Connect with us

ಶಿಕ್ಷಣ

Vidyamata Academy-ಸರಕಾರಿ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ಅಕ್ಟೋಬರ್ 26ರ ವರೆಗೆ ವಿಸ್ತರಣೆ: ಆನ್ಲೈನ್ ಕ್ರ್ಯಾಶ್ ಕೋರ್ಸ್ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

Published

on

Ad Widget

Ad Widget

Ad Widget

Ad Widget

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರಿ ಶಿಕ್ಷಕರ ನೇಮಕಾತಿ (GPSTR, PSTR, HSTR) ಪರೀಕ್ಷೆಗಳಿಗೆ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್ ಮೂಲಕ ಆಯೋಜಿಸಿದೆ.

Ad Widget

Ad Widget

Ad Widget

Ad Widget

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರಿ ಶಿಕ್ಷಕರ ನೇಮಕಾತಿ (GPSTR, PSTR, HSTR)ಪರೀಕ್ಷೆಗಳಿಗೆ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್ ಮೂಲಕ ಆಯೋಜಿಸಿದೆ, ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಈ ತರಗತಿಗಳನ್ನು ಸದುಪಯೋಗಪಡಿಸಿಕೊಳ್ಳಬಹುದು.

Ad Widget

Ad Widget alt="Ad Widget"/>

Ad Widget

ಹಿಂದಿನ ಶಿಕ್ಷಕರ ನೇಮಕಾತಿ ಅಮೋಘ ಸಾಧನೆ ಮಾಡಿರುವ ವಿದ್ಯಾಮಾತಾ ಅಕಾಡೆಮಿ

Ad Widget

Ad Widget <> Ad Widget

ವಿದ್ಯಾಮಾತಾ ಅಕಾಡೆಮಿಯು ಸರಕಾರಿ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ ನೀಡುವುದರ ಜೊತೆಗೆ ಶಿಕ್ಷಕರ ಅರ್ಹತಾ ಪರೀಕ್ಷೆಗಳಿಗೂ ತರಬೇತಿ ನೀಡುತ್ತಿದ್ದು ಇಲ್ಲಿಯವರೆಗೆ 800ಕ್ಕೂ ಅಧಿಕ ಅಭ್ಯರ್ಥಿಗಳನ್ನು ವಿವಿಧ ಅರ್ಹತಾ ಪರೀಕ್ಷೆಗಳಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET), ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(KSET), ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (CTET), ರಾಷ್ಟೀಯ ಅರ್ಹತಾ ಪರೀಕ್ಷೆ(NET)ಯಲ್ಲಿ ಉತ್ತೀರ್ಣಗೊಳಿಸಿದ ಹೆಗ್ಗಳಿಕೆಯೊಂದಿಗೆ ತರಬೇತಿ ಆಯೋಜಿಸಿರುವ ವಿದ್ಯಾಮಾತಾವು ಕಳೆದ ಸಾಲಿನ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ತರಬೇತಿ ನೀಡಿ 5 ವಿದ್ಯಾರ್ಥಿಗಳನ್ನು GPSTR ನೇಮಕಾತಿಯಲ್ಲಿ ಉತ್ತೀರ್ಣಗೊಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು

ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
GPSTR/PSTR /HSTR ನೇಮಕಾತಿಗೆ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ 26.10.2026ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಸರಕಾರಿ ಶಿಕ್ಷಕರಾಗುವ ಕನಸನ್ನು ನನಸು ಮಾಡಿಕೊಳ್ಳಲು ಸೂಕ್ತ ಅವಕಾಶವಾಗಿದೆ.
ವಿದ್ಯಾಮಾತಾ ಅಕಾಡೆಮಿ ಆಯೋಜಿಸಿರುವ ಅಂತಿಮ ಹಂತದ ಈ ತರಬೇತಿಯು ಲೈವ್ ತರಗತಿಗಳ ಮೂಲಕ ರಾತ್ರಿ ಸಮಯ 7 ರಿಂದ 10 ರವರೆಗೆ ನಡೆಯಲಿದೆ, ಅಲ್ಲದೇ ಪ್ರತೀ ದಿನ ಮಾದರಿ ಪ್ರಶ್ನೆ ಪತ್ರಿಕೆಗಳ ಪರೀಕ್ಷೆಗಳು, ಅಧ್ಯಯನ ಸಾಮಾಗ್ರಿಗಳು(Study Meterials) ಹಾಗೂ ನೇಮಕಾತಿಗೆ ಸಂಬಂದಿಸಿದ ನಿರಂತರ ಮಾರ್ಗದರ್ಶನ, ಇವೆಲ್ಲವನ್ನು ಒಳಗೊಂಡಿರುವ ಅಂತಿಮ ಹಂತದ ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಪುತ್ತೂರಿನ APMC ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯ ಕಛೇರಿ ಸಂಖ್ಯೆ 9620468869 / 9945182516ನ್ನು ಸಂಪರ್ಕಿಸಿ ದಾಖಲಾತಿ ಪಡೆದುಕೊಳ್ಳಬಹುದು.

