Connect with us

ಸ್ಥಳೀಯ

Soutadka-ಸೌತಡ್ಕ ದೇವಸ್ಥಾನದ ಜಮೀನಿನಲ್ಲಿ ಅಕ್ರಮ ಕಟ್ಟಡ ಕಟ್ಟಿದ ಆರೋಪ – ಮಾಜಿ ಪದಾಧಿಕಾರಿ ಕೃಷ್ಣ ಭಟ್ ವಿರುದ್ಧ ದೂರು..!

Published

on



Ad Widget

Ad Widget

Ad Widget

Ad Widget

ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ ಶಬರಾಯ ಅವರು ಈ ಕುರಿತು ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ ಶಬರಾಯ ಅವರು ಈ ಕುರಿತು ದೂರು ನೀಡಿದ್ದಾರೆ.

Ad Widget

Ad Widget <> Ad Widget

ದೂರಿನ ಪ್ರಕಾರ, ಈ ಹಿಂದೆ ದೇವಸ್ಥಾನದ ಪದಾಧಿಕಾರಿಯಾಗಿದ್ದ ಕೊಕ್ಕಡ ನಿವಾಸಿ ಕೃಷ್ಣ ಭಟ್ ಎಂಬವರು ದೇವಸ್ಥಾನದ ಸಮೀಪ ದೇವಸ್ಥಾನಕ್ಕಾಗಿ ಕಾಯ್ದಿರಿಸಲಾದ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಹಾಗೂ ಅಧಿಕೃತ ದಾಖಲೆಗಳಿಲ್ಲದೆ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.



Ad Widget

ಅಲ್ಲದೆ, ಕಟ್ಟಡದಲ್ಲಿ ಬಾಡಿಗೆಗೆ ಅಂಗಡಿ ಪಡೆದವರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

Ad Widget

ಈ ಸಂಬಂಧ ಅ.19ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಂಖ್ಯೆ 354/2026ರಂತೆ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Bellare-ಬೆಳ್ಳಾರೆ: ವಿದ್ಯುತ್ ಕಂಬದ ಸ್ಟೇ ವೈರ್‌ಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಸಹಸವಾರನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ಕುದ್ಮಾರು ನಿವಾಸಿ ಪುರುಷೋತ್ತಮ ಅವರ ಸಹೋದರ ಧನಂಜಯ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ಳಾರೆ: ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಅ.20ರ ರಾತ್ರಿ ಬೆಳ್ಳಾರೆ–ಸವಣೂರು ರಸ್ತೆಯ ಕನ್ನಡಕುಮೇರಿ ಎಂಬಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕಡಬ ಕುದ್ಮಾರು ನಿವಾಸಿ ಪುರುಷೋತ್ತಮ ಅವರ ಸಹೋದರ ಧನಂಜಯ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಧನಂಜಯ ಅವರು ತಮ್ಮ ಸ್ನೇಹಿತ ರೋಷನ್ ಅವರನ್ನು ಸಹಸವಾರನಾಗಿ ಬೈಕ್‌ನಲ್ಲಿ ಕೂರಿಸಿಕೊಂಡು KA 19 HK 0323 ನೋಂದಣಿ ಸಂಖ್ಯೆಯ ಮೋಟಾರ್‌ಸೈಕಲ್‌ನಲ್ಲಿ ಬೆಳ್ಳಾರೆ–ಸವಣೂರು ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಕನ್ನಡಕುಮೇರಿ ತಲುಪಿದಾಗ ಬೈಕ್‌ನ ಮೇಲಿನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಸ್ಟೇ ವೈರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಧನಂಜಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ರೋಷನ್ ಗಾಯಗೊಂಡಿದ್ದಾರೆ.



Ad Widget

ಈ ಸಂಬಂಧ ಮೃತರ ಸಹೋದರ ಕಡಬ ಕುದ್ಮಾರು ನಿವಾಸಿ ಪುರುಷೋತ್ತಮ ಅವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 61/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 281, 125(ಎ) ಮತ್ತು 106ರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ಸ್ವೀಕಾರ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಮ್., ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ, ಸಂಚಾಲಕ ಪ್ರಸನ್ನ ದರ್ಬೆ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು.

Ad Widget

Ad Widget <> Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರಮೇಶ್ಚಂದ್ರ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್‌, ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ.ವಿ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ರಕ್ಷಾ ಪ್ರಭು ವಿವಿದ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Ad Widget

ಪ್ರಾಂಶುಪಾಲರ ಪರಿಚಯ:
ಡಾ.ಪುರುಷೋತ್ತಮ ಚಿಪ್ಪಾರ್ ಉನ್ನತ ಶಿಕ್ಷಣ, ಉದ್ಯಮ ಕ್ಷೇತ್ರ ಹಾಗೂ ತಂತ್ರಜ್ಞಾನ ಕಾರ್ಯತಂತ್ರಗಳಲ್ಲಿ 15 ವರ್ಷಕ್ಕೂ ಹೆಚ್ಚು ಅನುಭವವನ್ನು ಹೊಂದಿರುವ ಶಿಕ್ಷಣ ತಜ್ಞರಾಗಿದ್ದಾರೆ. ಇವರು ದಕ್ಷಿಣ ಕೊರಿಯಾದ ಇನ್ಹಾ ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಸಂಶೋಧನೆ, ಶೈಕ್ಷಣಿಕ ಆಡಳಿತ, ಸಂಸ್ಥೆಯ ಅಭಿವೃದ್ಧಿ ಮತ್ತು ಉದ್ಯಮ ವಲಯದೊಂದಿಗಿನ ಸಹಯೋಗದಲ್ಲಿ ಅವರು ಅನುಭವವನ್ನು ಹೊಂದಿದ್ದಾರೆ. ಇವರು ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪಪ್ರಾಂಶುಪಾಲರು ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅದಕ್ಕೂ ಮೊದಲು ಅದೇ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಆಡಳಿತ, ಪಠ್ಯಕ್ರಮ ಅಭಿವೃದ್ಧಿ, ಸಂಶೋಧನೆಗೆ ಉತ್ತೇಜನ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

ಹೈದ್ರೀಜನ್ ಸಂಗ್ರಹಣೆ, ಇಂಧನ ಕೋಶಗಳು ಉಷ್ಣ ಮತ್ತು ದ್ರವ್ಯರಾಶಿ ವರ್ಗಾವಣೆ ಹಾಗೂ ಸುಸ್ಥಿರ ಇಂಧನ ವ್ಯವಸ್ಥೆಗಳ ಕ್ಷೇತ್ರದಲ್ಲಿ ಡಾ.ಚಿಪ್ಪಾರ್ ಗಮನಾರ್ಹ ಸಂಶೋಧನಾ ಸಾಧನೆಗಳನ್ನು ಮಾಡಿದ್ದಾರೆ. ಇವರ 35 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ ಶೈಕ್ಷಣಿಕ ಪ್ರಕಟಣೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಅಲ್ಲದೆ ಅನೇಕ ಸಂಶೋಧನಾ ನಿರತರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂಧನ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಇಂಜಿನಿಯರಿಂಗ್ ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಸಂಶೋಧನೆಯಲ್ಲಿ ಅವರು ಆಸಕ್ತಿ ಹೊಂದಿದ್ದಾರೆ.

