ಅಪರಾಧ
Arrested-ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.
ಸ್ಟಿಂಗ್ ಆಪರೇಷನ್ ನಡೆಸಲು ಬಳಸಿದ್ದ ಮೊಬೈಲ್ ಫೋನ್ ಖರೀದಿಸಿ ನೀಡಿದ ಆರೋಪದ ಮೇಲೆ ರಿತೇಶ್ ಪಾಂಡೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈತ ದಿಲ್ಲಿಯಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಖರೀದಿಸಿ, ಸ್ಟಿಂಗ್ ಆಪರೇಷನ್ ನಡೆಸಿದ ಆರೋಪಿಗಳಿಗೆ ನೀಡಿದ್ದ ಎನ್ನಲಾಗಿದೆ.
ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.
ಅಪರಾಧ
Mangaluru Bike Theft Case: ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು! KTM, ಬುಲೆಟ್ ಸೇರಿ 6 ಬೈಕ್ ವಶ; 7 ಮಂದಿ ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ. ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ಒಂಬತ್ತು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಅಂದಾಜು ಮೌಲ್ಯ ₹4.50 ಲಕ್ಷ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಿವಿಧೆಡೆ ಬೈಕ್ ಕಳವು
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ್ ಬಳಿಯ ಡಾನ್ ಬಾಸ್ಕೋ ಹಾಸ್ಟೆಲ್ ಬಳಿ ಅಕ್ಟೋಬರ್ 12ರಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು. ಅಕ್ಟೋಬರ್ 19ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್‌ಝಡ್ ಬೈಕ್, ಅಕ್ಟೋಬರ್ 21ರಂದು ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ದುರ್ಗಾ ಹೋಟೆಲ್ ಮುಂದೆ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಅಕ್ಟೋಬರ್ 22ರಂದು ಹೊಯಿಗೆ ಬಜಾರ್‌ನ ಭಗವತಿ ಅಪಾರ್ಟ್‌ಮೆಂಟ್ ಕೆಳಗೆ ನಿಲ್ಲಿಸಿದ್ದ ಮತ್ತೊಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು.
ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿ ಅಕ್ಟೋಬರ್ 18ರಂದು ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬುಲೆಟ್ ಹಾಗೂ ಅಕ್ಟೋಬರ್ 21ರಂದು ಕುತ್ತಾರ್ ಪಂಡಿತ್ ಹೌಸ್ ಬಳಿ ನಿಲ್ಲಿಸಿದ್ದ ಯಮಹಾ ಎಫ್‌ಝಡ್ ಬೈಕ್ ಕಳವಾಗಿದ್ದವು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.
ವಿಶೇಷ ತಂಡದಿಂದ ಕಾರ್ಯಾಚರಣೆ
ಕಳವು ಪ್ರಕರಣಗಳ ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಹಾಗೂ ಮಾಹಿತಿ ಸಂಗ್ರಹದ ಮೂಲಕ ಪೊಲೀಸರು ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಶಕ್ಕೆ ಪಡೆದವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಐಷಾರಾಮಿ ಜೀವನಕ್ಕಾಗಿ ಕಳವು
ಪೊಲೀಸರ ವಿಚಾರಣೆಯ ಪ್ರಕಾರ, ಆರೋಪಿಗಳು ಸರಗಳ್ಳತನ ಸೇರಿದಂತೆ ಇತರ ಅಪರಾಧ ಕೃತ್ಯಗಳನ್ನು ಎಸಗಿ, ಅದರ ಲಾಭದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಬೆಲೆಬಾಳುವ ಮೋಟಾರ್ ಸೈಕಲ್‌ಗಳನ್ನು ಗುರಿಯಾಗಿಸಿಕೊಂಡು, ಅವುಗಳನ್ನು ನಿಲ್ಲಿಸಿದ್ದ ಸ್ಥಳಗಳಿಂದ ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ನಾಲ್ವರು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಪೊಲೀಸ್ ತಂಡದ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿಎಸ್‌ಐ ಮಾರುತಿ ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಠಾಣೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಗೆ ಸಹಕರಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ಅಪರಾಧ
ಮಂಗಳೂರು : ಕೊಲೆಯ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು – ಮಾಯಾ ರೇಗೊ ದೂರು : ಓರ್ವನ ಬಂಧನ

ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು ಗಾನಮಜಲ್ ನಿವಾಸಿ ನವೀನ್ ಥೋರೆಸ್ (42) ಎಂದು ಪೊಲೀಸರು ಗುರುತಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮಾಯ ಅನ್ನಾಮೇರಿ ರೇಗೋ ಅವರು ತಮ್ಮ ವಿರುದ್ಧ ಕೊಲೆಯಂತಹ ಗಂಭೀರ ಸುಳ್ಳು ಆರೋಪ ಹೊರಿಸಿ, ಹಣ ಹಾಗೂ ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ. ಅಲ್ಲದೆ, ಸಾರ್ವಜನಿಕವಾಗಿ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ 2026ರ ಆಗಸ್ಟ್ 10ರಂದು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 61(a)(1) ಮತ್ತು 308(7)ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಕ್ಟೋಬರ್ 23ರಂದು ನವೀನ್ ಥೋರೆಸ್ ಅವರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಟೋಬರ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಪರಾಧ
Vijayalakshmi-ದರ್ಶನ್ ಪತ್ನಿ ವಿಜಯಲಕ್ಷ್ಮಿ ರೌಡಿಗಳೊಂದಿಗೆ ಮಧ್ಯರಾತ್ರಿ ಮನೆಗೆ ಬಂದು ಗಲಾಟೆ ಮಾಡಿದ್ರು : ಧನ್ವೀರ್ ತಂದೆಯಿಂದ ಪೊಲೀಸರಿಗೆ ದೂರು
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು ಪ್ರತಿ ದೂರು ದಾಖಲಿಸಿದ್ದಾರೆ.
ಬೆಂಗಳೂರು: ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು ಪ್ರತಿ ದೂರು ದಾಖಲಿಸಿದ್ದಾರೆ.
ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ, ವಿಜಯಲಕ್ಷ್ಮಿ ಮತ್ತು ಅವರ ಮ್ಯಾನೇಜರ್ ನಾಗರಾಜ್ ಕೆಲವರೊಂದಿಗೆ ಮನೆಗೆ ಬಂದು ಗಲಾಟೆ ನಡೆಸಿದ್ದಾರೆ ಎಂದು ತಿಮ್ಮೇಗೌಡ ಆರೋಪಿಸಿದ್ದಾರೆ.
ಮನೆಗೆ ಬಂದು ಗಲಾಟೆ ನಡೆಸಿದ ಆರೋಪ
ಮಗ ಧನ್ವೀರ್ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಅ.21ರ ರಾತ್ರಿ ವಿಜಯಲಕ್ಷ್ಮಿ ಮತ್ತು ನಾಗರಾಜ್ ಮನೆಗೆ ಬಂದು ಗಲಾಟೆ ನಡೆಸಿದ್ದಾರೆ ಎಂದು ತಿಮ್ಮೇಗೌಡ ದೂರಿನಲ್ಲಿ ತಿಳಿಸಿದ್ದಾರೆ. ಈ ವೇಳೆ ವಿಜಯಲಕ್ಷ್ಮಿ ಅವರು ಗೌರವ್ ಎಂಬಾತನಿಗೆ ಕರೆ ಮಾಡಿ, ರೌಡಿ ಶೀಟರ್‌ಗಳಾದ ಭೋಜ ಮತ್ತು ಬಾಟಲಿ ಪ್ರಮೋದ್ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಂತರ ನಾಲ್ವರು ಸೇರಿ ತಮಗೆ ಹಾಗೂ ಕುಟುಂಬದ ಸದಸ್ಯರಿಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ತಿಮ್ಮೇಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಸಂಬಂಧ ರಾಜಾಜಿನಗರ ಪೊಲೀಸರು ಅಸಂಜ್ಞೆಯ ಪ್ರಕರಣ (ಎನ್‌ಸಿಆರ್) ದಾಖಲಿಸಿಕೊಂಡಿದ್ದಾರೆ.
ಮೊದಲು ನಾಗರಾಜ್‌ನಿಂದ ದೂರು
ಇದಕ್ಕೂ ಮೊದಲು, ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರು ನಟ ಧನ್ವೀರ್ ಗೌಡ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಧನ್ವೀರ್ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ನಾಗರಾಜ್ ಆರೋಪಿಸಿದ್ದಾರೆ. ಈ ಸಂಬಂಧ ಧನ್ವೀರ್ ಅವರೊಂದಿಗಿನ ಮೊಬೈಲ್ ಸಂಭಾಷಣೆಯ ಆಡಿಯೊ ದಾಖಲೆಯನ್ನೂ ಪೊಲೀಸರಿಗೆ ಸಲ್ಲಿಸಿದ್ದಾರೆ.
ಕೆಲವು ವಿಷಯಗಳ ಕುರಿತು ಚರ್ಚಿಸಲು ವಿಜಯಲಕ್ಷ್ಮಿ ಅವರೊಂದಿಗೆ ಧನ್ವೀರ್ ಮನೆಗೆ ತೆರಳಿದ್ದೆವು. ಆದರೆ, ಆ ಸಮಯದಲ್ಲಿ ಧನ್ವೀರ್ ಮನೆಯಲ್ಲಿ ಇರಲಿಲ್ಲ. ಹೀಗಾಗಿ ವಾಪಸ್ ಬಂದಿದ್ದೆವು. ಬಳಿಕ ಧನ್ವೀರ್ ಕರೆ ಮಾಡಿ, ಸಂಭಾಷಣೆ ವೇಳೆ ಏಕವಚನದಲ್ಲಿ ಮಾತನಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ನಾಗರಾಜ್ ದೂರಿನಲ್ಲಿ ತಿಳಿಸಿದ್ದಾರೆ.
ನಾಗರಾಜ್ ನೀಡಿದ ದೂರಿನ ಆಧಾರದಲ್ಲಿ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
-
ಅಪರಾಧ18 hours ago
ಮಂಗಳೂರು : ಕೊಲೆಯ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು – ಮಾಯಾ ರೇಗೊ ದೂರು : ಓರ್ವನ ಬಂಧನ
-
ಮಂಗಳೂರು19 hours ago
ಮಂಗಳೂರು : ಕುಡ್ಪೀಸ್ ಫುಡ್ಸ್ ಗೆ ಆಹಾರ ಸುರಕ್ಷಿತಾ ಅಧಿಕಾರಿಗಳ ದಾಳಿ;ಹೈಜಿನ್ ಕೊರತೆ ಆರೋಪ: ಹಲ್ವಾ, ಖರ್ಜೂರ ಉತ್ಪನ್ನಗಳು ಸೀಜ್
-
ಕಾರ್ಯಕ್ರಮಗಳು23 hours agoPuttur Deepothsava-ಪುತ್ತೂರು ದೀಪೋತ್ಸವ 2026ಕ್ಕೆ ಸಿದ್ಧತೆ ಚುರುಕು; ಅ.26ರಂದು ಲೋಗೋ, ಆಮಂತ್ರಣ ಪತ್ರಿಕೆ ಬಿಡುಗಡೆ..!
-
Uncategorized8 hours ago
Goonadka Accident, ಸುಳ್ಯ: ಲಾರಿ–ಕಾರು ಡಿಕ್ಕಿ; ಬಾಲಕ ಸಾವು, ಇಬ್ಬರಿಗೆ ಗಾಯ
-
Uncategorized20 hours ago
ಸ್ಟಿಂಗ್ ಪ್ರಕರಣ : ಅಶೋಕ್ ರೈಯನ್ನು ಕೆಣಕಿದ ಸತೀಶ್ ಕುಂಪಲ – ಪುತ್ತೂರಿನ ಈಗಿನ ಶಾಸಕರೂ ಅದೇ ರೀತಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆಯೇ ?
-
ಸ್ಥಳೀಯ24 hours agoDharmasthala-ಧರ್ಮಸ್ಥಳದಲ್ಲಿ ಛದ್ಮವೇಷ ಸ್ಪರ್ಧೆ: ವೈವಿಧ್ಯಮಯ ವೇಷಭೂಷಣಗಳೊಂದಿಗೆ ಗಮನ ಸೆಳೆದ ಸ್ಪರ್ಧಿಗಳು
-
ದಕ್ಷಿಣ ಕನ್ನಡ19 hours ago
ವಿಟ್ಲ : ಪುಚ್ಚೆಗುತ್ತಿನ ಆರು ಕುಟುಂಬಗಳಿಗೆ 94ಸಿ ಹಕ್ಕುಪತ್ರ ಹಸ್ತಾಂತರಿಸಿದ ಅಶೋಕ್ ರೈ |18 ವರ್ಷಗಳಿಂದ ಅಲೆದಾಡಿಸಿದ್ದರು – ಬಿಜೆಪಿ ವಿರುದ್ಧ ಫಲಾನುಭವಿಗಳ ಆಕ್ರೋಶ
-
Uncategorized7 hours ago
Puttur College Student Missing: ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟ ಪುತ್ತೂರು ಕಾಲೇಜ್ ವಿದ್ಯಾರ್ಥಿ ಮಿಸ್ಸಿಂಗ್


















