ಬಿಗ್ ನ್ಯೂಸ್
Bangalore-ಬೆಂಗಳೂರು: ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಗೆ ₹2.82 ಕೋಟಿ ಪರಿಹಾರಕ್ಕೆ ಹೈಕೋರ್ಟ್ ಆದೇಶ
ಅಪಾಯಕಾರಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ₹2.82 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಅಪಾಯದ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಇದ್ದರೂ ತುರ್ತು ಕ್ರಮ ಕೈಗೊಳ್ಳದ ಬಿಬಿಎಂಪಿಯ ನಿರ್ಲಕ್ಷ್ಯ ಧೋರಣೆಯನ್ನು ನ್ಯಾಯಾಲಯ ತೀವ್ರವಾಗಿ ಖಂಡಿಸಿದೆ.
ಬೆಂಗಳೂರು: ಅಪಾಯಕಾರಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ₹2.82 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಅಪಾಯದ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಇದ್ದರೂ ತುರ್ತು ಕ್ರಮ ಕೈಗೊಳ್ಳದ ಬಿಬಿಎಂಪಿಯ ನಿರ್ಲಕ್ಷ್ಯ ಧೋರಣೆಯನ್ನು ನ್ಯಾಯಾಲಯ ತೀವ್ರವಾಗಿ ಖಂಡಿಸಿದೆ.
ಜಿ. ಚಂದನ್ (38) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ, ಅರ್ಜಿದಾರರಿಗೆ ಶೇ.6ರ ಬಡ್ಡಿಯೊಂದಿಗೆ ಪರಿಹಾರ ಪಾವತಿಸುವಂತೆ ಆದೇಶಿಸಿದೆ. ಜತೆಗೆ, ಬೆಂಗಳೂರಿನಲ್ಲಿ ಅಪಾಯಕಾರಿ ಮರಗಳು ಸೇರಿದಂತೆ ಸಾರ್ವಜನಿಕರಿಗೆ ಅಪಾಯ ಉಂಟುಮಾಡುವ ಅಂಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.
ಅಪಾಯಕಾರಿ ಮರದ ಕೊಂಬೆಯ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಿದ್ದರೂ, ಮರ ಖಾಸಗಿ ಜಾಗದಲ್ಲಿದೆ ಎಂಬ ಕಾರಣಕ್ಕೆ ಸಾರ್ವಜನಿಕರ ಸುರಕ್ಷತೆಯ ಹೊಣೆಗಾರಿಕೆಯಿಂದ ಬಿಬಿಎಂಪಿ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಪಾಯದ ಬಗ್ಗೆ ಮಾಹಿತಿ ಇದ್ದ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಅಥವಾ ಇತರ ಕಾರಣಗಳನ್ನು ನೆಪವಾಗಿ ಹೇಳಲಾಗದು ಎಂದು ನ್ಯಾಯಪೀಠ ಹೇಳಿದೆ.
ಪರಿಹಾರ ಮೊತ್ತದಲ್ಲಿ ಬಿಬಿಎಂಪಿ ಈಗಾಗಲೇ ಪಾವತಿಸಿರುವ ₹5 ಲಕ್ಷವನ್ನು ಕಡಿತಗೊಳಿಸಿ, ಉಳಿದ ₹2,77,29,695 ಅನ್ನು ಚಂದನ್ ಅವರಿಗೆ ಪಾವತಿಸಬೇಕು. 2024ರ ಮಾರ್ಚ್ 7ರಿಂದ ಪರಿಹಾರ ಪಾವತಿಸುವ ದಿನದವರೆಗೆ ಶೇ.6ರ ವಾರ್ಷಿಕ ಬಡ್ಡಿಯನ್ನೂ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ತೀರ್ಪಿನ ಪ್ರತಿ ದೊರೆತ 12 ವಾರಗಳೊಳಗೆ ಆರ್ಟಿಜಿಎಸ್ ಮೂಲಕ ಪರಿಹಾರ ಪಾವತಿಸಬೇಕು ಎಂದು ಸೂಚಿಸಲಾಗಿದೆ.
ಇದಲ್ಲದೆ, ಶಾಲೆಯು ಈಗಾಗಲೇ ಪಾವತಿಸಿರುವ ₹3 ಲಕ್ಷವನ್ನು ಪರಿಗಣಿಸಿ, ಚಂದನ್ ಅವರ ಪುತ್ರಿಗೆ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ನೀಡಿರುವ ಭರವಸೆಯನ್ನು ಶಾಲೆ ಪಾಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.
ಸರ್ಕಾರಕ್ಕೆ ಹೈಕೋರ್ಟ್ನ ಪ್ರಮುಖ ನಿರ್ದೇಶನಗಳು
ಮರಗಳಷ್ಟೇ ಅಲ್ಲದೆ ಸಾರ್ವಜನಿಕರಿಗೆ ಅಪಾಯ ಉಂಟುಮಾಡಬಹುದಾದ ಎಲ್ಲ ಅಂಶಗಳನ್ನು ಗುರುತಿಸಲು ಸಮಗ್ರ ಸುರಕ್ಷತಾ ವ್ಯವಸ್ಥೆ ರೂಪಿಸಬೇಕು.
ರಸ್ತೆ ಗುಂಡಿಗಳು, ತೆರೆದ ಮ್ಯಾನ್ಹೋಲ್ಗಳು, ಚರಂಡಿಗಳು, ವಿದ್ಯುತ್ ಅಪಾಯ, ಅಪಾಯಕಾರಿ ಕಟ್ಟಡಗಳು ಹಾಗೂ ನಿರ್ಮಾಣ ಕಾಮಗಾರಿಗಳನ್ನು ಗುರುತಿಸಬೇಕು.
ಸಾರ್ವಜನಿಕರು ಫೋಟೊ, ವಿಡಿಯೊ ಹಾಗೂ ಸ್ಥಳದ ಮಾಹಿತಿಯೊಂದಿಗೆ ದೂರು ಸಲ್ಲಿಸಲು ಸಾಮಾನ್ಯ ಡಿಜಿಟಲ್ ವ್ಯವಸ್ಥೆ ರೂಪಿಸಬೇಕು.
ಪ್ರತಿ ದೂರಿಗೂ ವಿಶಿಷ್ಟ ಗುರುತು ಸಂಖ್ಯೆ ನೀಡಿ, ದೂರು ಸ್ವೀಕರಿಸಿದ ಕ್ಷಣದಿಂದ ಪರಿಹಾರವಾಗುವವರೆಗೆ ಅದರ ಸ್ಥಿತಿಯನ್ನು ಸಾರ್ವಜನಿಕರು ಪರಿಶೀಲಿಸಲು ಅವಕಾಶ ಕಲ್ಪಿಸಬೇಕು.
ಅಪಾಯಗಳನ್ನು ತುರ್ತು, ಹೆಚ್ಚು, ಮಧ್ಯಮ ಹಾಗೂ ಸಾಮಾನ್ಯ ಎಂದು ವರ್ಗೀಕರಿಸಿ ಅಗತ್ಯ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು.
ಅಪಾಯ ಗುರುತಿಸಲು ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವ್ಯವಸ್ಥೆ ಬಳಸಬಹುದಾದರೂ, ಕಾನೂನು ಉಲ್ಲಂಘನೆ ಅಥವಾ ಹೊಣೆಗಾರಿಕೆ ನಿರ್ಧರಿಸುವ ಅಧಿಕಾರವನ್ನು ಎಐಗೆ ನೀಡಬಾರದು.
ಈ ವ್ಯವಸ್ಥೆಯನ್ನು ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಜಾರಿಗೆ ತರಬೇಕು. ಮುಖ್ಯ ನಿರ್ದೇಶನಗಳನ್ನು ಆರು ತಿಂಗಳೊಳಗೆ ಅನುಷ್ಠಾನಗೊಳಿಸಬೇಕು.
ಅಪಾಯಕಾರಿ ಮರಗಳ ನಿರ್ವಹಣಾ ಕ್ರಮಗಳನ್ನು ಮೂರು ತಿಂಗಳೊಳಗೆ ಪರಿಶೀಲಿಸಿ ಸುಧಾರಿಸಬೇಕು.
ಪ್ರಕರಣದ ಹಿನ್ನೆಲೆ
ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಅವರು 2024ರ ಮಾರ್ಚ್ 7ರಂದು ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಶಾಂತಲಾ ನಗರದ ಗುಡ್ ಶೆಫರ್ಡ್ ಕಾನ್ವೆಂಟ್ ಶಾಲೆಯ ಆವರಣದಲ್ಲಿದ್ದ ಮರದ ದಪ್ಪ ಕೊಂಬೆ ಅವರ ಕುತ್ತಿಗೆಯ ಮೇಲೆ ಬಿದ್ದಿತ್ತು. ಪರಿಣಾಮ ಬೆನ್ನುಹುರಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರು ಟ್ರಾಮಾಟಿಕ್ ಪ್ಯಾರಾಪ್ಲೀಜಿಯಾ ಸಮಸ್ಯೆಗೆ ಒಳಗಾಗಿದ್ದರು.
ಅಪಾಯಕಾರಿ ಕೊಂಬೆಯ ಬಗ್ಗೆ ಗುಡ್ ಶೆಫರ್ಡ್ ಕಾನ್ವೆಂಟ್ ಶಾಲೆಯು 2024ರ ಫೆಬ್ರವರಿ 16ರಂದು ಬಿಬಿಎಂಪಿಗೆ ಪತ್ರ ಬರೆದಿತ್ತು. ಫೆಬ್ರವರಿ 22ರಂದು ಆ ಪತ್ರವನ್ನು ಬಿಬಿಎಂಪಿಗೆ ಸಲ್ಲಿಸಲಾಗಿತ್ತು. ಕೊಂಬೆ ಯಾವುದೇ ಸಮಯದಲ್ಲಿ ಮುರಿದು ಬೀಳುವ ಸಾಧ್ಯತೆಯಿದ್ದು, ಮಕ್ಕಳು, ನಿವಾಸಿಗಳು ಹಾಗೂ ವಾಹನಗಳಿಗೆ ಅಪಾಯಕಾರಿಯಾಗಿದೆ ಎಂದು ಶಾಲೆ ಪತ್ರದಲ್ಲಿ ತಿಳಿಸಿತ್ತು.
ಆದರೆ, ಅಪಘಾತ ಸಂಭವಿಸಿದ ಮಾರ್ಚ್ 7ರಂದೇ ಬಿಬಿಎಂಪಿ ಕೊಂಬೆ ಕತ್ತರಿಸಲು ಅನುಮತಿ ನೀಡಿತ್ತು. ಈ ನಡುವೆ ಅಪಘಾತ ಸಂಭವಿಸಿ ಚಂದನ್ ಗಂಭೀರವಾಗಿ ಗಾಯಗೊಂಡಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ22 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಬಿಗ್ ನ್ಯೂಸ್5 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್















