ಅಪರಾಧ
Rakesh Shetty-‘ಸ್ಟಿಂಗ್’ ಕಾರ್ಯಾಚರಣೆ : ಮೈಸೂರಿನ ಹೊಟೇಲ್ ನಿಂದ ರಾಕೇಶ್ ಶೆಟ್ಟಿ ವಶಕ್ಕೆ : ವಿಚಾರಣೆ ನಂತರ ಬಿಡುಗಡೆ – ಕೋರ್ಟ್ ಮೊರೆ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ.
ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಒಂದು ವಾರದಿಂದ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸುತ್ತಿದ್ದ ಸೈಬರ್ ಪೊಲೀಸರು ಇದೀಗ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ತಂಗಿದ್ದ ರಾಕೇಶ್ ಶೆಟ್ಟಿ ಅವರನ್ನು ಬುಧವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಗುರುವಾರ ಮುಂಜಾನೆ ಅವರನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಯ ಬೆನ್ನಲ್ಲೇ ರಾಕೇಶ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದರು. ಅಲ್ಲದೆ, ಸಂಬಂಧಪಟ್ಟ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಗಡುವು ನೀಡಿದ್ದರು. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಭಾಗಿಯಾಗಿದ್ದಾರೆ ಎಂದೂ ಅವರು ಆರೋಪಿಸಿದ್ದರು.
ಇನ್ನು, ರಾಕೇಶ್ ಶೆಟ್ಟಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ ಸಿಸಿಎಚ್ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ.
ಅಪರಾಧ
Mangalore-ಉಚಿತ ಟಿವಿ ಚಾನೆಲ್ ಆಮಿಷಕ್ಕೆ ಬಲಿ; ಆ್ಯಪ್ ಡೌನ್‌ಲೋಡ್ ಮಾಡಿದ್ದಕ್ಕೆ ₹1.78 ಲಕ್ಷ ಕಳೆದುಕೊಂಡ ಮಂಗಳೂರಿನ ವ್ಯಕ್ತಿ..!
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು, ಅ.22: ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೇಸ್‌ಬುಕ್ ಜಾಹೀರಾತು ನಂಬಿ ಆ್ಯಪ್ ಡೌನ್‌ಲೋಡ್
ದೂರುದಾರರು ಅಕ್ಟೋಬರ್ 15ರಂದು ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ ‘XM TV’ ಎಂಬ ಆ್ಯಪ್‌ನ ಜಾಹೀರಾತು ಕಾಣಿಸಿಕೊಂಡಿತ್ತು. ಆ್ಯಪ್ ಡೌನ್‌ಲೋಡ್ ಮಾಡಿಕೊಂಡರೆ ಎಲ್ಲ ಟಿವಿ ಚಾನೆಲ್‌ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿ ಅವರು ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದರು.
ಆದರೆ, ಅಕ್ಟೋಬರ್ 16ರಂದು ಅವರ ಎರಡು ಬ್ಯಾಂಕ್ ಖಾತೆಗಳಿಂದ ಕ್ರಮವಾಗಿ ₹98,000 ಮತ್ತು ₹30,191 ವರ್ಗಾವಣೆಯಾಗಿತ್ತು. ಮರುದಿನ ಅಕ್ಟೋಬರ್ 17ರಂದು ಮತ್ತೊಂದು ಬಾರಿ ₹50,000 ಹಣ ಅವರ ಗಮನಕ್ಕೆ ಬಾರದೆ ಅಪರಿಚಿತ ಖಾತೆಗೆ ವರ್ಗಾವಣೆಯಾಗಿತ್ತು. ಒಟ್ಟು ₹1,78,191 ಹಣ ಕಳೆದುಹೋಗಿದೆ.
ಎಪಿಕೆ ಫೈಲ್ ಮೂಲಕ ವಂಚನೆ ಶಂಕೆ
ಅಕ್ಟೋಬರ್ 18ರಂದು ಬ್ಯಾಂಕ್ ಖಾತೆಯಲ್ಲಿನ ಹಣದ ಶಿಲ್ಕು ಪರಿಶೀಲಿಸಿದಾಗ ಹಣ ಇಲ್ಲದಿರುವುದು ದೂರುದಾರರ ಗಮನಕ್ಕೆ ಬಂದಿದೆ. ಬಳಿಕ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದಾಗ, ಮೊಬೈಲ್‌ನಲ್ಲಿ ಎಪಿಕೆ (APK) ಫೈಲ್ ಡೌನ್‌ಲೋಡ್ ಆಗಿರುವುದು ತಿಳಿದುಬಂದಿದೆ.
‘XM TV’ ಆ್ಯಪ್ ಡೌನ್‌ಲೋಡ್ ಮಾಡುವ ಸಂದರ್ಭದಲ್ಲಿ ಎಪಿಕೆ ಫೈಲ್ ಕೂಡ ಡೌನ್‌ಲೋಡ್ ಆಗಿದ್ದು, ಇದರ ಮೂಲಕ ಹಣ ವರ್ಗಾವಣೆಯಾಗಿರುವ ಶಂಕೆ ವ್ಯಕ್ತವಾಗಿದೆ. ತನ್ನ ಖಾತೆಯಿಂದ ಹಣ ವರ್ಗಾವಣೆ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.
ಅಪರಿಚಿತ ಮೂಲಗಳಿಂದ ಎಪಿಕೆ ಫೈಲ್‌ಗಳನ್ನು ಡೌನ್‌ಲೋಡ್ ಮಾಡುವಾಗ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸುವ ಉಚಿತ ಸೇವೆಗಳ ಜಾಹೀರಾತುಗಳನ್ನು ಪರಿಶೀಲಿಸದೆ ನಂಬುವುದು ಅಪಾಯಕಾರಿಯಾಗಬಹುದು.
ಅಪರಾಧ
Bengaluru-ಬೆಂಗಳೂರು: ₹100 ನೀಡದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಬೆಂಗಳೂರು: ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಏನಿದು ಪ್ರಕರಣ?
2018ರ ಜುಲೈನಲ್ಲಿ ದಿನಕರನ್ ಎಂಬವರು ಬೆಂಗಳೂರಿನ ಶಾಕಾಂಬರಿ ನಗರದ ಅಂಬೇಡ್ಕರ್ ರಸ್ತೆಯಲ್ಲಿ ರಾಜರಾಜೇಶ್ವರಿ ಕೊಳಚೆ ಪ್ರದೇಶದ ಕಡೆಗೆ ತೆರಳುತ್ತಿದ್ದರು. ಈ ವೇಳೆ ವೀರಮಣಿಕಂಠ ಅಲಿಯಾಸ್ ವಿಜಿ ಎಂಬಾತ ಅವರನ್ನು ಅಡ್ಡಗಟ್ಟಿ ₹100 ನೀಡುವಂತೆ ಒತ್ತಾಯಿಸಿದ್ದ.
ತಮ್ಮ ಬಳಿ ಹಣವಿಲ್ಲ ಎಂದು ದಿನಕರನ್ ತಿಳಿಸಿದಾಗ, ಆರೋಪಿ ವೀರಮಣಿಕಂಠ ಚಾಕುವಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ದಿನಕರನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಾಕ್ಷ್ಯಾಧಾರಗಳ ಆಧಾರದಲ್ಲಿ ತೀರ್ಪು
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ಸಾಕ್ಷ್ಯಗಳನ್ನು ಪರಿಗಣಿಸಿ, ಆರೋಪಿ ವೀರಮಣಿಕಂಠನಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಆರೋಪ – ಪ್ರಕರಣ ದಾಖಲು
ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29) ಅವರು ಈ ಕುರಿತು ದೂರು ನೀಡಿದ್ದಾರೆ.
ಉಪ್ಪಿನಂಗಡಿ: ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29) ಅವರು ನೀಡಿದ ದೂರಿನಂತೆ, ಅ.21ರಂದು ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ.
ದೂರುದಾರರು ತಮ್ಮ ಕಾರಿನಲ್ಲಿ ಡಾ. ಸುಪ್ರಿತ್ ಲೋಬೋ ಅವರನ್ನು ಉಪ್ಪಿನಂಗಡಿಯ ನರ್ಸಿಂಗ್ ಹೋಂನಿಂದ ಕರೆದುಕೊಂಡು ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಿಂದಿನಿಂದ ಬಂದ ಮತ್ತೊಂದು ಕಾರಿನ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಾ ಹಾರ್ನ್ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ನಿಧಾನವಾಗಿ ವಾಹನ ಚಲಾಯಿಸುವಂತೆ ದೂರುದಾರರು ಕೈ ಸನ್ನೆ ಮಾಡಿದ್ದಾರೆ.
ಇದರಿಂದ ಆಕ್ರೋಶಗೊಂಡ ಆರೋಪಿ ತನ್ನ ಕಾರನ್ನು ಅಡ್ಡಗಟ್ಟಿ, ದೂರುದಾರರ ಕಾಲರ್ ಹಿಡಿದು ಮುಖಕ್ಕೆ ಮುಷ್ಟಿಯಿಂದ ಹೊಡೆದು, ಕಾಲಿನಿಂದ ತುಳಿದು ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜೇಶ್ ಮತ್ತು ಸಂದೀಪ್ ಎಂಬವರು ಸ್ಥಳಕ್ಕೆ ಆಗಮಿಸಿ ಜಗಳ ಬಿಡಿಸಿದ್ದಾರೆ ಎಂದು ತಿಳಿದುಬಂದಿದೆ.
-
ಮಂಗಳೂರು23 hours agoBolyar-ಬೋಳಿಯಾರ್: ಪಿಕಪ್ ವಾಹನ ಗುದ್ದಿಸಿ ಇಬ್ಬರ ಕೊಲೆ – ಆರೋಪಿ ಹಫೀಸ್ ಬಂಧನ
-
ಸ್ಥಳೀಯ23 hours agoReels-ರೀಲ್ಸ್ಗಾಗಿ ಮಗುವಿನ ಜೀವದ ಜೊತೆ ಆಟ? ಅಲೆಗಳ ನಡುವೆ ಸಿಲುಕಿದ ಪುಟ್ಟ ಮಗು; ಸಾರ್ವಜನಿಕರೊಬ್ಬರಿಂದ ರಕ್ಷಣೆ..!
-
ನಿಧನ ವಾರ್ತೆ19 hours agoMudubidire-ಮೂಡುಬಿದಿರೆ: ವಿದ್ಯುತ್ ಆಘಾತಕ್ಕೆ ತಾಯಿ-ಮಗ ದಾರುಣ ಸಾವು
-
ಅಂತರ ರಾಜ್ಯ19 hours agoSexual harassment-ಎಕ್ಸ್ಪ್ರೆಸ್ ರೈಲಿನಲ್ಲಿ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಅರೆಸ್ಟ್
-
ಬಿಗ್ ನ್ಯೂಸ್17 hours agoDeath penalty-ಮೆಕ್ಕಾದ ಮಸೀದಿಯಲ್ಲಿ ಅಸಭ್ಯ ವರ್ತನೆ ಆರೋಪ: ಬಾಂಗ್ಲಾದೇಶದ ಇಬ್ಬರಿಗೆ ಸೌದಿಯಲ್ಲಿ ಮರಣದಂಡನೆ
-
ನಿಧನ ವಾರ್ತೆ24 hours agoPuttur-ಪುತ್ತೂರು: ಕಾರು ಢಿಕ್ಕಿ ಹೊಡೆದು ಅಪರಿಚಿತ ವೃದ್ಧ ಸಾವು
-
ರಾಜಕೀಯ18 hours agoP. Rajeev-ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಕೋರಿ ಪಿ. ರಾಜೀವ್ ಮನವಿ
-
Uncategorized19 hours agoKaniyuru Pragati-ಬೆಂಗಳೂರಿನಲ್ಲಿ ಮಿನಿ ಒಲಿಂಪಿಕ್ ಕಬಡ್ಡಿ ಪಂದ್ಯಾಟ – ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ಆಯ್ಕೆ


















