ಮೈಸೂರು
Mysuru-ಮೈಸೂರು ದಸರಾ ಕಂಬಳ ಸಂಪನ್ನ: ಫಲಿತಾಂಶ ಪ್ರಕಟ : ಪ್ರಥಮ ಬಹುಮಾನವಾಗಿ 16 ಗ್ರಾಂ ಚಿನ್ನ
ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ವಿಜಯ ದಶಮಿ ಜೋಡುಕರೆ ಕಂಬಳ’ ಸೋಮವಾರ ರಾತ್ರಿ ರೋಚಕ ಓಟಗಳೊಂದಿಗೆ ಸಂಪನ್ನಗೊಂಡಿತು. ಕೋಣಗಳನ್ನು ಓಡಿಸಲು ಸಮಯ ಮಿತಿ ನಿಗದಿಪಡಿಸಿದ್ದರೂ, ನಿಗದಿತ ಸಮಯಕ್ಕಿಂತ ಸುಮಾರು ಐದು ಗಂಟೆ ತಡವಾಗಿ ಕಂಬಳ ಮುಕ್ತಾಯಗೊಂಡಿತು.
ಮೈಸೂರು: ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ವಿಜಯ ದಶಮಿ ಜೋಡುಕರೆ ಕಂಬಳ’ ಸೋಮವಾರ ರಾತ್ರಿ ರೋಚಕ ಓಟಗಳೊಂದಿಗೆ ಸಂಪನ್ನಗೊಂಡಿತು.
ಕಂಬಳದ ಕ್ವಾರ್ಟರ್‌ಫೈನಲ್, ಸೆಮಿಫೈನಲ್ ಹಾಗೂ ಫೈನಲ್ ಹಂತದ ಸ್ಪರ್ಧೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಆಗಮಿಸಿದ್ದರು. ಕೋಣಗಳನ್ನು ಓಡಿಸಲು ಸಮಯ ಮಿತಿ ನಿಗದಿಪಡಿಸಿದ್ದರೂ, ನಿಗದಿತ ಸಮಯಕ್ಕಿಂತ ಸುಮಾರು ಐದು ಗಂಟೆ ತಡವಾಗಿ ಕಂಬಳ ಮುಕ್ತಾಯಗೊಂಡಿತು.
ಕಂಬಳದ ವಿವಿಧ ವಿಭಾಗಗಳಲ್ಲಿ ವಿಜೇತರಾದವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬಹುಮಾನ ವಿತರಿಸಿದರು. ಪ್ರಥಮ ಬಹುಮಾನವಾಗಿ 16 ಗ್ರಾಂ ಚಿನ್ನ, ದ್ವಿತೀಯ ಬಹುಮಾನವಾಗಿ 8 ಗ್ರಾಂ ಚಿನ್ನ ಹಾಗೂ ತೃತೀಯ ಮತ್ತು ಚತುರ್ಥ ಸ್ಥಾನ ಪಡೆದವರಿಗೆ ನಗದು ಬಹುಮಾನ ನೀಡಲಾಯಿತು.
ವಿವಿಧ ವಿಭಾಗಗಳ ವಿಜೇತರ ವಿವರ
ನೇಗಿಲು ಕಿರಿಯ ವಿಭಾಗ
ಪ್ರಥಮ: ಉಡುಪಿ ಕಕ್ಕುಂಜೆ ರಾಧಾ ನಿಲಯದ ಸಂತೋಷ್ ಶಿವರಾಜ್ ಪೂಜಾರಿ (ಕೋಣ ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ)
- ದ್ವಿತೀಯ: ಮುನಿಯಾಲ್ ಉದಯಕುಮಾರ್ ಶೆಟ್ಟಿ (ಕುಂದಬಾರಂದ ಮಾಸ್ತಿಕಟ್ಟೆ ಸ್ವರೂಪ್)
- ತೃತೀಯ: ಉಳೆಪಾಡಿ ಪುಲ್ಲೊಟ್ಟು ಬೀಡಿನ ಉದಯ ಶೆಟ್ಟಿ ‘ಬಿ’ (ಪಣಪೀಲು ಪ್ರವೀಣ್ ಕೋಟ್ಯಾನ್)
- ಚತುರ್ಥ: ಉಳೆಪಾಡಿ ಪುಲ್ಲೊಟ್ಟು ಬೀಡಿನ ಉದಯ ಶೆಟ್ಟಿ ‘ಎ’ (ಪುತ್ತಿಲ ಹೊಸಮನೆ ಚರಣ್ ಪೂಜಾರಿ)
ನೇಗಿಲು ಹಿರಿಯ ವಿಭಾಗ
- ಪ್ರಥಮ: ಎಂಬತ್ತು ಬಡಗುಬೆಟ್ಟು ಕಲ್ಲಪಾಪು ಶ್ರೀಕಾ ಸುದೀಪ್ ಶೆಟ್ಟಿ (ಕುಂದಬಾರಂದ ಮಾಸ್ತಿಕಟ್ಟೆ ಸ್ವರೂಪ್)
- ದ್ವಿತೀಯ: ಕಕ್ಕೆಪದವು ಪೆಂರ್ಗಾಲಿನ ಬಾಬು ತನಿಯಪ್ಪ ಗೌಡ (ಕಕ್ಕೆಪದವು ಹೃತಿಕ್ ಗೌಡ)
- ತೃತೀಯ: ಮಾಣಿಯ ನಾಗರಾಜ್ ಶೆಟ್ಟಿ (ಬಜೆಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ)
- ಚತುರ್ಥ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (ಬಂಬ್ರಾಣ ಬೈಲು ವಂದಿತ್ ಶೆಟ್ಟಿ)
ಹಗ್ಗ ಕಿರಿಯ ವಿಭಾಗ
- ಪ್ರಥಮ: ಪದವು ಕಾನಡ್ಕದ ಪ್ಲೇವಿ ಡಿಸೋಜ ‘ಬಿ’ (ಕಾವೂರು ದೋಟ ಸುದರ್ಶನ್)
- ದ್ವಿತೀಯ: ಎರ್ಮಾಳ್‌ನ ರೋಹಿತ್ ಹೆಗ್ಡೆ (ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ)
- ತೃತೀಯ: ಶಿಬರೂರು ಮುಟ್ಟಿಕಲ್ಲಿನ ಕೀರ್ತನ ರಾಜೇಶ್ ಪಾಣಾರ (ಕಡಂದಲೆ ಮೂಡಾಯಿಬೆಟ್ಟು ರೋಹಿತ್ ಪಾಣಾರ)
- ಚತುರ್ಥ: ಸುರತ್ಕಲ್ ಪಾಂಜಚನ್ಯದ ಯೋಗೀಶ್ ಕರಿಯ ಪೂಜಾರಿ (ಭಟ್ಕಳ ಶಂಕರ)
ಹಗ್ಗ ಹಿರಿಯ ವಿಭಾಗ
- ಪ್ರಥಮ: ಕೊಳಕೆ ಇರ್ವತ್ತೂರಿನ ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (ಕಕ್ಕೆಪದವು ಪೆಂರ್ಗಾಲಿನ ಕೃತಿಕ್ ಗೌಡ)
- ದ್ವಿತೀಯ: ಎರ್ಮಾಳ್ ಪುಚೊಟ್ಟು ಬೀಡಿನ ಬಾಲಚಂದ್ರ ಲೋಕಯ್ಯ ಶೆಟ್ಟಿ (ಪಡು ಸಾಂತೂರಿನ ಪೃಥ್ವಿರಾಜ್ ಪೂಜಾರಿ)
- ತೃತೀಯ: ಮಾಳ ಆನಂದ ನಿಲಯದ ಶೇಖರ ಎ. ಶೆಟ್ಟಿ (ಉಜಿರೆಯ ಸ್ಪಂದನ್ ಶೆಟ್ಟಿ)
- ಚತುರ್ಥ: ನಂದಳಿಕೆಯ ಶ್ರೀಕಾಂತ್ ಭಟ್ (ಬಂಬ್ರಾಣ ಬೈಲಿನ ವಂದಿತ್)
ಅಡ್ಡಹಲಗೆ ವಿಭಾಗ
- ಪ್ರಥಮ: ಇರುವೈಲು ದೊಡ್ಡಗುತ್ತಿನ ಜಗದೀಶ್ ಎಂ. ಶೆಟ್ಟಿ ‘ಎ’ (ತೆಕ್ಕಟ್ಟೆ ಸುಧೀರ್ ದೇವಾಡಿಗ)
- ದ್ವಿತೀಯ: ವಿಟ್ಲ ಕುಂಡಡ್ಕ ಮರುವಾಲದ ಜಯಂತದಾಸ್ (ಉಲ್ಲೂರು ಕಂದಾವರ ಗಣೇಶ್)
- ತೃತೀಯ: ಬೋಳಾರದ ತ್ರಿಶಾಲ್ ಕೆ. ಪೂಜಾರಿ (ಭಟ್ಕಳ ಹರೀಶ್ ನಾಯಕ್)
- ಚತುರ್ಥ: ಇರುವೈಲು ದೊಡ್ಡಗುತ್ತಿನ ಜಗದೀಶ್ ಎಂ. ಶೆಟ್ಟಿ ‘ಬಿ’ (ತೆಕ್ಕಟ್ಟೆ ಸುಧೀರ್ ದೇವಾಡಿಗ)
ಕನೆಹಲಗೆ ವಿಭಾಗ
ಬೈಂದೂರು ಸಸಿಹಿತ್ತಿನ ವೆಂಕಟ ಪೂಜಾರಿ (ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ) ಹಾಗೂ ವಾಮಂಜೂರು ತಿರುವೈಲುಗುತ್ತಿನ ನವೀನ್‌ಚಂದ್ರ ಆಳ್ವ (ಬೈಂದೂರು ಭಾಸ್ಕರ ದೇವಾಡಿಗ) ಅವರ ಕೋಣಗಳು ಆರೂವರೆ ಕೋಲು ನಿಶಾನೆಗೆ ನೀರು ಹಾಯಿಸಿ ಪ್ರಥಮ ಸ್ಥಾನ ಗಳಿಸಿದವು.
