Connect with us

ಅಪರಾಧ

Uppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.

Ad Widget

Ad Widget <> Ad Widget

ಮಿಥಿಲೇಶ್ ಅವರು ತಮ್ಮ ಅತ್ತೆ ಮಹಾದೇವಿ ಅವರೊಂದಿಗೆ ಪಡಿತರ ಚೀಟಿಯ ಕೆವೈಸಿಗಾಗಿ ಹೆಬ್ಬೆಟ್ಟು ನೀಡಲು ಬೈಕ್‌ನಲ್ಲಿ ಬಳಂಜದಿಂದ ಕೋನಾಜೆಗೆ ತೆರಳುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಹಲೇಜಿ ಎಂಬಲ್ಲಿ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಗಳು ಬೈಕ್‌ಗೆ ಅಡ್ಡಗಟ್ಟಿ ನಿಲ್ಲಿಸಿದ್ದಾರೆ ಎನ್ನಲಾಗಿದೆ.



Ad Widget

ಈ ವೇಳೆ ತನ್ನೀಶ್ ಹಾಗೂ ಇತರ ಇಬ್ಬರು ಕಾರಿನಿಂದ ಇಳಿದು, ಹಣದ ವಿಚಾರವಾಗಿ ಪ್ರಶ್ನಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅವರೊಂದಿಗೆ ಇದ್ದ ಮತ್ತೊಬ್ಬ ವ್ಯಕ್ತಿ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget

ಬಳಿಕ ಮಿಥಿಲೇಶ್ ಅವರ ಪ್ಯಾಂಟ್ ಕಿಸೆಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 3,000 ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಅಂಗಿಯ ಕಿಸೆಯಲ್ಲಿದ್ದ 5,200 ರೂ. ನಗದನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಪ್ರಶ್ನಿಸಿದ ಮಿಥಿಲೇಶ್ ಅವರ ಅತ್ತೆಯ ಕೈಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 2,000 ರೂ. ಮೌಲ್ಯದ ಮೊಬೈಲ್ ಫೋನ್‌ನ್ನೂ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 134/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಕಲಂ 126(2), 308(5) ಹಾಗೂ 3(5)ರ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Youth Congress-ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ , ರಕ್ಷಿತ್ ಶಿವರಾಂ ರವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣ ಫೇಸ್‌ಬುಕ್ , ವಾಟ್ಸಾಪ್ , ಇನ್‌ಸ್ಟಾಗ್ರಾಮ್ ಗಳಲ್ಲಿ ನಿರಂತರವಾಗಿ ಸುಳ್ಳು ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ದೂರು ನೀಡಲಾಗಿದೆ.

Ad Widget

Ad Widget <> Ad Widget

‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಫೇಸ್‌ಬುಕ್ ಪೇಜ್‌ ಹಾಗೂ ಇದೇ ಬಳಗದ ಹೆಸರಿನಲ್ಲಿರುವ ವಿವಿಧ ವಾಟ್ಸಾಪ್ ಗ್ರೂಪ್‌ಗಳು ಮತ್ತು ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ಗಳ ಮೂಲಕ, ಹಾಗೂ ಬ್ರೇಕಿಂಗ್ ನ್ಯೂಸ್ ವಾಟ್ಸಪ್ ಗ್ರೂಪ್ ಗಳಲ್ಲಿ ನಾವೂರು ಪ್ರಕರಣಕ್ಕೂ ಕಾಂಗ್ರೆಸ್ ನಾಯಕರಿಗೂ ಇಲ್ಲದ ಸಲ್ಲದ ಲಿಂಕ್ ಕಲ್ಪಿಸಿ, ಉದ್ದೇಶಪೂರ್ವಕ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.



Ad Widget

ಯಾವುದೇ ಸಾಕ್ಷಿ , ಆಧಾರಗಳಿಲ್ಲದೆ ಫೇಸ್‌ಬುಕ್, ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್‌ನಂತಹ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ನಿರಂತರವಾಗಿ ಸುಳ್ಳು ಪೋಸ್ಟ್ ಹರಡಲಾಗುತ್ತಿದೆ. ಇದು ಶಾಸಕ ಹರೀಶ್ ಪೂಂಜಾ ಅವರ ಅಭಿಮಾನಿ ಬಳಗದ ಹೆಸರಿನಲ್ಲಿ ನಡೆಯುತ್ತಿರುವ ಅಗ್ಗದ ಹಾಗೂ ಕೀಳು ಮಟ್ಟದ ರಾಜಕೀಯ.

Ad Widget

Ad Widget

ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಯತ್ನಿಸುತ್ತಿರುವ ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಎಲ್ಲ ಸೋಶಿಯಲ್ ಮೀಡಿಯಾ ಅಕೌಂಟ್‌ಗಳನ್ನು ತಕ್ಷಣವೇ ನಿರ್ಬಂಧಿಸಬೇಕು ಜತೆಗೆ, ಇವುಗಳನ್ನು ನಿರ್ವಹಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕವು ಪೊಲೀಸರನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ನವೀನ್ ಕುಮಾರ್ ಗೌಡ , ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ , ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಣಿಯೂರು , ಅರುಣ್ ಪಿಂಟೊ ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Puttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

Published

on



Ad Widget

Ad Widget

Ad Widget

Ad Widget

ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 113/2022ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 447, 504, 506, 323 ಹಾಗೂ 354ರೊಂದಿಗೆ ಸೆಕ್ಷನ್ 34ರ ಅನ್ವಯ ಪ್ರಕರಣ ದಾಖಲಾಗಿತ್ತು.

Ad Widget

Ad Widget <> Ad Widget

ಅಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಎಚ್. ಅವರು ಪ್ರಕರಣದ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅರುಣ್ ಕುಮಾರ್, ವಿನಯ್ ಕುಮಾರ್ ಜಿ. ಹಾಗೂ ಸುಂದರ್ ಪಿ.ಎಂ. ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.



Ad Widget

ಪ್ರಕರಣದ ವಿಚಾರಣೆಯನ್ನು ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ವೈ.ಎಚ್. ಅವರು ನಡೆಸಿದರು. ವಿಚಾರಣೆ ವೇಳೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

Ad Widget

Ad Widget

ಮೊದಲ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ
ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಮೊದಲ ಆರೋಪಿ ಅರುಣ್ ಕುಮಾರ್‌ಗೆ ಆರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸೆಕ್ಷನ್ 354ರ ಅಡಿಯಲ್ಲಿ ಎರಡು ವರ್ಷಗಳ ಸರಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಜೈಲು
ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಮೂವರು ಆರೋಪಿಗಳಿಗೂ ತಲಾ ಒಂದು ವರ್ಷದ ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ಪ್ರತಿಯೊಬ್ಬರಿಗೂ ತಲಾ 5,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾ ದೇವಿ ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Mangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್‌ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ

Published

on



Ad Widget

Ad Widget

Ad Widget

Ad Widget

ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್‌ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು ಫಾದರ್ ಸಿಪ್ರಿಯನ್ ಪಿಂಟೋ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಪ್ರಾಪ್ತ ಬಾಲಕನಿಗೆ ದೀರ್ಘಕಾಲ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚರ್ಚ್‌ನ ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಆರೋಪಿಯನ್ನು ಫಾದರ್ ಸಿಪ್ರಿಯನ್ ಪಿಂಟೋ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಎಫ್‌ಐಆರ್‌ನಲ್ಲಿರುವ ಮಾಹಿತಿಯ ಪ್ರಕಾರ, ಪ್ರಾರ್ಥನೆಗಾಗಿ ನಿಯಮಿತವಾಗಿ ಚರ್ಚ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಆಮಿಷವೊಡ್ಡಿ, ಖಾಸಗಿ ಪ್ರಾರ್ಥನಾ ಕೊಠಡಿ ಹಾಗೂ ತಮ್ಮ ವಸತಿ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.



Ad Widget

2026ರ ಆಗಸ್ಟ್ 14ರಂದು ಸಂಜೆ ಪ್ರಾರ್ಥನೆಯ ಸಮಯದಲ್ಲಿಯೂ ಬಾಲಕನಿಗೆ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಇದರಿಂದ ಭಯಭೀತನಾದ ಬಾಲಕ ಈ ವಿಚಾರವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾನೆ. ಈ ವೇಳೆ ಇತರ ಕೆಲವು ಬಾಲಕರಿಗೂ ಇದೇ ರೀತಿಯ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

Ad Widget

Ad Widget

ಬಳಿಕ ಸಂತ್ರಸ್ತ ಬಾಲಕ ತನ್ನ ಕುಟುಂಬದ ಸದಸ್ಯರಿಗೆ ಘಟನೆಯ ಬಗ್ಗೆ ತಿಳಿಸಿದ್ದಾನೆ. ಪೋಷಕರು ಈ ವಿಚಾರವನ್ನು ಬಿಷಪ್ ಅವರ ಗಮನಕ್ಕೆ ತಂದಿದ್ದು, ಅವರ ಸಲಹೆಯಂತೆ ಪೊಲೀಸರನ್ನು ಸಂಪರ್ಕಿಸಿ ಅಧಿಕೃತ ದೂರು ನೀಡಿದ್ದಾರೆ. ಈ ಮಧ್ಯೆ ಸಮಾಲೋಚನೆ ಪ್ರಕ್ರಿಯೆಯಿಂದಾಗಿ ದೂರು ನೀಡುವುದು ವಿಳಂಬವಾಯಿತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೋಕ್ಸೋ ಕಾಯ್ದೆಯ ಮಾರ್ಗಸೂಚಿಗಳ ಪ್ರಕಾರ ಸಂತ್ರಸ್ತರು ಹಾಗೂ ದೂರುದಾರರ ಗುರುತನ್ನು ಗೌಪ್ಯವಾಗಿಡಲಾಗಿದೆ. ಪ್ರಕರಣದ ಕುರಿತು ಮಂಗಳೂರು ದಕ್ಷಿಣ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading