ಕಾರ್ಯಕ್ರಮಗಳು
Dwaraka’-‘ದ್ವಾರಕ’ ಉಜ್ಜೀವನದಲ್ಲಿ ನವರಾತ್ರಿ ಆಯುಧ ಪೂಜೆ
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ ತಾಳಮದ್ದಳೆ ಸಂಪನ್ನಗೊಂಡಿತು.
ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ‘ನವರಾತ್ರಿ ಆಯುಧ ಪೂಜೆ’ ದಿನಾಂಕ 19-10-2026ರಂದು ಜರುಗಿತು. ಪೂಜೆಯ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಮಾಯಾ ಮೃಗ’ ಎಂಬ ಯಕ್ಷಗಾನ ತಾಳಮದ್ದಳೆ ಸಂಪನ್ನಗೊಂಡಿತು.
ಕಾರ್ಯಕ್ರಮವನ್ನು ದ್ವಾರಕಾ ಪ್ರತಿಷ್ಠಾನದ ನಿರ್ದೇಶಕರಾದ ಶ್ರೀಮತಿ ಲಕ್ಷ್ಮೀ ಅಮ್ಮನವರು ಉದ್ಘಾಟನೆಗೊಳಿಸಿದರು. ಬಳಿಕ ಶ್ರೀ ರಜಾಕ್ ಪುತ್ತೂರು ಮತ್ತು ಶ್ರೀ ಬಾಲಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ನಿರ್ಮಾಣಗೊಂಡ ಉಜ್ಜೀವನದ ಕುರಿತ ಕಿರುಚಿತ್ರ ಲೋಕಾರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ಸಂಸ್ಥೆಯ ವಾಹನಗಳಿಗೆ ಪೂಜೆ, ಆಯುಧ ಪೂಜೆ ವೇದಮೂರ್ತಿ ಶ್ರೀ ಕೃಷ್ಣಕುಮಾರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು. ಪಟಾಕಿ-ಸುಡು ಮದ್ದಿನ ಪ್ರದರ್ಶನ, ಉಪಾಹಾರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು, ಗ್ರಾಹಕರು, ಹಿತೈಷಿ-ಬಂಧುಗಳು, ಸ್ಥಳೀಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ತುಳಸಿ ಪೂಜೆಯಂದು ನಡೆಯಲಿದೆ ಶಾಸಕ ಅಶೋಕ್ ರೈ ನೇತೃತ್ವದ 14ನೇ ವರ್ಷದ ‘ಅಶೋಕ ಜನ-ಮನ’ – ನ.22ರಂದು 3 ಕೌಂಟರ್ ನಲ್ಲಿ ನಡೆಯಲಿದೆ 1 ಲಕ್ಷಕ್ಕೂ ಮಿಕ್ಕಿ ಜನರಿಗೆ ತುಳುನಾಡಿನ ಬೃಹತ್ ‘ವಸ್ತ್ರ ವಿತರಣೆ’..!
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ. ನವೆಂಬರ್ 8ರಂದು ನಡೆಯಬೇಕಿದ್ದ ಕಾರ್ಯಕ್ರಮವು ಇದೀಗ ನವೆಂಬರ್ 22ರಂದು ತುಳಸಿ ಹಬ್ಬದ ದಿನ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ. ನವೆಂಬರ್ 8ರಂದು ನಡೆಯಬೇಕಿದ್ದ ಕಾರ್ಯಕ್ರಮವು ಇದೀಗ ನವೆಂಬರ್ 22ರಂದು ತುಳಸಿ ಹಬ್ಬದ ದಿನ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಅ.22ರಂದು ಶಾಸಕರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ನವೆಂಬರ್ 8ರಂದು ದಿನಾಂಕ ನಿಗದಿಪಡಿಸಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಕಾರ್ಯಕ್ರಮ ನಡೆಯುವ ಕ್ರೀಡಾಂಗಣದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡುವ ಕಾರ್ಯವನ್ನೂ ಪೂರ್ಣಗೊಳಿಸಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ತಿಳಿಸಿದರು.
