Uncategorized
ಸುರತ್ಕಲ್: ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಡಿಕ್ಕಿ; 13 ವಿದ್ಯಾರ್ಥಿಗಳಿಗೆ ಗಾಯ

ಸುರತ್ಕಲ್: ಶಾಲಾ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡಿನ ಸುಂದರ ರಾಮ್ ಶೆಟ್ಟಿ ಕನ್ವೆನ್ಶನ್ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್‌ನಲ್ಲಿ 16 ವಿದ್ಯಾರ್ಥಿಗಳಿದ್ದರು. ಶಾಲಾ ಬಸ್ ಅನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಮಕ್ಕಳನ್ನು ಇಳಿಸುತ್ತಿದ್ದ ವೇಳೆ, ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಶಾಲಾ ಬಸ್ ರಸ್ತೆಯ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದಿದ್ದು, ಅದರಲ್ಲಿದ್ದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಟೂರಿಸ್ಟ್ ಬಸ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Uncategorized
ಸ್ಟಿಂಗ್ ಪ್ರಕರಣ : ಅಶೋಕ್ ರೈಯನ್ನು ಕೆಣಕಿದ ಸತೀಶ್ ಕುಂಪಲ – ಪುತ್ತೂರಿನ ಈಗಿನ ಶಾಸಕರೂ ಅದೇ ರೀತಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆಯೇ ?

ಮಂಗಳೂರು: ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಪ್ರಸ್ತಾಪವಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತಂದಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಯನ್ನು ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಈ ಕಾರ್ಯಾಚರಣೆ ನಡೆದಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ಹಲವು ಪ್ರಶ್ನೆಗಳು ಮೂಡಿವೆ. ತಮ್ಮ ತಂದೆಯ ಹೆಸರಿಗೆ ಕಳಂಕ ತರಲು ಸ್ಟಿಂಗ್ ನಡೆಸಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣದ ಹಿಂದಿನ ಉದ್ದೇಶ ಹಾಗೂ ಅದರಲ್ಲಿ ಭಾಗಿಯಾಗಿರುವವರ ಕುರಿತು ಸಮಗ್ರ ತನಿಖೆ ಅಗತ್ಯವಾಗಿದೆ ಎಂದು ಕುಂಪಲ ಅಭಿಪ್ರಾಯಪಟ್ಟರು.
2011ರಲ್ಲಿ ನಡೆದಿತ್ತು ಎನ್ನಲಾದ ಈ ಪ್ರಕರಣವನ್ನು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಪಡೆಯಲು ಬಳಸಿಕೊಳ್ಳಲಾಗಿದೆ ಎಂಬ ಆರೋಪಗಳಿವೆ. ಹಾಗಾದರೆ ಈ ಪ್ರಕರಣವನ್ನು ಚುನಾವಣಾ ಟಿಕೆಟ್ ಪಡೆಯುವ ಅಸ್ತ್ರವಾಗಿ ಬಳಸಿಕೊಂಡವರು ಯಾರು? ಇದರಲ್ಲಿ ಯಾರ‍್ಯಾರು ಭಾಗಿಯಾಗಿದ್ದಾರೆ? ಯಾರ‍್ಯಾರ ಮೇಲೆ ಸ್ಟಿಂಗ್ ನಡೆಸಲಾಗಿದೆ? ಎಂಬ ಪ್ರಶ್ನೆಗಳಿಗೆ ತನಿಖೆಯ ಮೂಲಕ ಉತ್ತರ ದೊರೆಯಬೇಕು ಎಂದು ಅವರು ಒತ್ತಾಯಿಸಿದರು.
ಪುತ್ತೂರಿನ ಹಾಲಿ ಶಾಸಕರಿಗೂ ಇದೇ ರೀತಿಯಲ್ಲಿ ಟಿಕೆಟ್ ದೊರೆಯಿತೇ?
ಸ್ಟಿಂಗ್ ಪ್ರಕರಣದಲ್ಲಿ ಪುತ್ತೂರಿನ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಪುತ್ತೂರಿನ ಹಾಲಿ ಶಾಸಕರೂ ಇದೇ ರೀತಿಯ ಪ್ರಯತ್ನದ ಮೂಲಕ ಟಿಕೆಟ್ ಪಡೆದುಕೊಂಡಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಕುರಿತು ಅನುಮಾನಗಳಿಗೆ ತೆರೆ ಎಳೆಯಬೇಕಾದರೆ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು ಎಂದು ಸತೀಶ್ ಕುಂಪಲ ಹೇಳಿದರು.
ಪುತ್ತೂರು ಮಾತ್ರವಲ್ಲದೆ ರಾಜ್ಯದ ಇತರ ಕ್ಷೇತ್ರಗಳಲ್ಲಿಯೂ ಇಂತಹ ಘಟನೆಗಳು ನಡೆದಿವೆಯೇ ಎಂಬ ಅನುಮಾನಗಳೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ. ಪ್ರಕರಣದ ಸತ್ಯಾಸತ್ಯತೆ ಹೊರಬರದಿದ್ದರೆ ಅನಗತ್ಯ ಚರ್ಚೆಗಳಿಗೆ ಅವಕಾಶವಾಗುತ್ತದೆ. ಆದ್ದರಿಂದ ಸಂಬಂಧಪಟ್ಟವರು ಸಮಗ್ರ ತನಿಖೆ ನಡೆಸಿ, ಶೀಘ್ರದಲ್ಲೇ ಸತ್ಯಾಂಶಗಳನ್ನು ಜನರ ಮುಂದಿಡಬೇಕು ಎಂದು ಅವರು ಆಗ್ರಹಿಸಿದರು.
ಅಪರಾಧ
Arrested-ಉದ್ಯಮಿಗಳ ನಂಬರ್ ಕೊಟ್ಟಿದ್ದಕ್ಕೆ ₹5 ಲಕ್ಷ..!; ಹೇಮಂತ್ ಪೂಜಾರಿಗೆ ‘ಫೋನ್ ನಂಬರ್ ಪೂರೈಕೆದಾರ’ ಅರೆಸ್ಟ್; ಉದ್ಯಮಿಯ ಕೊಲೆಗೆ ಸ್ಕೆಚ್..!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ ಉದ್ಯಮಿಗಳ ಮೊಬೈಲ್ ನಂಬರ್‌ಗಳನ್ನು ಸಂಗ್ರಹಿಸಿ ಆ್ಯಪ್ ಮೂಲಕ ಹೇಮಂತ್ ಪೂಜಾರಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ ಸುರೇಶ್ ಅಮೀನ್ (38) ಎಂಬಾತನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಉಡುಪಿ, ಅ. 23: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಸಂಚು ರೂಪಿಸಿದ ಜಾಲದ ಮತ್ತೊಂದು ಕೊಂಡಿ ಪೊಲೀಸರ ಬಲೆಗೆ ಬಿದ್ದಿದೆ. ಸುಲಿಗೆಗೆ ಗುರಿಯಾಗಬಹುದಾದ ಉದ್ಯಮಿಗಳ ಮೊಬೈಲ್ ನಂಬರ್‌ಗಳನ್ನು ಸಂಗ್ರಹಿಸಿ ಆ್ಯಪ್ ಮೂಲಕ ಹೇಮಂತ್ ಪೂಜಾರಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ ಸುರೇಶ್ ಅಮೀನ್ (38) ಎಂಬಾತನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ನಂಬರ್ ಕೊಟ್ಟಿದ್ದಕ್ಕೆ ₹5 ಲಕ್ಷ ಕಮಿಷನ್!
ಉದ್ಯಮಿಗಳ ಮೊಬೈಲ್ ನಂಬರ್ ಪೂರೈಸಿದರೆ ಸಾಕು, ಬಳಿಕ ನಡೆಯುವ ಸುಲಿಗೆಯಲ್ಲಿ ಪಾಲು ಸಿಗುತ್ತದೆ ಎಂಬ ಆಮಿಷಕ್ಕೆ ಆರೋಪಿ ಬಿದ್ದಿದ್ದ ಎನ್ನಲಾಗಿದೆ. ಹೇಮಂತ್ ಪೂಜಾರಿ ಸಂಪರ್ಕಿಸಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರ ನಂಬರ್‌ಗಳನ್ನು ಸಂಗ್ರಹಿಸಿ ನೀಡುವಂತೆ ಸೂಚಿಸಿದ್ದ. ಇದಕ್ಕಾಗಿ ಸುರೇಶ್ ಅಮೀನ್ ಖಾತೆಗೆ ಬರೋಬ್ಬರಿ ₹5 ಲಕ್ಷ ಜಮೆ ಮಾಡಲಾಗಿತ್ತು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಉದ್ಯಮಿಗಳಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಬಳಿಕ ಅದರಲ್ಲಿ ಕಮಿಷನ್ ನೀಡುವುದಾಗಿಯೂ ಆಮಿಷವೊಡ್ಡಲಾಗಿತ್ತು ಎನ್ನಲಾಗಿದೆ. ಆರೋಪಿಯ ಖಾತೆಗೆ ಬಂದಿದ್ದ ₹5 ಲಕ್ಷದಲ್ಲಿ ಖರ್ಚಾದ ಹಣ ಹೊರತುಪಡಿಸಿ ಉಳಿದಿದ್ದ ₹4.13 ಲಕ್ಷವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನಿಗೆ ಬ್ಯಾಂಕ್ ಮೂಲಕ ಹಣ ವರ್ಗಾಯಿಸಿದವರ ಬಗ್ಗೆಯೂ ತನಿಖೆ ಮುಂದುವರಿದಿದೆ.
ಎಂಟು ಪ್ರಕರಣಗಳ ನಂಟು!
ಹೇಮಂತ್ ಪೂಜಾರಿ ಮತ್ತೆ ಸಕ್ರಿಯನಾಗಿ ಉದ್ಯಮಿಗಳು, ಗುತ್ತಿಗೆದಾರರು ಹಾಗೂ ವ್ಯಾಪಾರಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ ಭಾರೀ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟಿದ್ದ ಪ್ರಕರಣಗಳು ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದವು. ಈ ಸಂಬಂಧ ಪಡುಬಿದ್ರಿ ಠಾಣೆಯಲ್ಲಿ ಐದು, ಶಿರ್ವ ಠಾಣೆಯಲ್ಲಿ ಒಂದು, ಕಾಪು ಠಾಣೆಯಲ್ಲಿ ಒಂದು ಹಾಗೂ ಮಣಿಪಾಲ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದವು.
ಬೆದರಿಕೆ ಕರೆಗಳ ಹಿಂದಿನ ಜಾಲವನ್ನು ಭೇದಿಸಲು ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ಉದ್ಯಮಿಗಳು ಹಾಗೂ ಗುತ್ತಿಗೆದಾರರ ಮೊಬೈಲ್ ನಂಬರ್ ಸಂಗ್ರಹಿಸುತ್ತಿದ್ದವರ ಮೇಲೆ ನಿಗಾ ಇರಿಸಿದ್ದರು. ಈ ವೇಳೆ ಸುರೇಶ್ ಅಮೀನ್ ಬಗ್ಗೆಯೂ ಮಾಹಿತಿ ಲಭ್ಯವಾಗಿತ್ತು. ಅಕ್ಟೋಬರ್ 19ರಂದು ಎರ್ಮಾಳಿನಲ್ಲಿ ಆತನನ್ನು ಬಂಧಿಸಿದ ಪೊಲೀಸರು, ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ವಿಚಾರಣೆ ವೇಳೆ ಜಿಲ್ಲೆಯಲ್ಲಿ ದಾಖಲಾಗಿರುವ ಎಂಟು ಪ್ರಕರಣಗಳ ಪೈಕಿ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ತಾನೇ ನಂಬರ್ ಪೂರೈಸಿದ್ದಾಗಿ ಆರೋಪಿ ತಿಳಿಸಿದ್ದಾನೆ ಎನ್ನಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಹಣ ಕೊಡದ ಉದ್ಯಮಿಯ ಕೊಲೆಗೆ ಸಂಚು!
