Uncategorized
Asian Games-ಏಶ್ಯನ್ ಗೇಮ್ಸ್‌ಗೆ ತೆರೆ-2030ರ ಆವೃತ್ತಿಗೆ ದೋಹಾ ಆತಿಥ್ಯ; 85 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದ ಭಾರತ
ಜಪಾನಿನ ಐಚಿ-ನಗೋಯ ನಗರದಲ್ಲಿ ಎರಡು ವಾರಕ್ಕೂ ಅಧಿಕ ಸಮಯದಿಂದ ನಡೆಯುತ್ತಿದ್ದ 20ನೇ ಆವೃತ್ತಿಯ ಏಶ್ಯನ್ ಕ್ರೀಡಾಕೂಟಕ್ಕೆ ರವಿವಾರ ಭವ್ಯ ಸಮಾರೋಪ ಸಮಾರಂಭದೊಂದಿಗೆ ತೆರೆ ಬಿದ್ದಿದೆ. 2030ರ ಆವೃತ್ತಿಯ ಗೇಮ್ಸ್ ಆತಿಥ್ಯಕ್ಕೆ ದೋಹಾವು ಧ್ವಜವನ್ನು ಸ್ವೀಕರಿಸಿದೆ.
ನಗೋಯ: ಜಪಾನಿನ ಐಚಿ-ನಗೋಯ ನಗರದಲ್ಲಿ ಎರಡು ವಾರಕ್ಕೂ ಅಧಿಕ ಸಮಯದಿಂದ ನಡೆಯುತ್ತಿದ್ದ 20ನೇ ಆವೃತ್ತಿಯ ಏಶ್ಯನ್ ಕ್ರೀಡಾಕೂಟಕ್ಕೆ ರವಿವಾರ ಭವ್ಯ ಸಮಾರೋಪ ಸಮಾರಂಭದೊಂದಿಗೆ ತೆರೆ ಬಿದ್ದಿದೆ. 2030ರ ಆವೃತ್ತಿಯ ಗೇಮ್ಸ್ ಆತಿಥ್ಯಕ್ಕೆ ದೋಹಾವು ಧ್ವಜವನ್ನು ಸ್ವೀಕರಿಸಿದೆ.
ಏಶ್ಯ ಒಲಿಂಪಿಕ್ಸ್ ಮಂಡಳಿಯ(ಒಸಿಎ)ಅಧ್ಯಕ್ಷ ಶೇಕ್ ಜೊಯಾನ್ ಬಿನ್ ಹಮದ್ ಅಲ್ ಥಾನಿ ಅವರು ಮಿಝುಹೊ ಪಾರ್ಕ್‌ನಲ್ಲಿ ಗೇಮ್ಸ್‌ನಲ್ಲಿ ಕೊನೆಗೊಂಡಿದೆ ಎಂದು ಅಧಿಕೃತವಾಗಿ ಘೋಷಿಸಿದರು. ಈ ಮೂಲಕ ಏಶ್ಯದ ಅಥ್ಲೆಟಿಕ್ಸ್ ಉತ್ಕೃಷ್ಟಕ್ಕೆ ಸಾಕ್ಷಿಯಾದ ಕ್ರೀಡಾ ಹಬ್ಬ ಅಂತ್ಯವಾಗಿದೆ.
‘ಒನ್ ಏಶ್ಯ’ ಧೈಯವಾಕ್ಯ ಹೊಂದಿರುವ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಪ್ರೇಕ್ಷಕರು ಒಂದೆಡೆ ಸೇರಿದ್ದರು. ದೋಹಾ ಮುಂದಿನ ನಾಲ್ಕು ವರ್ಷಗಳಲ್ಲಿ ಉಪಖಂಡದ ಪ್ರಮುಖ ಕ್ರೀಡಾ ಮೇಳವನ್ನು ಆಯೋಜಿಸಲು ಸಜ್ಜಾಗಲಿದ್ದು, ಖತರ್‌ನ ಪ್ರತಿನಿಧಿಗಳಿಗೆ ಏಶ್ಯನ್ ಗೇಮ್ಸ್ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಿತು.
