ಈ ವೇಳೆ […]" /> ಈ ವೇಳೆ […]"> Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ - Nikhara News | Kannada News Website
Connect with us

ಸ್ಥಳೀಯ

Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ

Published

on

Ad Widget

Ad Widget

Ad Widget

Ad Widget

ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget

Ad Widget

Ad Widget

ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

Ad Widget

Ad Widget <> Ad Widget

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.

Click to comment

Leave a Reply

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಅಪರಾಧ

Renukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ

Published

on

Ad Widget

Ad Widget

Ad Widget

Ad Widget

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್‌ಪಿಪಿ) ಮನವಿಯ ಮೇರೆಗೆ ಇಬ್ಬರನ್ನೂ ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿ 59ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಪಟ್ಟಣಗೆರೆಯ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ಮಲ್ಲಿಕಾರ್ಜನ್ ಮತ್ತು ವಿಜಯ್ ಕುಮಾರ್ ಅವರು ಈ ಹಿಂದೆ ಪೊಲೀಸರಿಗೆ ಹಾಗೂ ನ್ಯಾಯಾಲಯದಲ್ಲಿ ಘಟನೆಯ ಕುರಿತು ಮಾಹಿತಿ ನೀಡಿದ್ದರು. ಘಟನೆ ನಡೆದ ದಿನ ಇಬ್ಬರೂ ಶೆಡ್‌ನಲ್ಲಿ ಹಾಜರಿದ್ದರು ಎನ್ನಲಾಗಿದೆ.

Ad Widget

Ad Widget <> Ad Widget

ಆದರೆ, ಮಂಗಳವಾರ ನಡೆದ ವಿಚಾರಣೆಯ ವೇಳೆ ಇಬ್ಬರೂ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನೀಡಿದ್ದಾರೆ.

‘ನಾವು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದೆವು. ಬಳಿಕ ಮನೆಗೆ ತೆರಳುತ್ತಿದ್ದೆವು. ಅಂದು ಶೆಡ್‌ನಲ್ಲಿ ಇದ್ದರೂ ಕಾರಿನಲ್ಲಿ ಯಾರೆಲ್ಲ ಬಂದಿದ್ದರು ಎಂಬುದು ನಮಗೆ ತಿಳಿದಿಲ್ಲ. ಶೆಡ್‌ನಲ್ಲಿ ನಡೆದ ಘಟನೆಗಳನ್ನು ನಾವು ಕಣ್ಣಾರೆ ನೋಡಿಲ್ಲ’ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

Ad Widget

Ad Widget

ಈಗಾಗಲೇ ಪಟ್ಟಣಗೆರೆ ಶೆಡ್‌ನ ಕಾವಲುಗಾರ ನರೇಂದ್ರ ಸಿಂಗ್ ಹಾಗೂ ಸಿಬ್ಬಂದಿ ಕಿರಣ್ ಕೂಡ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ಸಾಕ್ಷ್ಯ ನುಡಿದಿದ್ದರು.

ಧನ್ವಿರ್‌ಗೆ ನ.30ರಂದು ಸಿಸಿಬಿ ಮುಂದೆ ಹಾಜರಾಗಲು ಹೈಕೋರ್ಟ್ ಸೂಚನೆ
ಇನ್ನೊಂದೆಡೆ, ಪರಪ್ಪನ ಅಗ್ರಹಾರ ಜೈಲಿನ ವಿಡಿಯೊ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವಿರ್ ಅವರು ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತಮ್ಮನ್ನು ಆರೋಪಿಯನ್ನಾಗಿ ಹೆಸರಿಸಿರುವ ಪ್ರಕರಣದಲ್ಲಿ ಬೆಂಗಳೂರಿನ ಒಂದನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನವೆಂಬರ್ 18ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಧನ್ವಿರ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಅನೂಪ್ ಕುಮಾರ್ ಅವರು, ಅರ್ಜಿದಾರರ ವಿರುದ್ಧದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದರೂ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಆದ್ದರಿಂದ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಿಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವಂತೆ ಧನ್ವಿರ್‌ಗೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿದ್ದ ದೃಶ್ಯಗಳು ಬಹಿರಂಗಗೊಂಡ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೊ ಹರಿದಾಡಲು ನಟ ಧನ್ವಿರ್ ಅವರ ಮೊಬೈಲ್ ಬಳಕೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

Ad Widget
Continue Reading

ಕಾರ್ಯಕ್ರಮಗಳು

Silver Jubilee-ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ 25ನೇ ವರ್ಷದ ಸಂಭ್ರಮ: ಡಿ.26ರಂದು ಬೆಳ್ಳಿಹಬ್ಬ ʻರಜತ ರಶ್ಮಿʼ; ಜ ಸಮಾಲೋಚನಾ ಸಭೆಯಲ್ಲಿ ಸವಣೂರು ಸೀತಾರಾಮ ರೈ ಘೋಷಣೆ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ ಸವಣೂರು ಸೀತಾರಾಮ ರೈ ಹೇಳಿದರು.

Ad Widget

Ad Widget alt="Ad Widget"/>

Ad Widget

ನ. 24 ರಂದು ಸಂಸ್ಥೆಯ ಸಭಾಂಗಣದಲ್ಲಿ ಬೆಳ್ಳಿಹಬ್ಬ ಆಚರಣೆಯ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಮ್ಮ ಸಂಸ್ಥೆಯು 2001 ಮೇ 23 ರಂದು ಪ್ರಾರಂಭಗೊಂಡಿತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಅಂಗ್ಗಮಾಧ್ಯಮ ಶಿಕ್ಷಣದೊಂದಿಗೆ ಸಕಲ ಸೌಲಭ್ಯಗಳನ್ನು ಒಳಗೊಂಡ ವ್ಯವಸ್ಥೆಯನ್ನು ನೀಡುವುದರ ಜೊತೆಗೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳು ಕಲಿಕೆಗೆ ಇಲ್ಲಿಗೆ ಆಗಮಿಸಿ, ಉತ್ತಮ ಶಿಕ್ಷಣ ಪಡೆದು, ಇಂದು ದೇಶ-ವಿದೇಶಗಳಲ್ಲಿ ಉನ್ನತವಾದ ಹುದ್ದೆಗಳಲ್ಲಿ ಇದ್ದಾರೆ. ಇದು ನಮಗೆ ತುಂಬಾ ಸಂತೋಷದ ವಿಚಾರ, ಸಂಸ್ಥೆಯ ಬೆಳ್ಳಿಹಬ್ಬವನ್ನು ಅರ್ಥಪೂರ್ಣ ಕಾರ್‍ಯಕ್ರಮವಾಗಿ ರೂಪಿಸುವ ನಿಟ್ಟಿನಲ್ಲಿ ದ. 26 ರಂದು ಬೆಳಿಗ್ಗೆ ಸವಣೂರು ಬಸದಿ ವಠಾರದಿಂದ ಮುಖ್ಯರಸ್ತೆಯಾಗಿ ಸಂಸ್ಥೆಯ ವಠಾರಕ್ಕೆ ಅದ್ದೂರಿಯಾದ ಮೆರವಣಿಗೆಯನ್ನು ಆಯೋಜಿಸಲಿವೆ.

Ad Widget

Ad Widget <> Ad Widget

ಬಳಿಕ ಸಭಾ ಕಾರ್‍ಯಕ್ರಮ, ಸಾಂಸ್ಕೃತಿಕ ವೈವಿಧ್ಯಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಿವೆ ಎಂದು ಹೇಳಿದರು.

ವೈವಿಧ್ಯಮಯ 40 ಸ್ಟಾಲ್‌ಗಳು: ರಜತ ಸಂಭ್ರಮದ ನಿಟ್ಟಿನಲ್ಲಿ ನಾವು ಸಂಸ್ಥೆಯ ಅವರಣದಲ್ಲಿ 40 ಬಗೆಯ ವಿವಿಧ ಸ್ಟಾಲ್‌ಗಳನ್ನು ಹಾಕಲಿವೆ. ಈ ಸ್ಟಾಲ್‌ನಲ್ಲಿ ಜಿಲ್ಲೆಯ ವಿವಿಧ ಕಡೆಯಿಂದ ಅನೇಕ ಬಗೆಯ ವಸ್ತುಗಳ ಮಾರಾಟ, ಪ್ರದರ್ಶನ ಇರಲಿದೆ ಎಂದು ಸೀತಾರಾಮ ರೈ ತಿಳಿಸಿದರು.

Ad Widget

Ad Widget

ಮಾದರಿ ಕಾರ್‍ಯಕ್ರಮ ಆಗಬೇಕು-ಬಾಲ್ಯೊಟ್ಟು: `ರಜತರಶ್ಮಿ’ ಕಾರ್‍ಯಕ್ರಮದ ಗೌರವಾಧ್ಯಕ್ಷ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಮಾತನಾಡಿ ಕಾರ್‍ಯಕ್ರಮ ಸಂಘಟಿಸುವುದರಲ್ಲಿ ಸೀತಾರಾಮ ರೈ ಅವರು ಬಹಳಷ್ಟು ಹೆಸರನ್ನು ಪಡೆದಿದ್ದಾರೆ, ವಿದ್ಯಾರಶ್ಮಿ ವಿದ್ಯಾಲಯ ಮತ್ತು ಆದರ್ಶ ವಿವಿಧೋzಶ ಸಹಕಾರ ಸಂಸ್ಥೆಗಳನ್ನು ಸ್ಥಾಪಿಸಿರುವ ಸೀತಾರಾಮ ರೈ ಅವರನ್ನು ವಿದ್ಯಾರಶ್ಮಿ ಸಂಸ್ಥೆಯ ರಜತ ಸಂಭ್ರಮ ಕಾರ್‍ಯಕ್ರಮದಲ್ಲಿ ಸವಣೂರು ಬಸದಿ ವಠಾರದಿಂದ ವಿದ್ಯಾರಶ್ಮಿ ವಿದ್ಯಾಲಯದ ತನಕ ರಥದ ಮೂಲಕ ವೈಭವಯುತವಾದ ಮೆರವಣಿಗೆಯಲ್ಲಿ ಕರೆತರಲಾಗುವುದು, ಮೆರವಣಿಗೆಯನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಗುವುದು.

ಕಲ್ಲಡ್ಕಗೊಂಬೆಗಳ ಕುಣಿತದೊಂದಿಗೆ ಮೆರವಣಿಗೆಯ ಮೆರಗು ಹೆಚ್ಚಲಿದೆ ಎಂದರು. ಸೀತಾರಾಮ ರೈ ಓರ್ವ ಸಾಧಕರು, ಅವರ ನೇತೃತೃದಲ್ಲಿ ನಡೆಯುವ ಸಂಸ್ಥೆಯ ಬೆಳ್ಳಿಹಬ್ಬ ಮಾದರಿ ಕಾರ್‍ಯಕ್ರಮವಾಗಬೇಕು ಎಂದು ಬಾಲ್ಯೊಟ್ಟು ಹೇಳಿದರು.

ನ್ಯಾಯವಾದಿ ಎನ್.ಜಯಪ್ರಕಾಶ್ ರೈ ಸುಳ್ಯ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಪ್ರಮುಖರಾದ ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯ, ಸುದರ್ಶನ್ ನಾಕ್ ಕಂಪ, ಕುಸುಮಾ ಶೆಟ್ಟಿ ಕೆರೆಕ್ಕೋಡಿ, ಸುರೇಶ್ ರೈ ಸೂಡಿಮುಳ್ಳು, ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ಟ್ರಸ್ಟಿಗಳಾದ ಎನ್.ಸುಂದರ ರೈ ಸವಣೂರು, ರಶ್ಮಿ ಅಶ್ವಿನ್ ಶೆಟ್ಟಿ ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ರಾಜಲಕ್ಷ್ಮಿ ಎಸ್ ರೈ, ಸಂಸ್ಥೆಯ ರಕ್ಷಕ-ಶಿಕ್ಷಕ ಅಧ್ಯಕ್ಷ ಡಾ. ಜೀವನ್ ಪ್ರಕಾಶ್ ರೈ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಸ್ವಾಗತಿಸಿ, ಉಪನ್ಯಾಸಕಿ ಕಸ್ತೂರಿ ವಂದಿಸಿದರು. ಶಿಕ್ಷಕಿ ಚೇತನಾ ಕಾರ್‍ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರತಿಭಾ ಸ್ಮರಣ ಸಂಚಿಕೆ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಜಿ.ಪಂ, ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಸವಣೂರು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಸವಣೂರು ಬೊಳ್ಳಿಬೊಲ್ಪು ತುಳುಕೂಟದ ಅಧ್ಯಕ್ಷ ಸತೀಶ್ ಬಲ್ಯಾಯ ಕನ್ನಡಕುಮೇರು, ಸವಣೂರು ಗ್ರಾ.ಪಂ, ಮಾಜಿ ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಂಗೀತ ಪ್ರತಿಭೆ ಅಖಿಲಾ ನೆಕ್ರಾಜೆ, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ರಜತ ರಶ್ಮಿ ಊರಿನ ಹಬ್ಬ
ವಿದ್ಯಾರಶ್ಮಿ ವಿದ್ಯಾಲಯದ ರಜತ ಸಂಭ್ರಮದ ಬೆಳ್ಳಿಹಬ್ಬ `ರಜತ ರಶ್ಮಿ’ ದ. 26 ರಂದು ದಿನಪೂರ್ತಿ ಅದ್ದೂರಿಯಾಗಿ ನಡೆಯಲಿದೆ. ಈ ಸುಂದರವಾದ ಕಾರ್‍ಯಕ್ರಮ ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಊರ-ಪರವೂರ ಹಿತೈಷಿಗಳ ಪೂರ್ಣ ಸಹಕಾರ ಅಗತ್ಯ ಇದೆ. ರಜತ ರಶ್ಮಿ ಕಾರ್‍ಯಕ್ರಮ ಊರಿನ ಹಬ್ಬದಂತೆ ಆಗಲಿದೆ.
-ಸವಣೂರು ಸೀತಾರಾಮ ರೈ, ಸಂಚಾಲಕರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ಸವಣೂರು

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!