ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ಸ್ವೀಕಾರ
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಮ್., ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ, ಸಂಚಾಲಕ ಪ್ರಸನ್ನ ದರ್ಬೆ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರಮೇಶ್ಚಂದ್ರ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ.ವಿ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ರಕ್ಷಾ ಪ್ರಭು ವಿವಿದ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಾಂಶುಪಾಲರ ಪರಿಚಯ:
ಡಾ.ಪುರುಷೋತ್ತಮ ಚಿಪ್ಪಾರ್ ಉನ್ನತ ಶಿಕ್ಷಣ, ಉದ್ಯಮ ಕ್ಷೇತ್ರ ಹಾಗೂ ತಂತ್ರಜ್ಞಾನ ಕಾರ್ಯತಂತ್ರಗಳಲ್ಲಿ 15 ವರ್ಷಕ್ಕೂ ಹೆಚ್ಚು ಅನುಭವವನ್ನು ಹೊಂದಿರುವ ಶಿಕ್ಷಣ ತಜ್ಞರಾಗಿದ್ದಾರೆ. ಇವರು ದಕ್ಷಿಣ ಕೊರಿಯಾದ ಇನ್ಹಾ ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಸಂಶೋಧನೆ, ಶೈಕ್ಷಣಿಕ ಆಡಳಿತ, ಸಂಸ್ಥೆಯ ಅಭಿವೃದ್ಧಿ ಮತ್ತು ಉದ್ಯಮ ವಲಯದೊಂದಿಗಿನ ಸಹಯೋಗದಲ್ಲಿ ಅವರು ಅನುಭವವನ್ನು ಹೊಂದಿದ್ದಾರೆ. ಇವರು ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪಪ್ರಾಂಶುಪಾಲರು ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅದಕ್ಕೂ ಮೊದಲು ಅದೇ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಆಡಳಿತ, ಪಠ್ಯಕ್ರಮ ಅಭಿವೃದ್ಧಿ, ಸಂಶೋಧನೆಗೆ ಉತ್ತೇಜನ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಹೈದ್ರೀಜನ್ ಸಂಗ್ರಹಣೆ, ಇಂಧನ ಕೋಶಗಳು ಉಷ್ಣ ಮತ್ತು ದ್ರವ್ಯರಾಶಿ ವರ್ಗಾವಣೆ ಹಾಗೂ ಸುಸ್ಥಿರ ಇಂಧನ ವ್ಯವಸ್ಥೆಗಳ ಕ್ಷೇತ್ರದಲ್ಲಿ ಡಾ.ಚಿಪ್ಪಾರ್ ಗಮನಾರ್ಹ ಸಂಶೋಧನಾ ಸಾಧನೆಗಳನ್ನು ಮಾಡಿದ್ದಾರೆ. ಇವರ 35 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ ಶೈಕ್ಷಣಿಕ ಪ್ರಕಟಣೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಅಲ್ಲದೆ ಅನೇಕ ಸಂಶೋಧನಾ ನಿರತರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂಧನ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಇಂಜಿನಿಯರಿಂಗ್ ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಸಂಶೋಧನೆಯಲ್ಲಿ ಅವರು ಆಸಕ್ತಿ ಹೊಂದಿದ್ದಾರೆ.