ಶೂಟಿಂಗ್‌ನಲ್ಲಿ ಎರಡು ಚಿನ್ನದ ಪದಕಗಳು ಹಾಗೂ ಒಂದು ಬೆಳ್ಳಿ ಪದಕವನ್ನು ಗೆದ್ದಿರುವ ಭಾರತದ ಶೂಟಿಂಗ್ ತಾರೆ ನೀರೂ ಧಾಂಡಾ ಸಮಾರೋಪ ಸಮಾರಂಭದಲ್ಲಿ ಧ್ವಜಧಾರಿಣಿಯಾಗಿ ಭಾರತೀಯ ಅತ್ತೀಟ್‌ಗಳ ತಂಡವನ್ನು ಮುನ್ನಡೆಸಿದರು.
85 ಪದಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದ ಭಾರತ
21 ಚಿನ್ನ, 27 ಬೆಳ್ಳಿ ಹಾಗೂ 37 ಕಂಚಿನ ಪದಕಗಳ ಸಹಿತ ಒಟ್ಟು 85 ಪದಕಗಳೊಂದಿಗೆ ಚೀನಾ, ಜಪಾನ್ ಹಾಗೂ ದಕ್ಷಿಣ ಕೊರಿಯಾದ ನಂತರ ಪದಕಪಟ್ಟಿಯಲ್ಲಿ ಭಾರತವು ನಾಲ್ಕನೇ ಸ್ಥಾನ ಪಡೆದಿದೆ. ಶೂಟಿಂಗ್, ಅಥ್ಲೆಟಿಕ್ಸ್, ಬಾಕ್ಸಿಂಗ್, ಹಾಕಿ ಹಾಗೂ ಇತರ ಕ್ರೀಡೆಗಳಲ್ಲಿ ಭಾರತವು ಮಹತ್ವಪೂರ್ಣ ಪ್ರದರ್ಶನ ನೀಡಿದೆ. ಚಿನ್ನದ ಪದಕ ವಿಜೇತ ಭಾರತದ ಪುರುಷರ ಹಾಕಿ ತಂಡವು 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಅರ್ಹತೆ ಪಡೆದಿದೆ.
2023ರ ಹಾಂಗ್‌ಝ ಗೇಮ್ಸ್‌ನಲ್ಲಿ 100ಕ್ಕೂ ಅಧಿಕ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದ ಭಾರತವು ಈ ಬಾರಿಯ ಏಶ್ಯನ್ ಗೇಮ್ಸ್‌ನಲ್ಲೂ ಪದಕ ಗಳಿಕೆಯಲ್ಲಿ ತನ್ನ ಸ್ಥಿರತೆಯನ್ನು ಕಾಯ್ದುಕೊಂಡಿದೆ. ನಗೋಯ ಗೇಮ್ಸ್‌ನಲ್ಲಿ ಭಾರತವು ಉಪಖಂಡದ ಕ್ರೀಡೆಗಳಲ್ಲಿ ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದರೂ ಅಂತಿಮವಾಗಿ ಒಟ್ಟು ಪದಕ ಗಳಿಕೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಹಿನ್ನಡೆ ಕಂಡಿದೆ. 2023ರ ಏಶ್ಯನ್ ಗೇಮ್ಸ್‌ನಲ್ಲಿ ಭಾರತವು ಒಟ್ಟು 106 ಪದಕಗಳನ್ನು ಜಯಿಸಿತ್ತು.
ಗರಿಷ್ಠ ಬೆಳ್ಳಿ ಪದಕ ಗೆದ್ದ ಆಧಾರದಲ್ಲಿ ಉಲ್ಲೇಕಿಸ್ತಾನ(21 ಚಿನ್ನ) ತಂಡವನ್ನು ಹಿಂದಿಕ್ಕಿದ ಭಾರತ ನಾಲ್ಕನೇ ಸ್ಥಾನಕ್ಕೆ ಏರಿತು. ಏಶ್ಯನ್ ಗೇಮ್ಸ್‌ನಲ್ಲಿ ತನ್ನ ಸಾಮರ್ಥ್ಯವನ್ನು ಮುಂದುವರಿಸಿದ ಚೀನಾ ದೇಶವು 169 ಚಿನ್ನ ಸಹಿತ ಒಟ್ಟು 341 ಪದಕಗಳನ್ನು ಗೆದ್ದುಕೊಂಡಿದೆ.
