Connect with us

ಶಿಕ್ಷಣ

Vivekanand-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಭಾರತವು ವಿಶ್ವದಲ್ಲಿಯೇ ಐಇಇಇ ಯ ಅತ್ಯಂತ ವೇಗವಾಗಿ ಬೆಳೆಯುವ ವಿಭಾಗವಾಗಿದ್ದು, ವೃತ್ತಿಪರ ಸಂಪರ್ಕ ಜಾಲವನ್ನು ವಿಸ್ತರಿಸಿಕೊಳ್ಳುವ ದೃಷ್ಟಿಯಿಂದ ಒಂದಲ್ಲ ಒಂದು ರೀತಿಯಲ್ಲಿ ಇದರ ಭಾಗವಾಗುವುದು ಮಹತ್ವದ ವಿಚಾರ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ನವಕಾಂತ ಭಟ್ ಹೇಳಿದರು.‌

Ad Widget

Ad Widget

Ad Widget

Ad Widget

ಪುತ್ತೂರು: ಭಾರತವು ವಿಶ್ವದಲ್ಲಿಯೇ ಐಇಇಇ ಯ ಅತ್ಯಂತ ವೇಗವಾಗಿ ಬೆಳೆಯುವ ವಿಭಾಗವಾಗಿದ್ದು, ವೃತ್ತಿಪರ ಸಂಪರ್ಕ ಜಾಲವನ್ನು ವಿಸ್ತರಿಸಿಕೊಳ್ಳುವ ದೃಷ್ಟಿಯಿಂದ ಒಂದಲ್ಲ ಒಂದು ರೀತಿಯಲ್ಲಿ ಇದರ ಭಾಗವಾಗುವುದು ಮಹತ್ವದ ವಿಚಾರ ಎಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ನವಕಾಂತ ಭಟ್ ಹೇಳಿದರು.‌

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ಕ್ಕೆ ಚಾಲನೆ ನೀಡಿ ಮಾತಾಡಿದರು. ಇದು ಭವಿಷ್ಯದ ತಂತ್ರಜ್ಞಾನ ನಿರೂಪಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದ್ದು, ತಂತ್ರಜ್ಞರು ಇದರ ಭಾಗವಾಗುವುದರಿಂದ ವಿಶ್ವದಾದ್ಯಂತ ಇರುವ ತಂತ್ರಜ್ಞಾನ ಕ್ಷೇತ್ರದ ಪರಿಣತರೊಂದಿಗೆ ಸಂಪರ್ಕ ಬೆಳೆಸಲು, ಅಗತ್ಯವಾದ ತಾಂತ್ರಿಕ ಮಾಹಿತಿಯನ್ನು ಪಡೆಯಲು, ತಮ್ಮ ವೃತ್ತಿ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

Ad Widget

Ad Widget <> Ad Widget

ಗೌರವ ಅತಿಥಿಗಳಾಗಿದ್ದ ಟಿಸಿಎಸ್ ಸಂಸ್ಥೆಯ ಹಿರಿಯ ವಿಜ್ಞಾನಿ ಹಾಗೂ ಐಇಇಇ ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಮಾತನಾಡಿ ತಾಂತ್ರಿಕ ಸಮುದಾಯಗಳ ನಿರ್ಮಾಣ, ಸಮ್ಮೇಳನಗಳು ಮತ್ತು ಮಾನದಂಡಗಳಿಂದ ಐಇಇಇ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ ಎಂದರು. ಇದರ ಬೆಂಗಳೂರು ವಿಭಾಗಕ್ಕೆ 50 ವರ್ಷಗಳ ಸಂಭ್ರಮ ಮತ್ತು ಮಂಗಳೂರು ಉಪವಿಭಾಗಕ್ಕೆ 10ರ ಸಡಗರ ಹಾಗಾಗಿ ಈ ಸಮ್ಮೇಳನವು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ ಎಂದರು. ೫೦ ವರ್ಷಗಳ ಸಂಭ್ರಮದಲ್ಲಿ ಮಿಶನ್-31 ಎನ್ನುವ ಯೋಜನೆಯನ್ನು ರೂಪಿಸಲಾಗಿದ್ದು ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಐಇಇಇ ಯ ಭಾಗವಾಗಿಸುವುದು ಇದರ ಉದ್ದೇಶ ಎಂದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಇದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪಯಣದಲ್ಲಿ ಮಹತ್ವದ ಕ್ಷಣವಾಗಿದೆ. ನಾವೀನ್ಯತೆಗಳು ಹೊಸ ದಾರಿಗಳನ್ನು ಕಂಡುಕೊಳ್ಳುವ ಪರಿಕಲ್ಪನೆ ಇಲ್ಲಿ ಮೂರ್ತರೂಪ ಪಡೆಯುತ್ತಿದೆ ಎಂದರು. ತರಗತಿಯ ಆಚೆಗೂ ಕನಸುಗಳನ್ನು ವಿಸ್ತರಿಸಿ, ಪರಿಧಿಯನ್ನು ದಾಟಿ ಹೊಸತನವನ್ನು ಕಂಡುಕೊಳ್ಳಿ ಮತ್ತು ಸಾಮಾಜಿಕ ಪರಿವರ್ತನೆಯನ್ನು ತರುವ ರೀತಿಯಲ್ಲಿ ಸಮಸ್ಯೆಗಳಿಗೆ ಪರಿಹಾರವನ್ನು ರೂಪಿಸಿ ಯಶಸ್ಸನ್ನು ಸಾಧಿಸಿ ಎಂದರು.

Ad Widget

Ad Widget

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಭೆ, ಕಾರ್ಯಕ್ರಮ ಸಂಯೋಜಕಿಯರಾದ ಡಾ.ಜೀವಿತಾ.ಬಿ.ಕೆ., ಡಾ.ರಜನಿ ರೈ.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಮಂಡಿಸುವ ಪ್ರಬಂಧಗಳ ಸಾರಾಂಶದ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರವೀಂದ್ರ.ಪಿ, ಸಮಿತಿಯ ಸದಸ್ಯರು, ತೀರ್ಪುಗಾರರು, ಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸ್ವಾಗತಿಸಿದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್.ಪಿ.ಎಸ್ ಪ್ರಸ್ತಾವನೆಗೈದರು. ಎಐಎಂಎಲ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ಹರ್ಷಿತಾ.ಕೆ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಸ್ವಪ್ನಲಕ್ಷ್ಮಿ ಕೆ ವಂದಿಸಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ನೀಮಾ.ಎಚ್ ಕಾರ್ಯಕ್ರಮ ನಿರ್ವಹಿಸಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading