Connect with us

ಶಿಕ್ಷಣ

Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವೇ.ಮೂ.ದೇವರಥ ಅವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ನಡೆಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವೇ.ಮೂ.ದೇವರಥ ಅವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ನಡೆಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜು, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ಕಾಲೇಜು ಸೇರಿದಂತೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಗಣಪತಿ ಹವನ ನಡೆದಿದ್ದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ಹಾಗೂ ಖಜಾಂಚಿ ರಾಜಶ್ರೀ ಎಸ್. ನಟ್ಟೋಜ ಪೂರ್ಣಾಹುತಿ ನೆರವೇರಿಸಿದರು. ಬಳಿಕ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆಗಳನ್ನು ನೆರವೇರಿಸಲಾಯಿತು.

Ad Widget

Ad Widget <> Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ನ ಟ್ರಸ್ಟಿ ಶ್ರೀಕೃಷ್ಣ ಎಸ್. ನಟ್ಟೋಜ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ., ಎಸ್ಟೇಟ್ ಮ್ಯಾನೇಜರ್ ರಾಜೇಂದ್ರ ಪ್ರಸಾದ್, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ, ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ. ಎಸ್., ಬಪ್ಪಳಿಗೆ ಅಂಬಿಕಾ ನೀಟ್, ಜೆಇಇ ಅಕಾಡೆಮಿ ಪ್ರಾಂಶುಪಾಲ ಕೇಶವ ಕಿಶೋರ್, ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಶಿಕ್ಷಣ ಸಂಸ್ಥೆಗಳ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಭಾಗವಹಿಸಿದ್ದರು.



Ad Widget
Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜಾ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಶುಭ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ವಿಘ್ನೇಶ್ ಭಟ್ ಪಡ್ನೂರು ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು.

Ad Widget

Ad Widget

Ad Widget

Ad Widget

ನವರಾತ್ರಿಯ ಶುಭ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿಘ್ನೇಶ್ ಭಟ್ ಪಡ್ನೂರು ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಕಾಲೇಜಿನ ಬಸ್ಸುಗಳು, ಪ್ರಯೋಗಾಲಯದ ಉಪಕರಣಗಳು ಹಾಗೂ ಕಚೇರಿಯ ಪರಿಕರಗಳಿಗೆ ಪೂಜೆ ಸಲ್ಲಿಸುವ ಮೂಲಕ ಅವುಗಳ ಮಹತ್ವವನ್ನು ಗೌರವಿಸಲಾಯಿತು.

Ad Widget

Ad Widget <> Ad Widget

ನಮ್ಮ ದೈನಂದಿನ ಕಾರ್ಯಗಳಿಗೆ ನೆರವಾಗುವ ಸಾಧನಗಳು ಮತ್ತು ಉಪಕರಣಗಳು ಸುರಕ್ಷಿತವಾಗಿ, ನಿರಂತರವಾಗಿ ಹಾಗೂ ಸುಗಮವಾಗಿ ಕಾರ್ಯನಿರ್ವಹಿಸಲಿ ಎಂಬ ಉದ್ದೇಶದಿಂದ ಪ್ರಾರ್ಥನೆ ಸಲ್ಲಿಸಲಾಯಿತು.



Ad Widget

ಸಂಪ್ರದಾಯ, ಶ್ರದ್ಧೆ ಮತ್ತು ಕಾಯಕದ ಮಹತ್ವವನ್ನು ಸಾರುವ ಈ ಆಚರಣೆಯು ಕಾಲೇಜಿನ ವಾತಾವರಣದಲ್ಲಿ ಭಕ್ತಿ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿಬಿಂಬಿಸಿತು.

Ad Widget

Ad Widget

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್ , ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

2025-26ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರಧಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ.



Ad Widget

ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ವಿಜಯನಾರಾಯಣ.ಕೆ.ಎಂ ಅಧ್ಯಕ್ಷತೆ ವಹಿಸಲಿದ್ದಾರೆ.

Ad Widget

Ad Widget

ಮಣಿಪಾಲದ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿರುವ ಅಭಯ್ ಅನಂತ್ ಗುಪ್ತೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ಸ್ವೀಕಾರ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ. ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರಿಂದ ನಡೆಸಲ್ಪಡುವ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನೂತನ ಪ್ರಾಂಶುಪಾಲರಾಗಿ ಡಾ.ಪುರುಷೋತ್ತಮ ಚಿಪ್ಪಾರ್ ಅಧಿಕಾರ ವಹಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಮ್., ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ, ಸಂಚಾಲಕ ಪ್ರಸನ್ನ ದರ್ಬೆ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು.

Ad Widget

Ad Widget <> Ad Widget

ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ರಮೇಶ್ಚಂದ್ರ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್‌, ಸಹ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ.ವಿ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ರಕ್ಷಾ ಪ್ರಭು ವಿವಿದ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



