Connect with us

ಅಪರಾಧ

Mangalore-ಮಂಗಳೂರು: ವಿದೇಶಿ ಕೆಲಸದ ಆಮಿಷವೊಡ್ಡಿ ವಂಚನೆಗೆ ಯತ್ನ: ‘ಓರ್ಲಾ ಕರಿಯರ್ ಸೊಲ್ಯೂಷನ್ಸ್’ ವಿರುದ್ಧ ಕೇಸ್

Published

on



Ad Widget

Ad Widget

Ad Widget

Ad Widget

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್‌ವೆಲ್‌ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್‌ವೆಲ್‌ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಬೆಂಗಳೂರಿನ ‘ಪ್ರೊಟೆಕ್ಟರ್ ಆಫ್ ಎಮಿಗ್ರಾಂಟ್ಸ್’ ಕಚೇರಿಯ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನ ಲೋಟಸ್ ಗೆಲಾಕ್ಸಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ‘M/s Orla Career Solutions’ ಸಂಸ್ಥೆಯು ಯಾವುದೇ ಕಡ್ಡಾಯ ನೋಂದಣಿ ಅಥವಾ ಅಗತ್ಯ ಪರವಾನಗಿ ಪಡೆಯದೆ ವಿದೇಶಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ನಡೆಸಿರುವ ಆರೋಪ ಎದುರಿಸುತ್ತಿದೆ.

Ad Widget

Ad Widget <> Ad Widget

ಸೆಪ್ಟೆಂಬರ್ 25ರಂದು ‘ಪ್ರೊಟೆಕ್ಟರ್ ಆಫ್ ಎಮಿಗ್ರಾಂಟ್ಸ್’ ಕಚೇರಿಗೆ ದೂರು ಇ-ಮೇಲ್ ಮೂಲಕ ಬಂದಿತ್ತು. ಸಂಸ್ಥೆಯು ಯುರೋಪ್‌ನ ಲಕ್ಸಂಬರ್ಗ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಸೆಪ್ಟೆಂಬರ್ 24ರಿಂದ 26ರವರೆಗೆ ಅಭ್ಯರ್ಥಿಗಳಿಗಾಗಿ ಅನಧಿಕೃತ ವಾಕ್-ಇನ್ ಸಂದರ್ಶನ ಆಯೋಜಿಸಿರುವ ಕುರಿತು ಸಾರ್ವಜನಿಕ ಜಾಹೀರಾತು ನೀಡಿರುವುದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



Ad Widget

ಎಮಿಗ್ರೇಷನ್ ಆಕ್ಟ್ 1983ರ ಅಡಿಯಲ್ಲಿ ಅಗತ್ಯ ಪರವಾನಗಿ ಪಡೆಯದೆ ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ನೇಮಕಾತಿ ಪ್ರಕ್ರಿಯೆ ನಡೆಸುವುದು ಹಾಗೂ ಹಣ ವಸೂಲಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿದೇಶಾಂಗ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget

ಈ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ‘ಪ್ರೊಟೆಕ್ಟರ್ ಆಫ್ ಎಮಿಗ್ರಾಂಟ್ಸ್’ ಕಚೇರಿ ಪೊಲೀಸರಿಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಸಂಸ್ಥೆಯ ಮಾಲೀಕರು ಹಾಗೂ ಆಡಳಿತ ಮಂಡಳಿ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.

Ad Widget
Click to comment

Leave a Reply

ಅಪರಾಧ

Puttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ

Published

on



Ad Widget

Ad Widget

Ad Widget

Ad Widget

ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದ ಮಯ್ಯ ಫಾರ್ಮ್ಸ್ನಿಂದ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.



Ad Widget

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Ad Widget

Ad Widget

ಈ ಸಂಬಂಧ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಅಪರಾಧ

Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

Published

on



Ad Widget

Ad Widget

Ad Widget

Ad Widget

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.

Ad Widget

Ad Widget

Ad Widget

Ad Widget

ಪೆರುವಾಯಿ ಗ್ರಾಮದ  ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ  ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46)  ನನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget <> Ad Widget


ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ  ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ  ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading