Connect with us

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on

Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Click to comment

Leave a Reply

ಮಂಗಳೂರು

Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!

Published

on

Ad Widget

Ad Widget

Ad Widget

Ad Widget

ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget alt="Ad Widget"/>

Ad Widget

ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್‌ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್‌ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.

ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್‌ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.

Ad Widget

Ad Widget

ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.

ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್‌ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.

ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್‌ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.

ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಟೀ ಸ್ಟಾಲ್‌ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget

Ad Widget <> Ad Widget

ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Ad Widget

Ad Widget

ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್‌ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!