ಮಂಗಳೂರು
Mangalore-ಮಂಗಳೂರು ಜಿಲ್ಲಾ ಕುಸ್ತಿ ಸಂಘದ ಸಮಿತಿ ಪುನರ್ ರಚನೆ; ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್
ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ.

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ ಮಂಗಳೂರು ಕುಸ್ತಿ ಸಂಘ( ರಿ.) 2026–2030ನೇ ಸಾಲಿನ ಜಿಲ್ಲಾ ಆಡಳಿತ ಮಂಡಳಿಯ ಸಮಿತಿಯನ್ನು ಪುನರ್ ರಚಿಸಲಾಗಿದೆ.
ಅಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಉಪಾಧ್ಯಕ್ಷರಾಗಿ ರಾಮದಾಸ್ ಶೆಟ್ಟಿ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ, ಖಜಾಂಚಿಯಾಗಿ ವಿಕಾಸ್ ಶೆಟ್ಟಿ, ಜಂಟಿ ಕಾರ್ಯದರ್ಶಿಗಳಾಗಿ ಸಮರ್ಥ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀಪ್ತಿ ಶೆಟ್ಟಿ, ಗೋಕುಲ್ ದಾಸ್ ಭಂಡಾರಿ ಮತ್ತು ಇತರರು ಆಯ್ಕೆಯಾಗಿದ್ದಾರೆ.
ವರ್ಷಂಪ್ರತಿ ಮಂಗಳೂರಿನಲ್ಲಿ ನಡೆಯುವ ತಪಸ್ಯ ಬೀಚ್ ಫೆಸ್ಟಿವಲ್ನಲ್ಲಿ ರಾಜ್ಯ ಮಟ್ಟದ ಬೀಚ್ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಿ ಯಶಸ್ವಿಗೊಳಿಸುವಲ್ಲಿ ಮಂಗಳೂರು ಕುಸ್ತಿ ಸಂಘದ ಪದಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು.
ಮಂಗಳೂರು
Bolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಳ್ಳಾಲ : ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಕ್ಟೋಬರ್ 19, 2026 ರಂದು ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರ್ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ಒಂದು ಭೀಕರ ಘಟನೆ ನಡೆದಿದೆ:
ಮೊಬೈಲ್ ಫೋನ್ ವಿಷಯವಾಗಿ ನಡೆದ ಸಣ್ಣ ಗಲಾಟೆಯ ನಂತರ, ಆರೋಪಿ ಹಫೀಜ್ ಅಲಿಯಾಸ್ ಅಪ್ಪಿ ಎಂಬಾತ ತನ್ನ ಪಿಕಪ್ ವಾಹನದಿಂದ ಇಬ್ಬರು ಯುವಕರು ಸಂಚರಿಸುತ್ತಿದ್ದ ಸ್ಕೂಟರ್ಗೆ ಹಿಂಬದಿಯಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದಾನೆ.
ಈ ಘಟನೆಯಲ್ಲಿ ಸ್ಕೂಟರ್ನಲ್ಲಿದ್ದ ಮೊಹಮ್ಮದ್ ಜುಲೈದ್ (23) ಮತ್ತು ಮೊಹಮ್ಮದ್ ಅಫ್ರಾಜ್ (23) ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಮಂಗಳೂರು
Mangalore Dasara-ಮಂಗಳೂರು ದಸರಾ: ಭವ್ಯ ಶೋಭಾಯಾತ್ರೆಗೆ ಜನಸಾಗರ; ಭಕ್ತಿ-ಸಂಸ್ಕೃತಿಯ ವೈಭವದ ಅನಾವರಣ..!
ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು ಭಕ್ತರು ಹಾಗೂ ಸಾರ್ವಜನಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.
ಮಂಗಳೂರು: ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು ಭಕ್ತರು ಹಾಗೂ ಸಾರ್ವಜನಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆ ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು.
ಕ್ಷೇತ್ರದಲ್ಲಿ ನವರಾತ್ರಿಯ ಸಂದರ್ಭದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ವಿಗ್ರಹಗಳನ್ನು ಶೋಭಾಯಾತ್ರೆಯಲ್ಲಿ ಕೊಂಡೊಯ್ಯಲಾಯಿತು.
ವಿವಿಧ ಅಲಂಕಾರಗಳಿಂದ ಕಂಗೊಳಿಸಿದ ಸ್ತಬ್ಧಚಿತ್ರಗಳು ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯವನ್ನು ಬಿಂಬಿಸುವ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಬಣ್ಣಬಣ್ಣದ ವಿದ್ಯುತ್ ದೀಪಗಳ ಅಲಂಕಾರ, ಆಕರ್ಷಕ ಸ್ತಬ್ಧಚಿತ್ರಗಳು ಹಾಗೂ ಉತ್ಸವದ ಸಂಭ್ರಮ ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸಿದವು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಭಕ್ತಿಭಾವದಿಂದ ದೇವರ ದರ್ಶನ ಪಡೆದು ಮೆರವಣಿಗೆಯನ್ನು ವೀಕ್ಷಿಸಿದರು.
9 ಕಿ.ಮೀ. ಸಾಗಿದ ಭವ್ಯ ಮೆರವಣಿಗೆ
ಶ್ರೀಕ್ಷೇತ್ರ ಕುದ್ರೋಳಿಯಿಂದ ಹೊರಟ ಶೋಭಾಯಾತ್ರೆಯು ಮಣ್ಣಗುಡ್ಡ ಬ್ರಹ್ಮಶ್ರೀ ನಾರಾಯಣಗುರು ವೃತ್ತ, ಲಾಲ್ಬಾಗ್, ಬಲ್ಲಾಳ್ಬಾಗ್, ಪಿವಿಎಸ್ ಜಂಕ್ಷನ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿಶ್ವವಿದ್ಯಾನಿಲಯ ಕಾಲೇಜು ವೃತ್ತ, ಗಣಪತಿ ಹೈಸ್ಕೂಲ್, ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ, ಕಾರ್ ಸ್ಟ್ರೀಟ್ ಹಾಗೂ ಅಳಕೆ ಮಾರ್ಗವಾಗಿ ಸಂಚರಿಸಿ ಮತ್ತೆ ಕುದ್ರೋಳಿ ಕ್ಷೇತ್ರವನ್ನು ತಲುಪಿತು.
ನಗರದ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಸಾಗಿದ ಶೋಭಾಯಾತ್ರೆ ಮಂಗಳೂರು ದಸರಾ ಮಹೋತ್ಸವದ ವೈಭವ, ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಿತು.
ಸೇವಾಕರ್ತರಿಗೆ ಸಮ್ಮಾನ
ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿ ಕ್ಷೇತ್ರದಲ್ಲಿ ಶ್ರೀ ಶಾರದಾ ಮಾತೆಯ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ವಿವಿಧ ಸೇವಾಕರ್ತರನ್ನು ಕ್ಷೇತ್ರದ ಪರವಾಗಿ ಬಿ. ಜನಾರ್ದನ ಪೂಜಾರಿ ಅವರು ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್ ಆರ್. ಪೂಜಾರಿ, ದೇವಸ್ಥಾನದ ಟ್ರಸ್ಟಿಗಳಾದ ಎಚ್.ಎಸ್. ಸಾಯಿರಾಂ, ಸಂತೋಷ್ ಕುಮಾರ್ ಜೆ., ಜಗದೀಪ್ ಡಿ. ಸುವರ್ಣ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹಾಧ್ಯಕ್ಷೆ ಡಾ. ಅನಸೂಯಾ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ ಸೇರಿದಂತೆ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಅಪರಾಧ
Mangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ. ಆಕೆಯ ವಶದಲ್ಲಿದ್ದ ಬಾಲಕಿಯ 10 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅ.18ರಂದು ಮಂಗಳೂರಿನ ಹಾಲ್ವೊಂದರಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯೊಬ್ಬರು ಎಳೆದು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿತೆಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಮಹಿಳೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಐದು ಕಳವು ಪ್ರಕರಣಗಳು ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
-
ನಿಧನ ವಾರ್ತೆ14 hours agoNelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
-
ಮಂಗಳೂರು12 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ಅಪರಾಧ14 hours agoMangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
-
ನಿಧನ ವಾರ್ತೆ13 hours agoSuicide-ಜನಪ್ರಿಯ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ : ಸೈಬರ್ ಕಿರುಕುಳ ಕಾರಣ ಎಂದ ತಂದೆ
-
ಸ್ಥಳೀಯ12 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ಅಪರಾಧ14 hours agoPuttur-ಪುತ್ತೂರು: 35 ಗ್ರಾಂ ಚಿನ್ನ ವಾಪಸ್ ಕೇಳಿದ್ದಕ್ಕೆ ಹಲ್ಲೆ? ಸಂಬಂಧಿಕರ ವಿರುದ್ಧ ದೂರು
-
ನಿಧನ ವಾರ್ತೆ8 hours agoMudubidire-ಮೂಡುಬಿದಿರೆ: ವಿದ್ಯುತ್ ಆಘಾತಕ್ಕೆ ತಾಯಿ-ಮಗ ದಾರುಣ ಸಾವು
-
ಅಂತರ ರಾಜ್ಯ8 hours agoSexual harassment-ಎಕ್ಸ್ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್


















