ಸ್ಥಳೀಯ
Kumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅಕ್ಟೋಬರ್ 18ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ–ಕುಮಾರ ಪರ್ವತ–ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅನುಮತಿ ನೀಡಲಾಗಿದೆ.
ಚಾರಣಕ್ಕೆ ಆಗಮಿಸುವವರು ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಚಾರಣದ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಕಡ್ಡಾಯವಾಗಿದೆ.
ಚಾರಣಿಗರು ನಿಗದಿತ ಸಮಯಕ್ಕೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದಲ್ಲಿರುವ ಸಿಬ್ಬಂದಿಯೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಪ್ರಕೃತಿಯ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಚಾರಣದ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ಮೂಲಕ ಕುಮಾರ ಪರ್ವತ ಚಾರಣ ಆರಂಭಿಸಲು ಈವರೆಗೆ ದಿನಾಂಕ ನಿಗದಿಯಾಗಿಲ್ಲ.
ಅಪರಾಧ
High Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.
ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ಭರತ್ ಕುಮ್ಡೇಲ್, ಪ್ರದೀಪ್, ರಂಜಿತ್, ಶಿವಪ್ರಸಾದ್, ಅಭಿನ್ ರೈ, ಸಾಹಿತ್, ಸಚಿನ್ ಮತ್ತು ತೇಜಾಕ್ಷ ಎಂಬ ಎಂಟು ಆರೋಪಿಗಳು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಕಲಂ 483ರ ಅಡಿಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಇತ್ತೀಚೆಗೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.
ಆದರೆ, ಆರೋಪಿಗಳು ಗೂಂಡಾ ಕಾಯ್ದೆಯಡಿ ಬಂಧನದಲ್ಲಿಯೇ ಮುಂದುವರಿಯಬೇಕಿದ್ದ ಕಾರಣ, ಜಾಮೀನು ಮಂಜೂರಾದರೂ ತಕ್ಷಣ ಜೈಲಿನಿಂದ ಬಿಡುಗಡೆಯಾಗುವಂತಿರಲಿಲ್ಲ. ಈ ನಡುವೆ, ಮೈಸೂರು ನ್ಯಾಯಾಲಯದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರದ ಪರವಾಗಿ ಅಡ್ವಕೇಟ್ ಜನರಲ್ ಮೂಲಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕ್ರಿಮಿನಲ್ ಪಿಟಿಷನ್ ಸಂಖ್ಯೆ 15386/2026ರಲ್ಲಿ ಅಕ್ಟೋಬರ್ 15ರಂದು ಎಂಟು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ, ಮೊದಲರಿಂದ ಎಂಟನೇ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಸರಕಾರಿ ಅಭಿಯೋಜಕರು ಮಂಡಿಸಿದ ವಾದಗಳು ಹಾಗೂ ಪ್ರಮಾಣಪತ್ರದೊಂದಿಗೆ ಸಲ್ಲಿಸಲಾದ ಅರ್ಜಿಯಲ್ಲಿನ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ.
ನಿಧನ ವಾರ್ತೆ
Puttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪುತ್ತೂರು: ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರು ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಶಿಕ್ಷಣ
Air Force Day-ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ
ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಪುತ್ತೂರು: ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ಯರದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುಡಾ ಅಧ್ಯಕ್ಷ ಅಮಲಾ ರಾಮಚಂದ್ರ ಮಾತನಾಡಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಜೀವನದಲ್ಲಿ ಸಿಗುವ ಅಪೂರ್ವ ಕ್ಷಣ. ಸಾಹಸ, ಧೈರ್ಯ, ದೇಶಸೇವೆಗೆ ವಾಯುಸೇನೆ ಉತ್ತಮ ಆಯ್ಕೆ. ಆಧುನಿಕ ಕಾಲದ ಯುದ್ಧದಲ್ಲಿ ವಾಯುಸೇನೆಯ ಕೊಡುಗೆ ಅತ್ಯಂತ ಮಹತ್ವದ್ದು ಎಂದರು.
ಶ್ರೀಪ್ರಕಾಶ್ ಕುಕ್ಕಾಜೆ ಪ್ರಧಾನ ಭಾಷಣಗೈದು ವಾಯುಪಡೆಯ ಬಗೆಗೆ ಹಾಗೂ ಸಶಸ್ತ್ರ ಪಡೆಗಳಲ್ಲಿನ ಉದ್ಯೋಗಾವಕಾಶಗಳ ಬಗೆಗೆ ಮಾಹಿತಿ ನೀಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮತ್ತು ಕರ್ನಲ್ ಡಿ.ಜಿ. ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ಸ್ಥಳೀಯ19 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ23 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು23 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ24 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ23 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?
-
ಅಂತರ ರಾಜ್ಯ19 hours agoSupreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!
-
ಶಿಕ್ಷಣ17 hours agoVidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ


















