ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಸಾದ್ ಅವರು ಭಾಷಣ ಮಾಡಿದ್ದರು. […]" /> ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಸಾದ್ ಅವರು ಭಾಷಣ ಮಾಡಿದ್ದರು. […]"> BC ROAD CHALO, Lawer Prasad : ಬಿ.ಸಿ.ರೋಡ್‌ ಪ್ರತಿಭಟನೆಯಲ್ಲಿ ನ್ಯಾಯಾಂಗ ವ್ಯವಸ್ಥೆ ಕುರಿತು ಹೇಳಿಕೆ: ವಕೀಲ ಪ್ರಸಾದ್ ವಿರುದ್ಧ ದೂರು - Nikhara News | Kannada News Website
Connect with us

ದಕ್ಷಿಣ ಕನ್ನಡ

BC ROAD CHALO, Lawer Prasad : ಬಿ.ಸಿ.ರೋಡ್‌ ಪ್ರತಿಭಟನೆಯಲ್ಲಿ ನ್ಯಾಯಾಂಗ ವ್ಯವಸ್ಥೆ ಕುರಿತು ಹೇಳಿಕೆ: ವಕೀಲ ಪ್ರಸಾದ್ ವಿರುದ್ಧ ದೂರು

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಬಿ.ಸಿ.ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ವಕೀಲ ಪ್ರಸಾದ್ ಎಂಬವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್ ಹನೀಫ್ (43) ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಸಾದ್ ಅವರು ಭಾಷಣ ಮಾಡಿದ್ದರು. ಈ ವೇಳೆ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Ad Widget

Ad Widget <> Ad Widget

ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

Ad Widget
Click to comment

Leave a Reply

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಬಿಎಂ.ಡಿ ಕ್ಯಾಂಪ್‌ ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!