Connect with us

ಅಪರಾಧ

Puttur-ಪುತ್ತೂರು: ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ಬೈಕ್ ಕಳವು-ದೂರು ದಾಖಲು

Published

on



Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ವರದಿಯಾಗಿದೆ. ಈ ಕುರಿತು ಬೈಕ್ ಮಾಲಕ ನವೀನ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು, ಅ. 23: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಬೈಕೊಂದು ಕಳವಾದ ಘಟನೆ ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ನವೀನ್ ಅವರಿಗೆ ಸೇರಿದ ಬೈಕನ್ನು ಅವರ ಸಂಬಂಧಿ, ಕಬಕ ಗ್ರಾಮದ ಪಂಜುರ್ಲಿಪಾದೆ ನಿವಾಸಿ ಹರೀಶ್ ಅವರು ಬಳಸುತ್ತಿದ್ದರು. ಟ್ಯಾಂಕರ್ ಚಾಲಕರಾಗಿರುವ ಹರೀಶ್ ಅವರು ಕೆಲಸಕ್ಕೆ ತೆರಳುವ ಮೊದಲು ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ಬೈಕನ್ನು ನಿಲ್ಲಿಸುತ್ತಿದ್ದರು.

Ad Widget

Ad Widget <> Ad Widget

ಅ. 21ರಂದು ಹರೀಶ್ ಅವರು ಕೆಲಸ ಮಾಡುತ್ತಿದ್ದ ಟ್ಯಾಂಕರ್ ಮಂಗಳೂರಿನ ಗ್ಯಾರೇಜ್‌ನಲ್ಲಿದ್ದ ಕಾರಣ, ಎಂದಿನಂತೆ ಬೈಕನ್ನು ಸತ್ತಿಕಲ್ಲು ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದರು. ಬಳಿಕ ಬೆಳಗ್ಗೆ 7.50ರ ಸುಮಾರಿಗೆ ಸ್ನೇಹಿತನ ಬೈಕಿನಲ್ಲಿ ಮಂಗಳೂರಿಗೆ ತೆರಳಿದ್ದರು.



Ad Widget

ಸಂಜೆ ವಾಪಸ್ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಈ ಕುರಿತು ಬೈಕ್ ಮಾಲಕ ನವೀನ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Click to comment

Leave a Reply

ಅಪರಾಧ

Mangaluru Bike Theft Case: ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು! KTM, ಬುಲೆಟ್ ಸೇರಿ 6 ಬೈಕ್ ವಶ; 7 ಮಂದಿ ಪೊಲೀಸರ ವಶಕ್ಕೆ

Published

on



Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ. ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ಒಂಬತ್ತು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಅಂದಾಜು ಮೌಲ್ಯ ₹4.50 ಲಕ್ಷ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

Ad Widget

ವಿವಿಧೆಡೆ ಬೈಕ್ ಕಳವು

ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ್ ಬಳಿಯ ಡಾನ್ ಬಾಸ್ಕೋ ಹಾಸ್ಟೆಲ್ ಬಳಿ ಅಕ್ಟೋಬರ್ 12ರಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು. ಅಕ್ಟೋಬರ್ 19ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್‌ಝಡ್ ಬೈಕ್, ಅಕ್ಟೋಬರ್ 21ರಂದು ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ದುರ್ಗಾ ಹೋಟೆಲ್ ಮುಂದೆ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಅಕ್ಟೋಬರ್ 22ರಂದು ಹೊಯಿಗೆ ಬಜಾರ್‌ನ ಭಗವತಿ ಅಪಾರ್ಟ್‌ಮೆಂಟ್ ಕೆಳಗೆ ನಿಲ್ಲಿಸಿದ್ದ ಮತ್ತೊಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿ ಅಕ್ಟೋಬರ್ 18ರಂದು ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬುಲೆಟ್ ಹಾಗೂ ಅಕ್ಟೋಬರ್ 21ರಂದು ಕುತ್ತಾರ್ ಪಂಡಿತ್ ಹೌಸ್ ಬಳಿ ನಿಲ್ಲಿಸಿದ್ದ ಯಮಹಾ ಎಫ್‌ಝಡ್ ಬೈಕ್ ಕಳವಾಗಿದ್ದವು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.

