Uncategorized
ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರು, ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ (ಕಟೀಲ್) ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯ ಸಮೀಪದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಸಂಭವಿಸಿತ್ತು. ಘಟನೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು’ ಎಂದು ಹೇಳಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ. ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರು ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು’ ಎಂದು ಅವರು ತಿಳಿಸಿದ್ದಾರೆ.
‘ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ?’ ಎಂದು ಪ್ರಶ್ನೆ ಮಾಡಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ?’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
‘ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರೂವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು. ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು. ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿ ಕರ್ತವ್ಯವಾಗಿದೆ’ ಎಂದು ವಿರೋಧ ಪಕ್ಷದ ನಾಯಕ ಕಿವಿಮಾತು ಹೇಳಿದ್ದಾರೆ.
‘ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್‌ಎಸ್‌ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ’ ಎಂದು ಅವರು ಹೇಳಿದ್ದಾರೆ.
Uncategorized
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.
ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.
ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Uncategorized
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.
ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Uncategorized
Maharashtra-ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ಜಾಲ: ಗರ್ಭಿಣಿಯ ವೇಷದಲ್ಲಿ ಬಾಗಲಕೋಟೆಯ ಮಹಿಳಾ ಅಧಿಕಾರಿಗಳ ರಹಸ್ಯ ಕಾರ್ಯಾಚರಣೆ; ಇಬ್ಬರ ಬಂಧನ – ಸ್ಕ್ಯಾನಿಂಗ್ ಯಂತ್ರ ಜಪ್ತಿ
ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭ್ರೂಣ ಲಿಂಗ ಪತ್ತೆ ನಡೆಸಿ, ಬಳಿಕ ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಬಾಗಲಕೋಟೆ ಜಿಲ್ಲೆಯ ಮಹಿಳಾ ಅಧಿಕಾರಿಗಳ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಅ.5ರಂದು ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಜಪ್ತಿ ಮಾಡಲಾಗಿದೆ.
ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಗರ್ಭಿಣಿಯ ವೇಷದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶೋಭಾ ನಾದಿನಿ ಗರ್ಭಿಣಿಯ ಸಂಬಂಧಿಯಂತೆ ಹಾಗೂ ಡಿಎಚ್‌ಒ ಡಾ. ಸುವರ್ಣ ಕುಲಕರ್ಣಿ ಗರ್ಭಿಣಿಯ ತಾಯಿಯ ವೇಷದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಲಿಂಗ ಪತ್ತೆ, ಕರ್ನಾಟಕದಲ್ಲಿ ಹತ್ಯೆ ಆರೋಪ
ಮಹಾರಾಷ್ಟ್ರದ ಜತ್ತ ತಾಲೂಕಿನ ಜಾಡರ ಬಬಲಾದ ಗ್ರಾಮದಲ್ಲಿ ಭ್ರೂಣದ ಲಿಂಗ ಪತ್ತೆ ಮಾಡಿ, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಈ ಜಾಲದ ಕುರಿತು ತನಿಖೆ ನಡೆಸಿದಾಗ ಮಹಾಲಿಂಗಪುರದಲ್ಲಿ ಈ ಹಿಂದೆ ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕವಿತಾ ಬಾಡನವರ ಅವರ ಹೆಸರು ಕೂಡ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಗಳ ತಂಡ ಗರ್ಭಿಣಿಯರಂತೆ ವೇಷ ಧರಿಸಿ ಕಾರ್ಯಾಚರಣೆಗೆ ಇಳಿದಿತ್ತು.
ರಹಸ್ಯ ಕಾರ್ಯಾಚರಣೆ ನಡೆದದ್ದು ಹೇಗೆ?
ಅ.5ರ ರಾತ್ರಿ ಜಾಡರ ಬಬಲಾದ ಗ್ರಾಮಕ್ಕೆ ತೆರಳಿದ ಅಧಿಕಾರಿಗಳು, ಭ್ರೂಣದ ಲಿಂಗ ಪತ್ತೆಗಾಗಿ ಮಧ್ಯವರ್ತಿ ನಿಖಿಲ್ ತೇಲಿ ಅವರನ್ನು ಸಂಪರ್ಕಿಸಿದರು. ಆತ ಅಧಿಕಾರಿಗಳನ್ನು ತೋಟದ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಬಳಿಕ ನಿಖಿಲ್‌ನ ತಾಯಿ ದಾನಕ್ಕ ತೇಲಿ ಅವರು ಸ್ಕ್ಯಾನಿಂಗ್ ಯಂತ್ರವು ಕರ್ಜಗಿ ಗ್ರಾಮದ ಕವಿತಾ ಗೋಡೆಕರ ಅವರ ಮನೆಯಲ್ಲಿದೆ ಎಂದು ತಿಳಿಸಿದ್ದಾರೆ.
ಅಧಿಕಾರಿಗಳು ಕವಿತಾ ಅವರ ಮನೆಗೆ ತೆರಳಿದಾಗ ಸ್ಕ್ಯಾನಿಂಗ್‌ಗೆ ಯಂತ್ರ ಸಿದ್ಧಪಡಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಹಾಗೂ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈ ಜಾಲದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ಅವರನ್ನು ಬಂಧಿಸಲು ಅಧಿಕಾರಿಗಳು ಮುಂದಾದಾಗ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ತಹಸೀಲ್ದಾರ್ ಗಿರೀಶ ಸ್ವಾದಿ ಹಾಗೂ ಆರೋಗ್ಯ ಇಲಾಖೆಯ ಮನು ಕೂಡ ಭಾಗವಹಿಸಿದ್ದರು.
ಇಬ್ಬರ ಬಂಧನ; ಸ್ಕ್ಯಾನಿಂಗ್ ಯಂತ್ರ ಜಪ್ತಿ
ಭ್ರೂಣ ಲಿಂಗ ಪತ್ತೆ ಆರೋಪದಡಿ ನಿಖಿಲ್ ತೇಲಿ, ದಾನಕ್ಕ ತೇಲಿ, ಕವಿತಾ ಗೋಡೆಕರ ಹಾಗೂ ನಕಲಿ ವೈದ್ಯ ಸಂಜಯ್ ವಾಘ್ಮೋಡೆ ವಿರುದ್ಧ ಮಹಾರಾಷ್ಟ್ರದ ಉಮದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಪೈಕಿ ನಿಖಿಲ್ ತೇಲಿ ಹಾಗೂ ದಾನಕ್ಕ ತೇಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಯ್ ವಾಘ್ಮೋಡೆ ಪರಾರಿಯಾಗಿದ್ದಾನೆ. ಭ್ರೂಣ ಲಿಂಗ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಪಿಸಿಪಿಎನ್‌ಡಿಟಿ ಕಾಯ್ದೆಯಡಿ ವಶಪಡಿಸಿಕೊಂಡು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಹಿಂದಿನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆರೋಪ
ಮಹಾಲಿಂಗಪುರದಲ್ಲಿ 2020 ಹಾಗೂ 2024ರಲ್ಲಿ ಕವಿತಾ ಬಾಡನವರ ವಿರುದ್ಧ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಆರೋಪ ಕೇಳಿಬಂದಿತ್ತು. ಈ ಪೈಕಿ ಗರ್ಭಪಾತದ ವೇಳೆ ಮಹಾರಾಷ್ಟ್ರ ಮೂಲದ ಗರ್ಭಿಣಿಯೊಬ್ಬರು ಮೃತಪಟ್ಟ ಪ್ರಕರಣದಲ್ಲೂ ಕವಿತಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರ ವಿರುದ್ಧ ಮತ್ತೆ ಇದೇ ರೀತಿಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ.
ಈ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಆರೋಗ್ಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕವಿತಾ ಅವರಿಗೆ ಪೊಲೀಸರು ನೋಟಿಸ್ ಕೂಡ ಜಾರಿ ಮಾಡಿದ್ದರು.
ಮಹಿಳಾ ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ವಿಜಯಪುರ ಹಾಗೂ ಸಾಂಗ್ಲಿ ಪೊಲೀಸರಿಗೆ ಕಾರ್ಯಾಚರಣೆಯ ಮಾಹಿತಿ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಬಿಗ್ ನ್ಯೂಸ್23 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized24 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ23 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized23 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ10 hours agoಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು12 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ10 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ11 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















