ರಾಜಕೀಯ
Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.
ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.
ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.
ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ನಿಧನ ವಾರ್ತೆ10 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ9 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ9 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ9 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ10 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ9 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ9 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
-
ಅಂತರ ರಾಜ್ಯ9 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?