ಬೆಳಿಗ್ಗೆ 9.30ರಿಂದಲೇ ವಸ್ತ್ರ ವಿತರಣೆ
ಕಾರ್ಯಕ್ರಮದಲ್ಲಿ ಅತಿಥಿಗಳಿಗಾಗಿ ಕಾಯದೆ ಬೆಳಿಗ್ಗೆ 9.30ರಿಂದಲೇ ವಸ್ತ್ರ ವಿತರಣೆ ಆರಂಭಿಸಲಾಗುವುದು. ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಜನರಷ್ಟೇ ಅಲ್ಲದೆ, ಇತರ ಪ್ರದೇಶಗಳಿಂದ ಆಗಮಿಸುವವರಿಗೂ ವಸ್ತ್ರ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಯಾವುದೇ ಗುರುತಿನ ಚೀಟಿ ತರುವ ಅಗತ್ಯವಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ವಿತರಣೆ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.
ಒಂದು ಲಕ್ಷ ಜನರಿಗೆ ವಸ್ತ್ರ ಹಾಗೂ ಅಗತ್ಯ ವಸ್ತುಗಳ ವಿತರಣೆ
ಈ ಬಾರಿ ಒಂದು ಲಕ್ಷ ಜನರಿಗೆ ವಸ್ತ್ರ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದೇ ಮನೆಯಿಂದ ಎಷ್ಟು ಮಂದಿ ಬಂದರೂ ಪ್ರತಿಯೊಬ್ಬರಿಗೂ ವಸ್ತುಗಳನ್ನು ನೀಡಲಾಗುವುದು.
ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಬೆಡ್‌ಶೀಟ್ ಸೇರಿದಂತೆ ಬಟ್ಟಲು, ಗ್ಯಾಸ್, ಬೌಲ್ ಮತ್ತು ಟವೆಲ್ ಸೆಟ್‌ಗಳನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಮೂರು ಕೌಂಟರ್‌ಗಳನ್ನು ತೆರೆಯಲಾಗಿದ್ದು, ಜನರು ತಮಗೆ ಅಗತ್ಯವಿರುವ ವಸ್ತುಗಳನ್ನು ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಒಂದು ವರ್ಷದ ಮಗುವಿನಿಂದ ಹಿಡಿದು ವಯೋವೃದ್ಧರವರೆಗೂ ವಸ್ತುಗಳನ್ನು ವಿತರಿಸಲಾಗುವುದು. ತಾಯಿ-ಮಗು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ವಿತರಣಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಶೋಕ್ ಕುಮಾರ್ ರೈ ವಿವರಿಸಿದರು.
ಒಂದು ಲಕ್ಷ ದೋಸೆ ವಿತರಣೆ; ಮಧ್ಯಾಹ್ನ ಅನ್ನಸಂತರ್ಪಣೆ
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30ರಿಂದಲೇ ದೋಸೆ ವಿತರಣೆ ಆರಂಭವಾಗಲಿದೆ. ಈ ಬಾರಿ ಒಂದು ಲಕ್ಷ ದೋಸೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 11.30ರವರೆಗೆ ದೋಸೆ ವಿತರಣೆ ನಡೆಯಲಿದ್ದು, ಬಳಿಕ ಮಧ್ಯಾಹ್ನದ ಊಟ ಆರಂಭವಾಗಲಿದೆ. ಮಧ್ಯಾಹ್ನ 3 ಗಂಟೆಯವರೆಗೆ ಅನ್ನಸಂತರ್ಪಣೆ ನಡೆಯಲಿದ್ದು, ನಂತರ ಮತ್ತೆ ದೋಸೆ ವಿತರಣೆ ಮುಂದುವರಿಯಲಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪೂಡಾ ಸದಸ್ಯ ನಿಹಾಲ್ ಶೆಟ್ಟಿ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಹಾಗೂ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur Dasara: ಪುತ್ತೂರು ದಸರಾ ವೈಭವದ ಶೋಭಾಯಾತ್ರೆ
ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು.
ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ ವತಿಯಿಂದ ನಡೆದ ಪುತ್ತೂರು ದಸರಾ ಉತ್ಸವದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹದ ಭವ್ಯ ಶೋಭಾಯಾತ್ರೆ ಬುಧವಾರ ಸಂಜೆ ಪುತ್ತೂರಿನ ಮುಖ್ಯ ರಸ್ತೆಯಲ್ಲಿ ಸಾಗಿತು. ವಿವಿಧ ಕಲಾಪ್ರಕಾರಗಳು ಮೆರವಣಿಗೆ ಮೆರುಗು ನೀಡಿದವು.
ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಧ್ವಜಾರೋಹಣ ನೆರವೇರಿಸಿದರು. ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಪುಷ್ಪಾರ್ಚನೆ ಮಾಡಿದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ರಥಾರತಿ ನೆರವೇರಿಸಿದರು.
ಬೊಳುವಾರು ಜಂಕ್ಷನ್‌ನಿಂದ ದರ್ಬೆ ಸರ್ಕಲ್‌ವರೆಗೆ ಕಲಾತಂಡಗಳು ಸುಮಾರು 5 ಕಡೆಗಳಲ್ಲಿ ಪ್ರದರ್ಶನ ನೀಡಿದವು. ಕುಣಿತ ಭಜನಾ ತಂಡ, ಪುಟ್ಟ ಶಾರದೆಯರು, ಹುಲಿ ಕುಣಿತದ ವಿವಿಧ ವೇಷಧಾರಿಗಳು ಮೆರವಣಿಗೆಗೆ ಮೆರುಗು ತಂದರು.
ಮಾಜಿ ಶಾಸಕ ಸಂಜೀವ ಮಠಂದೂರು, ಅಬುಧಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರು
Mangalore Dasara-ಮಂಗಳೂರು ದಸರಾ: ಭವ್ಯ ಶೋಭಾಯಾತ್ರೆಗೆ ಜನಸಾಗರ; ಭಕ್ತಿ-ಸಂಸ್ಕೃತಿಯ ವೈಭವದ ಅನಾವರಣ..!
ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು ಭಕ್ತರು ಹಾಗೂ ಸಾರ್ವಜನಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.
ಮಂಗಳೂರು: ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು ಭಕ್ತರು ಹಾಗೂ ಸಾರ್ವಜನಿಕರು ಮೆರವಣಿಗೆಯನ್ನು ಕಣ್ತುಂಬಿಕೊಂಡರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆ ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆಯಿತು.
ಕ್ಷೇತ್ರದಲ್ಲಿ ನವರಾತ್ರಿಯ ಸಂದರ್ಭದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ವಿಗ್ರಹಗಳನ್ನು ಶೋಭಾಯಾತ್ರೆಯಲ್ಲಿ ಕೊಂಡೊಯ್ಯಲಾಯಿತು.
ವಿವಿಧ ಅಲಂಕಾರಗಳಿಂದ ಕಂಗೊಳಿಸಿದ ಸ್ತಬ್ಧಚಿತ್ರಗಳು ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯವನ್ನು ಬಿಂಬಿಸುವ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಬಣ್ಣಬಣ್ಣದ ವಿದ್ಯುತ್ ದೀಪಗಳ ಅಲಂಕಾರ, ಆಕರ್ಷಕ ಸ್ತಬ್ಧಚಿತ್ರಗಳು ಹಾಗೂ ಉತ್ಸವದ ಸಂಭ್ರಮ ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸಿದವು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಭಕ್ತಿಭಾವದಿಂದ ದೇವರ ದರ್ಶನ ಪಡೆದು ಮೆರವಣಿಗೆಯನ್ನು ವೀಕ್ಷಿಸಿದರು.
9 ಕಿ.ಮೀ. ಸಾಗಿದ ಭವ್ಯ ಮೆರವಣಿಗೆ
ಶ್ರೀಕ್ಷೇತ್ರ ಕುದ್ರೋಳಿಯಿಂದ ಹೊರಟ ಶೋಭಾಯಾತ್ರೆಯು ಮಣ್ಣಗುಡ್ಡ ಬ್ರಹ್ಮಶ್ರೀ ನಾರಾಯಣಗುರು ವೃತ್ತ, ಲಾಲ್‌ಬಾಗ್, ಬಲ್ಲಾಳ್‌ಬಾಗ್, ಪಿವಿಎಸ್ ಜಂಕ್ಷನ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿಶ್ವವಿದ್ಯಾನಿಲಯ ಕಾಲೇಜು ವೃತ್ತ, ಗಣಪತಿ ಹೈಸ್ಕೂಲ್, ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ, ಕಾರ್ ಸ್ಟ್ರೀಟ್ ಹಾಗೂ ಅಳಕೆ ಮಾರ್ಗವಾಗಿ ಸಂಚರಿಸಿ ಮತ್ತೆ ಕುದ್ರೋಳಿ ಕ್ಷೇತ್ರವನ್ನು ತಲುಪಿತು.
ನಗರದ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಸಾಗಿದ ಶೋಭಾಯಾತ್ರೆ ಮಂಗಳೂರು ದಸರಾ ಮಹೋತ್ಸವದ ವೈಭವ, ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಿತು.
ಸೇವಾಕರ್ತರಿಗೆ ಸಮ್ಮಾನ
ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿ ಕ್ಷೇತ್ರದಲ್ಲಿ ಶ್ರೀ ಶಾರದಾ ಮಾತೆಯ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ವಿವಿಧ ಸೇವಾಕರ್ತರನ್ನು ಕ್ಷೇತ್ರದ ಪರವಾಗಿ ಬಿ. ಜನಾರ್ದನ ಪೂಜಾರಿ ಅವರು ಗೌರವಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಖಜಾಂಚಿ ಪದ್ಮರಾಜ್ ಆರ್. ಪೂಜಾರಿ, ದೇವಸ್ಥಾನದ ಟ್ರಸ್ಟಿಗಳಾದ ಎಚ್.ಎಸ್. ಸಾಯಿರಾಂ, ಸಂತೋಷ್ ಕುಮಾರ್ ಜೆ., ಜಗದೀಪ್ ಡಿ. ಸುವರ್ಣ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹಾಧ್ಯಕ್ಷೆ ಡಾ. ಅನಸೂಯಾ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ ಸೇರಿದಂತೆ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-
ನಿಧನ ವಾರ್ತೆ11 hours agoNelyadi-BIG BREAKING:ನೆಲ್ಯಾಡಿ ಕರ್ಬಸಂಕದಲ್ಲಿ ಭೀಕರ ಅಪಘಾತ: ಟ್ಯಾಂಕರ್ಗೆ ಕಾರು ಡಿಕ್ಕಿ, ಪುತ್ತೂರು ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಾವು
-
ಮಂಗಳೂರು9 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ಅಪರಾಧ11 hours agoMangalore-ಮಂಗಳೂರು: ಮದುವೆ ಸಮಾರಂಭದಲ್ಲಿ ಬಾಲಕಿಯ ಸರ ಎಗರಿಸಿದ ಆರೋಪ; 9 ಪ್ರಕರಣಗಳ ಆರೋಪಿ ಮಹಿಳೆ ಬಂಧನ
-
ನಿಧನ ವಾರ್ತೆ10 hours agoSuicide-ಜನಪ್ರಿಯ ಕಂಟೆಂಟ್ ಕ್ರಿಯೇಟರ್ ಆತ್ಮಹತ್ಯೆ : ಸೈಬರ್ ಕಿರುಕುಳ ಕಾರಣ ಎಂದ ತಂದೆ
-
ಅಪರಾಧ11 hours agoPuttur-ಪುತ್ತೂರು: 35 ಗ್ರಾಂ ಚಿನ್ನ ವಾಪಸ್ ಕೇಳಿದ್ದಕ್ಕೆ ಹಲ್ಲೆ? ಸಂಬಂಧಿಕರ ವಿರುದ್ಧ ದೂರು
-
ಸ್ಥಳೀಯ9 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ನಿಧನ ವಾರ್ತೆ10 hours agoPuttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
-
ಅಂತರ ರಾಜ್ಯ5 hours agoSexual harassment-ಎಕ್ಸ್ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್


