ಬೆಂಗಳೂರಿನ ಹನಿವೆಲ್ ಟೆಕ್ನಾಲಜಿ ಸೊಲ್ಯುಶನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಅವರು ತಂತ್ರಜ್ಞಾನ ಮೌಲ್ಯಮಾಪನ, ಪೇಟೆಂಟ್ ವಿಶ್ಲೇಷಣೆಯಲ್ಲಿ ಕೆಲಸಮಾಡಿದ್ದಾರೆ. ವಿಮಾನಯಾನ ಕ್ಷೇತ್ರದ ವಿಮಾನ ವ್ಯವಸ್ಥೆಗಳ ಮುನ್ಸೂಚನಾ ನಿರ್ವಹಣೆಗೆ ಸಂಬಂದಿಸಿದ ಅಮೆರಿಕಾದ ಪೇಟೆಂಟ್‌ನಲ್ಲಿಯೂ ಅವರು ಕೊಡುಗೆ ನೀಡಿದ್ದಾರೆ. ಅಲ್ಲದೆ ಅವರು ಪ್ರಾಮಾಣೀಕೃತ ಪೇಟೆಂಟ್ ಮಾಹಿತಿ ತಜ್ಞರೂ ಆಗಿದ್ದಾರೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಐಡಿಯಾ ಲ್ಯಾಬ್ ಯೋಜನೆಯ ಪ್ರಧಾನ ಸಂಶೋಧಕರಾಗಿ ಅತ್ಯಾಧುನಿಕ ಮೂಲಮಾದರಿ ಅಭಿವೃದ್ಧಿ ಮತ್ತು ಹೊಸತನವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇದರ ಮೂಲಕ ದಕ್ಷಿಣ ಕನ್ನಡದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರಾಯೋಗಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದಾರೆ.

ಕರ್ನಾಟಕ ಸರ್ಕಾರದ ನ್ಯೂ ಏಜ್ ಇನ್ನೋವೇಶನ್ ನೆಟ್ವರ್ಕ್ ಯೋಜನೆಯಡಿ ಮೂಲ ಸೌಕರ್ಯಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಯೋಜನೆಯಡಿ ವಿಶೇಷ ಅನುದಾನವನ್ನು ತರಿಸುವಲ್ಲಿಯೂ ಶ್ರಮವಹಿಸಿದ್ದಾರೆ. ರಾಷ್ಟ್ರೀಯ ಮಟ್ಟದ ನಾವೀನ್ಯತಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿ ತಂಡಗಳು ಭಾಗವಹಿಸಲು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮತ್ತು ಉದ್ಯಮಶೀಲ ಮನೋಭಾವ ಬೆಳೆಸಲು ಶ್ರಮಿಸಿದ್ದಾರೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು ಜಿಲ್ಲಾ ಕುಸ್ತಿ ಸಂಘದ ಸಮಿತಿ ಪುನರ್ ರಚನೆ; ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) 2026–2030ನೇ ಸಾಲಿನ ಜಿಲ್ಲಾ ಆಡಳಿತ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಗಿದೆ.

Ad Widget

Ad Widget <> Ad Widget

ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ, ಖಜಾಂಚಿಯಾಗಿ ವಿಕಾಸ್ ಶೆಟ್ಟಿ, ಜಂಟಿ ಕಾರ್ಯದರ್ಶಿಗಳಾಗಿ ಸಮರ್ಥ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀಪ್ತಿ ಶೆಟ್ಟಿ, ಗೋಕುಲ್ ದಾಸ್ ಭಂಡಾರಿ ಮತ್ತು ಇತರರು ಆಯ್ಕೆಯಾಗಿದ್ದಾರೆ.



Ad Widget

ವರ್ಷಂಪ್ರತಿ ಮಂಗಳೂರಿನಲ್ಲಿ ನಡೆಯುವ ತಪಸ್ಯ ಬೀಚ್ ಫೆಸ್ಟಿವಲ್‌ನಲ್ಲಿ ರಾಜ್ಯ ಮಟ್ಟದ ಬೀಚ್ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿ ಯಶಸ್ವಿಗೊಳಿಸುವಲ್ಲಿ ಮಂಗಳೂರು ಕುಸ್ತಿ ಸಂಘದ ಪದಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು.

Ad Widget

Ad Widget

ಈ ಸಂದರ್ಭದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸುಜಿತ್ ರೈ ಮಾತನಾಡಿ ನಮ್ಮ ಜಿಲ್ಲಯ ಕುಸ್ತಿ ಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ಅವರನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳೆಸುವ ಆಶಯ ವ್ಯಕ್ತ ಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading