Connect with us

ಅಪರಾಧ

ಭಾರತ V/s ವೆಸ್ಟ್‌ ಇಂಡೀಸ್‌ 5 ಪಂದ್ಯಗಳ ಟಿ-20 ಸಿರೀಸ್‌ ಮೊದಲ ಪಂದ್ಯ ಇಂದು | ವಿಶ್ವಕಪ್ ಟೂರ್ನಿಯಲ್ಲಿ ಆಡಳಿರುವ ಸಂಭವನೀಯ ಆಟಗಾರರ ತಂಡ ಕಣಕ್ಕಿಳಿಸಿದ ಇಂಡಿಯಾ | ಚುಟುಕ್‌ ಕ್ರಿಕೆಟಿನಲ್ಲಿ ವಿಂಡೀಸ್‌ ಈಗಲೂ ಬಲಿಷ್ಟ

Published

on

Ad Widget

Ad Widget

Ad Widget

Ad Widget

ಪೋರ್ಟ್ ಆಫ್‌ ಸ್ಪೇನ್:  ಪ್ರಮುಖ ಆಟಗಾರರರ ಅನುಪಸ್ಥಿತಿಯ ಮಧ್ಯೆಯೂ ಏಕದಿನ ಸೀರಿಸ್‌ʼನಲ್ಲಿ  ಕೆರೆಬಿಯನ್‌ ನಾಡಿನಲ್ಲಿಯೇ ವಿಂಡೀಸ್‌ ತಂಡವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಐತಿಹಾಸಿಕ ವಿಜಯ ಸಾಧಿಸಿ ಉತ್ಸಾಹದ ಬುಗ್ಗೆಯಾಗಿರುವ ಭಾರತೀಯ ತಂಡ ಇಂದು ಮತ್ತೆ ಟಿ 20 ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಮುಂಬರಲಿರುವ ಟಿ20 ವಿಶ್ವಕಪ್ ಟೂರ್ನಿಗೆ ತಾಲೀಮು ಆಗಿ ಈ ಪಂದ್ಯವನ್ನು ಭಾರತ ತಂಡ ಪರಿಗಣಿಸಿದೆ . ಹೀಗಾಗಿ ವಿಶ್ವಕಪ್ ಟೂರ್ನಿಯಲ್ಲಿ ಆಡಳಿರುವ ಸಂಭವನೀಯ ಆಟಗಾರರ ತಂಡವನ್ನೆ ವೆಸ್ಟ್ ಇಂಡೀಸ್ ಎದುರಿನ  ಐದು ಪಂದ್ಯಗಳ ಸರಣಿಯಲ್ಲಿ  ಭಾರತ ಕಣಕ್ಕಿಳಿಸಲಿದೆ.

Ad Widget

Ad Widget

Ad Widget

Ad Widget

ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವ ವಹಿಸಲಿದ್ದಾರೆ. ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೆ.ಎಲ್. ರಾಹುಲ್ ಮತ್ತು ಕುಲದೀಪ್ ಯಾದವ್ ಕೂಡ ಮರಳಿದ್ದಾರೆ. ಆದರೆ ರಾಹುಲ್ ಮತ್ತು ಕುಲದೀಪ್ ಅವರು ‘ಮ್ಯಾಚ್‌ ಫಿಟ್‌ನೆಸ್’ ಬಗ್ಗೆ ಇನ್ನೂ ಖಚಿತವಾಗಿಲ್ಲ. ಆದ್ದರಿಂದ ಅಂತಿಮ ಹನ್ನೊಂದರ ಬಳಗದಲ್ಲಿ ಅವರು ಸ್ಥಾನ ಪಡೆಯುವುದು ಕೂಡ ಇನ್ನೂ ಖಚಿತವಾಗಿಲ್ಲ.

Ad Widget

Ad Widget alt="Ad Widget"/>

Ad Widget

ವಿರಾಟ್ ಕೊಹ್ಲಿ ಈ ಸರಣಿಯಿಂದಲೂ ವಿಶ್ರಾಂತಿ ತೆಗೆದು ಕೊಂಡಿದ್ದಾರೆ. ಆದ್ದರಿಂದ ಕೊಹ್ಲಿ ಜಾಗದಲ್ಲಿ ದೀಪಕ್ ಹೂಡಾ ಅಥವಾ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ರಿಷಭ್ ಪಂತ್ ಮರಳಿರುವುದರಿಂದಾಗಿ ದಿನೇಶ್ ಕಾರ್ತಿಕ್‌ಗೆ ಕೀಪಿಂಗ್ ಅವಕಾಶ ಸಿಗಲಿಕ್ಕಿಲ್ಲ. ಆದರೆ ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರನಾಗಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚು.

Ad Widget

Ad Widget <> Ad Widget

ಏಕದಿನ ಪಂದ್ಯ ಭಾರತಕ್ಕೆ ಸುಲಭ ತುತ್ತಾದರೂ ಟಿ -20 ಪಂದ್ಯದ ಮಟ್ಟಿಗೆ ವೆಸ್ಟ್‌ ಇಂಡೀಸ್‌ ಈಗಲೂ ಬಲಿಷ್ಟವೇ . ಪಂದ್ಯದ ಗತಿಯನ್ನು ಏಕಾಂಗಿ ಬದಲಿಸಬಲ್ಲ ಹಲವು ಆಟಗಾರರು ಆ ತಂಡದಲ್ಲಿದ್ದಾರೆ.   ಆದರೆ ವಿಂಡೀಸ್ ಬಳಗವು ಚುಟುಕು ಕ್ರಿಕೆಟ್‌ನಲ್ಲಿ ದೊಡ್ಡ ಹೊಡೆತಗಳ ಪರಾಕ್ರಮವನ್ನು ತೋರಿದರೆ ಮಾತ್ರ ಭಾರತದ ಬೌಲಿಂಗ್ ಪಡೆ ಮೇಲೆ ಒತ್ತಡ ಹಾಕಲು ಸಾಧ್ಯ.

ವೆಸ್ಟ್ ಇಂಡೀಸ್ ತಂಡವನ್ನು ಟೀಮ್ ಇಂಡಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕನಾಗಿ ಮುನ್ನಡೆಸಿದ್ದ ನಿಕೊಲಸ್ ಪೂರನ್ ಅವರೇ ಈ ಟಿ ಟ್ವೆಂಟಿ ತಂಡವನ್ನು ಕೂಡ ನಾಯಕನಾಗಿ ಮುನ್ನಡೆಸಲಿದ್ದಾರೆ ಹಾಗೂ ರೋವ್ಮನ್ ಪೊವೆಲ್ ಉಪನಾಯಕನಾಗಿದ್ದಾರೆ.

Ad Widget

Ad Widget

ವೆಸ್ಟ್ ಇಂಡೀಸ್ ಪ್ರಕಟಿಸಿರುವ ತಂಡ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯಲಿರುವ 5 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ವೆಸ್ಟ್ ಇಂಡೀಸ್ ತಂಡ ಪ್ರಕಟಿಸಿರುವ 16 ಆಟಗಾರರ ಸ್ಕ್ವಾಡ್ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್ (ಉಪನಾಯಕ), ಶಮರ್ ಬ್ರೂಕ್ಸ್, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ಕೀಮೋ ಪಾಲ್, ರೊಮಾರಿಯೊ ಶೆಫರ್ಡ್, ಒಡಿಯನ್ ಸ್ಮಿತ್, ಡೆವಿನ್ ಥಾಮಸ್, ಹೇಡನ್ ವಾಲ್ಷ್ ಜೂನಿಯರ್

ಪಂದ್ಯ: ರಾತ್ರಿ 8ರಿಂದ

ನೇರಪ್ರಸಾರ: ಡಿಡಿ ಸ್ಪೋರ್ಟ್ಸ್, ಫ್ಯಾನ್‌ಕೋಡ್‌

Ad Widget
Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ

Published

on

Ad Widget

Ad Widget

Ad Widget

Ad Widget

ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.

Ad Widget

Ad Widget <> Ad Widget

ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.

ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.

Ad Widget

Ad Widget

ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.

ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.

Ad Widget
Continue Reading

ಅಪರಾಧ

Mangalore-Big Shocking : ಮಂಗಳೂರು: ‘ಕೋಲ್ಡ್ ಪ್ರೆಸ್ಡ್’ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಆರೋಪ; ಪ್ರತಿಷ್ಠಿತ ‘ಬೋಳಾಸ್’ ಆಗ್ರೋ ಘಟಕದಿಂದ 1,240 ಕೆ.ಜಿ. ಅಡುಗೆ ಎಣ್ಣೆ ವಶ..!

Published

on

Ad Widget

Ad Widget

Ad Widget

Ad Widget

ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ನ.17: ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಕಚ್ಚಾ ಎಣ್ಣೆಗೆ ‘ಕೋಲ್ಡ್ ಪ್ರೆಸ್ಡ್’ ಲೇಬಲ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಘಟಕದಲ್ಲಿ ಪರಿಶೀಲನೆ ನಡೆಸಿದಾಗ ಲೇಬಲಿಂಗ್ ಹಾಗೂ ಬ್ರಾಂಡಿಂಗ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳು ಕಂಡುಬಂದಿವೆ.

Ad Widget

Ad Widget <> Ad Widget

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕಚ್ಚಾ ಕಡಲೆಕಾಯಿ ಎಣ್ಣೆಯನ್ನು (Raw Groundnut Oil) ಖರೀದಿಸಿ, ಅದನ್ನು ‘ಕೋಲ್ಡ್ ಪ್ರೆಸ್ಡ್ ಕಡಲೆಕಾಯಿ ಎಣ್ಣೆ’ (Cold Pressed Groundnut Oil) ಎಂಬ ಹೆಸರಿನಲ್ಲಿ ಮರುಪ್ಯಾಕ್ ಮಾಡಲಾಗುತ್ತಿತ್ತು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಉತ್ಪನ್ನದ ನೈಜ ಸ್ವರೂಪಕ್ಕೆ ವಿರುದ್ಧವಾಗಿ ಲೇಬಲ್ ಬಳಸುವ ಮೂಲಕ ಗ್ರಾಹಕರನ್ನು ದಾರಿತಪ್ಪಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಂಡಿದ್ದಾರೆ.

ವಶಪಡಿಸಿಕೊಂಡ ಎಣ್ಣೆಯ ಪ್ರಮಾಣ ಹೀಗಿದೆ:
ಘಟಕದಿಂದ ಒಟ್ಟು 1,240 ಕೆ.ಜಿ. ತೂಕದ ಅಡುಗೆ ಎಣ್ಣೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ವಿವರ ಹೀಗಿದೆ:

Ad Widget

Ad Widget
  • ಕಡಲೆಕಾಯಿ ಎಣ್ಣೆ (ಬಾಕ್ಸ್): ತಲಾ 10 ಕೆ.ಜಿ. ತೂಕದ 11 ಬಾಕ್ಸ್‌ಗಳು.
  • ಕಡಲೆಕಾಯಿ ಎಣ್ಣೆ (ಕ್ಯಾನ್): ತಲಾ 35 ಲೀಟರ್‌ನ 30 ಕ್ಯಾನ್‌ಗಳು.
  • ತೆಂಗಿನ ಎಣ್ಣೆ (ಬಾಕ್ಸ್): ತಲಾ 20 ಕೆ.ಜಿ. ತೂಕದ 4 ಬಾಕ್ಸ್‌ಗಳು.
  • ಮಿಸ್‌ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳ ಉಲ್ಲಂಘನೆ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಕೈಗೊಂಡಿರುವ ಈ ಕ್ರಮವು ಗ್ರಾಹಕರ ಹಿತಾಸಕ್ತಿ ಮತ್ತು ಆಹಾರ ಉತ್ಪನ್ನಗಳ ಗುಣಮಟ್ಟದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!