ಸ್ಥಳೀಯ
Dharmasthala-ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು.
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು.
ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ನೀಡಿದರು. ಭಜನೆಯ ಸ್ವರ, ಲಯ, ತಾಳ ಹಾಗೂ ಗಾಯನ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿ, ಪ್ರಾಯೋಗಿಕ ತರಬೇತಿಯನ್ನೂ ನಡೆಸಿಕೊಟ್ಟರು.
ಶಿಬಿರಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಚಯವನ್ನು ಭಜನಾ ಕಮ್ಮಟದ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿ ಶ್ರೀ ವೀರು ಶೆಟ್ಟಿ ಅವರು ನೀಡಿದರು.
ಸಾಯಂಕಾಲ ಕಾರ್ಕಳದ ಸಾಲ್ಮರ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಿ. ಹರ್ಷೇಂದ್ರ ಕುಮಾರ್ ಹಾಗೂ ಶ್ರೀಮತಿ ಐಶ್ವರ್ಯ ನಿಶ್ಚಲ್ ಅವರು ಉಪಸ್ಥಿತರಿದ್ದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಅಪರಾಧ21 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ20 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್19 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ19 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ18 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ18 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್23 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಮಂಗಳೂರು19 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















