ನಿಧನ ವಾರ್ತೆ
Kundapur-ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆಗೆ ಯತ್ನ ಆರೋಪ: ನಾಪತ್ತೆಯಾಗಿದ್ದ ಪತಿ, ಸ್ನೇಹಿತೆ ನೇಣಿಗೆ ಶರಣು
ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಾಗಿದ್ದ ಪತಿ ಹಾಗೂ ಆತನ ಸ್ನೇಹಿತೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಕುಂದಾಪುರ ತಾಲೂಕಿನ ಗೋಳಿಹೊಳೆ ಚಾರ್ಸಾಲಿನ ನಿವಾಸಿ ವಿಠಲ ನಾಯ್ಕ (35) ಹಾಗೂ ಹೊಸೂರು ನಿವಾಸಿ ಭವ್ಯಾ ನಾಯ್ಕ ಅಲಿಯಾಸ್ ನಿಶ್ಚಿತಾ (33) ಎಂದು ಗುರುತಿಸಲಾಗಿದೆ.
ಕುಂದಾಪುರ: ಪತ್ನಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಾಗಿದ್ದ ಪತಿ ಹಾಗೂ ಆತನ ಸ್ನೇಹಿತೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಾಲಿನ ಸೌಪರ್ಣಿಕಾ ನದಿ ಸಮೀಪ ಮಂಗಳವಾರ ಬೆಳಕಿಗೆ ಬಂದಿದೆ.
ಮೃತರನ್ನು ಗೋಳಿಹೊಳೆ ಚಾರ್ಸಾಲಿನ ನಿವಾಸಿ ವಿಠಲ ನಾಯ್ಕ (35) ಹಾಗೂ ಹೊಸೂರು ನಿವಾಸಿ ಭವ್ಯಾ ನಾಯ್ಕ ಅಲಿಯಾಸ್ ನಿಶ್ಚಿತಾ (33) ಎಂದು ಗುರುತಿಸಲಾಗಿದೆ. ಇಬ್ಬರೂ ಪತ್ನಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದರು.
ಏನಿದು ಪ್ರಕರಣ?
ರಿಕ್ಷಾ ಚಾಲಕನಾಗಿರುವ ವಿಠಲ ನಾಯ್ಕ ತನ್ನ ಪತ್ನಿ ಶ್ಯಾಮಲಾ ಅವರಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪದಡಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ವಿಠಲ ನಾಯ್ಕ ಎ1 ಹಾಗೂ ಭವ್ಯಾ ಎ2 ಆರೋಪಿಯಾಗಿದ್ದರು.
ಭವ್ಯಾ ಅವರನ್ನು ನರ್ಸ್ ಎಂದು ಪರಿಚಯಿಸಿದ್ದ ವಿಠಲ ನಾಯ್ಕ ಅವರೊಂದಿಗೆ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಭವ್ಯಾ ಅವರಿಗೆ ಈ ಹಿಂದೆ ವಿವಾಹವಾಗಿದ್ದು, ಅವರ ಪತಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ ಪತ್ನಿ
ವಿಠಲ ನಾಯ್ಕ ಮತ್ತು ಶ್ಯಾಮಲಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 10 ವರ್ಷದ ಪುತ್ರ ಹಾಗೂ ಎರಡು ತಿಂಗಳ ಮಗು ಇದೆ. ವಿಷದ ಪರಿಣಾಮ ಶ್ಯಾಮಲಾ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವಾರದ ಹಿಂದಷ್ಟೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು ಎನ್ನಲಾಗಿದೆ.
ಈ ಪ್ರಕರಣದ ತನಿಖೆಗಾಗಿ ಕೊಲ್ಲೂರು ಪೊಲೀಸರು ವಿಠಲ ನಾಯ್ಕ ಹಾಗೂ ಭವ್ಯಾ ಅವರನ್ನು ಹುಡುಕುತ್ತಿದ್ದರು. ಆದರೆ ಇಬ್ಬರೂ ನಾಪತ್ತೆಯಾಗಿದ್ದರು.
ಇದೀಗ ಇಬ್ಬರ ಮೃತದೇಹಗಳು ಸೌಪರ್ಣಿಕಾ ನದಿ ಸಮೀಪದ ಚಾರ್ಸಾಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೋಕೋ (ಅಪರಾಧ ಸ್ಥಳ ತನಿಖೆ) ತಂಡ ಸೇರಿದಂತೆ ತಜ್ಞರ ತಂಡ ಸ್ಥಳದಿಂದ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್20 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ22 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ3 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized6 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















