ಸ್ಥಳೀಯ
Lokesh Jagalsar-ಸೌಜನ್ಯಾ ಪ್ರಕರಣದ ತನಿಖಾಧಿಕಾರಿಯಾಗಿ ಲೋಕೇಶ್ ಜಗಲ್ಸಾರ್: ₹7.11 ಕೋಟಿ ದರೋಡೆಯಿಂದ ಹೈಪ್ರೊಫೈಲ್ ಸಿಜೆ ರಾಯ್ ಪ್ರಕರಣದವರೆಗೆ; ಈ ಹಿಂದೆ ಭೇದಿಸಿದ ಹೈಪ್ರೊಫೈಲ್ ಕೇಸ್‌ಗಳ ಡಿಟೈಲ್
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ (SIT) ಸಿಐಡಿ ಎಸ್‌ಪಿ ಲೋಕೇಶ್ ಜಗಲ್ಸಾರ್ ಅವರಿಗೆ ಪ್ರಮುಖ ಹೊಣೆಗಾರಿಕೆ ನೀಡಲಾಗಿದೆ. ಐಜಿಪಿ ಎನ್. ಶಶಿಕುಮಾರ್ ನೇತೃತ್ವದ ಐವರು ಸದಸ್ಯರ ತಂಡದಲ್ಲಿ ಜಗಲ್ಸಾರ್ ಸದಸ್ಯರಾಗಿದ್ದು, ಪ್ರಕರಣದ ತನಿಖಾಧಿಕಾರಿಯಾಗಿ ಅವರನ್ನು ನೇಮಿಸುವ ಕುರಿತು ವರದಿಯಾಗಿದೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದಲ್ಲಿ (SIT) ಸಿಐಡಿ ಎಸ್‌ಪಿ ಲೋಕೇಶ್ ಜಗಲ್ಸಾರ್ ಅವರಿಗೆ ಪ್ರಮುಖ ಹೊಣೆಗಾರಿಕೆ ನೀಡಲಾಗಿದೆ. ಐಜಿಪಿ ಎನ್. ಶಶಿಕುಮಾರ್ ನೇತೃತ್ವದ ಐವರು ಸದಸ್ಯರ ತಂಡದಲ್ಲಿ ಜಗಲ್ಸಾರ್ ಸದಸ್ಯರಾಗಿದ್ದು, ಪ್ರಕರಣದ ತನಿಖಾಧಿಕಾರಿಯಾಗಿ ಅವರನ್ನು ನೇಮಿಸುವ ಕುರಿತು ವರದಿಯಾಗಿದೆ.
2015ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜಗಲ್ಸಾರ್ ಅವರು ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಬಳಿಕ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. 2026ರಲ್ಲಿ ಸಿಐಡಿಗೆ ವರ್ಗಾವಣೆಯಾಗುವ ಮುನ್ನ ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಹಲವು ಗಂಭೀರ ಪ್ರಕರಣಗಳ ತನಿಖೆಯ ಮೇಲ್ವಿಚಾರಣೆ ನಡೆಸಿದ್ದರು. ಕೇಂದ್ರ ಸರ್ಕಾರದ ಐಪಿಎಸ್ ಸಿವಿಲ್ ಪಟ್ಟಿಯಲ್ಲೂ ಅವರ ಸೇವಾ ವಿವರಗಳು ದಾಖಲಾಗಿವೆ.
₹7.11 ಕೋಟಿ ಕ್ಯಾಶ್ ವ್ಯಾನ್ ದರೋಡೆ
ಜಗಲ್ಸಾರ್ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದಾಗ ನಡೆದ ಅತ್ಯಂತ ಗಮನ ಸೆಳೆದ ಪ್ರಕರಣಗಳಲ್ಲಿ ₹7.11 ಕೋಟಿ ಮೌಲ್ಯದ ಕ್ಯಾಶ್ ವ್ಯಾನ್ ದರೋಡೆ ಪ್ರಕರಣವೂ ಒಂದು.
