ನಿಧನ ವಾರ್ತೆ
Suicide-ಜನಪ್ರಿಯ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ : ಸೈಬರ್ ಕಿರುಕುಳ ಕಾರಣ ಎಂದ ತಂದೆ
ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು ತಂದೆ ಆರೋಪಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಚೆನ್ನೈ: ಹಣಕಾಸು ಮತ್ತು ಹೂಡಿಕೆ ಕುರಿತ ವಿಡಿಯೊಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಕಂಟೆಂಟ್ ಕ್ರಿಯೇಟರ್ ವಿ. ಹರೀಶ್ ಅವರು ಚೆನ್ನೈನ ಮುಟ್ಟುಕಡುವಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿನ ಕಿರುಕುಳ ಮತ್ತು ಒತ್ತಡವೇ ಕಾರಣ ಎಂದು ತಂದೆ ಆರೋಪಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹರೀಶ್ ಅವರು ‘ಫೈನಾನ್ಸ್ ವಿಥ್ ಹರೀಶ್’ ಎಂಬ ಜನಪ್ರಿಯ ಚಾನೆಲ್ ನಡೆಸುತ್ತಿದ್ದರು. ಹಣಕಾಸು ಹಾಗೂ ಹೂಡಿಕೆ ಕುರಿತ ಮಾಹಿತಿಯನ್ನು ವಿಡಿಯೊಗಳ ಮೂಲಕ ಹಂಚಿಕೊಳ್ಳುತ್ತಿದ್ದ ಅವರು, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂನಲ್ಲಿ ಒಟ್ಟು 13 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದರು.
ಹರೀಶ್ ಅವರ ತಂದೆ ವಿನಯಗಂ ಅವರು ಯೂಟ್ಯೂಬರ್ ಹಾಗೂ ಝಮುರಿಯಾ ಇಂಕ್ನ ಸಿಇಒ ಜೇಸನ್ ಸಾಮುಯೆಲ್ ವಿರುದ್ಧ ದೂರು ದಾಖಲಿಸಿದ್ದಾರೆ.
ವಿಡಿಯೊ ಬಳಿಕ ಸಾಮಾಜಿಕ ಜಾಲತಾಣ ಖಾತೆಗಳು ನಿಷ್ಕ್ರಿಯ?
ಅಕ್ಟೋಬರ್ 18ರಂದು ಜೇಸನ್ ಸಾಮುಯೆಲ್ ಅವರು ವಿಡಿಯೊವೊಂದನ್ನು ಪ್ರಕಟಿಸಿ, ಭಾರತೀಯ ಷೇರುಪೇಟೆ ಮಂಡಳಿ (SEBI) ಹಾಗೂ ಭಾರತೀಯ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (AMFI)ಗೆ ಸಂಬಂಧಿಸಿದ ಹರೀಶ್ ಅವರ ದಾಖಲೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವಿಡಿಯೊ ಪ್ರಕಟವಾದ ಬಳಿಕ ಹರೀಶ್ ಅವರ ಸಾಮಾಜಿಕ ಜಾಲತಾಣ ಖಾತೆಗಳು ನಿಷ್ಕ್ರಿಯಗೊಂಡಿದ್ದವು. ಆನ್ಲೈನ್ ಕಿರುಕುಳ ಮತ್ತು ಮಾನಸಿಕ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಂದೆ ಆರೋಪಿಸಿದ್ದಾರೆ.
ಆರೋಪ ನಿರಾಕರಿಸಿದ ಜೇಸನ್ ಸಾಮುಯೆಲ್
ತಮ್ಮ ವಿರುದ್ಧದ ಆರೋಪಗಳನ್ನು ಜೇಸನ್ ಸಾಮುಯೆಲ್ ನಿರಾಕರಿಸಿದ್ದಾರೆ. ಹರೀಶ್ ಅವರು ಸೆಬಿಯ ಪರವಾನಗಿ ಹೊಂದಿರಲಿಲ್ಲ ಎಂಬುದನ್ನು ಹಾಗೂ ನಿಯಮಗಳ ಉಲ್ಲಂಘನೆ ಮತ್ತು ನಕಲಿ ಪರವಾನಗಿಗೆ ಸಂಬಂಧಿಸಿದ ವಿಚಾರಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತೆ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹರೀಶ್ ಅವರ ಸಾವಿಗೂ ಮುನ್ನ ಪ್ರಕಟಿಸಿದ್ದ ವಿಡಿಯೊಗಳು ಸೇರಿದಂತೆ ವಿವಿಧ ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.
ಹರೀಶ್ ಅವರ ಸಾವಿಗೆ ಸೈಬರ್ ಕಿರುಕುಳವೇ ಕಾರಣ ಎಂಬ ಆರೋಪ ಇನ್ನೂ ತನಿಖೆಯಲ್ಲಿದ್ದು, ಈ ಕುರಿತು ಪೊಲೀಸರ ಅಧಿಕೃತ ತನಿಖೆಯ ಫಲಿತಾಂಶ ಹೊರಬರಬೇಕಿದೆ.
ನಿಧನ ವಾರ್ತೆ
Mudubidire-ಮೂಡುಬಿದಿರೆ: ವಿದ್ಯುತ್ ಆಘಾತಕ್ಕೆ ತಾಯಿ-ಮಗ ದಾರುಣ ಸಾವು
ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಮೃತಪಟ್ಟವರು.
ಮೂಡುಬಿದಿರೆ, ಅ.22: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಮೃತಪಟ್ಟವರು. ಶೋನ್ ಮೂಡುಬಿದಿರೆಯ ಹೋಲಿ ರೋಸರಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಮಗನ ರಕ್ಷಣೆಗೆ ಧಾವಿಸಿದ ತಾಯಿಗೂ ವಿದ್ಯುತ್ ಆಘಾತ
ಮನೆಯ ಬಳಿ ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿದ್ದರಿಂದ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಶೋನ್ ಬಟ್ಟೆ ಒಣಗಿಸಲು ಹಾಕುವ ಸಂದರ್ಭದಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಒದ್ದಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ತಾಯಿ ಮರ್ಸಿ, ಮಗನನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಆಘಾತ ತಗುಲಿ, ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Puttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ. ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಅವರ ಹೆಸರು, ವಿಳಾಸ ಹಾಗೂ ಸಂಬಂಧಿಕರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಪುತ್ತೂರು: ಮಾಣಿ–ಮೈಸೂರು ಹೆದ್ದಾರಿಯ ಒಳಮೊಗ್ರು ಗ್ರಾಮದ ಕೊಯಿಲತ್ತಡ್ಕ ಮಸೀದಿ ಬಳಿ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಮೃತಪಟ್ಟ ಘಟನೆ ಅ.19ರಂದು ರಾತ್ರಿ ನಡೆದಿದೆ.
ಮೃತ ವೃದ್ಧರಿಗೆ ಸುಮಾರು 60ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಅವರ ಹೆಸರು, ವಿಳಾಸ ಹಾಗೂ ಸಂಬಂಧಿಕರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಕಾರು ಢಿಕ್ಕಿಯಾದ ರಭಸಕ್ಕೆ ವೃದ್ಧರ ಹಣೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರೀಕ್ಷಿಸಿದ ವೈದ್ಯರು ವೃದ್ಧರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರು ಗಡ್ಡಧಾರಿಯಾಗಿದ್ದು, ಅಂಗಿ, ಚಳಿಗಾಲದ ಜಾಕೆಟ್ ಹಾಗೂ ಟ್ರ್ಯಾಕ್ ಪ್ಯಾಂಟ್ ಧರಿಸಿದ್ದರು. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ನಿಧನ ವಾರ್ತೆ
Nelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜೋರ್ಜ್ (16) ಎಂದು ಗುರುತಿಸಲಾಗಿದೆ.

ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅನ್ವಿನ್ ಜೋಜೋ ಜೋರ್ಜ್ (16) ಎಂದು ಗುರುತಿಸಲಾಗಿದೆ.

ಗುರುವಾರ ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಅನ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
-
ನಿಧನ ವಾರ್ತೆ11 hours agoNelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
-
ಮಂಗಳೂರು9 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ಅಪರಾಧ11 hours agoMangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
-
ಅಪರಾಧ11 hours agoPuttur-ಪುತ್ತೂರು: 35 ಗ್ರಾಂ ಚಿನ್ನ ವಾಪಸ್ ಕೇಳಿದ್ದಕ್ಕೆ ಹಲ್ಲೆ? ಸಂಬಂಧಿಕರ ವಿರುದ್ಧ ದೂರು
-
ಸ್ಥಳೀಯ9 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ನಿಧನ ವಾರ್ತೆ10 hours agoPuttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
-
ಅಂತರ ರಾಜ್ಯ5 hours agoSexual harassment-ಎಕ್ಸ್ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್
-
ನಿಧನ ವಾರ್ತೆ5 hours agoMudubidire-ಮೂಡುಬಿದಿರೆ: ವಿದ್ಯುತ್ ಆಘಾತಕ್ಕೆ ತಾಯಿ-ಮಗ ದಾರುಣ ಸಾವು


















