Connect with us

ಬಿಗ್ ನ್ಯೂಸ್

Bajatturu-ಬಜತ್ತೂರಿನಲ್ಲಿ ಉಪ್ಪಿನಂಗಡಿ ಹೋಬಳಿ ಅಕ್ರಮ ಸಕ್ರಮ ಬೈಠಕ್- ಹಕ್ಕುಪತ್ರ ವಿತರಣೆ; ಹಣ ಕೊಡದವರ ಅಕ್ರಮ ಸಕ್ರಮ ಫೈಲುಗಳಿಗೆ ಕುಮ್ಕಿ ಎಂದು ಬರೆದು ಮೋಸಮಾಡಲಾಗಿದೆ: ಶಾಸಕ ಅಶೋಕ್ ರೈ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಅನೇಕ ಕೃಷಿಕರು ತಮ್ಮ ಜಮೀನಿಗೆ ತಾಗಿಕೊಂಡಿದ್ದ ಅಥವಾ ಅವರ ಸ್ವಾಧೀನದಲ್ಲಿದ್ದ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಹಲವು ವರ್ಷಗಳಿಂದ ಇದ್ದು ಅದರ ಸಕ್ರಮಕ್ಕೆ ಅರ್ಜಿ ಹಾಕಿದ್ದವರ ಫೈಕಿ ಹಣ ಕೊಟ್ಟವರ ಕಡತಗಳನ್ನು ಸಕ್ರಮ ಮಾಡಲಾಗಿದ್ದು, ಹಣ ಕೊಡದೇ ಇದ್ದವರ ಕಡತವನ್ನು ಕುಮ್ಕಿ ಎಂದು ಬರೆದು ಹಿಂದೆ ಅರ್ಜಿ ವಿಲೇವಾರಿ ಮಾಡಿದವರು ಮೋಸ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಮಾಜಿ ಶಾಸಕರ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದರು.

Ad Widget

Ad Widget

Ad Widget

Ad Widget
oplus_2097152

ಪುತ್ತೂರು: ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಅನೇಕ ಕೃಷಿಕರು ತಮ್ಮ ಜಮೀನಿಗೆ ತಾಗಿಕೊಂಡಿದ್ದ ಅಥವಾ ಅವರ ಸ್ವಾಧೀನದಲ್ಲಿದ್ದ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಹಲವು ವರ್ಷಗಳಿಂದ ಇದ್ದು ಅದರ ಸಕ್ರಮಕ್ಕೆ ಅರ್ಜಿ ಹಾಕಿದ್ದವರ ಫೈಕಿ ಹಣ ಕೊಟ್ಟವರ ಕಡತಗಳನ್ನು ಸಕ್ರಮ ಮಾಡಲಾಗಿದ್ದು, ಹಣ ಕೊಡದೇ ಇದ್ದವರ ಕಡತವನ್ನು ಕುಮ್ಕಿ ಎಂದು ಬರೆದು ಹಿಂದೆ ಅರ್ಜಿ ವಿಲೇವಾರಿ ಮಾಡಿದವರು ಮೋಸ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಮಾಜಿ ಶಾಸಕರ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದರು.

Ad Widget

Ad Widget alt="Ad Widget"/>

Ad Widget

ಅವರು ಬಜತ್ತೂರು ಗ್ರಾಪಂ ನಲ್ಲಿ ಮಂಗಳವಾರ ಉಪ್ಪಿನಂಗಡಿ ಹೋಬಳಿ ಮಟ್ಟದ ಅಕ್ರಮ ಸಕ್ರಮ ಬೈಠಕ್ ಹಾಗೂ 94 ಸಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದರು.

Ad Widget

Ad Widget <> Ad Widget

oplus_0

ನಾನು ಶಾಸಕನಾಗುವ ಮೊದಲು ಅಕ್ರಮ ಸಕ್ರಮ ಕಡತಗಳನ್ನು ನಿಮ್ಮ ಮನೆ ಬಾಗಿಲಿಗೆ ಬಂದು ವಿಲೇವಾರಿ ಮಾಡುವುದಾಗಿ ಭರವಸೆ ಕೊಟ್ಟಿದ್ದೆ, 3 ವರ್ಷದಲ್ಲಿ 28 ನೇ ಭೈಠಕ್ ನಡೆಸುತ್ತಿದ್ದೇನೆ. ಗ್ರಾಮಗಳಿಗೆ ತೆರಳಿ ಗ್ರಾಮಸ್ಥರ ಸಮ್ಮುಖದಲ್ಲೇ ಅರ್ಜಿ ವಿಲೇವಾರಿ ನಡೆಯುತ್ತಿದೆ. ಈ ಹಿಂದಿನವರು ನಾಲ್ಕು ಗೋಡೆಯ ಮಧ್ಯೆ ತಮಗೆ ಬೇಕಾದ ಹಾಗೆ ಅರ್ಜಿ ವಿಲೇವಾರಿ ಮಾಡುತ್ತಿದ್ದರು, ಉಳ್ಳವರಿಂದ ಪಡೆದು ಮಂಜೂರು ಮಾಡಿ ಕೊಡದವರ ಫೈಲುಗಳನ್ನು ಕುಮ್ಕಿ ಎಂದು ಬರೆದು ಎಂದೆಂದೂ ಅವರಿಗೆ ಜಾಗ ಮಂಜೂರು ಮಾಡದಂತೆ ಮಾಡಿದ್ದಾರೆ ಇದು ಕೃಷಿಕರಿಗೆ ಮಾಡಿದ ಘೋರ ಅನ್ಯಾಯವಾಗಿದೆ ಎಂದು ಶಾಸಕರು ಹೇಳಿದರು.

ಅಭಿವೃದ್ದಿಯಲ್ಲಿ ಎಂದೂ ರಾಜಕೀಯ ಮಾಡಿಲ್ಲ
ನಾನು ಶಾಸಕನಾದ ಮೇಲೆ ರಾಜಧರ್ಮ ಪಾಲನೆ ಮಾಡಿದ್ದೇನೆ, ರಾಜಕೀಯ ಮಾಡಿಲ್ಲ. ಅನೇಕ ಮಂದಿ ಬಿಜೆಪಿ ಪಕ್ಷಕ್ಕಾಗಿ ರಾತ್ರಿ ಹಗಲು ಕೆಲಸ ಮಾಡಿದವರು, ಬೂತ್ ಏಜೆಂಟುಗಳು, ಪಕ್ಷದ ಮುಖಂಡರುಗಳು, ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಬಂದು ನನ್ನಲ್ಲಿ ಅಕ್ರಮ ಸಕ್ರಮ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ ಅಂತವರ ಕಡತವನ್ನೂ ವಿಲೇವಾರಿ ಮಾಡಿದ್ದೇನೆ. ಅವರದೇ ಪಕ್ಷದ ಶಾಸಕರಿದ್ದಾಗಲೂ ಇವರಿಗೆ ಮಾಡಿಸಲು ಸಾಧ್ಯವಾಗಿಲ್ಲ ಮತ್ತು ಮಾಡಿಕೊಟ್ಟಿಲ್ಲ. ಕನಿಷ್ಠ ಪಕ್ಷ ಪಕ್ಷಕ್ಕಾಗಿ ಕೆಲಸ ಮಾಡಿದವರ ಕಡತವನ್ನು ವಿಲೇವಾರಿ ಮಾಡದವರ ಬಡವರ ಕಡತವನ್ನು ವಿಲೇವಾರಿ ಮಾಡುತ್ತಾರ? ಎಂದು ಶಾಸಕರು ಪ್ರಶ್ನಿಸಿದರು. ಅಶೋಕ್ ರಐ ಎಂದೂ ಅಭಿವೃದ್ದಿಯಲ್ಲಿ ರಾಜಕೀಯ ಮಾಡುವುದೂ ಇಲ್ಲ, ಮಾಡಿಯೂ ಗೊತ್ತಿಲ್ಲ. ಜಾತಿ, ಧರ್ಮ, ಪಕ್ಷ ಮೀರಿದ ಸೇವೆ ನಮ್ಮದಾಗಿದ್ದು ಅದು ಎಂದೆAದೂ ಮುಂದುವರೆಯುತ್ತದೆ ಎಂದು ಹೇಳಿದರು.

