ವರದಿಗಳು
ಸೆಲ್ ಝೋನ್ ದೀಪಾವಳಿ ‘ಫೆಸ್ಟಿವ್ ಧಮಾಕ’ – ಬಹುಮಾನ ಆಫರ್ ಗಳ ಸುರಿಮಳೆ | ಮೊಬೈಲ್ ಜತೆ TVS ಜುಪಿಟರ್ ಗೆಲ್ಲುವ ಅವಕಾಶ
ಪುತ್ತೂರು, ಅ.30: ಕಳೆದ 15 ವರ್ಷಗಳಿಂದ ಪುತ್ತೂರಿನ ಜನರ ಮನಗೆದ್ದಿರುವ ಪ್ರತಿಷ್ಟಿತ ಮೊಬೈಲ್ ಮಳಿಗೆ ಸೆಲ್‌ಝೋನ್‌ನಲ್ಲಿ ದೀಪಾವಳಿ ಪ್ರಯುಕ್ತ ಬಿಗ್ ಸೇಲ್ ‘ಸೆಲ್‌ಝೋನ್ ಫೆಸ್ಟೀವ್ ಧಮಕಾ’ ಅ.30 ರಂದು ಉದ್ಘಾಟನೆಗೊಂಡಿತು.ಮೊಬೈಲ್ ಜತೆಗೆ TVS ಜುಪಿಟರ್ ಗೆಲ್ಲುವ ಅವಕಾಶ ಈ ದೀಪಾವಳಿ ಧಮಾಕದ ವಿಶೇಷ.
ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ಸುಬ್ರಹ್ಮಣ್ಯ ನಟ್ಟೋಜ ಫೆಸ್ಟೀವ್ ಧಮಕಾವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.
ಸೆಲ್‌ಝೋನ್ ಮೊಬೈಲ್ ಮಳಿಗೆ ಪುತ್ತೂರಿನ ಗ್ರಾಹಕರ ಅತ್ಯಂತ ಮೆಚ್ಚಿನ ಮೊಬೈಲ್ ಖರೀದಿ ತಾಣ . ಇದು ಪುತ್ತೂರಿನಲ್ಲಿ ಮೊಬೈಲ್ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಈ ಕ್ಷೇತ್ರದಲ್ಲಿ ಪುತ್ತೂರಿನಲ್ಲಿ ಅನೇಕ ಸಂಸ್ಥೆಗಳು ಬಂದರೂ ಸೆಲ್ ಜೋನ್ ಮಾತ್ರ ಗುಣಮಟ್ಟದ ಉತ್ತಮ ಸೇವೆಯನ್ನು ನೀಡುತ್ತಾ ಜನಮನ ಗೆದ್ದಿದೆ ಎಂದು ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದರು.
ಈ ಸ್ಪರ್ಧಾತ್ಮಕ ಯುಗದಲ್ಲಿ ಮೊಬೈಲ್ ಪ್ರತಿಯೊಬ್ಬರ ಜೀವನದ ಭಾಗವಾಗಿದೆ. ಭಾರತೀಯರ ದೈನಂದಿನ ಚಟುವಟಿಕೆಯಲ್ಲಿ ಮೊಬೈಲ್ ಮಹತ್ತರ ಬದಲಾವಣೆಯನ್ನು ತಂದಿದೆ.
ಮೊಬೈಲ್ ಬಳಕೆಯಲ್ಲಿ ವಿಶ್ವದಲ್ಲಿ ಭಾರಯ ದ್ವಿತೀಯ ಸ್ಥಾನ ಪಡೆದಿದೆ. ಅದು ಸಾಧ್ಯವಾಗಿದ್ದು ಈ ಸಂಸ್ಥೆಯ ಮಾಲಕರಂತಹಾ ಸಾಹಸಿಗರ ಪ್ರಯತ್ನದಿಂದ. ಇವರ ನಿಷ್ಕಳಂಕ ಸೇವೆಯಿಂದ ಸಂಸ್ಥೆಯೂವ ಪುತ್ತೂರಿನಲ್ಲಿ ಮೇಲ್ಪಂಕ್ತಿ ಪಡೆದಿದೆ. ಮೊಬೈಲ್ ಸೇವೆಯಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಿ ಪುತ್ತೂರಿನಲ್ಲಿ ಮೆಗಾ ಶೋರೂಂ ಪ್ರಾರಂಭಿಸುವಂತಾಗಲಿ. ಮೊಬೈಲ್ ವಿತರಣೆಯಲ್ಲಿ ಕರ್ನಾಟಕದಲ್ಲಿಯೇ ಪ್ರಥಮ ಸ್ಥಾನ ಪಡೆಯಲಿ ಎಂದು ಅವರುಬ ಆಶಿಸಿದರು.

