Connect with us

ಬಿಗ್ ನ್ಯೂಸ್

Saletturu-ಸಾಲೆತ್ತೂರು : ಕುಳಾಲು ಆರೋಗ್ಯ ಕೇಂದ್ರಕ್ಕೆ ಲಕ್ವ..!

Published

on



Ad Widget

Ad Widget

Ad Widget

Ad Widget

ಕುಳಾಲು ಭಾಗದ ಜನರ ಬಹುಕಾಲದ ಬೇಡಿಕೆಯಾದ ಸರ್ಕಾರಿ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ನಿಗದಿಪಡಿಸಿ, ಅನುದಾನ ಹಾಗೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಬೆನ್ನಲ್ಲೇ ಸ್ಥಳ ಬದಲಾವಣೆಗೆ ಆಗ್ರಹ ಕೇಳಿಬಂದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ನಿಗದಿಪಡಿಸಿದ ಜಾಗದಲ್ಲೇ ಆರೋಗ್ಯ ಕೇಂದ್ರ ನಿರ್ಮಿಸಬೇಕೆಂದು ಒಂದು ವರ್ಗ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಕಟ್ಟಡ ನಿರ್ಮಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕುಳಾಲು ಭಾಗದ ಜನರ ಬಹುಕಾಲದ ಬೇಡಿಕೆಯಾದ ಸರ್ಕಾರಿ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಜಾಗ ನಿಗದಿಪಡಿಸಿ, ಅನುದಾನ ಹಾಗೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಬೆನ್ನಲ್ಲೇ ಸ್ಥಳ ಬದಲಾವಣೆಗೆ ಆಗ್ರಹ ಕೇಳಿಬಂದಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ನಿಗದಿಪಡಿಸಿದ ಜಾಗದಲ್ಲೇ ಆರೋಗ್ಯ ಕೇಂದ್ರ ನಿರ್ಮಿಸಬೇಕೆಂದು ಒಂದು ವರ್ಗ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಕಟ್ಟಡ ನಿರ್ಮಿಸಬೇಕು ಎಂಬ ಬೇಡಿಕೆ ಕೇಳಿಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕುಳಾಲು ಭಾಗದಲ್ಲಿ ಆರೋಗ್ಯ ಕೇಂದ್ರ ಸ್ಥಾಪಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ಹಿನ್ನೆಲೆಯಲ್ಲಿ 2017ರಲ್ಲಿ ಕುಳಾಲು ಗ್ರಾಮದ ಸರ್ವೆ ನಂ.580/1ರಲ್ಲಿರುವ 9.77 ಎಕರೆ ಸರ್ಕಾರಿ ಜಾಗದಲ್ಲಿ 10 ಸೆಂಟ್ಸ್ ಭೂಮಿಯನ್ನು ಆರೋಗ್ಯ ಕೇಂದ್ರಕ್ಕಾಗಿ ಮೀಸಲಿಡಲಾಗಿದೆ. ಜಾಗದ ಮಂಜೂರಾತಿ ಸಂದರ್ಭದಲ್ಲಿ ತಹಸೀಲ್ದಾರ್ ವರದಿಯಲ್ಲಿ, ಈ ಪ್ರದೇಶದಲ್ಲಿ ಕುಮ್ಕಿ, ಅರಣ್ಯ, ಗೋಮಾಳ, ರಸ್ತೆ ಅಥವಾ ಪೊರಂಬೋಕು ಇರುವುದಿಲ್ಲ ಹಾಗೂ ನಮೂನೆ 50, 53, 94ಸಿ ಮತ್ತು 94ಸಿಸಿ ಅರ್ಜಿಗಳು ತನಿಖೆಗೆ ಬಾಕಿ ಇಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Ad Widget

Ad Widget <> Ad Widget

ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಮೀಸಲಿಟ್ಟ ಜಾಗಕ್ಕೆ ಸಂಬಂಧಿಸಿದಂತೆ ಬಳಿಕ ಅನುದಾನಕ್ಕಾಗಿ ಪ್ರಯತ್ನಗಳು ನಡೆದಿದ್ದು, 2024ರ ಜುಲೈ 8ರಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಆರೋಗ್ಯ ಇಲಾಖೆಗೆ ಪತ್ರ ಬರೆದು ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಿದ್ದರು. 15ನೇ ಹಣಕಾಸು ಯೋಜನೆಯಡಿ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.