Ad Widget

Ad Widget

ಮಕ್ಕಳ ಭವಿಷ್ಯದ ಕಡೆ ಗಮನಕೊಡಿ
ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯ್ಯಲ್ಲಿದೆ. ಅವರಿಗೆ ಈಗಲೇ ಗುಣಮಟ್ಟದ ಶಿಕ್ಷಣ ಕೊಡಿಸಿ. ಇಲ್ಲಿ ಬಡವರ ಮಕ್ಕಳು ಬಡವರಾಗಿಯೇ ಇರಬೇಕು ಎಂಬ ನಿಯಮವೇನು ಇಲ್ಲ. ಬೀಡಿ ಕಟ್ಟುವ ಬಡಮಹಿಳೆಯ ಮಗಳೂ ಇಲ್ಲಿ ವೈದ್ಯೆಯಾಗಬೇಕು, ಇಂಜಿನಿಯರ್ , ಐಪಿಎಸ್, ಐಎಎಸ್ ಆಗಬೇಕೆಂಬುದೇ ನನ್ನ ಕನಸು. ಈ ಕಾರಣಕ್ಕಾಗಿಯೇ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 18 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸುವೆ, ಮೆಡಿಕಲ್ ಕಾಲೇಜು ಮಾಡಿದ್ದೇನೆ, ಆಯುರ್ವೇದ ಮೆಡಿಕಲ್ ಕಾಲೇಜು ಮಾಡುತ್ತೇನೆ, ನರ್ಸಿಂಗ್ ಕಾಲೇಜು ಮಾಡುತ್ತೇನೆ. ನಮ್ಮ ಮಕ್ಕಳು ಉನ್ನತ ವ್ಯಾಸಂಗಕ್ಕೆ ದೂರಕ್ಕೆ ಹೋಗಬಾರದು ಅದೆಲ್ಲವೂ ಪುತ್ತೂರಲ್ಲೇ ದೊರೆಯುವಂತೆ ಮಾಡುತ್ತೇನೆ. ರಾಜಕೀಯದವರ ಕೆಟ್ಟ ಭಾಷಣ ಕೇಳಿ ನಿಮ್ಮ ಮಕ್ಕಳು ಕೆಟ್ಟವರಾಗದಂತೆ ಜಾಗೃತೆ ವಹಿಸಿ. ಭಾಷಣ ಮಾಡಿ ಗಲಾಟೆ ಎಬ್ಬಿಸುವವನ ಮಕ್ಕಳು ವಿದೇಶದಲ್ಲಿ ಉನ್ನತ ವ್ಯಾಸಂಗದಲ್ಲಿದ್ದಾನೆ, ಭಾಷಣ ಕೇಳುವ ಬಡವರ ಮಕ್ಕಳು ಅವರ ಚಾಳಿಗೆ ಬಲಿಯಾಗುತ್ತಿದ್ದಾರೆ ಎಂದು ಶಾಸಕರು ಕಿವಿ ಮಾತು ಹೇಳಿದರು.