Ad Widget

ಪ್ರಾಂಶುಪಾಲರ ಪರಿಚಯ:
ಡಾ.ಪುರುಷೋತ್ತಮ ಚಿಪ್ಪಾರ್ ಉನ್ನತ ಶಿಕ್ಷಣ, ಉದ್ಯಮ ಕ್ಷೇತ್ರ ಹಾಗೂ ತಂತ್ರಜ್ಞಾನ ಕಾರ್ಯತಂತ್ರಗಳಲ್ಲಿ 15 ವರ್ಷಕ್ಕೂ ಹೆಚ್ಚು ಅನುಭವವನ್ನು ಹೊಂದಿರುವ ಶಿಕ್ಷಣ ತಜ್ಞರಾಗಿದ್ದಾರೆ. ಇವರು ದಕ್ಷಿಣ ಕೊರಿಯಾದ ಇನ್ಹಾ ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಸಂಶೋಧನೆ, ಶೈಕ್ಷಣಿಕ ಆಡಳಿತ, ಸಂಸ್ಥೆಯ ಅಭಿವೃದ್ಧಿ ಮತ್ತು ಉದ್ಯಮ ವಲಯದೊಂದಿಗಿನ ಸಹಯೋಗದಲ್ಲಿ ಅವರು ಅನುಭವವನ್ನು ಹೊಂದಿದ್ದಾರೆ. ಇವರು ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪಪ್ರಾಂಶುಪಾಲರು ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಆಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅದಕ್ಕೂ ಮೊದಲು ಅದೇ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಆಡಳಿತ, ಪಠ್ಯಕ್ರಮ ಅಭಿವೃದ್ಧಿ, ಸಂಶೋಧನೆಗೆ ಉತ್ತೇಜನ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Ad Widget

Ad Widget

ಹೈದ್ರೀಜನ್ ಸಂಗ್ರಹಣೆ, ಇಂಧನ ಕೋಶಗಳು ಉಷ್ಣ ಮತ್ತು ದ್ರವ್ಯರಾಶಿ ವರ್ಗಾವಣೆ ಹಾಗೂ ಸುಸ್ಥಿರ ಇಂಧನ ವ್ಯವಸ್ಥೆಗಳ ಕ್ಷೇತ್ರದಲ್ಲಿ ಡಾ.ಚಿಪ್ಪಾರ್ ಗಮನಾರ್ಹ ಸಂಶೋಧನಾ ಸಾಧನೆಗಳನ್ನು ಮಾಡಿದ್ದಾರೆ. ಇವರ 35 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ ಶೈಕ್ಷಣಿಕ ಪ್ರಕಟಣೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಅಲ್ಲದೆ ಅನೇಕ ಸಂಶೋಧನಾ ನಿರತರಿಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂಧನ ವ್ಯವಸ್ಥೆಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ತಂತ್ರಜ್ಞಾನವನ್ನು ಇಂಜಿನಿಯರಿಂಗ್ ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಸಂಶೋಧನೆಯಲ್ಲಿ ಅವರು ಆಸಕ್ತಿ ಹೊಂದಿದ್ದಾರೆ.

ಬೆಂಗಳೂರಿನ ಹನಿವೆಲ್ ಟೆಕ್ನಾಲಜಿ ಸೊಲ್ಯುಶನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಹಿಸುವ ಅವಧಿಯಲ್ಲಿ ಅವರು ತಂತ್ರಜ್ಞಾನ ಮೌಲ್ಯಮಾಪನ, ಪೇಟೆಂಟ್ ವಿಶ್ಲೇಷಣೆಯಲ್ಲಿ ಕೆಲಸಮಾಡಿದ್ದಾರೆ. ವಿಮಾನಯಾನ ಕ್ಷೇತ್ರದ ವಿಮಾನ ವ್ಯವಸ್ಥೆಗಳ ಮುನ್ಸೂಚನಾ ನಿರ್ವಹಣೆಗೆ ಸಂಬಂದಿಸಿದ ಅಮೆರಿಕಾದ ಪೇಟೆಂಟ್‌ನಲ್ಲಿಯೂ ಅವರು ಕೊಡುಗೆ ನೀಡಿದ್ದಾರೆ. ಅಲ್ಲದೆ ಅವರು ಪ್ರಾಮಾಣೀಕೃತ ಪೇಟೆಂಟ್ ಮಾಹಿತಿ ತಜ್ಞರೂ ಆಗಿದ್ದಾರೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಐಡಿಯಾ ಲ್ಯಾಬ್ ಯೋಜನೆಯ ಪ್ರಧಾನ ಸಂಶೋಧಕರಾಗಿ ಅತ್ಯಾಧುನಿಕ ಮೂಲಮಾದರಿ ಅಭಿವೃದ್ಧಿ ಮತ್ತು ಹೊಸತನವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಇದರ ಮೂಲಕ ದಕ್ಷಿಣ ಕನ್ನಡದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರಾಯೋಗಿಕ ತಾಂತ್ರಿಕ ತರಬೇತಿ ಕಾರ್ಯಕ್ರಮದ ಮುಂದಾಳುತ್ವ ವಹಿಸಿದ್ದಾರೆ.

ಕರ್ನಾಟಕ ಸರ್ಕಾರದ ನ್ಯೂ ಏಜ್ ಇನ್ನೋವೇಶನ್ ನೆಟ್ವರ್ಕ್ ಯೋಜನೆಯಡಿ ಮೂಲ ಸೌಕರ್ಯಗಳ ಸ್ಥಾಪನೆ ಹಾಗೂ ಅಭಿವೃದ್ಧಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಯೋಜನೆಯಡಿ ವಿಶೇಷ ಅನುದಾನವನ್ನು ತರಿಸುವಲ್ಲಿಯೂ ಶ್ರಮವಹಿಸಿದ್ದಾರೆ. ರಾಷ್ಟ್ರೀಯ ಮಟ್ಟದ ನಾವೀನ್ಯತಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿ ತಂಡಗಳು ಭಾಗವಹಿಸಲು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಮತ್ತು ಉದ್ಯಮಶೀಲ ಮನೋಭಾವ ಬೆಳೆಸಲು ಶ್ರಮಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading