[…]" /> […]"> High Court-ಸಿವಿಲ್‌ ವ್ಯಾಜ್ಯದಲ್ಲಿ ಬ್ಯಾಂಕ್‌ ಖಾತೆ ಫ್ರೀಜ್‌: ‘ಸಮವಸ್ತ್ರ ಹಾಕಿಕೊಂಡು ವಸೂಲಿಗೆ ಇಳಿದಿದ್ದೀರಾ?’: ಉಳ್ಳಾಲ ಠಾಣಾಧಿಕಾರಿಗೆ ಹೈಕೋರ್ಟ್‌ ಚಾಟಿ - Nikhara News | Kannada News Website
Connect with us

ಬಿಗ್ ನ್ಯೂಸ್

High Court-ಸಿವಿಲ್‌ ವ್ಯಾಜ್ಯದಲ್ಲಿ ಬ್ಯಾಂಕ್‌ ಖಾತೆ ಫ್ರೀಜ್‌: ‘ಸಮವಸ್ತ್ರ ಹಾಕಿಕೊಂಡು ವಸೂಲಿಗೆ ಇಳಿದಿದ್ದೀರಾ?’: ಉಳ್ಳಾಲ ಠಾಣಾಧಿಕಾರಿಗೆ ಹೈಕೋರ್ಟ್‌ ಚಾಟಿ

Published

on

Ad Widget

Ad Widget

Ad Widget

Ad Widget

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್‌ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದೆ.

Ad Widget

Ad Widget alt="Ad Widget"/>

Ad Widget

ವಾಣಿಜ್ಯ ಕಟ್ಟಡವೊಂದರಲ್ಲಿ ವಿದ್ಯುತ್‌ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ಒಪ್ಪಂದದಂತೆ 60 ಲಕ್ಷ ರೂ. ಪಾವತಿಸಿಲ್ಲ ಎಂದು ಗುತ್ತಿಗೆದಾರ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಝೈಟ್‌ ಇಂಟೀರಿಯರ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ನಿರ್ದೇಶಕರು ಹಾಗೂ ಉದ್ಯೋಗಿಗಳ ಬ್ಯಾಂಕ್‌ ಖಾತೆಗಳನ್ನು ಪೊಲೀಸರು ಸ್ಥಗಿತಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಕಂಪನಿ ಹಾಗೂ ಅದರ ಹಲವು ನಿರ್ದೇಶಕರು ಸಲ್ಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ ಪೊಲೀಸರ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

Ad Widget

Ad Widget <> Ad Widget

ಪ್ರಕರಣದ ತನಿಖಾಧಿಕಾರಿ ವಿರೂಪಾಕ್ಷಯ್ಯ ಅವರನ್ನು ಸೇವೆಯಿಂದ ಅಮಾನತುಪಡಿಸಲು ತೀರ್ಮಾನಿಸಿ, ಆದೇಶ ಬರೆಯಿಸಲು ಮುಂದಾಗಿದ್ದ ಹೈಕೋರ್ಟ್‌, ನಂತರ ರಾಜ್ಯ ಸರ್ಕಾರಿ ಅಭಿಯೋಜಕರು ಮತ್ತು ಮಂಗಳೂರು ನಗರ ಪೊಲೀಸ್‌ ಆಯುಕ್ತರ ಭರವಸೆಯಿಂದ ಆ ನಿರ್ಧಾರದಿಂದ ಹಿಂದೆ ಸರಿಯಿತು.

ಅಮಾನತು ಆದೇಶ ಮಾಡಲೇ?:
ಇದೇ ವೇಳೆ ತನಿಖಾಧಿಕಾರಿ ವಿರೂಪಾಕ್ಷಯ್ಯ ಅವರಿಗೆ ಛೀಮಾರಿ ಹಾಕಿದ ಹೈಕೋರ್ಟ್‌, 28 ವರ್ಷ ಸೇವೆ ಸಲ್ಲಿಸಿದ್ದೀರಿ ಎಂದು ಕಂಪನಿಯ ಬ್ಯಾಂಕ್‌ ಖಾತೆ ನಿರ್ಬಂಧಿಸಿದ್ದೀರಿ. ಈ ನ್ಯಾಯಾಲಯ ಅಮಾನತು ಆದೇಶ ಮಾಡಿದರೆ, ನಿಮ್ಮ ಪೊಲೀಸ್‌ ಸಮವಸ್ತ್ರ್ರವೇ ಇರುವುದಿಲ್ಲ. ಉಳಿದ ಸೇವಾ ಅವಧಿಯನ್ನು ಸರ್ವೀಸ್‌ ಮ್ಯಾಟರ್‌ ಮುಂದಿಟ್ಟುಕೊಂಡು ಕೋರ್ಟ್‌ಗೆ ಸುತ್ತಾಡುತ್ತಾ ಮುಗಿಸಬೇಕಾಗುತ್ತದೆ. ಸಮವಸ್ತ್ರ ಇಲ್ಲವಾದರೆ ಏನಾಗುತ್ತದೆ ಗೊತ್ತಲ್ಲ. ನೀವೇ ಹಾಲು-ಬಿಸ್ಕೆಟ್‌ ಹಾಕಿ ಪೋಷಿಸಿದ ನಿಮ್ಮ ಮನೆಯ ನಾಯಿ ಸಹ ನಿಮ್ಮನ್ನು ಮೂಸುವುದಿಲ್ಲ. ಮನೆ ಹತ್ತಿರ ಹೋದರೆ ನಾಯಿ, ನಿಮ್ಮನ್ನು ನೋಡಿ ಬೊಗಳುತ್ತದೆ. ಅಮಾನತು ಮಾಡಿ, ನಿಮ್ಮ ತಲೆ ಹಾಗೂ ಭುಜಕೀರ್ತಿಯನ್ನು (ಪೊಲೀಸ್‌ ಕ್ಯಾಪ್‌, ಯೂನಿಫಾರಂ ಮೇಲಿನ ಸ್ಟಾರ್‌) ಇಳಿಸಲೇ ಎಂದು ಚಾಟಿ ಬೀಸಿತು.

Ad Widget

Ad Widget

ಎಲೆಕ್ಟ್ರಿಕಲ್‌ ಗುತ್ತಿಗೆದಾರರ ದೂರು ಆಧರಿಸಿ ಮಂಗಳೂರಿನ ಉಲ್ಲಾಳ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಕಂಪನಿ ಮತ್ತು ಅದರ ಹಲವು ನಿರ್ದೇಶಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಪೀಠ ಈ ನಿರ್ದೇಶನ ನೀಡಿ, ವಿಚಾರಣೆಯನ್ನು ಅ.14ಕ್ಕೆ ಮುಂದೂಡಿತು.

ಸತ್ಯಾಂಶ ಮರೆಮಾಚಿ ದೂರು:
ವಿಚಾರಣೆ ವೇಳೆ ಕಂಪನಿ ಪರ ವಕೀಲ ಹಿರಿಯ ವಕೀಲ ಪಿ.ಪಿ. ಹೆಗ್ಡೆ, ಎಲೆಕ್ಟ್ರಿಕಲ್‌ ಉಪಕರಣ ಖರೀದಿ ಮತ್ತು ಕೆಲಸದ ಸರ್ವೀಸ್‌ ಚಾರ್ಜ್‌ ಆಗಿ ಕಂಪನಿ ತನಗೆ ನೀಡಬೇಕಿರುವ 60,39,046 ರು. ಪಾವತಿಸಿಲ್ಲ ಎಂದು ಎಲೆಕ್ಟ್ರಿಕಲ್‌ ಗುತ್ತಿಗೆದಾರ ಸುನೀಲ್‌ ಕುಮಾರ್‌ ಪೈಸ್‌ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ. ಒಪ್ಪಂದದಂತೆ 50,11,983 ರೂ. ಅನ್ನು ಕಂಪನಿ ಈಗಾಗಲೇ ಪಾವತಿಸಿದೆ. ಈ ಸತ್ಯಾಂಶ ಮರೆಮಾಡಿ ಗುತ್ತಿಗೆದಾರ ದೂರು ನೀಡಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು.