ಅಭಿವೃದ್ದಿ ಇದ್ದಾಗ ಟೀಕೆಗಳು ಸಹಜ: ಮಹಮ್ಮದ್ ಬಡಗನ್ನೂರು
ಯಾವುದೇ ವಿಚಾರದಲ್ಲಿ ಊರು ಅಭಿವೃದ್ದಿಯಾಗುತ್ತಿದೆ, ಜನರಿಗೆ ಒಳ್ಳೆಯದಾಗುತ್ತಿದೆ ಎಂದಾಗ ಅಲ್ಲಿ ಟೀಕೆಗಳು, ವಿರೋಧಗಳು ಸಹಜವಾಗಿಯೇ ಸೃಷ್ಟಿಯಾಗುತ್ತದೆ, ಅಭಿವೃದ್ದಿ ವಿರೋಧಿಗಳು ಎಲ್ಲಾ ಕಡೆಗಳಲ್ಲೂ ಇದ್ದೇ ಇರುತ್ತಾರೆ ಅವರಿಗೆಲ್ಲ ಜನರೇ ತಕ್ಕ ಉತ್ತರವನ್ನು ಕೊಡುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ ಎಂದು ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಹೇಳಿದರು.
ಪುತ್ತೂರು ಬಿಟ್ರೆ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಬೈಠಕ್ ಆಗುತ್ತಿಲ್ಲ., ನಮ್ಮ ಅಕ್ಕ ಪಕ್ಕದ ಕ್ಷೇತ್ರದಲ್ಲೂ ಆಗುತ್ತಿಲ್ಲ ಇದೆಲ್ಲವನ್ನೂ ಗಮನಿಸುವಾಗ ಪುತ್ತೂರಿನಲ್ಲಿ ಹೇಗೆ ಸಾಧ್ಯವಾಯಿತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕಿದೆ. ಅನೇಕ ವರ್ಷಗಳಿಂದ ತಾಲೂಕು ಕಚೇರಿಯಲ್ಲೇ ಕೊಳೆಯುತ್ತಿದ್ದ ಅಕ್ರಮ ಸಕ್ರಮ ಕಡತಗಳನ್ನು ಗ್ರಾಮಕ್ಕೆ ಬಂದು ಶಾಸಕರು ವಿಲೇವಾರಿ ಮಾಡುತ್ತಿದ್ದಾರೆ, ಈ ಪದ್ದತಿ ಹಿಂದೆಯೂ ಇರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ ಅದು ನಡೆಯುವುದಿದ್ದರೆ ಅಶೋಕ್ ರೈ ಕಾಲದಲ್ಲಿ ಮಾತ್ರ ಸಾಧ್ಯ ಎಂಬುದು ಕ್ಷೇತ್ರದ ಪ್ರತೀಯೊಬ್ಬ ಮತದಾರರಿಗೂ ಅರಿವಾಗಿದೆ. ಪುತ್ತೂರು ಅಭಿವೃದ್ದಿಯತ್ತ ದಾಫುಗಾಲಿಡುವ ಕಾಲದಲ್ಲಿ ನಾವು ಶಾಸಕರ ಕೈ ಬಲಡಪಡಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ,ರೂಪರೇಖಾ ಆಳ್ವ, ತಹಶಿಲ್ದಾರ್ ಕೂಡ್ಲಿಗಿ, ವಲಯ ಅರಣ್ಯಾಧಿಕಾರಿ ಕಿರಣ್ ಉಪಸ್ಥಿತರಿದ್ದರು.

ಕಂದಾಯ ನಿರೀಕ್ಷಕ ಗೋಪಾಲ ಸ್ವಾಗತಿಸಿ ವಂದಿಸಿದರು. ಶಾಸಕರ ಕಚೇರಿ ಅಪ್ತ ಸಹಾಯಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

