ಅಪರಾಧ
Mangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್‌ಸಿಸಿ ಅಪಾರ್ಟ್‌ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್‌ಸಿಸಿ ಅಪಾರ್ಟ್‌ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ. ಆಕೆಯ ವಶದಲ್ಲಿದ್ದ ಬಾಲಕಿಯ 10 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅ.18ರಂದು ಮಂಗಳೂರಿನ ಹಾಲ್‌ವೊಂದರಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪರಿಚಿತ ಮಹಿಳೆಯೊಬ್ಬರು ಎಳೆದು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿತೆಯನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಮಹಿಳೆಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಐದು ಕಳವು ಪ್ರಕರಣಗಳು ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಾಧ
Bengaluru-ಬೆಂಗಳೂರು: ₹100 ನೀಡದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರು: ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಏನಿದು ಪ್ರಕರಣ?
2018ರ ಜುಲೈನಲ್ಲಿ ದಿನಕರನ್ ಎಂಬವರು ಬೆಂಗಳೂರಿನ ಶಾಕಾಂಬರಿ ನಗರದ ಅಂಬೇಡ್ಕರ್ ರಸ್ತೆಯಲ್ಲಿ ರಾಜರಾಜೇಶ್ವರಿ ಕೊಳಚೆ ಪ್ರದೇಶದ ಕಡೆಗೆ ತೆರಳುತ್ತಿದ್ದರು. ಈ ವೇಳೆ ವೀರಮಣಿಕಂಠ ಅಲಿಯಾಸ್ ವಿಜಿ ಎಂಬಾತ ಅವರನ್ನು ಅಡ್ಡಗಟ್ಟಿ ₹100 ನೀಡುವಂತೆ ಒತ್ತಾಯಿಸಿದ್ದ.
ತಮ್ಮ ಬಳಿ ಹಣವಿಲ್ಲ ಎಂದು ದಿನಕರನ್ ತಿಳಿಸಿದಾಗ, ಆರೋಪಿ ವೀರಮಣಿಕಂಠ ಚಾಕುವಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ದಿನಕರನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಾಕ್ಷ್ಯಾಧಾರಗಳ ಆಧಾರದಲ್ಲಿ ತೀರ್ಪು
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ಸಾಕ್ಷ್ಯಗಳನ್ನು ಪರಿಗಣಿಸಿ, ಆರೋಪಿ ವೀರಮಣಿಕಂಠನಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ – ಪ್ರಕರಣ ದಾಖಲು
ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29) ಅವರು ಈ ಕುರಿತು ದೂರು ನೀಡಿದ್ದಾರೆ.
ಉಪ್ಪಿನಂಗಡಿ: ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29) ಅವರು ನೀಡಿದ ದೂರಿನಂತೆ, ಅ.21ರಂದು ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ.
ದೂರುದಾರರು ತಮ್ಮ ಕಾರಿನಲ್ಲಿ ಡಾ. ಸುಪ್ರಿತ್ ಲೋಬೋ ಅವರನ್ನು ಉಪ್ಪಿನಂಗಡಿಯ ನರ್ಸಿಂಗ್ ಹೋಂನಿಂದ ಕರೆದುಕೊಂಡು ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಿಂದಿನಿಂದ ಬಂದ ಮತ್ತೊಂದು ಕಾರಿನ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಾ ಹಾರ್ನ್ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ನಿಧಾನವಾಗಿ ವಾಹನ ಚಲಾಯಿಸುವಂತೆ ದೂರುದಾರರು ಕೈ ಸನ್ನೆ ಮಾಡಿದ್ದಾರೆ.
ಇದರಿಂದ ಆಕ್ರೋಶಗೊಂಡ ಆರೋಪಿ ತನ್ನ ಕಾರನ್ನು ಅಡ್ಡಗಟ್ಟಿ, ದೂರುದಾರರ ಕಾಲರ್ ಹಿಡಿದು ಮುಖಕ್ಕೆ ಮುಷ್ಟಿಯಿಂದ ಹೊಡೆದು, ಕಾಲಿನಿಂದ ತುಳಿದು ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜೇಶ್ ಮತ್ತು ಸಂದೀಪ್ ಎಂಬವರು ಸ್ಥಳಕ್ಕೆ ಆಗಮಿಸಿ ಜಗಳ ಬಿಡಿಸಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Sexual harassment-ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್
ಓಖಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಣ್ಣೂರು ಜಿಲ್ಲೆಯ ಇಬ್ಬರನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಣ್ಣೂರು ಜಿಲ್ಲೆಯ ಎಡಮನೆ ನಿವಾಸಿ ದೀಪು ಇ. (36) ಮತ್ತು ತಾಟಿಯೇರಿ ನಿವಾಸಿ ಪ್ರಮೋದ್ ಸಿ. (54) ಎಂದು ಗುರುತಿಸಲಾಗಿದೆ.
ಕಾಸರಗೋಡು: ಓಖಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಣ್ಣೂರು ಜಿಲ್ಲೆಯ ಇಬ್ಬರನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಣ್ಣೂರು ಜಿಲ್ಲೆಯ ಎಡಮನೆ ನಿವಾಸಿ ದೀಪು ಇ. (36) ಮತ್ತು ತಾಟಿಯೇರಿ ನಿವಾಸಿ ಪ್ರಮೋದ್ ಸಿ. (54) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 20ರಂದು ಯುವತಿಯೊಬ್ಬರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಬೈಂದೂರು ಮೂಕಾಂಬಿಕಾ ರೈಲು ನಿಲ್ದಾಣದಿಂದ ಓಖಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಞಂಗಾಡ್‌ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ಬೋಗಿಯಲ್ಲಿದ್ದ ಇಬ್ಬರು ಯುವತಿಗೆ ಮುಜುಗರ ಉಂಟುಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರೈಲು ಕಾಞಂಗಾಡ್ ನಿಲ್ದಾಣ ತಲುಪಿದ ಬಳಿಕ ಕೆಳಗಿಳಿದ ಯುವತಿ, ಕರ್ತವ್ಯದಲ್ಲಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಸೋಜನ್ ಟಿ.ಸಿ. ಅವರಿಗೆ ದೂರು ನೀಡಿದ್ದಾರೆ. ಅವರಿಂದ ಮಾಹಿತಿ ಪಡೆದ ಕಾಸರಗೋಡು ರೈಲ್ವೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
-
ನಿಧನ ವಾರ್ತೆ11 hours agoNelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
-
ಮಂಗಳೂರು9 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ನಿಧನ ವಾರ್ತೆ10 hours agoSuicide-ಜನಪ್ರಿಯ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ : ಸೈಬರ್ ಕಿರುಕುಳ ಕಾರಣ ಎಂದ ತಂದೆ
-
ಅಪರಾಧ11 hours agoPuttur-ಪುತ್ತೂರು: 35 ಗ್ರಾಂ ಚಿನ್ನ ವಾಪಸ್ ಕೇಳಿದ್ದಕ್ಕೆ ಹಲ್ಲೆ? ಸಂಬಂಧಿಕರ ವಿರುದ್ಧ ದೂರು
-
ಸ್ಥಳೀಯ9 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ನಿಧನ ವಾರ್ತೆ10 hours agoPuttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
-
ಅಂತರ ರಾಜ್ಯ5 hours agoSexual harassment-ಎಕ್ಸ್‌ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್
-
ನಿಧನ ವಾರ್ತೆ5 hours agoMudubidire-ಮೂಡುಬಿದಿರೆ: ವಿದ್ಯುತ್ ಆಘಾತಕ್ಕೆ ತಾಯಿ-ಮಗ ದಾರುಣ ಸಾವು




