ಬೆಂಗಳೂರಿನ ಹನಿವೆಲ್ ಟೆಕ್ನಾಲಜಿ ಸೊಲ್ಯುಶನ್ ಪ್ರೈವೇಟ್ ಲಿಮಿಟೆಡ್ನಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಅವರು ತಂತ್ರಜ್ಞಾನ ಮೌಲ್ಯಮಾಪನ, ಪೇಟೆಂಟ್ ವಿಶ್ಲೇಷಣೆಯಲ್ಲಿ ಕೆಲಸಮಾಡಿದ್ದಾರೆ. ವಿಮಾನಯಾನ ಕ್ಷೇತ್ರದ ವಿಮಾನ ವ್ಯವಸ್ಥೆಗಳ ಮುನ್ಸೂಚನಾ ನಿರ್ವಹಣೆಗೆ ಸಂಬಂದಿಸಿದ ಅಮೆರಿಕಾದ ಪೇಟೆಂಟ್ನಲ್ಲಿಯೂ ಅವರು ಕೊಡುಗೆ ನೀಡಿದ್ದಾರೆ. ಅಲ್ಲದೆ ಅವರು ಪ್ರಾಮಾಣೀಕೃತ ಪೇಟೆಂಟ್ ಮಾಹಿತಿ ತಜ್ಞರೂ ಆಗಿದ್ದಾರೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಐಡಿಯಾ ಲ್ಯಾಬ್ ಯೋಜನೆಯ ಪ್ರಧಾನ ಸಂಶೋಧಕರಾಗಿ ಅತ್ಯಾಧುನಿಕ ಮೂಲಮಾದರಿ ಅಭಿವೃದ್ಧಿ ಮತ್ತು ಹೊಸತನವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇದರ ಮೂಲಕ ದಕ್ಷಿಣ ಕನ್ನಡದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರಾಯೋಗಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದಾರೆ.

ಕರ್ನಾಟಕ ಸರ್ಕಾರದ ನ್ಯೂ ಏಜ್ ಇನ್ನೋವೇಶನ್ ನೆಟ್ವರ್ಕ್ ಯೋಜನೆಯಡಿ ಮೂಲ ಸೌಕರ್ಯಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಯೋಜನೆಯಡಿ ವಿಶೇಷ ಅನುದಾನವನ್ನು ತರಿಸುವಲ್ಲಿಯೂ ಶ್ರಮವಹಿಸಿದ್ದಾರೆ. ರಾಷ್ಟ್ರೀಯ ಮಟ್ಟದ ನಾವೀನ್ಯತಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿ ತಂಡಗಳು ಭಾಗವಹಿಸಲು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮತ್ತು ಉದ್ಯಮಶೀಲ ಮನೋಭಾವ ಬೆಳೆಸಲು ಶ್ರಮಿಸಿದ್ದಾರೆ.
ಶಿಕ್ಷಣ
Vivekanand-ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮ
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಪೂಜಾ ಸಂಕಲ್ಪದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರಿಂದ ಲಲಿತಾಸಹಸ್ರನಾಮ ಪಾರಾಯಣ, ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ ನಡೆಯಿತು.
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಪೂಜಾ ಸಂಕಲ್ಪದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರಿಂದ ಲಲಿತಾಸಹಸ್ರನಾಮ ಪಾರಾಯಣ, ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ, ಕಾಲೇಜಿನ ಪ್ರಯೋಗಾಲಯಗಳ ಪೂಜೆ ಮತ್ತು ವಾಹನಗಳ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಶಿಕ್ಷಣ
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಗುರುಅಭಿವಂದನೆ’ ಕಾರ್ಯಕ್ರಮ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಜೀವನ್ ದಾಸ್ ಮಾತನಾಡಿದರು.
ಪುತ್ತೂರು: ಒಬ್ಬ ಶಿಕ್ಷಕನಿಗೆ ಪ್ರತಿನಿತ್ಯ ಓದುವ ಹಂಬಲ ಅತಿಮುಖ್ಯ, ಉತ್ತಮ ಶಿಕ್ಷಕ ಹೆಚ್ಚಿನ ತಿಳುವಳಿಕೆ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿರುವ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಸಾಮರ್ಥ್ಯ ಆತನಲ್ಲಿರಬೇಕು. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬರಲಿರುವವರು ಆ ಹುದ್ದೆಯ ಬಗ್ಗೆ ಶ್ರದ್ಧೆ ಮತ್ತು ಗೌರವವನ್ನು ಹೊಂದಿರಬೇಕು ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಜೀವನ್ ದಾಸ್ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರುಳಿಕೃಷ್ಣ ಕೆ. ಎನ್. ಮಾತನಾಡಿ, ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲದೆ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಜನತೆ ಉತ್ತಮ ವ್ಯಕ್ತಿಗಳ ಜೀವನಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಭವಿಷ್ ಘಟಕದ ಸಂಯೋಜಕ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ. ಜಿ. ಸ್ವಾಗತಿಸಿ, ಭವಿಷ್ ಘಟಕದ ಸಹ ಸಂಯೋಜಕಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಕವಿತಾ ವಂದಿಸಿ, ತೃತೀಯ ವರ್ಷದ ವಾಣಿಜ್ಯ ವಿಭಾಗದ ದೀಪ್ತಿ ಪ್ರಭು ಆಶಯಗೀತೆ ಹಾಡಿ, ತೃತೀಯ ಕಲಾ ವಿಭಾಗದ ಕೆ. ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Philomena-ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್ಬಾಲ್ ಪಂದ್ಯಾವಳಿ; ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ಫುಟ್ಬಾಲ್ ತಂಡಕ್ಕೆ ರನ್ನರ್ಅಪ್ ಸ್ಥಾನ
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ಮಹಿಳಾ ಫುಟ್ಬಾಲ್ ತಂಡವು ಅ.16 ರಂದು ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್ಬಾಲ್ ಪಂದ್ಯಾವಳಿ 2026- 27 ರಲ್ಲಿ ರನ್ನರ್ಅಪ್ ಸ್ಥಾನ ಪಡೆದುಕೊಂಡಿದೆ.