ಇದೇ ಸಂದರ್ಭ ಕೋಟೆಕಲ್ ಆರ್ಯುವೇದಿಕ್‌ನ ಡಾ.ಪ್ರದೀಪ್ ಕುಮಾರ್, ಸ್ಯಾಮ್‌ಸಾಂಗ್‌ನ ವಿತರಕ ಪ್ರಶಾಂತ್ ಶೆಣೈ, ಪ್ರಾರ್ಥನಾ ಸ್ವೀಟ್ಸ್‌ನ ಭಾಸ್ಕರ್ ರೈ, ಸಂಜೀವ ಶೆಟ್ಟಿಯ ಜವುಳಿ ಮಳಿಗೆಯ ಕೀರ್ತನ್ ಶೆಟ್ಟಿ, ಜಯಪ್ರಕಾಶ್ ಅಮೈ, ಜಗದೀಶ್ ಅಮೈ, ಹೇಮಂತ್ ಹಾಗೂ ಸುಶಾಂತ್ ಮೊದಲಾದವರು ಉಪಸ್ಥಿತರಿದ್ದರು. ಮಾಲಕ ಪ್ರವೀಣ್ ಅಮೈ ಸ್ವಾಗತಿಸಿ, ವಂದಿಸಿದರು.

ಏನಿದು ಫೆಸ್ಟಿವ್ ಧಮಾಕ!!?
ಈ ಬಾರಿಯ ದೀಪಾವಳಿ ಹಬ್ಬದ ಅಂಗವಾಗಿ ಸೆಲ್ ಝೊನ್ ಅದ್ದೂರಿ, ಅತ್ಯದ್ಭುತ ಕೊಡುಗೆಗಳನ್ನು ನೀಡುತ್ತಿದೆ. ಗ್ರಾಹಕರು ತನ್ನ ನೆಚ್ಚಿನ ಮೊಬೈಲ್ ಖರೀದಿಸಲು ಅಫರ್ ಹಾಗೂ ಬಹುಮಾನಗಳ ಸುರಿಮಳೆ ಹರಿಸುತ್ತಿದೆ. ಇಲ್ಲಿ ಪ್ರತಿ ಐದು ಸಾವಿರದ ಖರೀದಿಗೆ ಗಿಫ್ಟ್‌ಕೂಪನ್ ನೀಡಲಾಗುತ್ತಿದ್ದು ವಿಜೇತರಿಗೆ ಬಂಪರ್ ಬಹುಮಾನವಾಗಿ ಟಿವಿಎಸ್ ಜ್ಯುಪಿಟರ್ ನೀಡಲಾಗುವುದು.

ಮೊಬೈಲ್ ಖರೀದಿಗೆ ಸುಲಭ ಸಾಲ ಸೌಲಭ್ಯ, ವಿಶೇಷ ಇಎಂಐ ಸೌಲಭ್ಯ, ಶೂನ್ಯ ಬಡ್ಡಿದರ, ಶೂನ್ಯ ಡೌನ್ ಪೇಮೆಂಟ್, ವಿಶ್ವದರ್ಜೆಯ 5g ಸ್ಮಾರ್ಟ್‌ಫೋನ್‌ಗಳಿಗೆ ಅಪ್ಗ್ರೇಡ್ ಆಗಿ ಕ್ಯಾಶ್‌ಬ್ಯಾಕ್, ನಿಮ್ಮ ಹಳೆಯ ಮೊಬೈಲ್ ಫೋನ್‌ನ್ನು ಅತ್ಯಾಧುನಿಕ 5g ಸ್ಮಾರ್ಟ್‌ಫೋನ್‌ನೊಂದಿಗೆ ಎಕ್ಸ್‌ಚೇಂಜ್ ಮಾಡುವ ಅಪೂರ್ವ ಅವಕಾಶ, ಸ್ಮಾಟ್ ವಾಚ್‌ಗಳು, ನೆಕ್‌ಬ್ಯಾಂಡ್, ಪವರ್‌ಬ್ಯಾಂಕ್ ಹಾಗೂ ಇಯರ್‌ಬಡ್ಸ್‌ಗಳ ಮೇಲೆ ಶೇ.50 ರಷ್ಟ ದರ ಕಡಿತ ದೊರೆಯಲಿದೆ.

ಮೊಬೈಲ್ ಆಕ್ಸೆಸರೀಸ್‌ಗಳಿಗೂ ವಿಶೇಷ ದರ ಕಡಿತ, ಪ್ರತಿ ಖರೀದಿಗೂ ಉಡುಗೊರೆಗಳನ್ನು ಪಡೆಯುವ ವಿಶೇಷ ಅವಕಾಶವನ್ನು ನೀಡಲಾಗುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
ಅಂತರ ರಾಜ್ಯ
Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.
ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.
ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಗಣ್ಯರಿಂದ ಸಂತಾಪ
ನಾನಾ ಪಾಟೇಕರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.
ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.
ಅಂತರ ರಾಜ್ಯ
CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
-
Uncategorized13 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು10 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized11 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ12 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ11 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಬಿಗ್ ನ್ಯೂಸ್7 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ11 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್12 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















