Connect with us

ಬಿಗ್ ನ್ಯೂಸ್

ಮೊತ್ತಮೊದಲ ಬಾರಿಗೆ ಸರಣಿ ಕ್ಲಿನ್ ಸ್ವೀಪ್ ಮಾಡುವ ಮೂಲಕ  ವೆಸ್ಟ್ ಇಂಡೀಸ್ ನೆಲದಲ್ಲಿ  ಭಾರತ ಕ್ರಿಕೆಟ್ ತಂಡದಿಂದ ಇತಿಹಾಸ ಸೃಷ್ಟಿ – 3 ನೇ ಏಕದಿನ ಪಂದ್ಯವನ್ನು  ಭರ್ಜರಿಯಾಗಿ ಗೆದ್ದು ಬೀಗಿದ ಧವನ್ ಪಡೆ

Published

on

Ad Widget

Ad Widget

Ad Widget

Ad Widget

ವೆಸ್ಟ್ ಇಂಡೀಸ್ ನೆಲದಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಬುಧವಾರ ನಡೆದ ಮೂರನೇ ಪಂದ್ಯವನ್ನು ಶಿಖರ್ ಧವನ್ ನೇತ್ರತ್ವದ ಟೀಮ್ ಇಂಡಿಯಾ ಗೆಲ್ಲುವುದರೊಂದಿಗೆ ಈ ಸಾಧನೆ ಮೆರೆದಿದೆ.

Ad Widget

Ad Widget

Ad Widget

Ad Widget

ಈ ಮೂಲಕ ಇದೇ ಮೊದಲ ಬಾರಿಗೆ ಕೆರಿಬಿಯನ್ ನಲ್ಲಿ ಎರಡು ರಾಷ್ಟ್ರಗಳ ನಡುವೆ ಜರುಗಿದ ಏಕದಿನ ಸರಣಿಯೊಂದನ್ನು ಕ್ಲಿನ್ ಸ್ವೀಪ್ ಮಾಡಿದ ಕೀರ್ತಿಯನ್ನು ಧವನ್ ನೇತ್ರತ್ವದ ತಂಡ ಸಾಧಿಸಿದೆ. 1983 ರಲ್ಲಿ ಮೊದಲ ಬಾರಿಗೆ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ಮಧ್ಯೆ ದ್ವಿಪಕ್ಷೀಯ ಏಕದಿನ ಪಂದ್ಯ ಕ್ರಿಕೆಟ್ ಸರಣಿ ಆರಂಭಗೊಂಡಿತ್ತು. ಅ ಬಳಿಕದ 39 ವರ್ಷಗಳ‌ಲ್ಲಿ ಇದೇ ಮೊದಲ ಬಾರಿಗೆ ವಿಂಡೀಸ್ ನೆಲದಲ್ಲಿ ನಡೆದ 3 ಅಥಾವ ಅದಕ್ಕಿಂತ ಹೆಚ್ಚಿನ ದ್ವಿಪಕ್ಷೀಯ ಸಿರೀಸ್ ನಲ್ಲಿ ಭಾರತ ಸರಣಿಯ ಎಲ್ಲ ಪಂದ್ಯಗಳನ್ನು ಗೆದ್ದ ಸಾಧನೆಯನ್ನು ಮಾಡಿದೆ.

Ad Widget

Ad Widget alt="Ad Widget"/>

Ad Widget

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಬುಧವಾರ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಭಾರತ ಮೊದಲು ಬ್ಯಾಟಿಂಗ್ ಗೆ ಇಳಿಯಿತ್ತು. ಆದರೇ ಭಾರತದ ಬ್ಯಾಟಂಗ್ ಸಂದರ್ಭ ಎರಡು ಬಾರಿ ಮಳೆ ಅಡ್ಡಿ ಪಡಿಸಿತ್ತು.

Ad Widget

Ad Widget <> Ad Widget

ಭಾರತ 36 ಓವರ್‌ಗಳಲ್ಲಿ 3 ವಿಕೆಟ್‌ಗೆ 225 ರನ್ ಗಳಿಸಿದ್ದಾಗ ಮಳೆಯಿಂದಾಗಿ ಎರಡನೇ ಬಾರಿಗೆ ಪಂದ್ಯ ಸ್ಥಗಿತಗೊಂಡಿತ್ತು. ಇಲ್ಲಿಗೆ ಭಾರತದ ಇನ್ನಿಂಗ್ಸ್ ಅನ್ನು ಮೊಟಕು ಗೊಳಿಸಿ ಡಕ್ ವರ್ತ್ ಲೊಯಿಸ್ ನಿಯಮದಂತೆ 35 ಓವರ್‌ಗಳಲ್ಲಿ 257 ರನ್‌ಗಳ ಪರಿಷ್ಕೃತ ಗುರಿಯನ್ನು ವೆಸ್ಟ್ ಇಂಡೀಸ್ ನೀಡಲಾಯಿತು.ಇದನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಕೇವಲ 137 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 119 ರನ್ ಗಳ ಭರ್ಜರಿ ಜಯ ಸಂಪಾದಿಸಿತು. ಇದರೊಂದಿಗೆ ಭಾರತ ಈ ದ್ವಿಪಕ್ಷೀಯ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತ್ತು.

ಭಾರತದ ಪರ  ನಾಯಕ ಶಿಖರ್ ಧವನ್ ಮತ್ತು ಶುಭ್‌ಮನ್ ಗಿಲ್  ಅರ್ಧಶತಕ ಸಿಡಿಸಿದರು. ಅಲ್ಲದೇ ಮೊದಲ ವಿಕೆಟ್‌ಗೆ 113 ರನ್‌ಗಳ ಜೊತೆಯಾಟ ನೀಡಿದರು.

ಬಳಿಕ 68 ರನ್ ಗಳಿಸಿದ್ದ ಧವನ್ ವಾಲ್ಶ್ ಬೌಲಿಂಗ್ ನಲ್ಲಿ ಔಟಾದರೆ, ಬಳಿಕ ಬಂದ ಶ್ರೇಯಸ್ ಅಯ್ಯರ್ 44 ರನ್ ಗಳಿಸಿ ಹೊಸೈನ್ ಬೌಲಿಂಗ್ ನಲ್ಲಿ ಔಟಾದರು.

Ad Widget

Ad Widget

ಶುಭಮನ್ ಗಿಲ್ 98 ರನ್ ಗಳಿಸಿ ಅಜೇಯರಾಗುಳಿದರು. ಈ ವೇಳೆ ಮಳೆ ಬಂದ ಹಿನ್ನಲೆಯಲ್ಲಿ ಭಾರತದ ಇನ್ನಿಂಗ್ಸ್ ಮೊಟಕುಗೊಂಡಿತ್ತು. ಇದರಿಂದ ಅವರು ತಮ್ಮ ಚೊಚ್ಚಲ ಏಕದಿನ ಶತಕವನ್ನು ಮಿಸ್ ಮಾಡಿಕೊಂಡರು. ಆದರೇ ಭಾರತದ ಈ ಯುವ ಬ್ಯಾಟರ್ ಗೆ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು.

ಇನ್ನು ವಿಂಡೀಸ್ ಪರ ಹೇಡನ್ ವಾಲ್ಶ್ 2 ಮತ್ತು ಹೊಸೈನ್ 1 ವಿಕೆಟ್ ಪಡೆದಿದ್ದಾರೆ.

ಭಾರತ ನೀಡಿದ 226 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಬ್ರಾಂಡನ್ ಕಿಂಗ್ (42 ರನ್), ನಾಯಕ ಪೂರನ್ (42 ರನ್), ಶಾಯ್ ಹೋಪ್ (22) ಮತ್ತು ಹೇಡನ್ ವಾಲ್ಶ್ (10 ರನ್) ಬಿಟ್ಟರೆ ಉಳಿದ ಯಾವ ಬ್ಯಾಟರ್ ನಿಂದಲೂ ಎರಡಂಕಿ ಮೊತ್ತ ಬರಲಿಲ್ಲ. ವಿಂಡೀಸ್ ನಾಲ್ಕು ಬ್ಯಾಟರ್ ಗಳು ಶೂನ್ಯ ಸುತ್ತಿದ್ದರೆ, ಮೂರು ಮಂದಿ ಒಂದಂಕಿ ಮೊತ್ತಕ್ಕೆ ಔಟಾದರು. ಇದು ಭಾರತ ಪ್ರಭಾವಿ ಬೌಲಿಂಗ್ ಮತ್ತು ಫೀಲ್ಡಿಂಗ್ ಸಾಕ್ಷಿಯಾಗಿತ್ತು.
ಅಂತಿಮವಾಗಿ ವಿಂಡೀಸ್ ತಂಡ 26 ಓವರ್ ಗಳಲ್ಲಿ ಕೇವಲ 137 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 119 ರನ್ ಗಳ ಅಂತರದಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿತು.

ಎರಡನೇ ಏಕದಿನ ಪಂದ್ಯ :  ಕೈಜಾರುತ್ತಿದ್ದ ಪಂದ್ಯವನ್ನು  ಸ್ಪೋಟಕ ಆಟದಿಂದ ಮೇಲಕ್ಕೆತ್ತಿ ಭಾರತಕ್ಕೆ ಗೆಲುವು ತಂದು ಕೊಟ್ಟ ಅಕ್ಷರ್ ಪಟೇಲ್

ಯುಜ್ವೇಂದ್ರ ಚಾಹಲ್ ಅವರ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಭಾರತ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ವೇಗಿಗಳಾದ ಸಿರಾಜ್ ಹಾಗೂ ಶಾರ್ದೂಲ್ ತಲಾ ಎರಡು ವಿಕೆಟ್ ಸಂಪಾದಿಸಿದರು. ಕನ್ನಡಿಗ ಪ್ರಸಿದ್ದ ಕೃಷ್ಣ ಹಾಗೂ ಕಳೆದ ಪಂದ್ಯದ ಹೀರೋ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಸಂಪಾದಿಸಿದರು.

ಶಿಖರ್ ಧವನ್ ಕೆರಿಬಿಯನ್‌ ನಾಡಿನಲ್ಲಿ ಏಕದಿನ ಸರಣಿ ಕ್ಲೀನ್ ಸ್ವೀಪ್ ಸಾಧಿಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು ಅಥವಾ ಅದಕ್ಕಿಂತ ಹೆಚ್ಚು ಏಕದಿನ ಪಂದ್ಯಗಳನ್ನು ಒಳಗೊಂಡಿರುವ ವಿದೇಶ ಸರಣಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ವೈಟ್‌ವಾಶ್ ಮಾಡಲು ಭಾರತಕ್ಕೆ ಎಂದಿಗೂ ಸಾಧ್ಯವಾಗಿರಲಿಲ್ಲ. ಈ ಹಿಂದೆ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ವೆಸ್ಟ್ ಇಂಡೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿದ್ದ ಮೆನ್ ಇನ್ ಬ್ಲೂ ಬುಧವಾರ (ಜುಲೈ 27) ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು.

ಒಟ್ಟಾರೆಯಾಗಿ, ಇದು ಏಕದಿನ ಕ್ರಿಕೆಟ್‌ನಲ್ಲಿ ಭಾರತದ 13ನೇ ಕ್ಲೀನ್ ಸ್ವೀಪ್ ಮತ್ತು ವಿದೇಶದಲ್ಲಿ ಮೂರನೇ ಕ್ಲೀನ್ ಸ್ವೀಪ್ ಆಗಿದೆ.

ಕ್ಯಾಲೆಂಡರ್ ವರ್ಷವೊಂದರಲ್ಲಿ ಒಂದು ತಂಡವನ್ನು ಡಬಲ್ ವೈಟ್‌ವಾಶ್ ಮಾಡಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಗೌರವವನ್ನು ಹೊಂದಿರುವ ಇತರ ತಂಡಗಳು ಜಿಂಬಾಬ್ವೆ ಮತ್ತು ಬಾಂಗ್ಲಾದೇಶ. ಜಿಂಬಾಬ್ವೆ 2001ರಲ್ಲಿ ಬಾಂಗ್ಲಾದೇಶದ ವಿರುದ್ಧ ಈ ಸಾಧನೆಯನ್ನು ಸಾಧಿಸಿತ್ತು. ತವರಿನಲ್ಲಿ 4-0 ಮತ್ತು ವಿದೇಶದಲ್ಲಿ 3-0 ಅಂತರದ ಜಯ ಸಾಧಿಸಿತ್ತು. 2006ರಲ್ಲಿ ಬಾಂಗ್ಲಾದೇಶವು ಕೀನ್ಯಾವನ್ನು 3-0 ಅಂತರದಿಂದ ಸ್ವದೇಶದಲ್ಲಿ ಮತ್ತು ವಿದೇಶದಲ್ಲಿ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತ್ತು.

Ad Widget
Click to comment

Leave a Reply

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!