಕೋಪಕ್ಕೆ ತಿರುಗಿದ್ದು, ಸಾಗರ್ ಚಂದ್ರ ರಾವತ್ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಮೂರು ದಿನ ಮೃತದೇಹದೊಂದಿಗೇ ಕಳೆದಿದ್ದ
ಕೊಲೆ ಬಳಿಕ ಮೃತದೇಹವನ್ನು ತಕ್ಷಣ ವಿಲೇವಾರಿ ಮಾಡದೆ, ಆರೋಪಿ ಮೂರು ದಿನಗಳ ಕಾಲ ಮನೆಯಲ್ಲೇ ಮೃತದೇಹದೊಂದಿಗೆ ಇದ್ದ ಎನ್ನಲಾಗಿದೆ. ಬಳಿಕ ಬೆಡ್‌ಶೀಟ್‌ನಲ್ಲಿ ಸುತ್ತಿ ಎಂ.ಎಸ್. ನಗರ ಅಗ್ರಹಾರ ಲೇಔಟ್‌ನ ಖಾಲಿ ನಿವೇಶನದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಎಸೆದ ಬಳಿಕವೂ ಆರೋಪಿ ಸುಮಾರು ನಾಲ್ಕು ದಿನಗಳ ಕಾಲ ಅದೇ ರಸ್ತೆಯಲ್ಲಿ ಓಡಾಡುತ್ತಿದ್ದು, ನಿವೇಶನಕ್ಕೆ ಯಾರಾದರೂ ಬರುತ್ತಾರೆಯೇ ಎಂಬುದನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ಬಳಿಕ ಹೋಟೆಲ್‌ಗೆ ತೆರಳಿ ಎಂದಿನಂತೆ ಕೆಲಸಕ್ಕೆ ಸೇರಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪತ್ನಿಯ ಸಿಮ್ ಬಳಸಿ ಅನುಮಾನ ಮೂಡಿಸಿದ ಆರೋಪಿ
ಕೊಲೆ ಬಳಿಕ ಅನಸೂಯಳ ಮೊಬೈಲ್‌ನ ಸಿಮ್ ಕಾರ್ಡ್ ಅನ್ನು ತನ್ನ ಮೊಬೈಲ್‌ಗೆ ಹಾಕಿಕೊಂಡು ಆರೋಪಿ ಬಳಸುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಹಾಗೂ ಪರಿಚಯಸ್ಥರು ಕರೆ ಮಾಡಿದಾಗ ಕರೆ ಸ್ವೀಕರಿಸುತ್ತಿರಲಿಲ್ಲ.

ಈ ನಡುವೆ ಅನಸೂಯ ಸಂಬಂಧಿಕರಿಗೆ ಕರೆ ಮಾಡಿ ತಾನು ಕಷ್ಟದಲ್ಲಿರುವುದಾಗಿ ತಿಳಿಸಿ, ಅವರಿಂದ ₹1,000 ಫೋನ್‌ಪೇ ಮೂಲಕ ಪಡೆದುಕೊಂಡಿದ್ದಳು ಎನ್ನಲಾಗಿದೆ.

ಬಟ್ಟೆಯ ಬಾರ್‌ಕೋಡ್‌ನಿಂದ ಸಿಕ್ಕಿತು ಮಹತ್ವದ ಸುಳಿವು
ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಖಾಲಿ ನಿವೇಶನವನ್ನು ಸ್ವಚ್ಛಗೊಳಿಸುವ ವೇಳೆ ಸುಮಾರು 20 ದಿನಗಳ ಬಳಿಕ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ನಿವೇಶನದ ಮಾಲೀಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೃತದೇಹ ಕೊಳೆತು ಹೋಗಿದ್ದರಿಂದ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ಈ ವೇಳೆ ಮೃತದೇಹದ ಮೇಲಿದ್ದ ಬಟ್ಟೆಯೊಂದರ ಬಾರ್‌ಕೋಡ್ ಪೊಲೀಸರ ಗಮನಕ್ಕೆ ಬಂದಿದೆ.

ಬಾರ್‌ಕೋಡ್ ಸ್ಕ್ಯಾನ್ ಮಾಡಿದಾಗ, ಸುಮಾರು ಎರಡು ತಿಂಗಳ ಹಿಂದೆ ಒಡಿಶಾದ ಭುವನೇಶ್ವರದ ಬಟ್ಟೆ ಮಳಿಗೆಯೊಂದರಲ್ಲಿ ಆ ಬಟ್ಟೆಯನ್ನು ಖರೀದಿಸಲಾಗಿತ್ತು ಎಂಬ ಮಾಹಿತಿ ಲಭಿಸಿತು. ಈ ಸುಳಿವಿನ ಆಧಾರದಲ್ಲಿ ತನಿಖೆ ಮುಂದುವರಿಸಿದ ಪೊಲೀಸರು ಮೃತದೇಹ ಅನಸೂಯಳದ್ದೇ ಎಂಬುದನ್ನು ದೃಢಪಡಿಸಿದ್ದಾರೆ.

ಆದರೆ ಬಟ್ಟೆ ಖರೀದಿಸುವಾಗ ಅನಸೂಯ ನೀಡಿದ್ದ ಮೊಬೈಲ್ ಸಂಖ್ಯೆಯನ್ನು ಮಳಿಗೆ ಸಿಬ್ಬಂದಿ ತಪ್ಪಾಗಿ ದಾಖಲಿಸಿದ್ದರು ಎನ್ನಲಾಗಿದೆ.

ಇನ್ನೊಂದೆಡೆ, ಪತ್ನಿಯ ಕೊಲೆಯ ಬಳಿಕ ಸಾಗರ್ ಚಂದ್ರ ರಾವತ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಬಗ್ಗೆ ಆತ ಕೆಲಸ ಮಾಡುತ್ತಿದ್ದ ಹೋಟೆಲ್‌ನ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸುಳಿವು ಹಾಗೂ ಇತರ ಮಾಹಿತಿಗಳನ್ನು ಆಧರಿಸಿ ಪೊಲೀಸರು ಸಾಗರ್ ಚಂದ್ರ ರಾವತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ವಿವರಗಳು ಬಯಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Click to comment

Leave a Reply

ಕ್ರೈಂ

Murder-7 ಮಂದಿಯ ಹತ್ಯೆ ಪ್ರಕರಣ: ಶವದ ಜೊತೆ ಖಾರದ ಪುಡಿ, ಒಣಮೆಣಸಿನಕಾಯಿ ತುಂಬಿಸುತ್ತಿದ್ದ ಹಂತಕ..!

Published

on

Ad Widget

Ad Widget

Ad Widget

Ad Widget

ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ.

Ad Widget

Ad Widget alt="Ad Widget"/>

Ad Widget

ಏಳು ಮಂದಿಯನ್ನು ರುಬ್ಬುವ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಬಳಿಕ ಮೃತದೇಹಗಳ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಆರೋಪಿ, ಸೆಲೋ ಟೇಪ್ ಸುತ್ತಿ ಗೋಣಿ ಚೀಲ ಹಾಗೂ ಬೆಡ್‌ಶೀಟ್‌ಗಳಲ್ಲಿ ಪ್ಯಾಕ್ ಮಾಡಿದ್ದ ಎನ್ನಲಾಗಿದೆ. ಈ ವೇಳೆ ಮೃತದೇಹಗಳ ಮೇಲೆ ಖಾರದ ಪುಡಿ ಸಿಂಪಡಿಸಿ, ಒಣಮೆಣಸಿನಕಾಯಿಗಳನ್ನೂ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಶಿರಾಡಿಘಾಟ್‌ನಲ್ಲಿ ಪತ್ತೆಯಾದ ನಳಿನಿ ಮತ್ತು ಶಂಕರ್ ಅವರ ಮೃತದೇಹಗಳ ಪರಿಶೀಲನೆ ವೇಳೆ ಒಣಮೆಣಸಿನಕಾಯಿ ಹಾಗೂ ಖಾರದ ಪುಡಿ ಪತ್ತೆಯಾಗಿದೆ. ಪ್ರಾಣಿ, ಪಕ್ಷಿಗಳು ಮೃತದೇಹಗಳನ್ನು ಕಿತ್ತು ತಿನ್ನದಂತೆ ತಡೆಯಲು ಹಾಗೂ ಪೊಲೀಸ್ ಶ್ವಾನಗಳಿಗೆ ಮೃತದೇಹಗಳ ಸುಳಿವು ಸಿಗದಂತೆ ಮಾಡಲು ಆರೋಪಿ ಈ ತಂತ್ರ ಅನುಸರಿಸಿದ್ದ ಎನ್ನಲಾಗಿದೆ. ಇದರಿಂದ ಪೊಲೀಸರಿಗೆ ತನ್ನನ್ನು ಪತ್ತೆಹಚ್ಚಲು ಕಷ್ಟವಾಗಬಹುದು ಎಂದು ಆತ ಭಾವಿಸಿದ್ದ ಎಂದು ಮೂಲಗಳು ತಿಳಿಸಿವೆ.

ಮಗಳಿಗೆ 10 ದಿನಗಳ ಪೊಲೀಸ್ ವಶ
ಸರಣಿ ಹತ್ಯೆ ಪ್ರಕರಣದಲ್ಲಿ ತಂದೆಗೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಮಗಳನ್ನು ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಿದ ಪೊಲೀಸರು, 10 ದಿನಗಳ ವಶಕ್ಕೆ ಪಡೆದು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.

Ad Widget

Ad Widget

ಇನ್ನೊಂದೆಡೆ ಪೊಲೀಸ್ ವಶದಲ್ಲಿರುವ ಇಂದುಶೇಖರ್‌ನನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪತ್ನಿಯ ಕಿರುಕುಳದ ಆರೋಪದ ಜೊತೆಗೆ ಆಸ್ತಿ ವಿಚಾರಕ್ಕಾಗಿ ಹತ್ಯೆ ನಡೆಸಿರುವ ಸಾಧ್ಯತೆಯ ಆಯಾಮದಲ್ಲಿಯೂ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಮನೆಗೆ ಲುಮಿನಾಲ್ ಪರೀಕ್ಷೆ
ಹತ್ಯೆಯಾದವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಮತ್ತೊಂದೆಡೆ, ಆರೋಪಿಯ ಮನೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಹಾಗೂ ಸುಕೋ ತಂಡಗಳು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಿವೆ.

ಆರೋಪಿ ರುಬ್ಬುವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಮನೆಯ ಹಾಲ್, ಸ್ನಾನಗೃಹ ಹಾಗೂ ರುಬ್ಬುವ ಕಲ್ಲಿನ ಮೇಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದ ಎನ್ನಲಾಗಿದೆ. ಹೀಗಾಗಿ ಕಣ್ಣಿಗೆ ಕಾಣದ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ತಜ್ಞರು ಮನೆಯಲ್ಲಿ ಲುಮಿನಾಲ್ ಪರೀಕ್ಷೆ ನಡೆಸಿದ್ದಾರೆ.

ಏನಿದು ಲುಮಿನಾಲ್ ಪರೀಕ್ಷೆ?
ಲುಮಿನಾಲ್ ಪರೀಕ್ಷೆಯು ಕಣ್ಣಿಗೆ ಕಾಣದ ರಕ್ತದ ಕಲೆಗಳನ್ನು ಪತ್ತೆಹಚ್ಚಲು ಬಳಸುವ ವೈಜ್ಞಾನಿಕ ವಿಧಾನವಾಗಿದೆ. ರಕ್ತವಿರುವ ಸ್ಥಳವನ್ನು ಸ್ವಚ್ಛಗೊಳಿಸಿದರೂ ರಕ್ತದಲ್ಲಿರುವ ಹಿಮೋಗ್ಲೋಬಿನ್‌ನ ಅಂಶಗಳು ಉಳಿದಿರಬಹುದು. ಅಂತಹ ಸ್ಥಳಗಳಿಗೆ ನಿರ್ದಿಷ್ಟ ರಾಸಾಯನಿಕ ದ್ರಾವಣವನ್ನು ಸಿಂಪಡಿಸಿದಾಗ ರಾಸಾಯನಿಕ ಪ್ರತಿಕ್ರಿಯೆಯಿಂದ ಬೆಳಕು ಕಾಣಿಸಿಕೊಳ್ಳುತ್ತದೆ. ಈ ಮೂಲಕ ಸ್ವಚ್ಛಗೊಳಿಸಲಾದ ಸ್ಥಳಗಳಲ್ಲಿಯೂ ರಕ್ತದ ಗುರುತುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.