ಈ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮತ್ತೊಂದು ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಆರೋಪಿ ಪೂರೈಸಿದ್ದ ನಂಬರ್ ಆಧರಿಸಿ ಹೇಮಂತ್ ಪೂಜಾರಿ ಸಂಪರ್ಕಿಸಿದ್ದ ಉದ್ಯಮಿಯೊಬ್ಬರು ಬೇಡಿಕೆಯಿಟ್ಟ ಹಣ ನೀಡಿರಲಿಲ್ಲ. ಬೆದರಿಕೆ ಕರೆಗಳನ್ನೂ ಸ್ವೀಕರಿಸಿರಲಿಲ್ಲ ಎನ್ನಲಾಗಿದೆ.
ಇದರಿಂದ ಕೆರಳಿದ ಸುಲಿಗೆಕೋರರು ಆ ಉದ್ಯಮಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡುವ ಬಗ್ಗೆ ಸಂಚು ರೂಪಿಸಿದ್ದರು ಎಂಬುದು ತಾಂತ್ರಿಕ ಸಾಕ್ಷ್ಯಗಳ ಪರಿಶೀಲನೆಯಿಂದ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ. ಅಪಾಯದ ಸುಳಿವು ಅರಿತ ಪೊಲೀಸರು ಸಂಬಂಧಪಟ್ಟ ಉದ್ಯಮಿಗೆ ಭದ್ರತೆ ಒದಗಿಸಿದ್ದಾರೆ.
ನಂಬರ್ ಪೂರೈಕೆದಾರರ ಜಾಲ ಇನ್ನೂ ದೊಡ್ಡದಿದೆಯೇ?
ಸುರೇಶ್ ಅಮೀನ್ ಬಂಧನದಿಂದ ಸುಲಿಗೆ ಜಾಲದ ಒಂದು ಕೊಂಡಿ ಪತ್ತೆಯಾಗಿದ್ದರೂ, ಪ್ರಕರಣದ ಹಿಂದೆ ಇನ್ನಷ್ಟು ಮಂದಿ ಇರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹಲವು ಪ್ರಕರಣಗಳಿಗೆ ಈತ ನಂಬರ್ ಪೂರೈಸಿದ್ದಾನೆ ಎನ್ನಲಾಗಿದ್ದು, ಮೂಲ್ಕಿ ಪ್ರಕರಣ ಸೇರಿದಂತೆ ಉಳಿದ ಪ್ರಕರಣಗಳಲ್ಲಿ ಬೇರೆ ವ್ಯಕ್ತಿಗಳು ನಂಬರ್ ಪೂರೈಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಜಾಲದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಣ ವರ್ಗಾವಣೆ, ಮೊಬೈಲ್ ಸಂವಹನ ಹಾಗೂ ಇತರ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.