2025ರ ನವೆಂಬರ್ 19ರಂದು ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು CMS ಕಂಪನಿಯ ನಗದು ಸಾಗಣೆ ವಾಹನವನ್ನು ತಡೆದು ₹7.11 ಕೋಟಿ ದೋಚಿದ್ದರು. ಪ್ರಕರಣದ ತನಿಖೆಯಲ್ಲಿ ಐದು ರಾಜ್ಯಗಳಲ್ಲಿ ಸುಳಿವುಗಳನ್ನು ಬೆನ್ನಟ್ಟಲಾಗಿತ್ತು. ಮೊದಲ 24 ಗಂಟೆಯಲ್ಲೇ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳ ಬಗ್ಗೆ ಸುಳಿವು ಸಿಕ್ಕಿದ್ದು, ಸುಮಾರು 54 ಗಂಟೆಗಳಲ್ಲಿ ಪ್ರಮುಖ ಆರೋಪಿಗಳನ್ನು ಗುರುತಿಸಿ ವಶಕ್ಕೆ ಪಡೆಯಲಾಗಿತ್ತು. ₹5.76 ಕೋಟಿ ಹಣವನ್ನು 60 ಗಂಟೆಗಳೊಳಗೆ ವಶಪಡಿಸಿಕೊಳ್ಳಲಾಗಿತ್ತು.
ನಂತರ ಪ್ರಕರಣದಲ್ಲಿ ಒಂಬತ್ತು ಆರೋಪಿಗಳ ವಿರುದ್ಧ 1,328 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆ, ಸಿಸಿಟಿವಿ, ತಾಂತ್ರಿಕ ಸಾಕ್ಷ್ಯ, ಬೆರಳಚ್ಚು ಸೇರಿದಂತೆ 129 ಸಾಕ್ಷ್ಯಗಳನ್ನು ಪ್ರಕರಣದಲ್ಲಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತನಿಖೆಯ ಕುರಿತು ಮಾಹಿತಿ ನೀಡಿದ್ದು ಆಗಿನ ಡಿಸಿಪಿ ಜಗಲ್ಸಾರ್.
ಸಿಜೆ ರಾಯ್ ಸಾವು: ಎಸ್‌ಐಟಿ ತನಿಖೆಯ ಹೊಣೆ
ಬೆಂಗಳೂರು ನಗರದ ಮತ್ತೊಂದು ಹೈಪ್ರೊಫೈಲ್ ಪ್ರಕರಣವಾದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಅವರ ಸಾವು ಪ್ರಕರಣದಲ್ಲೂ ಜಗಲ್ಸಾರ್ ಅವರಿಗೆ ಪ್ರಮುಖ ತನಿಖಾ ಹೊಣೆಗಾರಿಕೆ ನೀಡಲಾಗಿತ್ತು.
2026ರ ಜನವರಿಯಲ್ಲಿ ಬೆಂಗಳೂರಿನ ಕಚೇರಿಯಲ್ಲಿ ಸಿಜೆ ರಾಯ್ ಗುಂಡೇಟಿನಿಂದ ಮೃತಪಟ್ಟ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಆಗ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಲೋಕೇಶ್ ಜಗಲ್ಸಾರ್ ಅವರನ್ನು ತನಿಖಾಧಿಕಾರಿ (Investigating Officer) ಆಗಿ ನೇಮಿಸಲಾಗಿತ್ತು. ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆಯ ಶೋಧ ಕಾರ್ಯಾಚರಣೆ ಸೇರಿದಂತೆ ವಿವಿಧ ಅಂಶಗಳನ್ನು ತನಿಖೆ ನಡೆಸಬೇಕಾಗಿತ್ತು.
‘ಅಪಘಾತ’ದ ಹಿಂದೆ ಕೊಲೆ: ಫುಡ್ ಡೆಲಿವರಿ ಸಿಬ್ಬಂದಿ ಪ್ರಕರಣ
2025ರ ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಸಿಬ್ಬಂದಿ ದರ್ಶನ್ ಸಾವಿನ ಪ್ರಕರಣವೂ ಗಮನ ಸೆಳೆದಿತ್ತು. ಆರಂಭದಲ್ಲಿ ಇದು ರಸ್ತೆ ಅಪಘಾತ ಅಥವಾ ಹಿಟ್ ಆ್ಯಂಡ್ ರನ್‌ನಂತೆ ಕಂಡುಬಂದಿದ್ದರೂ, ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ಬಳಿಕ ಪೊಲೀಸರು ಇದು ಉದ್ದೇಶಪೂರ್ವಕವಾಗಿ ನಡೆದ ಕೃತ್ಯ ಎಂದು ಆರೋಪಿಸಿದ್ದರು.
ಮಾರ್ಷಲ್ ಆರ್ಟ್ಸ್ ತರಬೇತುದಾರ ಹಾಗೂ ಅವರ ಪತ್ನಿಯನ್ನು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪ್ರಕರಣದ ತನಿಖೆಯ ಕುರಿತು ಮಾಹಿತಿ ನೀಡಿದ್ದ ಜಗಲ್ಸಾರ್, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಘಟನೆಗಳ ಸರಮಾಲೆಯನ್ನು ಪೊಲೀಸರು ಪರಿಶೀಲಿಸಿದ್ದಾಗಿ ತಿಳಿಸಿದ್ದರು.
ಕಸದ ಲಾರಿಯಲ್ಲಿ ಪತ್ತೆಯಾದ ಮಹಿಳೆಯ ಮೃತದೇಹ
2025ರ ಜೂನ್‌ನಲ್ಲಿ ಬೆಂಗಳೂರಿನ ಕೋರಮಂಗಲ ಪ್ರದೇಶದಲ್ಲಿ ಕಸದ ಲಾರಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವೂ ಜಗಲ್ಸಾರ್ ಅವರ ವ್ಯಾಪ್ತಿಯಲ್ಲಿ ನಡೆದ ಪ್ರಮುಖ ಪ್ರಕರಣವಾಗಿತ್ತು.
ಪೊಲೀಸರ ಪ್ರಕಾರ, ಮಹಿಳೆಯ ಲಿವ್‌ಇನ್ ಸಂಗಾತಿಯೇ ಕೊಲೆ ಮಾಡಿದ್ದಾನೆ ಎಂದು ತನಿಖೆಯಲ್ಲಿ ಆರೋಪಿಸಲಾಗಿತ್ತು. ಮೃತದೇಹ ಪತ್ತೆಯಾದ ಸುಮಾರು 20 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿತ್ತು. ಈ ಪ್ರಕರಣದ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಜಗಲ್ಸಾರ್ ಮಾಹಿತಿ ನೀಡಿದ್ದರು.
₹4.12 ಕೋಟಿ ಮೌಲ್ಯದ ಚಿನ್ನದ ಆಭರಣ ಕಳವು
2026ರ ಫೆಬ್ರವರಿಯಲ್ಲಿ ಬೆಂಗಳೂರಿನ ಗಿರಿನಗರದಲ್ಲಿನ ಬ್ಯಾಂಕ್ ಶಾಖೆಯೊಂದರಲ್ಲಿ ₹4.12 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವೂ ಬೆಳಕಿಗೆ ಬಂದಿತ್ತು.
ಪೊಲೀಸರ ಪ್ರಕಾರ, ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕನೊಬ್ಬ 24 ಚಿನ್ನದ ಸಾಲ ಖಾತೆಗಳಿಗೆ ಸೇರಿದ ಸುಮಾರು 2.78 ಕೆ.ಜಿ. ಚಿನ್ನವನ್ನು ಕಳವು ಮಾಡಿದ್ದ. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದ ಡಿಸಿಪಿ ಜಗಲ್ಸಾರ್, ಆಭರಣಗಳನ್ನು ವಿವಿಧ ಗೋಲ್ಡ್ ಲೋನ್ ಸಂಸ್ಥೆಗಳಲ್ಲಿ ಅಡಮಾನ ಇಟ್ಟಿರುವ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದರು.
ಬಾಗಲಕೋಟೆಯಲ್ಲೂ ಹಲವು ಪ್ರಕರಣಗಳ ಮೇಲ್ವಿಚಾರಣೆ
ಜಗಲ್ಸಾರ್ ಅವರು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅವಧಿಯಲ್ಲೂ ಹಲವು ಸೂಕ್ಷ್ಮ ಪ್ರಕರಣಗಳು ಸುದ್ದಿಯಾಗಿದ್ದವು. ಬಿಜೆಪಿ ವಿಧಾನ ಪರಿಷತ್ ಸದಸ್ಯರಿಗೆ ಬೆದರಿಕೆ ಹಾಕಲು ನಕಲಿ ಸಾಮಾಜಿಕ ಜಾಲತಾಣ ಖಾತೆ ಸೃಷ್ಟಿಸಿದ್ದ ಪ್ರಕರಣದಲ್ಲಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆಯಲ್ಲಿ ನಕಲಿ ಖಾತೆ ಬಳಸುತ್ತಿದ್ದ ವ್ಯಕ್ತಿಯನ್ನು ಗುರುತಿಸಲಾಗಿತ್ತು ಎಂದು ಆಗಿನ ಎಸ್‌ಪಿ ಜಗಲ್ಸಾರ್ ಮಾಧ್ಯಮಗಳಿಗೆ ತಿಳಿಸಿದ್ದರು.
ಅದೇ ಅವಧಿಯಲ್ಲಿ ಉಪಮುಖ್ಯಮಂತ್ರಿಯ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದ ಪ್ರಕರಣವೂ ರಾಜ್ಯಮಟ್ಟದಲ್ಲಿ ಗಮನ ಸೆಳೆದಿತ್ತು. ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದರು. ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆ, ವಿಡಿಯೊ ಮತ್ತು ದೂರುದಾರರ ಹೇಳಿಕೆ ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಜಗಲ್ಸಾರ್ ತಿಳಿಸಿದ್ದರು.
ಈಗ ಸೌಜನ್ಯಾ ಪ್ರಕರಣದ ಹೊಣೆ
ಹಲವು ಜಿಲ್ಲೆಗಳಲ್ಲಿ ಎಸ್‌ಪಿ ಹಾಗೂ ಬೆಂಗಳೂರಿನಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿರುವ ಜಗಲ್ಸಾರ್ ಇದೀಗ ಸಿಐಡಿ ಎಸ್‌ಪಿಯಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ರಚಿಸಿರುವ ಹೊಸ ಎಸ್‌ಐಟಿಯಲ್ಲಿ ಅವರು ಪ್ರಮುಖ ಸದಸ್ಯರಾಗಿದ್ದಾರೆ. ತಂಡಕ್ಕೆ ಐಜಿಪಿ ಎನ್. ಶಶಿಕುಮಾರ್ ನೇತೃತ್ವ ವಹಿಸಿದ್ದಾರೆ.
ಹೊಸ ಎಸ್‌ಐಟಿಗೆ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಸೇರಿಸಬಾರದು ಮತ್ತು ಮೂರು ತಿಂಗಳೊಳಗೆ ಮರುತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಹೀಗಾಗಿ, ಸುಮಾರು 14 ವರ್ಷಗಳಿಂದ ರಾಜ್ಯದಾದ್ಯಂತ ಗಮನ ಸೆಳೆದಿರುವ ಸೌಜನ್ಯಾ ಪ್ರಕರಣದ ಮರುತನಿಖೆಯಲ್ಲಿ ಜಗಲ್ಸಾರ್ ಅವರ ಹಿಂದಿನ ವೈಜ್ಞಾನಿಕ ಸಾಕ್ಷ್ಯ, ಸಿಸಿಟಿವಿ, ತಾಂತ್ರಿಕ ಸುಳಿವು ಹಾಗೂ ಬಹುಹಂತದ ತನಿಖಾ ಅನುಭವ ಇದೀಗ ಪ್ರಮುಖವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇವರಿಗೆ ಸಹಾಯಕರಾಗಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರನ್ನು ಸಹಾಯಕ ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
-
ನಿಧನ ವಾರ್ತೆ24 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