ಪುತ್ತೂರು, ಅ.18 : ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ಮಹಿಳಾ ಫುಟ್ಬಾಲ್ ತಂಡವು ಅ.16 ರಂದು ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್ಬಾಲ್ ಪಂದ್ಯಾವಳಿ 2026- 27 ರಲ್ಲಿ ರನ್ನರ್ಅಪ್ ಸ್ಥಾನ ಪಡೆದುಕೊಂಡಿದೆ.
ತಂಡದ ಸಾಧನೆಯನ್ನು ಅಭಿನಂದಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಅವರು, ಪಂದ್ಯಾವಳಿಯಲ್ಲಿ ಆಟಗಾರ್ತಿಯರು ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಿ ನೀಡಿದ ಪ್ರಯತ್ನವನ್ನು ಶ್ಲಾಘಿಸಿದರು. ಮುಂದಿನ ಪಂದ್ಯಾವಳಿಗಳಲ್ಲಿಯೂ ಇದೇ ರೀತಿಯ ಪ್ರಯತ್ನ ಮುಂದುವರಿಸುವಂತೆ ಆಟಗಾರ್ತಿಯರನ್ನು ಪ್ರೋತ್ಸಾಹಿಸಿ,ತಂಡಕ್ಕೆ ಮಾರ್ಗದರ್ಶನ ಹಾಗೂ ಬೆಂಬಲ ನೀಡಿದ ದೈಹಿಕ ಶಿಕ್ಷಣ ನಿರ್ದೇಶಕಿ ಹರ್ಷಿತಾ ಶೆಟ್ಟಿ ಅವರನ್ನೂ ಅಭಿನಂದಿಸಿದರು.
ಕಾಲೇಜಿನ ಆಡಳಿತ ಮಂಡಳಿ, ಬೋಧಕವರ್ಗ ಹಾಗೂ ವಿದ್ಯಾರ್ಥಿಗಳು ಮಹಿಳಾ ಫುಟ್ಬಾಲ್ ತಂಡದ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
-
ನಿಧನ ವಾರ್ತೆ10 hours agoNelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
-
ಮಂಗಳೂರು8 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ಅಪರಾಧ10 hours agoMangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
-
ನಿಧನ ವಾರ್ತೆ9 hours agoSuicide-ಜನಪ್ರಿಯ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ : ಸೈಬರ್ ಕಿರುಕುಳ ಕಾರಣ ಎಂದ ತಂದೆ
-
ಅಪರಾಧ10 hours agoPuttur-ಪುತ್ತೂರು: 35 ಗ್ರಾಂ ಚಿನ್ನ ವಾಪಸ್ ಕೇಳಿದ್ದಕ್ಕೆ ಹಲ್ಲೆ? ಸಂಬಂಧಿಕರ ವಿರುದ್ಧ ದೂರು
-
ಸ್ಥಳೀಯ8 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ನಿಧನ ವಾರ್ತೆ9 hours agoPuttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
-
ಅಂತರ ರಾಜ್ಯ4 hours agoSexual harassment-ಎಕ್ಸ್ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್


