ಉದ್ಯಮಿಗಳ ನಂಬರ್ ಸಂಗ್ರಹದಿಂದ ಆರಂಭವಾದ ಆಟ, ಜೀವ ಬೆದರಿಕೆ, ಕೋಟ್ಯಂತರ ರೂಪಾಯಿ ಸುಲಿಗೆ ಹಾಗೂ ಕೊಲೆಯ ಸಂಚಿನವರೆಗೆ ತಲುಪಿದೆಯೇ? ಈ ಜಾಲದ ಹಿಂದಿರುವ ಉಳಿದ ಮುಖಗಳು ಯಾರು ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
Uncategorized
ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಮಂಗಳೂರು: ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ಅಪರಾಧ ಸಂಖ್ಯೆ 139/2007ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 366, 368, 420, 120 ಮತ್ತು 149ರಂತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನ ಪಾಸ್‌ಪೋರ್ಟ್ ಅನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ಬಿಗ್ ನ್ಯೂಸ್16 hours agoKripa Alva-ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವಾಗೆ ಕಾಂಗ್ರೆಸ್ನಿಂದ ನೋಟಿಸ್ ಸಾಧ್ಯತೆ
-
ಕ್ರೈಂ14 hours agoBantwal-ಬಂಟ್ವಾಳ : ಸಹೋದರನಿಗೆ ಕಿರುಕುಳದ ಕರೆ, ಮರುದಿನ ಗೃಹಿಣಿ ಸಾವು; ಪತಿ ಪೊಲೀಸ್ ವಶಕ್ಕೆ
-
ಅಂತರ ರಾಜ್ಯ10 hours agoDriving license-ಚಾಲನಾ ಪರವಾನಿಗೆ ನಿಯಮಗಳಲ್ಲಿ ಬದಲಾವಣೆ? ಶೇ.75 ಅಂಕ, 30 ನಿಮಿಷ ಚಾಲನಾ ತರಬೇತಿ ಕಡ್ಡಾಯ
-
ಅಪರಾಧ14 hours agoVijayalakshmi-ದರ್ಶನ್ ಪತ್ನಿ ವಿಜಯಲಕ್ಷ್ಮಿ ರೌಡಿಗಳೊಂದಿಗೆ ಮಧ್ಯರಾತ್ರಿ ಮನೆಗೆ ಬಂದು ಗಲಾಟೆ ಮಾಡಿದ್ರು : ಧನ್ವೀರ್ ತಂದೆಯಿಂದ ಪೊಲೀಸರಿಗೆ ದೂರು
-
ಅಪರಾಧ15 hours agoBoliyaar-ಬೋಳಿಯಾರ್ನಲ್ಲಿ ಇಬ್ಬರ ಕೊಲೆ ಪ್ರಕರಣ: ಮಹಜರು ವೇಳೆ ಆರೋಪಿಗೆ ಹಲ್ಲೆ ಯತ್ನ; ಇಬ್ಬರ ವಿರುದ್ಧ ಕೇಸ್
-
ರಾಜಕೀಯ17 hours ago
Ashok Rai On Sting Operation ಸ್ಟಿಂಗ್ ಆಪರೇಷನ್ ಬಗ್ಗೆ ನನಗೆ ಮಾಹಿತಿಯಿಲ್ಲ: ಶಾಸಕ ಅಶೋಕ್ ಕುಮಾರ್ ರೈ ಸ್ಪಷ್ಟನೆ
-
ಬಿಗ್ ನ್ಯೂಸ್14 hours agoHigh Court-ಸಾಮಾಜಿಕ ಜಾಲತಾಣದ ಪೋಸ್ಟ್ಗೆ ಕೋಮು ದ್ವೇಷದ ಹಣೆಪಟ್ಟಿ ಕಟ್ಟುವಂತಿಲ್ಲ – ಪ್ರಕರಣ ದಾಖಲಾದ ಮಾತ್ರಕ್ಕೆ ಬಂಧನ ಅಗತ್ಯವಿಲ್ಲ : ಪುರುಷರಕಟ್ಟೆ ಘಟನೆ ಸಂಬಂಧಿಸಿದಂತೆ ಹೈಕೋರ್ಟ್ನಿಂದ ಪೊಲೀಸರಿಗೆ 6 ಮಾರ್ಗಸೂಚಿ
-
ಸುಳ್ಯ10 hours agoPuttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ


