2030ರ ಏಶ್ಯನ್ ಗೇಮ್ಸ್‌ಗೆ ಬ್ಯಾಟನ್ ಸ್ವೀಕರಿಸಿದ ದೋಹಾ
ಸಮಾರೋಪ ಸಮಾರಂಭದ ವೇಳೆ ಮುಂದಿನ ಗೇಮ್ಸ್ ಆತಿಥ್ಯ ನಗರದತ್ತ ಎಲ್ಲರ ಗಮನ ಹರಿಯಿತು. ದೋಹಾವು 2030ರಲ್ಲಿ ಏಶ್ಯದ ಕ್ರೀಡಾ ಸಮುದಾಯವನ್ನು ಸ್ವಾಗತಿಸಲು ಸಜ್ಜಾಗಿದೆ. ಬ್ಯಾಟನ್ ಹಸ್ತಾಂತರವು ಖತರ್ ಎರಡನೇ ಬಾರಿ ಏಶ್ಯನ್ ಗೇಮ್ ತಯಾರಿಯ ಆರಂಭವಾಗಿದೆ. ಖತರ್ 2006ರಲ್ಲಿ ಏಶ್ಯನ್ ಗೇಮ್ಸ್ ಆತಿಥ್ಯ ವಹಿಸಿತ್ತು.
ಐಚಿ-ನಗೋಯ ಗೇಮ್ಸ್‌ನಲ್ಲಿ ದಾಖಲೆಯ 43 ಕ್ರೀಡೆಗಳಲ್ಲಿ 469 ಚಿನ್ನದ ಪದಕಗಳು ಇದ್ದವು. ಸುಮಾರು 17,000 ಕ್ರೀಡಾಳುಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ. ಮಿಕ್ಸೆಡ್ ಮಾರ್ಷಲ್ ಆರ್ಟ್ಸ್, ಟೆಕ್‌ಬಾಲ್ ಹಾಗೂ ಸರ್ಫೀಂಗ್ ಸಹಿತ ಹಲವು ಕ್ರೀಡೆಗಳು ಏಶ್ಯನ್ ಗೇಮ್ಸ್‌ನಲ್ಲಿ ಇದೇ ಮೊದಲ ಬಾರಿ ಕಾಣಿಸಿಕೊಂಡವು.
169 ಚಿನ್ನದ ಪದಕಗಳ ಸಹಿತ ಒಟ್ಟು 341 ಪದಕಗಳನ್ನು ಜಯಿಸಿದ ಚೀನಾ ಸಂಪೂರ್ಣ ಪ್ರಾಬಲ್ಯ ಸಾಧಿಸಿದ್ದು, ಏಶ್ಯನ್ ಗೇಮ್ಸ್‌ನಲ್ಲಿ ತನ್ನ ತವರು ನೆಲದಿಂದ ಹೊರಗೆ ಭರ್ಜರಿ ಬಂಗಾರದ ಬೇಟೆಯಾಡಿದೆ. ಆತಿಥೇಯ ಜಪಾನ್ 83 ಚಿನ್ನ ಸಹಿತ ಒಟ್ಟು 269 ಪದಕಗಳನ್ನು ಜಯಿಸಿದೆ. 1994ರ ಹಿರೊಶಿಮಾ ಗೇಮ್ಸ್‌ನಲ್ಲಿ ತನ್ನದೇ ಚಿನ್ನದ ಪದಕ ದಾಖಲೆಯನ್ನು ಮುರಿದಿದೆ.
ಕ್ರೀಡಾ ಚಾತುರ್ಯ ಮೆರೆದ ಜಪಾನ್
ಈ ಬಾರಿಯ ಏಶ್ಯನ್ ಗೇಮ್ಸ್ ವಸತಿ ಹಾಗೂ ಸಾರಿಗೆ ವ್ಯವಸ್ಥೆಗಳಿಗೆ ಸಂಬಂಧಿಸಿ ಭಾರೀ ಟೀಕೆಗೆ ಗುರಿಯಾಯಿತು. ಆಯೋಜಕರು ಕ್ರೀಡಾಪಟುಗಳಿಗೆ ಕ್ರೀಡಾಗ್ರಾಮಗಳನ್ನು ನಿರ್ಮಿಸಿಕೊಡುವ ಬದಲು ಹೋಟೆಲ್‌ಗಳು, ಕ್ರೂಸ್ ಶಿಪ್‌ಗಳಲ್ಲಿ ವಸತಿ ವ್ಯವಸ್ಥೆಗಳನ್ನು ಮಾಡಿತ್ತು.
ನೋಂದಣಿಯಲ್ಲಿನ ವಿಳಂಬ, ಕೊಠಡಿ ಹಂಚಿಕೆಯ ಸಮಸ್ಯೆಗಳು ಅನೇಕ ಕ್ರೀಡಾ ನಿಯೋಗಗಳ ಮೇಲೆ ಪರಿಣಾಮ ಬೀರಿದವು. ಇದರ ಜೊತೆಗೆ ರಾಜತಾಂತ್ರಿಕ ಹಾಗೂ ಶಿಷ್ಟಾಚಾರಕ್ಕೆ ಸಂಬಂಧಿಸಿದ ಗೊಂದಲಗಳು ಸಮಸ್ಯೆಗಳನ್ನು ಇನ್ನಷ್ಟು ಹೆಚ್ಚಿಸಿದವು. ಹಲವು ತಾಣಗಳಲ್ಲಿ ಪ್ರೇಕ್ಷಕರ ಕೊರತೆಯೂ ಇತ್ತು.
ಈ ಎಲ್ಲ ಅಡೆತಡೆಗಳ ನಡುವೆಯೂ ಕ್ರೀಡಾಕೂಟದಲ್ಲಿ ಹಲವು ವೈಯಕ್ತಿಕ ಪ್ರದರ್ಶನಗಳು ಗಮನ ಸೆಳೆದವು. ಚೀನಾದ ಯುವ ಈಜು ತಾರೆ ಯು ಝಿದಿ ಹಾಗೂ ಏಳು ಬಾರಿ ಚಿನ್ನದ ಪದಕ ವಿಜೇತೆ ಝಾಂಗ್ ಝಾನ್‌ಶು ಅಥ್ಲೆಟಿಕ್ಸ್ ಹಾಗೂ ಇತರ ಸ್ಪರ್ಧೆಗಳಲ್ಲಿ ಅಮೋಘ ಪ್ರದರ್ಶನ ನೀಡಿದರು.
ಜಪಾನ್‌ನ ಐಚಿ-ನಗೋಯ ನಗರವು ದೋಹಾಗೆ ಆತಿಥ್ಯದ ಜವಾಬ್ದಾರಿಯನ್ನು ಹಸ್ತಾಂತರಿಸುತ್ತಿದ್ದಂತೆ, ಕ್ರೀಡಾ ಸಾಧನೆಗಳ ಸಂಭ್ರಮಾಚರಣೆಯೊಂದಿಗೆ ಏಶ್ಯನ್ ಗೇಮ್ಸ್ ಸಮಾಪ್ತಿಯಾಯಿತು. ಜಪಾನ್‌ನ ಸಂಘಟನೆಯಲ್ಲಿನ ಕೊರತೆಗಳು ಮುಂದಿನ ಆವೃತ್ತಿಯ ಗೇಮ್ಸ್‌ಗೆ ದೊಡ್ಡ ಪಾಠವಾಗಬಹುದು.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಅಪರಾಧ11 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್9 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ9 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು9 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ಅಂತರ ರಾಜ್ಯ10 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಸ್ಥಳೀಯ10 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು
-
ಮಂಗಳೂರು11 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಅಂತರ ರಾಜ್ಯ10 hours agoWhatsApp Web: WhatsApp Web ಬಳಕೆದಾರರೇ ಎಚ್ಚರ..! ಟ್ಯಾಬ್ ಮುಚ್ಚಿದರೆ ಸಾಲದು, ಲಾಗೌಟ್ ಆಗದಿದ್ದರೆ ನಿಮ್ಮ ಖಾಸಗಿ ಚಾಟ್ ಬೇರೆಯವರ ಪಾಲು; ಕೇಂದ್ರ ಸರಕಾರದಿಂದ ಮಹತ್ವದ ಎಚ್ಚರಿಕೆ