Ad Widget

ಈ ನಡುವೆ ಮೇ 22ರಂದು ಆರೋಗ್ಯ ಹಾಗೂ ಕ್ಷೇಮ ಕೇಂದ್ರ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಮಟ್ಟದಲ್ಲಿ ಶಿಲಾನ್ಯಾಸ ನಡೆದಿತ್ತು. ಜಾಗದ ಜಿಪಿಎಸ್ ಪ್ರಕ್ರಿಯೆಯ ಬಳಿಕ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಕಾಮಗಾರಿ ಟೆಂಡರ್ ಆಗಿ ಸುಮಾರು ಆರು ತಿಂಗಳೊಳಗೆ ಪೂರ್ಣಗೊಳಿಸಬೇಕಾದ ಅವಧಿ ಇದ್ದರೂ, ನಿಗದಿತ ಸ್ಥಳದ ಕುರಿತು ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭವಾಗಿಲ್ಲ ಎಂಬ ವಿಚಾರ ಇದೀಗ ಚರ್ಚೆಗೆ ಬಂದಿದೆ.

Ad Widget

Ad Widget

ಸ್ಥಳ ಬದಲಾವಣೆಗೆ ಮನವಿ

ಕುಳಾಲು ಯುವ ಫ್ರೆಂಡ್ಸ್ ವತಿಯಿಂದ ಸೆ.24ರಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ, ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿರುವ ಸ್ಥಳವನ್ನು ಬದಲಾಯಿಸುವಂತೆ ಆಗ್ರಹಿಸಲಾಗಿದೆ. ಮಂಜೂರಾದ ಜಾಗಕ್ಕೆ ಬಸ್ ಹಾಗೂ ಆಟೊ ರಿಕ್ಷಾ ಸೌಲಭ್ಯ ಇಲ್ಲದಿರುವುದು ಮತ್ತು ಮೂಲಸೌಕರ್ಯದ ಕೊರತೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸುಮಾರು 28 ಮಂದಿ ಮನವಿಗೆ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆರೋಗ್ಯ ಕೇಂದ್ರಕ್ಕೆ ಮೀಸಲಿಟ್ಟಿರುವ ಜಾಗವನ್ನು ಬದಲಾಯಿಸುವ ಪ್ರಯತ್ನದಿಂದ ಕಾಮಗಾರಿ ಮತ್ತಷ್ಟು ವಿಳಂಬವಾಗಬಹುದು ಎಂದು ಮತ್ತೊಂದು ವರ್ಗದವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಆರೋಗ್ಯ ಕೇಂದ್ರದ ಜಾಗದಲ್ಲೇ ಕಟ್ಟಡ ನಿರ್ಮಾಣವಾಗಬೇಕು’

ಕೊಳ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಮಾತನಾಡಿ, “ಕುಳಾಲಿಗೆ ಆರೋಗ್ಯ ಕೇಂದ್ರದ ಅಗತ್ಯವಿದೆ. ಹಲವು ವರ್ಷಗಳ ಹಿಂದೆ ಜಾಗ ಗುರುತಿಸಿ ಮೀಸಲಿಡಲಾಗಿದೆ. ಇದೀಗ ಅನುದಾನ ಮಂಜೂರಾಗಿ, ಜಿಪಿಎಸ್ ಹಾಗೂ ಟೆಂಡರ್ ಪ್ರಕ್ರಿಯೆಯೂ ನಡೆದಿದೆ. ಕಾಮಗಾರಿ ಪೂರ್ಣಗೊಳಿಸಲು ನಿಗದಿತ ಅವಧಿ ಇರುವಾಗ ಸ್ಥಳದ ಕುರಿತು ಆಕ್ಷೇಪ ವ್ಯಕ್ತವಾಗಿರುವುದು ಬೆಳಕಿಗೆ ಬಂದಿದೆ. ಅಭಿವೃದ್ಧಿ ಕಾಮಗಾರಿಗೆ ಅಡ್ಡಿಯಾಗಬಾರದು” ಎಂದರು.

“ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಮೀಸಲಿಟ್ಟಿರುವ ಸರ್ಕಾರಿ ಜಾಗವನ್ನು ಕ್ರೀಡಾ ಚಟುವಟಿಕೆಗಳಿಗೆ ಬಳಸಬೇಕು ಎಂಬ ಬೇಡಿಕೆ ಸಮಂಜಸವಲ್ಲ. ಕ್ರೀಡಾಂಗಣಕ್ಕೆ ಬೇರೆ ಸರ್ಕಾರಿ ಜಾಗವನ್ನು ಗುರುತಿಸಬಹುದು. ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ನಿಗದಿಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಾಣವಾಗಬೇಕಿದೆ. ಅನುದಾನ ರದ್ದಾದರೆ ಮುಂದಿನ ದಿನಗಳಲ್ಲಿ ಇದೇ ಪ್ರದೇಶಕ್ಕೆ ಮತ್ತೆ ಆರೋಗ್ಯ ಕೇಂದ್ರಕ್ಕೆ ಅನುದಾನ ದೊರೆಯುವ ಬಗ್ಗೆ ಅನುಮಾನವಿದೆ” ಎಂದು ಅವರು ಹೇಳಿದರು.

“ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇರಬಾರದು. ಸ್ಥಳೀಯ ಶಾಸಕರು ಕಾಮಗಾರಿ ನಿಲ್ಲಿಸುವಂತೆ ಯಾವುದೇ ಸೂಚನೆ ನೀಡಿಲ್ಲ. ಅನುದಾನ ತರಿಸುವ ವಿಚಾರದಲ್ಲಿ ಪೈಪೋಟಿ ಮಾಡುವ ಬದಲು ಅಭಿವೃದ್ಧಿಗೆ ಸಹಕರಿಸಬೇಕು. ಊರಿಗೆ ಆಸ್ಪತ್ರೆ ಬೇಕಾಗಿದೆ. ಬೇರೆ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿದರೆ ಅದು ಆಸ್ಪತ್ರೆಯ ಕಟ್ಟಡವಾಗುವುದಿಲ್ಲ” ಎಂದರು.

ಆಟದ ಮೈದಾನಕ್ಕೂ ಬೇಡಿಕೆ

ಆರೋಗ್ಯ ಕೇಂದ್ರಕ್ಕೆ ಮೀಸಲಿಟ್ಟ ಜಾಗದ ಪಕ್ಕದಲ್ಲಿರುವ ಸುಮಾರು 9 ಎಕರೆ ಪ್ರದೇಶವನ್ನು ದೊಡ್ಡ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸುವಂತೆ ಮತ್ತೊಂದು ಬೇಡಿಕೆ ಕೇಳಿಬಂದಿದೆ. ಯುವಕರ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಬೇಡಿಕೆ ಮುಂದಿಟ್ಟಿರುವುದಾಗಿ ತಿಳಿದುಬಂದಿದೆ.

ಆರೋಗ್ಯ ಕೇಂದ್ರದ ಜಾಗ ಮಂಜೂರಾದ ಬಳಿಕ ಯುವಕರ ತಂಡವೊಂದು ಸ್ಥಳವನ್ನು ಸಮತಟ್ಟು ಮಾಡಿ ಕ್ರೀಡಾ ಚಟುವಟಿಕೆ ನಡೆಸಿತ್ತು. ಇದಕ್ಕಾಗಿ ಮಾಡಿರುವ ವೆಚ್ಚವನ್ನು ನೀಡುವಂತೆ ಬೇಡಿಕೆ ಬಂದಿದ್ದು, ಕಾಮಗಾರಿ ಗುತ್ತಿಗೆದಾರರು ಅಗತ್ಯ ಹಣ ನೀಡುವ ಭರವಸೆ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾನೂನುಬದ್ಧವಾಗಿ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಮೀಸಲಿಟ್ಟ ಜಾಗದಲ್ಲಿ ಈ ರೀತಿಯ ಕಾಮಗಾರಿಗೆ ಅವಕಾಶವಿಲ್ಲದಿದ್ದರೂ, ಮಾನವೀಯ ನೆಲೆಯಲ್ಲಿ ವೆಚ್ಚ ಭರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅದೇ ರೀತಿ, ಕ್ರೀಡಾಂಗಣಕ್ಕಾಗಿ ಬೇರೆ ಸರ್ಕಾರಿ ಜಾಗವನ್ನು ಗುರುತಿಸಿದರೆ ಅದನ್ನು ಸಮತಟ್ಟು ಮಾಡಿಕೊಡಲು ಸಹಕರಿಸುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಜನಜಾಗೃತಿ ಸಭೆಯಲ್ಲಿ ಚರ್ಚೆ