ಮೈಸೂರು
Mysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಸಿದ್ಧಲಿಂಗಪುರದ ಕಾರ್ತಿಕ್ (31)ಗೆ ಮೈಸೂರು ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಮೈಸೂರು: ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಸಿದ್ಧಲಿಂಗಪುರದ ಕಾರ್ತಿಕ್ (31)ಗೆ ಮೈಸೂರು ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆನಂದ್ ಪಿ. ಹೊಗಾಡೆ ಅವರು ಗುರುವಾರ ಕಾರ್ತಿಕ್ ದೋಷಿ ಎಂದು ತೀರ್ಪು ಪ್ರಕಟಿಸಿದ್ದರು. ಇದೀಗ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಅಪರಾಧಿಗೆ ಮರಣದಂಡನೆ ವಿಧಿಸಿ ಆದೇಶಿಸಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಕೆ.ಬಿ. ಜಯಂತಿ ವಾದ ಮಂಡಿಸಿದ್ದರು. ಜಿಲ್ಲಾ ಕಾನೂನು ಘಟಕದ ಮಾಚಂಗಡ ಎಸ್. ನವೀನ್ ಅವರು ಆರೋಪಿಯ ಪರ ವಕಾಲತ್ತು ವಹಿಸಿದ್ದರು.
ಏನಿದು ಪ್ರಕರಣ?
2025ರ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ನಗರದ ದೊಡ್ಡಕೆರೆ ಮೈದಾನದ ವಸ್ತುಪ್ರದರ್ಶನದ ಪಕ್ಕದಲ್ಲಿ ಟೆಂಟ್ ಹಾಕಿಕೊಂಡು ವಾಸವಿತ್ತು. ದಸರಾ ಮುಗಿದ ಬಳಿಕ ಚಾಮುಂಡಿ ಬೆಟ್ಟದಲ್ಲಿ ತೆಪ್ಪೋತ್ಸವ ಮುಗಿಸಿಕೊಂಡು ಊರಿಗೆ ಮರಳಲು ಕುಟುಂಬ ಸಿದ್ಧತೆ ನಡೆಸಿತ್ತು.
ಆದರೆ, ಅಕ್ಟೋಬರ್ 9ರ ಮುಂಜಾನೆ ಕುಟುಂಬದೊಂದಿಗೆ ಮಲಗಿದ್ದ 10 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಇರಿದು ಕೊಲೆ ಮಾಡಲಾಗಿತ್ತು. ಬೆಳಗ್ಗೆ ವಸ್ತುಪ್ರದರ್ಶನ ಮೈದಾನದ ವಾಹನ ನಿಲುಗಡೆ ಸ್ಥಳದ ಹಿಂಭಾಗದಲ್ಲಿದ್ದ ಚರಂಡಿ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯ ಕಿವಿ, ಕೆನ್ನೆ ಹಾಗೂ ಗಲ್ಲದ ಭಾಗದಲ್ಲಿ ಗಾಯಗಳಾಗಿದ್ದವು ಎಂದು ಪೊಲೀಸರು ತಿಳಿಸಿದ್ದರು.
ಈ ಸಂಬಂಧ ನಜರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಬಸ್ ಕ್ಲೀನರ್ ಆಗಿದ್ದ ಆರೋಪಿ ಕಾರ್ತಿಕ್‌ನನ್ನು ಕೃತ್ಯ ನಡೆದ 24 ಗಂಟೆಗಳೊಳಗೆ ಕೊಳ್ಳೇಗಾಲದಲ್ಲಿ ಪತ್ತೆಹಚ್ಚಿ ಬಂಧಿಸಿದ್ದರು.
ನಂತರ ಮಹಜರು ಪ್ರಕ್ರಿಯೆಗಾಗಿ ಆರೋಪಿಯನ್ನು ಸಿದ್ದಲಿಂಗಪುರಕ್ಕೆ ಕರೆದೊಯ್ದು ವಾಪಸ್ ಕರೆತರುತ್ತಿದ್ದಾಗ, ಮೇಟಗಳ್ಳಿ ಬಳಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದಿದ್ದರು.
ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಮಂಡಿಸಿ, ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಸರಕಾರಿ ಅಭಿಯೋಜಕಿ ಕೆ.ಬಿ. ಜಯಂತಿ ವಾದ ಮಂಡಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
-
ಬಿಗ್ ನ್ಯೂಸ್16 hours agoಬೋಳಿಯಾರ್ ಭೀಕರ ಅಪಘಾತ : ಸ್ಕೂಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ – ಸವಾರ ಮೃತ್ಯು
-
ದಕ್ಷಿಣ ಕನ್ನಡ20 hours ago
ಉಪ್ಪಿನಂಗಡಿ : ಕುಡಿದ ಮತ್ತಿನಲ್ಲಿ ತಲವಾರು ಪ್ರದರ್ಶಿಸಿ ಬೆದರಿಕೆ: ಇಬ್ಬರು ವಶಕ್ಕೆ
-
ಬಿಗ್ ನ್ಯೂಸ್17 hours ago‘ಎಸ್ಐಟಿಯಿಂದ ತಾರ್ಕಿಕ ಅಂತ್ಯ ಅಸಾಧ್ಯ’ ಎಂದ ವಕೀಲ ಅಮೃತೇಶ್ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ತನಿಖೆಗೆ ಪ್ರಭಾವ ಬೀರಲು ಯತ್ನಿಸಿದ್ದಾರೆಂದು ಆರೋಪಿಸಿ ಸೌಜನ್ಯ ತಾಯಿ ಕುಸುಮಾವತಿಯಿಂದ ಧರ್ಮಸ್ಥಳ ಠಾಣೆಗೆ ದೂರು ದಾಖಲು – ಹಳೆಯ ಪ್ರಕರಣದ ಜಾಮೀನು ರದ್ದುಗೊಳಿಸುವಂತೆ ಮನವಿ..!
-
Uncategorized20 hours ago
ಸಿದ್ದಕಟ್ಟೆ : ಯುವಕನಿಗೆ ಚೂರಿಯಿಂದ ಇರಿತ: 6 ಮಂದಿ ವಿರುದ್ಧ ಕೇಸ್
-
Uncategorized20 hours ago
ಬೆಳ್ತಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ: ನಾಲ್ವರು ವಶಕ್ಕೆ, 7 ಕೋಳಿಗಳು ಜಪ್ತಿ
-
ನಿಧನ ವಾರ್ತೆ4 hours agoBolyar-ಬೋಳಿಯಾರ್: ಬೈಕ್ಗೆ ಹಿಂಬದಿಯಿಂದ ಪಿಕಪ್ ಢಿಕ್ಕಿ; ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಮೃತ್ಯು
-
ಬಿಗ್ ನ್ಯೂಸ್5 hours agoElon Musk-ಅಮೆರಿಕದ ಪ್ರತಿ ಮಗುವಿಗೂ ಸ್ಪೇಸ್ಎಕ್ಸ್ನ ತಲಾ ಒಂದು ಷೇರು..! ಎಲಾನ್ ಮಸ್ಕ್ ಘೋಷಣೆ
-
Uncategorized3 hours agoMangalore Dasara-ಮಂಗಳೂರು ದಸರಾ: ನಾಳೆ ಸಂಜೆ 4ರಿಂದ ಸಂಚಾರ ಬದಲಾವಣೆ; ಈ ರಸ್ತೆಗಳಲ್ಲಿ ವಾಹನ ಓಡಿಸುವ ಮುನ್ನ ಎಚ್ಚರ..!


