Ad Widget

Ad Widget <> Ad Widget

ವಿಶೇಷ ತಂಡದಿಂದ ಕಾರ್ಯಾಚರಣೆ

ಕಳವು ಪ್ರಕರಣಗಳ ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಹಾಗೂ ಮಾಹಿತಿ ಸಂಗ್ರಹದ ಮೂಲಕ ಪೊಲೀಸರು ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.



Ad Widget

ವಶಕ್ಕೆ ಪಡೆದವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Ad Widget

Ad Widget

ಐಷಾರಾಮಿ ಜೀವನಕ್ಕಾಗಿ ಕಳವು

ಪೊಲೀಸರ ವಿಚಾರಣೆಯ ಪ್ರಕಾರ, ಆರೋಪಿಗಳು ಸರಗಳ್ಳತನ ಸೇರಿದಂತೆ ಇತರ ಅಪರಾಧ ಕೃತ್ಯಗಳನ್ನು ಎಸಗಿ, ಅದರ ಲಾಭದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಬೆಲೆಬಾಳುವ ಮೋಟಾರ್ ಸೈಕಲ್‌ಗಳನ್ನು ಗುರಿಯಾಗಿಸಿಕೊಂಡು, ಅವುಗಳನ್ನು ನಿಲ್ಲಿಸಿದ್ದ ಸ್ಥಳಗಳಿಂದ ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ನಾಲ್ವರು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಪೊಲೀಸ್ ತಂಡದ ಕಾರ್ಯಾಚರಣೆ

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿಎಸ್‌ಐ ಮಾರುತಿ ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಠಾಣೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಗೆ ಸಹಕರಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

Ad Widget
Continue Reading

ಅಪರಾಧ

ಮಂಗಳೂರು : ಕೊಲೆಯ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು – ಮಾಯಾ ರೇಗೊ ದೂರು : ಓರ್ವನ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು ಗಾನಮಜಲ್ ನಿವಾಸಿ ನವೀನ್ ಥೋರೆಸ್ (42) ಎಂದು ಪೊಲೀಸರು ಗುರುತಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮಾಯ ಅನ್ನಾಮೇರಿ ರೇಗೋ ಅವರು ತಮ್ಮ ವಿರುದ್ಧ ಕೊಲೆಯಂತಹ ಗಂಭೀರ ಸುಳ್ಳು ಆರೋಪ ಹೊರಿಸಿ, ಹಣ ಹಾಗೂ ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ. ಅಲ್ಲದೆ, ಸಾರ್ವಜನಿಕವಾಗಿ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ 2026ರ ಆಗಸ್ಟ್ 10ರಂದು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Ad Widget

Ad Widget <> Ad Widget

ಈ ದೂರಿನ ಆಧಾರದ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 61(a)(1) ಮತ್ತು 308(7)ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.



Ad Widget

ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಕ್ಟೋಬರ್ 23ರಂದು ನವೀನ್ ಥೋರೆಸ್ ಅವರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಟೋಬರ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ad Widget

Ad Widget

ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಬಗ್ಗೆಯೂ ಕೂಲಂಕುಶ ತನಿಖೆ ನಡೆಸಲಾಗುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉರ್ವಾ ಪೊಲೀಸರು ತಿಳಿಸಿದ್ದಾರೆ.

Ad Widget
Continue Reading

ಅಪರಾಧ

Arrested-ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಸ್ಟಿಂಗ್ ಆಪರೇಷನ್ ನಡೆಸಲು ಬಳಸಿದ್ದ ಮೊಬೈಲ್ ಫೋನ್ ಖರೀದಿಸಿ ನೀಡಿದ ಆರೋಪದ ಮೇಲೆ ರಿತೇಶ್ ಪಾಂಡೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈತ ದಿಲ್ಲಿಯಲ್ಲಿ ಸೆಕೆಂಡ್‌ ಹ್ಯಾಂಡ್ ಮೊಬೈಲ್ ಫೋನ್ ಖರೀದಿಸಿ, ಸ್ಟಿಂಗ್ ಆಪರೇಷನ್ ನಡೆಸಿದ ಆರೋಪಿಗಳಿಗೆ ನೀಡಿದ್ದ ಎನ್ನಲಾಗಿದೆ.



Ad Widget

ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading