ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
ಅಪರಾಧ
Cyber scam-ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಗಿಫ್ಟ್..! ಮಂಗಳೂರಿನ ವೈದ್ಯನಿಗೆ 1.65 ಲಕ್ಷ ರೂ. ಸೈಬರ್ ವಂಚನೆ
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು: ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ ನಂಬಿಸಿದ ಖದೀಮರು ವೈದ್ಯರಿಂದ ಒಟ್ಟು 1,65,402 ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮಂಗಳೂರು, ನ.25: ಅ.31ರಂದು ವೈದ್ಯರು ತಮ್ಮ ಮೊಬೈಲ್ನಲ್ಲಿ ‘INDIA STORES FOR YOU’ ಎಂಬ ಆನ್ಲೈನ್ ಜಾಹೀರಾತನ್ನು ಗಮನಿಸಿದ್ದರು. ಒಂದು ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆಯಾಗಿ ನೀಡುವುದಾಗಿ ಜಾಹೀರಾತಿನಲ್ಲಿ ತಿಳಿಸಲಾಗಿತ್ತು. ಇದನ್ನು ನಂಬಿದ ಅವರು 734 ರೂ. ಪಾವತಿಸಿ ಆನ್ಲೈನ್ ಮೂಲಕ ಟೀ ಶರ್ಟ್ ಬುಕ್ ಮಾಡಿದ್ದರು.
ಅದೇ ದಿನ ಮಧ್ಯಾಹ್ನ ಸುಮಾರು 2.30 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬರು ವೈದ್ಯರಿಗೆ ಕರೆ ಮಾಡಿ, ಟೀ ಶರ್ಟ್ ಜೊತೆಗೆ ಐ-ಫೋನ್ ಕೂಡ ರವಾನೆಯಾಗಲಿದೆ ಎಂದು ತಿಳಿಸಿದ್ದರು. ಐ-ಫೋನ್ಗೆ ಇನ್ಶೂರೆನ್ಸ್ ಹಣ ಪಾವತಿಸಬೇಕಿದ್ದು, ಬಳಿಕ ಆ ಹಣವನ್ನು ಅವರ ಖಾತೆಗೆ ಮರಳಿ ಜಮೆ ಮಾಡಲಾಗುತ್ತದೆ ಎಂದು ನಂಬಿಸಿದ್ದರು.
ವಂಚಕರ ಮಾತು ನಂಬಿದ ವೈದ್ಯರು, ‘Gurdit Singh Bhasin And Sons’ ಹಾಗೂ ‘Rinki Urf Gopal’ ಎಂಬ ಪೇಮೆಂಟ್ ಐಡಿಗಳಿಗೆ ಫೋನ್ ಪೇ ಮೂಲಕ ಹಂತ ಹಂತವಾಗಿ 72,640 ರೂ. ವರ್ಗಾಯಿಸಿದ್ದರು.
ಇಷ್ಟಕ್ಕೆ ನಿಲ್ಲದ ವಂಚಕರು ನ.22ರಂದು ಮತ್ತೆ ಕರೆ ಮಾಡಿ, ಇನ್ನೂ 71,906 ರೂ. ಪಾವತಿಸುವಂತೆ ಸೂಚಿಸಿದ್ದರು. ಈ ಹಣವನ್ನೂ ಬಳಿಕ ಮರಳಿ ಜಮೆ ಮಾಡುವುದಾಗಿ ಭರವಸೆ ನೀಡಿದ್ದರಿಂದ ವೈದ್ಯರು ಅದನ್ನು ವರ್ಗಾಯಿಸಿದ್ದರು. ಬಳಿಕ ಹಣವನ್ನು IMPS ಮೂಲಕ ಮರಳಿ ಕಳುಹಿಸಲು ಕಮಿಷನ್ ಶುಲ್ಕವೆಂದು ಹೇಳಿ ಮತ್ತೆ 20,856 ರೂ. ಪಾವತಿಸಿಕೊಂಡಿದ್ದಾರೆ.
ಆದರೆ, ಈವರೆಗೆ ಯಾವುದೇ ಹಣ ವೈದ್ಯರ ಖಾತೆಗೆ ಮರಳಿಲ್ಲ. ವಂಚಕರಿಗೆ ಕರೆ ಮಾಡಿದಾಗ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ವೈದ್ಯರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಅಪರಾಧ
Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಪಟ್ಟಣಗೆರೆಯ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್ನಲ್ಲಿ ಹಾಜರಿದ್ದರು ಎನ್ನಲಾಗಿದೆ.
ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.
‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಈಗಾಗಲೇ ಪಟ್ಟಣಗೆರೆ ಶೆಡ್ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.
ಧನ್ವಿರ್ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.
ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.
ಅಪರಾಧ
Excise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450 ಲೀಟರ್ಗೂ ಅಧಿಕ ಅಕ್ರಮ ಮದ್ಯವನ್ನು ಜಪ್ತಿ ಮಾಡಲಾಗಿದೆ.

ಮೊದಲ ಪ್ರಕರಣದಲ್ಲಿ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 1,261 ಲೀಟರ್ ಗೋವಾ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೆಲ್ಕಾರ್ ಸಮೀಪ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನೂ ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಈ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು ₹20.37 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಜಮಾಡಿ ಟೋಲ್ ಬಳಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಅಬಕಾರಿ ಇಲಾಖೆ ಮತ್ತೊಂದು ಮಹತ್ವದ ಯಶಸ್ಸು ಸಾಧಿಸಿದೆ.
-
ಕ್ರೈಂ21 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ14 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ20 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು19 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ19 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಬಿಗ್ ನ್ಯೂಸ್20 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಅಪರಾಧ15 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಕ್ರೀಡೆ19 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
