28 ವರ್ಷಗಳಿಂದ ನಾನು ನನ್ನ ಜಾಗದಲ್ಲಿ ಕೃಷಿ ಮಾಡಿಕೊಂಡಿದ್ದೆ. ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದರೂ ಅದು ಆಗಿರಲಿಲ್ಲ. ತುಂಬಾ ಪ್ರಯತ್ನ ಪಟ್ಟಿದ್ದೆ. ಕಳೆದ ಕೆಲವು ದಿನಗಳ ಹಿಂದೆ ಶಾಸಕ ಅಶೋಕ್ ರೈ ಅವರ ಬಳಿ ಈ ವಿಚಾರ ಹೇಳಿಕೊಂಡೆ. ಮಾಡಿಕೊಡುವುದಾಗಿ ಮಾತುಕೊಟ್ಟಿದ್ರು, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಯಾವುದೇ ರಾಜಕೀಯ ಮಾಡದೆ ನನ್ನ ಕಡತವನ್ನು ವಿಲೇವಾರಿ ಮಾಡಿದ್ದಾರೆ. ಶಾಸಕರಿಗೆ ಅಭಿನಂದನೆಗಳು.

-ಶಯನಾಜಯಾನಂದ್, ಜಿಪಂ ಮಾಜಿ ಸದಸ್ಯರು, ಬಿಜೆಪಿ ಮುಖಂಡೆ

ಮಾಜಿ ಶಾಸಕರು ಆಗುವುದಿಲ್ಲ ಎಂದಿದ್ದರು, ನಮ್ಮ ಕೋಡಿಂಬಾಡಿ ಗ್ರಾಮ ಏರ್‌ಲೈನ್ ವ್ಯಾಪ್ತಿಗೆ ಬರುವ ಕಾರಣ ಕಷ್ಟ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದರು. ಕಡತ ಮಂಜೂರು ಮಾಡಿದ್ದರೂ ಅದು ಇನ್ನೂ ಪರಿಪೂರ್ಣವಾಗಿರಲಿಲ್ಲ. ನಮ್ಮೂರಿನವರೇ ಆದ ಶಾಸಕ ಅಶೋಕ್ ರೈ ಅವರಲ್ಲಿ ಈ ಬಗ್ಗೆ ಹೇಳಿದ್ದೆ. ಈದಿನ ಕಡತವನ್ನು ವಿಲೇವಾರಿ ಮಾಡಿದ್ದಾರೆ. ಅಭಿವೃದ್ದಿಯ ವಿಚಾರದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಬೇಕಾಗುತ್ತದೆ.
-ದೇವಾನಂದ, ವಕೀಲರು ಕೋಡಿಂಬಾಡಿ

ವಿ ಎ ಗೆ ಸನ್ಮಾನ
ಅಕ್ರಮ ಸಕ್ರಮ ಕಡತ ಫೈಲು ರೆಡಿಮಾಡುವ ವೇಳೆ ಉಪ್ಪಿನಂಗಡಿ ವಿ ಎ ಜಂಗಪ್ಪ ನಮ್ಮಿಂದ ಯಾವುದೇ ಲಂಚ ಪಡೆಯಲಿಲ್ಲ, ನಮ್ಮಿಂದ ಅವರು ಏನೂ ಅಪೇಕ್ಷೆಯನ್ನು ಕೇಳಿಲ್ಲ ಎಂದು ಆ ಭಾಗದ ಮಹಿಳೆಯರು ಬಂದು ಶಾಸಕರಲ್ಲಿ ತಿಳಿಸಿದಾಗ ಲಂಚಮುಕ್ತ ವಿ ಎ ಎಂದು ಹೊಗಳಿದ ಶಾಸಕರು ವೇದಿಕೆಯಲ್ಲೇ ಶಾಲು ಹೊದಿಸಿ ಸನ್ಮಾನ ಮಾಡಿದರು. ಇಂಥಹ ಸನ್ಮಾನ ನಿಮಗೂ ಬೇಕಾದರೆ ಪುತ್ತೂರನ್ನು ಲಂಚ ಮುಕ್ತವನ್ನಾಗಿ ಮಾಡಿ ಎಂದು ಶಾಸಕರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!