ಶಿಕ್ಷಣ
Philomena-ಪುತ್ತೂರಿನ ಪೊಲೀಸ್ ಠಾಣೆಗಳಿಗೆ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳ ಅಧ್ಯಯನ ಭೇಟಿ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳು ಕ್ಷೇತ್ರಾಧಾರಿತ ಅನುಭವಾತ್ಮಕ ಕಲಿಕೆಯ ಭಾಗವಾಗಿ ಸೆ. 30ರಂದು ಪುತ್ತೂರಿನ ವಿವಿಧ ಪೊಲೀಸ್ ಠಾಣೆಗಳಿಗೆ ಅಧ್ಯಯನ ಭೇಟಿ ನೀಡಿದರು.

ಪುತ್ತೂರು, ಸೆ. 30: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳು ಕ್ಷೇತ್ರಾಧಾರಿತ ಅನುಭವಾತ್ಮಕ ಕಲಿಕೆಯ ಭಾಗವಾಗಿ ಸೆ. 30ರಂದು ಪುತ್ತೂರಿನ ವಿವಿಧ ಪೊಲೀಸ್ ಠಾಣೆಗಳಿಗೆ ಅಧ್ಯಯನ ಭೇಟಿ ನೀಡಿದರು.
ವಿದ್ಯಾರ್ಥಿಗಳು ಮಹಿಳಾ ಪೊಲೀಸ್ ಠಾಣೆ, ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಸಂಚಾರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಅಪರಾಧ ನ್ಯಾಯ ವ್ಯವಸ್ಥೆ, ಸಮುದಾಯ ಪೊಲೀಸ್ ವ್ಯವಸ್ಥೆ ಹಾಗೂ ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಕಾನೂನು ಜಾರಿ ವ್ಯವಸ್ಥೆಗಳ ಕುರಿತು ಪ್ರಾಯೋಗಿಕ ಅರಿವು ಪಡೆದರು.
ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ,ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ಅಪರಾಧಗಳ ನಿರ್ವಹಣೆ, ಕೌಟುಂಬಿಕ ಕಲಹಗಳ ಪರಿಹಾರ, ಕುಟುಂಬ ಸಮಾಲೋಚನಾ ವ್ಯವಸ್ಥೆ ಹಾಗೂ ಸಂಬಂಧಿತ ಕಾನೂನು ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಮತ್ತು ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣಾ ಕಾಯ್ದೆ ಸೇರಿದಂತೆ ವಿಶೇಷ ಕಾನೂನುಗಳ ಕುರಿತೂ ವಿವರಿಸಲಾಯಿತು.
ಪೊಲೀಸ್ ತನಿಖಾಧಿಕಾರಿಗಳು, ಕಾನೂನು ನೆರವು ಸಂಸ್ಥೆಗಳು ಹಾಗೂ ವೃತ್ತಿಪರ ಸಮಾಜಕಾರ್ಯಕರ್ತರ ನಡುವಿನ ಸಮನ್ವಯವು ಸಂತ್ರಸ್ತರಿಗೆ ಮಾನಸಿಕ-ಸಾಮಾಜಿಕ ನೆರವು, ಪುನರ್ವಸತಿ ಹಾಗೂ ಸಂತ್ರಸ್ತಕೇಂದ್ರಿತ ಸಹಾಯ ಒದಗಿಸುವಲ್ಲಿ ಮಹತ್ವದ್ದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ವಿವರಿಸಿದರು.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವ ವಿಧಾನ, ಠಾಣೆಯ ಅಪರಾಧ ದಾಖಲೆಗಳ ನಿರ್ವಹಣೆ, ತನಿಖಾ ಪ್ರಕ್ರಿಯೆಗಳು, ಮುನ್ನೆಚ್ಚರಿಕಾ ಪೊಲೀಸ್ ಕ್ರಮಗಳು ಹಾಗೂ ಲಾಕ್ಅಪ್ ನಿರ್ವಹಣೆ ಕುರಿತು ನೇರವಾಗಿ ತಿಳಿದುಕೊಂಡರು. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಮಾನದಂಡಗಳನ್ನು ಪಾಲಿಸುವ ಅಗತ್ಯಕ್ಕೂ ಒತ್ತು ನೀಡಲಾಯಿತು.
ಬಳಿಕ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿರ್ವಹಣೆ, ಸಂಚಾರ ನಿಯಂತ್ರಣ, ಅಪಘಾತ ತಡೆಗಟ್ಟುವ ಕ್ರಮಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಯಿತು.
ಈ ಅಧ್ಯಯನ ಭೇಟಿಯು ತರಗತಿಯಲ್ಲಿನ ಸೈದ್ಧಾಂತಿಕ ಜ್ಞಾನವನ್ನು ಕ್ಷೇತ್ರಮಟ್ಟದ ವಾಸ್ತವಿಕ ಅನುಭವದೊಂದಿಗೆ ಬೆಸೆಯಲು ವಿದ್ಯಾರ್ಥಿಗಳಿಗೆ ನೆರವಾಯಿತು. ವಿಧಿವಿಜ್ಞಾನ ಸಮಾಜಕಾರ್ಯ, ಸಮುದಾಯ ಅಭಿವೃದ್ಧಿ ಹಾಗೂ ಸಂತ್ರಸ್ತರ ಪರ ವಕಾಲತ್ತು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಗತ್ಯವಿರುವ ಅಂತರ-ಸಂಸ್ಥಾ ಸಮನ್ವಯದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಂಡರು.
ಎಂಎಸ್ಡಬ್ಲ್ಯು ವಿಭಾಗದ ಅಧ್ಯಾಪಕರು ಅಧ್ಯಯನ ಭೇಟಿಯುದ್ದಕ್ಕೂ ವಿದ್ಯಾರ್ಥಿಗಳೊಂದಿಗೆ ಉಪಸ್ಥಿತರಿದ್ದರು.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಶಿಕ್ಷಣ
Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ
ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.
ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್ಆರ್ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಅವರು ಮಾತನಾಡಿದರು.
ಕರ್ನಾಟಕ ಏಕೀಕರಣ ಎಂದರೆ ಇಂದಿನ ಕರ್ನಾಟಕ ರಾಜ್ಯ ಆಕಾರ ಪಡೆದು ಅನೇಕ ಭೌಗೋಳಿಕ ರಾಜಕೀಯ ಹಾಗೂ ಭಾಷಾ ಸವಾಲುಗಳನ್ನು ಜಯಿಸಿದ ಪ್ರಕ್ರಿಯೆ.ಭಾರತದ ಸ್ವಾತಂತ್ರ್ಯದ ಹೋರಾಟದ ಸಮಯದಲ್ಲಿಯೇ ಕನ್ನಡ ಭಾಷಾಭಿಮಾನಿಗಳು ವಿವಿಧ ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದರು. ಹಲವು ಪ್ರಾಂತ್ಯಗಳಲ್ಲಿದ್ದ ಕನ್ನಡಿಗರ ಹಕ್ಕುಗಳು, ಭಾಷಾ ಮತ್ತು ಸಾಂಸ್ಕೃತಿಕ ಹಿತ ಚಿಂತನೆಗಳ ಪೋಷಣೆಗಾಗಿ ಏಕೀಕರಣವು ಅಗತ್ಯವಾಯಿತು.ಈ ಭಿನ್ನ ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಕನ್ನಡಿಗರನ್ನು ಒಗ್ಗೂಡಿಸುವ ಹೋರಾಟವೇ ಕರ್ನಾಟಕ ಏಕೀಕರಣ. ಕನ್ನಡ ರಾಜ್ಯದ ಕನಸು ಸಾಕಾರಗೊಳ್ಳಲು ಹಲವು ಅಡೆತಡೆಗಳ ನಡುವೆಯೂ ಹೋರಾಟಗಾರರ ಶ್ರಮ, ಒತ್ತಡ ಮತ್ತು ನಿರಂತರ ಉತ್ಸಾಹದಿಂದ ಅದು ಕೊನೆಗೂ ಸಫಲವಾಯಿತು.ಇದು ನಮ್ಮ ಸಂಸ್ಕೃತಿ, ಭಾಷಾ ಗೌರವ , ಆರ್ಥಿಕ ಮತ್ತು ಸಾಮಾಜಿಕ ಹಿತದ ಸಂಕೇತ. ಈ ಐಕ್ಯತೆ , ಭ್ರಾತೃತ್ವ ಮತ್ತು ಪ್ರಾದೇಶಿಕ ಅಭಿಮಾನವನ್ನು ಮುಂದುವರೆಸಿ ಕನ್ನಡ ನಾಡಿನ ಸಮೃದ್ಧಿಗಾಗಿ ನಾವು ನಿರಂತರ ಪ್ರಯತ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಇವರು ಹೇಳಿದರು.
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರ್ನಾಟಕದ ಏಕೀಕರಣ ವಿಚಾರಗೋಷ್ಠಿಯು ಕನ್ನಡ ಮಾತನಾಡುವ ಪ್ರದೇಶಗಳ ಐತಿಹಾಸಿಕ ಒಗ್ಗೂಡುವಿಕೆ, ಸಾಂಸ್ಕೃತಿಕ ಅಸ್ಮಿತೆ ಮತ್ತು ಆಧುನಿಕ ಕರ್ನಾಟಕದ ಅಭಿವೃದ್ಧಿಯನ್ನು ಚರ್ಚಿಸುವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವೇದಿಕೆಯಾಗಿದೆ. ಎಂದು ಹೇಳಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಹಾಸನ ಇದರ ಸಂಘಟನಾ ಕಾರ್ಯದರ್ಶಿಯಾದ ಎನ್. ಗಿರಿಜಾಂಬ ಉಪಸ್ಥಿತರಿದ್ದರು.
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಧುಶ್ರೀ, ಭವ್ಯಶ್ರೀ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಇವರು ಈ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ, ಈ ವಿಚಾರದ ಕುರಿತಾಗಿ ತಮ್ಮ ವಿಶ್ಲೇಷಣೆಯನ್ನು ನೀಡಿದರು.ಕರ್ಯಕ್ರಮದಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್. ಇವರು ಸ್ವಾಗತಿಸಿದರು. ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ತುತಿ ವಂದಿಸಿದರು.
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized7 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್8 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು8 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ರಾಜಕೀಯ6 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಅಂತರ ರಾಜ್ಯ6 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್7 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ6 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















