ಅಪರಾಧ
Mangaluru Bike Theft Case: ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು! KTM, ಬುಲೆಟ್ ಸೇರಿ 6 ಬೈಕ್ ವಶ; 7 ಮಂದಿ ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ. ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ಒಂಬತ್ತು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಅಂದಾಜು ಮೌಲ್ಯ ₹4.50 ಲಕ್ಷ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಿವಿಧೆಡೆ ಬೈಕ್ ಕಳವು
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ್ ಬಳಿಯ ಡಾನ್ ಬಾಸ್ಕೋ ಹಾಸ್ಟೆಲ್ ಬಳಿ ಅಕ್ಟೋಬರ್ 12ರಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು. ಅಕ್ಟೋಬರ್ 19ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್, ಅಕ್ಟೋಬರ್ 21ರಂದು ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ದುರ್ಗಾ ಹೋಟೆಲ್ ಮುಂದೆ ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಅಕ್ಟೋಬರ್ 22ರಂದು ಹೊಯಿಗೆ ಬಜಾರ್ನ ಭಗವತಿ ಅಪಾರ್ಟ್ಮೆಂಟ್ ಕೆಳಗೆ ನಿಲ್ಲಿಸಿದ್ದ ಮತ್ತೊಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು.
ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿ ಅಕ್ಟೋಬರ್ 18ರಂದು ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಹಾಗೂ ಅಕ್ಟೋಬರ್ 21ರಂದು ಕುತ್ತಾರ್ ಪಂಡಿತ್ ಹೌಸ್ ಬಳಿ ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್ ಕಳವಾಗಿದ್ದವು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.
ವಿಶೇಷ ತಂಡದಿಂದ ಕಾರ್ಯಾಚರಣೆ
ಕಳವು ಪ್ರಕರಣಗಳ ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಹಾಗೂ ಮಾಹಿತಿ ಸಂಗ್ರಹದ ಮೂಲಕ ಪೊಲೀಸರು ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಶಕ್ಕೆ ಪಡೆದವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಐಷಾರಾಮಿ ಜೀವನಕ್ಕಾಗಿ ಕಳವು
ಪೊಲೀಸರ ವಿಚಾರಣೆಯ ಪ್ರಕಾರ, ಆರೋಪಿಗಳು ಸರಗಳ್ಳತನ ಸೇರಿದಂತೆ ಇತರ ಅಪರಾಧ ಕೃತ್ಯಗಳನ್ನು ಎಸಗಿ, ಅದರ ಲಾಭದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಬೆಲೆಬಾಳುವ ಮೋಟಾರ್ ಸೈಕಲ್ಗಳನ್ನು ಗುರಿಯಾಗಿಸಿಕೊಂಡು, ಅವುಗಳನ್ನು ನಿಲ್ಲಿಸಿದ್ದ ಸ್ಥಳಗಳಿಂದ ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ನಾಲ್ವರು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಪೊಲೀಸ್ ತಂಡದ ಕಾರ್ಯಾಚರಣೆ
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿಎಸ್ಐ ಮಾರುತಿ ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಠಾಣೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಗೆ ಸಹಕರಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.
ಸ್ಥಳೀಯ
Venoor-ವೇಣೂರು: ಯುವತಿಗೆ ಲೈಂಗಿಕ ಕಿರುಕುಳ ಆರೋಪ: 61 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ
ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವೇಣೂರು: ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಮಾಹಿತಿಯ ಪ್ರಕಾರ, ಅ.24ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ದೂರಿನ ಆಧಾರದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಅಪರಾಧ
ಮಂಗಳೂರು : ಕೊಲೆಯ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು – ಮಾಯಾ ರೇಗೊ ದೂರು : ಓರ್ವನ ಬಂಧನ

ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು ಗಾನಮಜಲ್ ನಿವಾಸಿ ನವೀನ್ ಥೋರೆಸ್ (42) ಎಂದು ಪೊಲೀಸರು ಗುರುತಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮಾಯ ಅನ್ನಾಮೇರಿ ರೇಗೋ ಅವರು ತಮ್ಮ ವಿರುದ್ಧ ಕೊಲೆಯಂತಹ ಗಂಭೀರ ಸುಳ್ಳು ಆರೋಪ ಹೊರಿಸಿ, ಹಣ ಹಾಗೂ ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ. ಅಲ್ಲದೆ, ಸಾರ್ವಜನಿಕವಾಗಿ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ 2026ರ ಆಗಸ್ಟ್ 10ರಂದು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಕಲಂ 61(a)(1) ಮತ್ತು 308(7)ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಕ್ಟೋಬರ್ 23ರಂದು ನವೀನ್ ಥೋರೆಸ್ ಅವರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಟೋಬರ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಪರಾಧ
Arrested-ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ.
ಸ್ಟಿಂಗ್ ಆಪರೇಷನ್ ನಡೆಸಲು ಬಳಸಿದ್ದ ಮೊಬೈಲ್ ಫೋನ್ ಖರೀದಿಸಿ ನೀಡಿದ ಆರೋಪದ ಮೇಲೆ ರಿತೇಶ್ ಪಾಂಡೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈತ ದಿಲ್ಲಿಯಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಖರೀದಿಸಿ, ಸ್ಟಿಂಗ್ ಆಪರೇಷನ್ ನಡೆಸಿದ ಆರೋಪಿಗಳಿಗೆ ನೀಡಿದ್ದ ಎನ್ನಲಾಗಿದೆ.
ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.
-
ಸ್ಥಳೀಯ9 hours agoKukke-ಕುಕ್ಕೆ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ದಿಟ್ಟಂ ಬದಲಾವಣೆಗೆ ವಿರೋಧ: ಪ್ರತ್ಯೇಕ ಸಂಕಲ್ಪ ಮರುಜಾರಿಗೆ ಪ್ರಸನ್ನ ದರ್ಬೆ ಆಗ್ರಹ; ಸಾಮೂಹಿಕ ಸಂಕಲ್ಪ ಪದ್ಧತಿ ಕೈಬಿಡದಿದ್ದರೆ ನ್ಯಾಯಬದ್ಧ ಹೋರಾಟದ ಎಚ್ಚರಿಕೆ
-
ಸ್ಥಳೀಯ8 hours agoVenoor-ವೇಣೂರು: ಯುವತಿಗೆ ಲೈಂಗಿಕ ಕಿರುಕುಳ ಆರೋಪ: 61 ವರ್ಷದ ವ್ಯಕ್ತಿ ಪೊಲೀಸ್ ವಶಕ್ಕೆ
-
ಮಂಗಳೂರು5 hours agoYogesh-ಸೌಜನ್ಯ ಪ್ರಕರಣದ ಮರುತನಿಖೆಯಲ್ಲಿ ಬಿಗ್ ಡೆವಲಪ್’ಮೆಂಟ್; ಸೌಜನ್ಯ ಹೋರಾಟಗಾರರ ‘ಕೆಂಗಣ್ಣಿಗೆ’ ಗುರಿಯಾಗಿದ್ದ ಎಸೈ ಯೋಗೇಶ್ ನನ್ನು ವಿಚಾರಣೆಗೆ ಕರೆದ ಎಸ್ಐಟಿ – ಹೊರ ಬರುತ್ತಾ ಸತ್ಯ ?
-
ಸಿನೆಮಾ8 hours agoVijay and Rashmika-ಮದುವೆಯಾಗಿ ಕೆಲವೇ ತಿಂಗಳು… ವಿಜಯ್–ರಶ್ಮಿಕಾ ನಡುವೆ ಎಲ್ಲವೂ ಸರಿಯಿಲ್ಲವೇ?
-
ಸ್ಥಳೀಯ8 hours agoCoconut-ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: ಕೊಬ್ಬರಿ ಬೆಲೆ ಹೈ ಜಂಪ್! – ಎಳನೀರಿಗೂ ರೇಟ್ ಹೈಕ್
-
ನಿಧನ ವಾರ್ತೆ7 hours agoKota-ಕೋಟ ಜಂಕ್ಷನ್ನಲ್ಲಿ ಭೀಕರ ಅಪಘಾತ: ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಆರೆಸ್ಸೆಸ್ ಮುಖಂಡ ಸಾವು
-
ಮೈಸೂರು8 hours agoPramodadevi Odeyar-ಮೈಸೂರು ದಸರಾ: ಸರ್ಕಾರಿ ಇಲಾಖೆಗಳ ನಡೆಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ: ಸರ್ಕಾರಕ್ಕೆ ಉಚ್ಚ ನ್ಯಾಯಾಲಯದ ಮೊರೆ ಹೋಗುವ ಎಚ್ಚರಿಕೆ..!
-
ಸ್ಥಳೀಯ7 hours agoVirendra Heggade-ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ದತ್ತಾತ್ರೇಯ ಹೊಸಬಾಳೆ; ವೀರೇಂದ್ರ ಹೆಗ್ಗಡೆಯವರಿಗೆ ಶುಭ ಹಾರೈಕೆ


