ಲುಮಿನಾಲ್ ಪರೀಕ್ಷೆ ವೇಳೆ ಸಂಗ್ರಹಿಸಿದ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget
Continue Reading

ಕ್ರೈಂ

Murder-ಬೆಂಗಳೂರು: ಕುಟುಂಬದವರ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ

Published

on

Ad Widget

Ad Widget

Ad Widget

Ad Widget

ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

Ad Widget

Ad Widget alt="Ad Widget"/>

Ad Widget

ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಶುಕ್ರವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಅವರ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಆಯುಧಗಳ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಹಳೆಯ ದ್ವೇಷದ ಶಂಕೆ
ಚರಣ್ ಗೌಡ ಅವರ ಹತ್ಯೆಗೆ ಹಳೆಯ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದಂತೆ ಅವರಿಗೆ ಕೆಲವರೊಂದಿಗೆ ವೈಷಮ್ಯವಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Ad Widget
Continue Reading

ಕ್ರೈಂ

Seven murder case-ಏಳು ಕೊಲೆ ಪ್ರಕರಣಕ್ಕೆ ₹4 ಕೋಟಿ ಆಸ್ತಿ ನಂಟು? ತಂದೆ-ಮಗಳನ್ನು ಒಟ್ಟಿಗೆ ಕೂರಿಸಿ ವಿಚಾರಣೆ; ಮಗಳಿಗೆ ಆಸ್ತಿ ಆಮಿಷವೊಡ್ಡಿ ಸಂಚಿಗೆ ಬಳಸಿಕೊಂಡ ತಂದೆ

Published

on

Ad Widget

Ad Widget

Ad Widget

Ad Widget

ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ ಪೊಲೀಸರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹದ ಜತೆಗೆ ಹಣಕಾಸಿನ ವ್ಯವಹಾರ ಮತ್ತು ಆಸ್ತಿ ವಿವಾದದ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Ad Widget

Ad Widget alt="Ad Widget"/>

Ad Widget

ಪತ್ನಿ ಹಾಗೂ ಆಕೆಯ ತವರು ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳ ಮತ್ತು ಹಿಂಸೆಯನ್ನು ಸಹಿಸಲಾಗದೆ ಎಲ್ಲರನ್ನೂ ಮನೆಗೆ ಕರೆಸಿ ಹತ್ಯೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಆದರೆ, ಕೌಟುಂಬಿಕ ಕಲಹವೇ ಹತ್ಯೆಗಳಿಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆ ಉದ್ದೇಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Ad Widget

Ad Widget <> Ad Widget

ಮೂರ್ನಾಲ್ಕು ಕೋಟಿ ಆಸ್ತಿಗಾಗಿ ಹತ್ಯೆ ಸಂಚು?
ಶ್ರೀರಾಂಪುರದಲ್ಲಿ ಅಜ್ಜಿಗೆ ಸೇರಿದ ಸುಮಾರು ₹3ರಿಂದ ₹4 ಕೋಟಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಯಲ್ಲಿ ಅತ್ತೆ, ಮಾವ ಸೇರಿದಂತೆ ಕುಟುಂಬದ ಇತರ ಸದಸ್ಯರಿಗೂ ಪಾಲು ನೀಡಬೇಕಾಗುತ್ತದೆ. ಎಲ್ಲರನ್ನೂ ಹತ್ಯೆ ಮಾಡಿದರೆ ಆಸ್ತಿಯನ್ನು ಯಾರೊಂದಿಗೂ ಹಂಚಿಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಆರೋಪಿ ಇಂದುಶೇಖರ್ ತನ್ನ ಮಗಳಿಗೆ ಆಮಿಷವೊಡ್ಡಿ ಸಂಚಿನಲ್ಲಿ ಭಾಗಿಯಾಗಿಸಿದ್ದ ಎನ್ನಲಾಗಿದೆ.

ತಂದೆಯ ಮಾತು ನಂಬಿದ ಪಿಯುಸಿ ವಿದ್ಯಾರ್ಥಿನಿ ಹತ್ಯೆ ಕೃತ್ಯದಲ್ಲಿ ಸಹಕರಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ವಿಚಾರಣೆ ವೇಳೆ, ‘ತಂದೆ ಹೇಳಿದ ಕೆಲಸವನ್ನಷ್ಟೇ ಮಾಡುತ್ತಿದ್ದೆ. ಬೇರೆ ಏನೂ ಗೊತ್ತಿಲ್ಲ’ ಎಂದು ಆಕೆ ಹೇಳಿದ್ದಾಳೆ ಎನ್ನಲಾಗಿದೆ.

Ad Widget

Ad Widget

ವಿಚಾರಣೆಗೆ ತಂದೆ ಮತ್ತು ಮಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಪ್ರಾಪ್ತ ವಯಸ್ಸಿನ ಕಾರಣ ಕಾನೂನು ರಕ್ಷಣೆ?
ಹತ್ಯೆ ನಡೆದ ಸಂದರ್ಭದಲ್ಲಿ ಆರೋಪಿಯ ಮಗಳಿಗೆ 17 ವರ್ಷ ವಯಸ್ಸಾಗಿತ್ತು. ನವೆಂಬರ್ 8ರಂದು ಆಕೆ 18 ವರ್ಷಕ್ಕೆ ಕಾಲಿಟ್ಟಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿದ್ದ ಕಾರಣ ಬಾಲ ನ್ಯಾಯ ಕಾಯ್ದೆಯಡಿ ಕಾನೂನು ರಕ್ಷಣೆ ದೊರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.

ಮೃತದೇಹ ಸಾಗಣೆ, ಸಾಕ್ಷ್ಯ ನಾಶಕ್ಕೂ ಸಂಚು!
ಏಳು ಮಂದಿಯ ಹತ್ಯೆಯ ಬಳಿಕ ಮೃತದೇಹಗಳನ್ನು ಸಾಗಿಸುವುದು ಹಾಗೂ ಸಾಕ್ಷ್ಯಗಳನ್ನು ನಾಶಪಡಿಸುವುದಕ್ಕೂ ಆರೋಪಿ ಮೊದಲೇ ಯೋಜನೆ ರೂಪಿಸಿದ್ದ ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈಗಾಗಲೇ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಕುಟುಂಬದವರು ಶ್ರೀರಂಗಪಟ್ಟಣದಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಏಳು ಮಂದಿಯ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹತ್ಯೆಗೆ ಬಳಸಿದ ವಿಧಾನ ಸೇರಿದಂತೆ ಹಲವು ಮಹತ್ವದ ಸಂಗತಿಗಳು ತಿಳಿದುಬರಲಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಸ್ತಿ ವಿವಾದವೂ ಹತ್ಯೆಗೆ ಪ್ರಮುಖ ಕಾರಣ: ಪೊಲೀಸ್ ಆಯುಕ್ತ
ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾತನಾಡಿ, ಸರಣಿ ಹತ್ಯೆ ಪ್ರಕರಣದಲ್ಲಿ ಆರೋಪಿಯ ವೈಯಕ್ತಿಕ ದ್ವೇಷದ ಜತೆಗೆ ಹಣಕಾಸಿನ ವಿಚಾರವೂ ಪ್ರಮುಖ ಕಾರಣವಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ತನಿಖಾಧಿಕಾರಿಯೂ ಆಗಿರುವ ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!