ಆರೋಗ್ಯ ಕೇಂದ್ರ ನಿರ್ಮಾಣದ ವಿಚಾರವಾಗಿ ಶನಿವಾರ ಸಂಜೆ ಕುಳಾಲಿನ ವಾರಾಹಿ ಸಭಾಭವನದಲ್ಲಿ ಜನಜಾಗೃತಿ ಸಭೆ ನಡೆಯಿತು. ಆರೋಗ್ಯ ಕೇಂದ್ರದ ಕಾಮಗಾರಿ ತ್ವರಿತವಾಗಿ ಆರಂಭವಾಗಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಆರೋಗ್ಯ ಕೇಂದ್ರ ನಿರ್ಮಾಣದ ವಿಚಾರದಲ್ಲಿ ಸ್ಥಳೀಯರ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಆಡಳಿತಾತ್ಮಕವಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಒಂದೆಡೆ ಸಾರ್ವಜನಿಕರಿಗೆ ಸುಲಭವಾಗಿ ತಲುಪಬಹುದಾದ ಸ್ಥಳದ ಬೇಡಿಕೆಯಿದ್ದರೆ, ಇನ್ನೊಂದೆಡೆ ಹಲವು ವರ್ಷಗಳ ಹಿಂದೆ ಗುರುತಿಸಿ, ಮೀಸಲಿಟ್ಟು, ಅನುದಾನ ಹಾಗೂ ಟೆಂಡರ್ ಹಂತ ತಲುಪಿರುವ ಕಾಮಗಾರಿಯನ್ನು ವಿಳಂಬಗೊಳಿಸಬಾರದು ಎಂಬ ಒತ್ತಾಯವಿದೆ.

ಆರೋಗ್ಯ ಇಲಾಖೆಗೆ ಮಂಜೂರಾದ ಜಾಗದಲ್ಲಿ ಕಾಮಗಾರಿ ನಡೆಯದೆ ಸ್ಥಳ ಬದಲಾವಣೆಯಾದರೆ ಅನುದಾನದ ಸ್ಥಿತಿ ಏನಾಗಲಿದೆ, ಹೊಸ ಸ್ಥಳಕ್ಕೆ ಮತ್ತೆ ಆಡಳಿತಾತ್ಮಕ ಹಾಗೂ ತಾಂತ್ರಿಕ ಅನುಮತಿಗಳು ಅಗತ್ಯವಿದೆಯೇ ಎಂಬ ಪ್ರಶ್ನೆಗಳಿಗೂ ಸ್ಪಷ್ಟತೆ ಅಗತ್ಯವಾಗಿದೆ.

ಈ ವಿಚಾರದಲ್ಲಿ ಸಂಬಂಧಪಟ್ಟ ಇಲಾಖೆಗಳು ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಅನುಕೂಲ, ಸಂಪರ್ಕ ವ್ಯವಸ್ಥೆ, ಸರ್ಕಾರಿ ಜಾಗದ ಕಾನೂನುಬದ್ಧ ಸ್ಥಿತಿ ಹಾಗೂ ಈಗಾಗಲೇ ಪೂರ್ಣಗೊಂಡಿರುವ ಅನುದಾನ–ಟೆಂಡರ್ ಪ್ರಕ್ರಿಯೆಯನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕಿದೆ.

ಸಭೆಯಲ್ಲಿ ಅಶ್ರಫ್, ಫೆಲಿಕ್ಸ್, ತಿಮ್ಮಪ್ಪ ರೈ, ರಾಮಯ್ಯ ಶೆಟ್ಟಿ, ಗುರುವಪ್ಪ ಮುಗೇರ, ಸಂಜೀವಿ, ರತ್ನ, ಕೃಷ್ಣಪ್ಪ ನಾಯ್ಕ, ಎಚ್. ಶರೀಫ್ ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Arshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್

Published

on



Ad Widget

Ad Widget

Ad Widget

Ad Widget

ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ನವರಾತ್ರಿ ಸಂದರ್ಭ ನಡೆಯಲಿರುವ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನದಲ್ಲಿ ವಿಟ್ಲದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ಅವರು ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ರಂಗಸ್ಥಳವೇರಲು ಸಜ್ಜಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

‘ಯಕ್ಷಪ್ರಿಯೆ ತನು ವಿಟ್ಲ’ ಎಂದೇ ಪರಿಚಿತರಾಗಿರುವ ಅರ್ಷಿಯಾ ಖಾನ್ ಅವರು ಕದ್ರಿಯ ಕದಳಿ ಕಲಾ ಕೇಂದ್ರದ ವಿದ್ಯಾರ್ಥಿನಿ. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕದಳಿ ಕಲಾ ಕೇಂದ್ರ ಆಯೋಜಿಸಿರುವ ‘ಕದಳಿ ದಶಾಹಃ’ ಯಕ್ಷಗಾನ ಹಬ್ಬದ ಅಂಗವಾಗಿ ಅ.20ರಂದು ಸಂಪೂರ್ಣ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದಲ್ಲಿ ಅರ್ಷಿಯಾ ಅವರು ದೇವಿ ಪಾತ್ರ ನಿರ್ವಹಿಸಲಿದ್ದಾರೆ.

Ad Widget

Ad Widget <> Ad Widget

ಕಳೆದ 12 ವರ್ಷಗಳಿಂದ ಯಕ್ಷಗಾನದಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುವ ಅರ್ಷಿಯಾ, ಆದಿಮಾಯೆ ಸೇರಿದಂತೆ ಹಲವು ಅಸುರ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.



Ad Widget

“ಉಳ್ಳಾಲ್ತಿ ಅಮ್ಮನ (ಕಟೀಲು ದುರ್ಗಾಪರಮೇಶ್ವರಿ) ಮೇಲಿನ ಭಕ್ತಿಯೇ ನನ್ನಲ್ಲಿ ಯಕ್ಷಗಾನದ ಆಸಕ್ತಿ ಮೂಡಲು ಕಾರಣ. ಈ ಬಾರಿ ನವರಾತ್ರಿಯ ಪರ್ವಕಾಲದಲ್ಲಿ ದೇವಿ ಪಾತ್ರ ನಿರ್ವಹಿಸುವ ಅವಕಾಶ ದೊರೆತಿದೆ. ಅಷ್ಟಭುಜ ಧರಿಸಿ ರಂಗಸ್ಥಳ ಏರುವ ಆ ಪವಿತ್ರ ಕ್ಷಣವನ್ನು ಕಲ್ಪಿಸಿಕೊಂಡಾಗಲೇ ರೋಮಾಂಚನವಾಗುತ್ತದೆ” ಎಂದು ಅರ್ಷಿಯಾ ಹೇಳಿದ್ದಾರೆ.

Ad Widget

Ad Widget

ಯಕ್ಷಗಾನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ ಎಂದು ಹೇಳಿದ ಅವರು, ದೇವಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ಪರಿಶುದ್ಧತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಕಳೆದ ಆರು ತಿಂಗಳಿಂದ ಮಾಂಸಾಹಾರ ತ್ಯಜಿಸಿ ವ್ರತ ಆಚರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರತಿದಿನ ದೈವಸ್ಥಾನ ಅಥವಾ ದೇವಸ್ಥಾನಕ್ಕೆ ಭೇಟಿ ನೀಡಿ ಧ್ಯಾನ ಮಾಡುತ್ತಿದ್ದೇನೆ. ನವರಾತ್ರಿ ಆರಂಭವಾದ ಬಳಿಕ ಇನ್ನಷ್ಟು ಕಟ್ಟುನಿಟ್ಟಿನ ವ್ರತ ಆಚರಿಸಲು ಉದ್ದೇಶಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಯಕ್ಷಗಾನ ಪ್ರೇಮಕ್ಕೆ ಕುಟುಂಬದ ಬೆಂಬಲ
“ಯಕ್ಷಗಾನವು ಪೌರಾಣಿಕ ಕಥಾನಕಗಳನ್ನು ಆಧರಿಸಿದೆ. ನಮ್ಮ ಧರ್ಮ ಬೇರೆಯಾಗಿರುವುದರಿಂದ ಯಕ್ಷಗಾನದ ಕಥಾನಕಗಳಲ್ಲಿನ ಪ್ರತಿಯೊಂದು ಪಾತ್ರವನ್ನೂ ಓದಿ ತಿಳಿದುಕೊಳ್ಳುವುದು ಅಗತ್ಯ. ಇದು ನನಗಿರುವ ದೊಡ್ಡ ಸವಾಲು. ಆದರೆ ಯಕ್ಷಗುರು ರಮೇಶ್ ಭಟ್ ಅವರ ಮಾರ್ಗದರ್ಶನದಲ್ಲಿ ಎಲ್ಲವನ್ನೂ ಕಲಿಯಲು ಪ್ರಯತ್ನಿಸುತ್ತಿದ್ದೇನೆ” ಎಂದು ಅರ್ಷಿಯಾ ತಿಳಿಸಿದ್ದಾರೆ.

ತಮ್ಮ ಯಕ್ಷಗಾನ ಆಸಕ್ತಿಗೆ ಕುಟುಂಬದವರ ಸಂಪೂರ್ಣ ಸಹಕಾರವಿದೆ. ಸಾರ್ವಜನಿಕರಿಂದಲೂ ಸಾಕಷ್ಟು ಬೆಂಬಲ ದೊರೆತಿದೆ. ಕೆಲವರು ಟೀಕಿಸಿದರೂ ಅದನ್ನೂ ಮುಕ್ತ ಮನಸ್ಸಿನಿಂದ ಸ್ವೀಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಪದವೀಧರೆಯಾಗಿರುವ ಅರ್ಷಿಯಾ ಖಾನ್ ಅವರು ಪ್ರಸ್ತುತ ಮಾಧ್ಯಮ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ.

Ad Widget
Continue Reading

ರಾಜ್ಯ

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.



Ad Widget

ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

Ad Widget

Ad Widget

ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading