ಶಿಕ್ಷಣ
Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.
ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಸ್ಥಳೀಯ
Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ‘ಕೃತಕ ಬುದ್ಧಿಮತ್ತೆ- ಭವಿಷ್ಯ ಮತ್ತು ಸವಾಲುಗಳು’ ಕುರಿತು ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಐಟಿ ಕ್ಲಬ್ ನ ಆಶ್ರಯದಲ್ಲಿ ಅ 3 ರಂದು ‘ಕೃತಕ ಬುದ್ಧಿಮತ್ತೆ- ಭವಿಷ್ಯ ಮತ್ತು ಸವಾಲುಗಳು’ ಕುರಿತು ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಐಟಿ ಕ್ಲಬ್ ನ ಆಶ್ರಯದಲ್ಲಿ ಅ 3 ರಂದು ‘ಕೃತಕ ಬುದ್ಧಿಮತ್ತೆ- ಭವಿಷ್ಯ ಮತ್ತು ಸವಾಲುಗಳು’ ಕುರಿತು ಕಾರ್ಯಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಶ್ರೀನಿವಾಸ್ ಹೆಗ್ಡೆ ಮಾತನಾಡಿ, ಕೃತಕ ಬುದ್ಧಿಮತ್ತೆ ಇಂದು ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ತನ್ನ ಛಾಪನ್ನು ಮೂಡಿಸಿದ್ದು ಇದರ ಉಪಯೋಗಗಳು ಅಪಾರ. ಕೇವಲ ದಿನನಿತ್ಯದ ಉಪಯೋಗಗಳು ಅಷ್ಟೇ ಅಲ್ಲದೆ, ವೈಜ್ಞಾನಿಕ ಉಪಯೋಗಗಳ ಬಗ್ಗೆ ಉದಾಹರಣೆ ಸಹಿತ ವಿವರಿಸಿದರು. ಭವಿಷ್ಯದಲ್ಲಿ ಎ ಐ ಮಾನವನ ಬುದ್ಧಿಮತ್ತೆಗೆ ಸವಾಲಾಗಿದ್ದು, ಅತ್ಯಂತ ಜಾಗರೂಕತೆಯಿಂದ ಉಪಯೋಗಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಕೃತಕ ಬುದ್ಧಿಮತ್ತೆ ಎಂಬುದು ಇಂದಿನ ಯುವಕರು ಕಡ್ಡಾಯವಾಗಿ ಕಲಿಯಬೇಕಾದ ಪಾಠವಾಗಿದ್ದು, ಇದರ ವ್ಯಾಪ್ತಿಯು ವಿಶಾಲವಾಗಿದೆ. ಎ ಐ ಇಂದು ನಮಗೆ ಎಷ್ಟು ಉಪಯುಕ್ತವೋ ಅಷ್ಟೇ ಸವಾಲುಗಳನ್ನು ನಮ್ಮ ಮುಂದೆ ಇರಿಸಿದೆ. ನಾವು ಸವಾಲುಗಳನ್ನು ಮೆಟ್ಟಿ ನಿಂತರೆ ಎ ಐ ಉಪಯುಕ್ತತೆ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಗೋವಿಂದ್ ಪ್ರಕಾಶ್ ಸಿ ಎಚ್, ಯಶಸ್ವಿನಿ ಎಂ. ಎಸ್ ಹಾಗೂ ವೀಕ್ಷಾ ಉಪಸ್ಥಿತರಿದ್ದರು.
-
Uncategorized24 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ6 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ12 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ12 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ10 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ11 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ




















