Uncategorized
ಪುತ್ತೂರು : ಪರವಾನಿಗೆ ರಹಿತವಾಗಿ ಹಿಂಸಾತ್ಮಕವಾಗಿ 11 ಗೋವುಗಳ ಸಾಗಾಟ; ಶಿವಪ್ರಸಾದ್ ಬಂಧನ

ಪುತ್ತೂರು, ಅ.5: ಪರವಾನಿಗೆ ಇಲ್ಲದೆ 11 ಜಾನುವಾರುಗಳನ್ನು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅ.5ರಂದು ಬೆಳಗಿನ ಜಾವ ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ದೊರೆತಿತ್ತು. ಅದರಂತೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದರು.
ಈ ವೇಳೆ ವಾಹನದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ. ವಾಹನ ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(d) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪದ ಮೇರೆಗೆ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Uncategorized
Mangalore-ಮಂಗಳೂರು ವಿ.ವಿ ಮಹಿಳೆಯರ ಕಬಡ್ಡಿ; ವಿವೇಕಾನಂದ ಕಾಲೇಜಿನ ಉತ್ತಮ ಸಾಧನೆ
ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 – 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ – ತೃತೀಯ ಬಿಬಿಎ, ಭೂಮಿಕಾ – ತೃತೀಯ ಬಿಎ, ಹೇಮಲತಾ – ತೃತೀಯ ಬಿಎ, ರಶ್ಮಿತ. ಎನ್ – ತೃತೀಯ ಬಿಸಿಎ, ನಿಕ್ಷಿತ – ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ – ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ – ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ – ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ – ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Uncategorized
Vivekananda-ವಿವೇಕಾನಂದ ಕಾಲೇಜಿನಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿʼ ಕಾರ್ಯಗಾರ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪುತ್ತೂರು: ವಿದ್ಯಾರ್ಥಿಗಳು ಉದ್ಯೋಗ ಸಂದರ್ಶನಗಳಿಗೆ ಸರಿಯಾದ ತಯಾರಿ ನಡೆಸಬೇಕು. ಪ್ರಮುಖವಾಗಿ ಮಾತುಗಳನ್ನು ಆಲಿಸುವ ಹಾಗೂ ಸಂವಹನ ಸಾಮರ್ಥ್ಯವನ್ನು ಹೊಂದಿರಬೇಕು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕೌಶಲ್ಯ, ಪ್ರೋಬ್ಲಮ್ ಸಾಲ್ವಿಂಗ್, ಟೀಮ್ ವರ್ಕ್, ಹೊಂದಿಕೊಳ್ಳುವಿಕೆ ಮತ್ತು ಉತ್ತಮ ಮನೋಭಾವ ಮೊದಲಾದ ಕೌಶಲ್ಯಗಳು ಉತ್ತಮ ಉದ್ಯೋಗ ಮತ್ತು ಯಶಸ್ವಿ ವೃತ್ತಿ ಜೀವನಕ್ಕೆ ಸಹಾಯಕವಾಗುತ್ತವೆ ಎಂದು ಭಾರತೀಯ ರಾಸಾಯನಿಕ ಮಂಡಳಿ (ಐಸಿಸಿ)ಯ ರೆಸ್ಪಾಂಸಿಬಲ್ ಕೇರ್‌ನ ಲೆಕ್ಕಪರಿಶೋಧಕ ರಾಜಶೇಖರ ಭಟ್ ಹೇಳಿದರು.
ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ‘ಆರ್ ವಿ ರೆಡಿ ಫಾರ್ ಇಂಡಸ್ಟ್ರಿ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅಧ್ಯಕ್ಷೀಯ ನುಡಿಗಳನ್ನಾಡಿ, ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಜೊತೆಗೆ, ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಸೈದ್ಧಾಂತಿಕ ಜ್ಞಾನ ಮತ್ತು ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸುವುದು ಇಂತಹ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮಾತನಾಡಿದರು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ. ಉಪಸ್ಥಿತರಿದ್ದರು.
Uncategorized
Bhajana Kammata-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ : ಸಮಾರೋಪ ಸಮಾರಂಭ; ಭಜನೆಯಿಂದ ಭಗವಂತನ ಸಾಕ್ಷಾತ್ಕಾರ, ಉತ್ತಮ ಸಂಸ್ಕಾರ-ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ
ಭಾನುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 28 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 28 ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾ-ಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ನಾಡಿನ ಅನೇಕ ಸಾಧು-ಸಂತರು, ಮೀರಾಬಾಯಿಯಂತಹ ಸಾಧಕರು ಭಕ್ತಿಯಿಂದ ತಮ್ಮನ್ನು ತಾವು ಸಮರ್ಪಿಸಿಕೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ.
ಇಸ್ಕಾನ್‌ನವರು ವಿದೇಶಗಳಲ್ಲಿ ಕೂಡಾ ಭಜನೆ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗುವ ಬಗ್ಯೆ ಅರಿವು, ಜಾಗೃತಿ ಮೂಡಿಸಿದ್ದಾರೆ.
ಭಜನೆಯಿಂದ ನಮ್ಮಲ್ಲಿರುವ ಸಾತ್ವಿಕಶಕ್ತಿ ಜಾಗೃತವಾಗಿ ನೈತಿಕತೆಯೊಂದಿಗೆ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ. ಪ್ರಾರ್ಥನೆ, ಜಪ, ತಪ, ಧ್ಯಾನ ಇದ್ದಲ್ಲಿ ಭಕ್ತರು ಮತ್ತು ಭಗವಂತನ ಮಧ್ಯೆ ಅವಿನಾಭಾವ ಸಂಬಂಧ ಮೂಡಿ ಬರುತ್ತದೆ ಎಂದು ಸ್ವಾಮೀಜಿ ಹೇಳಿದರು.
ಎಲ್ಲಾ ವಿಷಯಗಳಲ್ಲಿಯೂ ಸೂಕ್ಷö್ಮಗ್ರಾಹಿಯಾದ ವೀರೇಂದ್ರ ಹೆಗ್ಗಡೆಯವರು ಹತ್ತು-ಹಲವು ಜನಮಂಗಳ ಕಾರ್ಯಗಳನ್ನು ಮಾಡಿ “ರಾಜರ್ಷಿ” ಯಾಗಿರುವುದು ಎಲ್ಲರಿಗೂ ಸಂತಸ ಮತ್ತು ಅಭಿಮಾನದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ಸನಾತನ ಸಂಸ್ಕೃತಿಯ ಪುನರುತ್ಥಾನಕ್ಕೆ ಕೃಷಿಸಂಸ್ಕೃತಿ ಮತ್ತು ಋಷಿಸಂಸ್ಕೃತಿಯನ್ನು ಮರೆಯಬಾರದು. ಭಜನೆಯಿಂದ ನಾಲಗೆ ಪವಿತ್ರವಾಗಿ ಸಾರ್ಥಕ ಬದುಕಿಗೆ ಸ್ಪೂರ್ತಿ ದೊರಕುತ್ತದೆ. ಭಾವುಕರಾಗಿ ಭಜನೆ ಹಾಡುವುದರಿಂದ ಜೀವನಮಟ್ಟ ಸುಧಾರಣೆಯೊಂದಿಗೆ ನೈತಿಕ ಹಾಗೂ ಧಾರ್ಮಿಕ ಮಟ್ಟವೂ ಉನ್ನತಿಗೇರುತ್ತದೆ ಎಂದು ಅವರು ಹೇಳಿದರು. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆ ಸಲ್ಲದು ಎಂದು ಅವರು ತಿಳಿಸಿದರು.
ಸುಶ್ರಾವ್ಯವಾಗಿ ಭಜನೆಯೊಂದನ್ನು ಹಾಡಿ, ಸ್ವಾಮೀಜಿ ಶ್ರೋತೃಗಳ ಮುಕ್ತ ಪ್ರಶಂಸೆಗೆ ಪಾತ್ರರಾದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಿಬಿರಾರ್ಥಿಗಳು ಕಮ್ಮಟದಲ್ಲಿ ಪಡೆದ ಅನುಭವವನ್ನು ಸದುಪಯೋಗ ಮಾಡಿ ಆಯಾ ಊರಿನ ನಾಯಕರಾಗಿ ಪ್ರಗತಿಯ ರೂವಾರಿಗಳಾಗಬೇಕು. ನಿತ್ಯವೂ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಿ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಕಮ್ಮಟದಲ್ಲಿ ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಮತ್ತು ಹಿರಿಯ ವಿದ್ವಾಂಸರನ್ನು ಹೆಗ್ಗಡೆಯವರು ಅಭಿನಂದಿಸಿದರು.
ಶಿಬಿರಾರ್ಥಿಗಳಿಂದ ಸಾಮೂಹಿಕ ನೃತ್ಯ ಭಜನೆ ಮತ್ತು ಕುಣಿತ ಭಜನೆ ನಡೆಯಿತು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾಹರ್ಷೇಂದ್ರ ಕುಮಾರ್, ಐಶ್ವರ್ಯನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.
ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರಪಡಿಸಿ ಒಂದು ವಾರ ನಡೆದ ಕಮ್ಮಟದಲ್ಲಿ 107 ಪುರುಷರು ಮತ್ತು 105 ಮಹಿಳೆಯರು ಸೇರಿದಂತೆ ಒಟ್ಟು 212 ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ ಎಂದರು.
ಬ್ರಹ್ಮಾವರದ ತಿಮ್ಮಪ್ಪ ಕರ್ಕೇರಾ ಮತ್ತು ಸುಳ್ಯದ ಶ್ರೀಲತಾ ಕಮ್ಮಟದ ಬಗ್ಯೆ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
-
Uncategorized23 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ನಿಧನ ವಾರ್ತೆ6 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಅಪರಾಧ12 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ11 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ11 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ9 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ11 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ


