ಇನ್ನೂ ಯಾವುದೇ ವಿವಾದ ಉಂಟಾದರೆ, ಸಿವಿಲ್‌ ಕೋರ್ಟ್‌ ಮೊರೆ ಹೋಗಿ ಅಥವಾ ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕೆಂದು ಒಪ್ಪಂದದಲ್ಲೇ ಉಲ್ಲೇಖಿಸಲಾಗಿದೆ. ಇದು ಸಂಪೂರ್ಣವಾಗಿ ಸಿವಿಲ್‌ ಪ್ರಕರಣವಾಗಿದ್ದರೂ ತನಿಖಾಧಿಕಾರಿ, ಕಂಪನಿಯ ಎಲ್ಲ ನಿರ್ದೇಶಕರ ಮತ್ತು ಉದ್ಯೋಗಿಗಳ ಬ್ಯಾಂಕ್ ಖಾತೆ ನಿರ್ಬಂಧ (ಫ್ರೀಜಿಂಗ್‌) ಮಾಡಿಸಿದ್ದಾರೆ. ಈ ತೀವ್ರತರವಾದ ಕ್ರಮದಿಂದ ಕಂಪನಿ ತನ್ನ ಉದ್ಯೋಗಿಗಳಿಗೆ ವೇತನ ಪಾವತಿಸಲಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ತನಿಖಾಧಿಕಾರಿ ವಿರೂಪಾಕ್ಷಯ್ಯ ಖುದ್ದಾಗಿ, ಮಂಗಳೂರು ನಗರ ಪೊಲೀಸ್‌ ಆಯುಕ್ತರು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಅವರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಇದು ಸಂಪೂರ್ಣ ಸಿವಿಲ್‌ ವ್ಯಾಜ್ಯ ಪ್ರಕರಣ. ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್ ಹಸ್ತಕ್ಷೇಪ ಮಾಡುವ ಅಧಿಕಾರ ಪೊಲೀಸರಿಗೆ ಎಲ್ಲಿದೆ? ಪೊಲೀಸರೆಂದರೆ ಸಿವಿಲ್‌ ಕೋರ್ಟೇ? ಬ್ಯಾಂಕ್‌ ಖಾತೆ ಫ್ರೀಜ್‌ ಮಾಡಿಸುವ ದೊಡ್ಡ ಕ್ರಮ ಏಕೆ ಜರುಗಿಸಿದ್ದೀರಿ? ಪೊಲೀಸರು ಸಿಕ್ಕಾಪಟ್ಟೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದು ಪೊಲೀಸ್‌ ರಾಜ್ಯವೇ? ಸಿವಿಲ್‌ ವ್ಯಾಜ್ಯದ ಬಗ್ಗೆ ಯಾರಾದರೂ ದೂರು ನೀಡಿದರೆ, ಸಿವಿಲ್‌ ಕೋರ್ಟ್‌ಗೆ ಹೋಗಲು ಸೂಚಿಸಬೇಕು. ಸಮವಸ್ತ್ರ ಹಾಕಿಕೊಂಡು ವಸೂಲಿಗೆ ಇಳಿದಿದ್ದೀರಾ? ಪೊಲೀಸರು ನಿಮ್ಮ ಪವರ್‌ ತೋರಿಸಿದರೆ, ಕೋರ್ಟ್‌ ಪವರ್‌ ನಾನು ತೋರಿಸಲೇ? ಈ ಕೂಡಲೇ ಮಂಗಳೂರು ಪೊಲೀಸ್‌ ಆಯುಕ್ತರು ಮತ್ತು ತನಿಖಾಧಿಕಾರಿಯನ್ನು ಅಮಾನತುಪಡಿಸಲು ಸರ್ಕಾರಕ್ಕೆ ಆದೇಶಿಸಲೇ ಎಂದು ಪ್ರಶ್ನಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!