Click to comment

Leave a Reply

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಶಿಕ್ಷಣ

Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ  ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.  ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ  ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್‌ಆರ್‌ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ  ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ

Published

on

Ad Widget

Ad Widget

Ad Widget

Ad Widget

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ‍್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಏಕೀಕರಣ ಎಂದರೆ ಇಂದಿನ ಕರ್ನಾಟಕ ರಾಜ್ಯ ಆಕಾರ ಪಡೆದು ಅನೇಕ ಭೌಗೋಳಿಕ ರಾಜಕೀಯ ಹಾಗೂ ಭಾಷಾ ಸವಾಲುಗಳನ್ನು ಜಯಿಸಿದ ಪ್ರಕ್ರಿಯೆ.ಭಾರತದ ಸ್ವಾತಂತ್ರ‍್ಯದ ಹೋರಾಟದ ಸಮಯದಲ್ಲಿಯೇ ಕನ್ನಡ ಭಾಷಾಭಿಮಾನಿಗಳು ವಿವಿಧ ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದರು. ಹಲವು ಪ್ರಾಂತ್ಯಗಳಲ್ಲಿದ್ದ ಕನ್ನಡಿಗರ ಹಕ್ಕುಗಳು, ಭಾಷಾ ಮತ್ತು ಸಾಂಸ್ಕೃತಿಕ ಹಿತ ಚಿಂತನೆಗಳ ಪೋಷಣೆಗಾಗಿ ಏಕೀಕರಣವು ಅಗತ್ಯವಾಯಿತು.ಈ ಭಿನ್ನ ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಕನ್ನಡಿಗರನ್ನು ಒಗ್ಗೂಡಿಸುವ ಹೋರಾಟವೇ ಕರ್ನಾಟಕ ಏಕೀಕರಣ. ಕನ್ನಡ ರಾಜ್ಯದ ಕನಸು ಸಾಕಾರಗೊಳ್ಳಲು ಹಲವು ಅಡೆತಡೆಗಳ ನಡುವೆಯೂ ಹೋರಾಟಗಾರರ ಶ್ರಮ, ಒತ್ತಡ ಮತ್ತು ನಿರಂತರ ಉತ್ಸಾಹದಿಂದ ಅದು ಕೊನೆಗೂ ಸಫಲವಾಯಿತು.ಇದು ನಮ್ಮ ಸಂಸ್ಕೃತಿ, ಭಾಷಾ ಗೌರವ , ಆರ್ಥಿಕ ಮತ್ತು ಸಾಮಾಜಿಕ ಹಿತದ ಸಂಕೇತ. ಈ ಐಕ್ಯತೆ , ಭ್ರಾತೃತ್ವ ಮತ್ತು ಪ್ರಾದೇಶಿಕ ಅಭಿಮಾನವನ್ನು ಮುಂದುವರೆಸಿ ಕನ್ನಡ ನಾಡಿನ ಸಮೃದ್ಧಿಗಾಗಿ ನಾವು ನಿರಂತರ ಪ್ರಯತ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ಕರ್ನಾಟಕದ ಏಕೀಕರಣ ವಿಚಾರಗೋಷ್ಠಿಯು ಕನ್ನಡ ಮಾತನಾಡುವ ಪ್ರದೇಶಗಳ ಐತಿಹಾಸಿಕ ಒಗ್ಗೂಡುವಿಕೆ, ಸಾಂಸ್ಕೃತಿಕ ಅಸ್ಮಿತೆ ಮತ್ತು ಆಧುನಿಕ ಕರ್ನಾಟಕದ ಅಭಿವೃದ್ಧಿಯನ್ನು ಚರ್ಚಿಸುವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವೇದಿಕೆಯಾಗಿದೆ. ಎಂದು ಹೇಳಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಹಾಸನ ಇದರ ಸಂಘಟನಾ ಕಾರ‍್ಯದರ್ಶಿಯಾದ ಎನ್. ಗಿರಿಜಾಂಬ ಉಪಸ್ಥಿತರಿದ್ದರು.

Ad Widget

Ad Widget

ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಧುಶ್ರೀ, ಭವ್ಯಶ್ರೀ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಇವರು ಈ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ, ಈ ವಿಚಾರದ ಕುರಿತಾಗಿ ತಮ್ಮ ವಿಶ್ಲೇಷಣೆಯನ್ನು ನೀಡಿದರು.ಕರ‍್ಯಕ್ರಮದಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್. ಇವರು ಸ್ವಾಗತಿಸಿದರು. ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ತುತಿ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!