ನಿಧನ ವಾರ್ತೆ
Bantwal-ಬಂಟ್ವಾಳ: ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು
ಮನೆಯ ಎದುರಿನ ಹಾಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ. ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ.
ಬಂಟ್ವಾಳ: ಮನೆಯ ಎದುರಿನ ಹಾಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ.
ಮೃತ ಬಾಲಕನನ್ನು ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಎಂದು ಗುರುತಿಸಲಾಗಿದೆ.
ಅ.25ರ ರಾತ್ರಿ ಅಮೃತ್ ಮನೆಯ ಎದುರಿನ ಹಾಲ್‌ನಲ್ಲಿ ಒಬ್ಬನೇ ಆಟವಾಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯ ಕಿಟಕಿಗೆ ಮೊದಲೇ ಸಿಕ್ಕಿಸಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕೂಡಲೇ ಬಾಲಕನನ್ನು ಉಪಚರಿಸಿದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ನಿಧನ ವಾರ್ತೆ
Vitla-ವಿಟ್ಲ: ಒಕ್ಕೆತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ನಿಧನ
ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜಿ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ, ಒಕ್ಕೆತ್ತೂರು ಕೊಣಾಜಿ ನಿವಾಸಿ ಯಮುನಾ (59) ಅವರು ಅನಾರೋಗ್ಯದಿಂದ ಅ.27ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ ಒಕ್ಕೆತ್ತೂರು ಶಾಲೆಯ ಮುಖ್ಯ ಶಿಕ್ಷಕಿಯಾಗಿ ನಿಯುಕ್ತಿಗೊಂಡಿದ್ದ ಯಮುನಾ ಅವರು ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಕರ್ತವ್ಯಕ್ಕೆ ಹಾಜರಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಯಮುನಾ ಅವರು ಈ ಹಿಂದೆ ಕಡಂಬು, ಅನಿಲಕಟ್ಟೆ ಸರ್ಕಾರಿ ಶಾಲೆಗಳು ಹಾಗೂ ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. 2026ರ ಏಪ್ರಿಲ್ 19ರಂದು ಒಕ್ಕೆತ್ತೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ವರ್ಗಾವಣೆಗೊಂಡು ಬಂದಿದ್ದರು. ಆದರೆ, ಅನಾರೋಗ್ಯದ ಕಾರಣದಿಂದ ಪೂರ್ಣಾವಧಿ ಕರ್ತವ್ಯ ನಿರ್ವಹಿಸಲು ಅವರಿಗೆ ಸಾಧ್ಯವಾಗಿರಲಿಲ್ಲ.
ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ನಿಧನ ವಾರ್ತೆ
Encounter-ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು
17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲ್ಕತ್ತ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪರಾಧ ನಡೆದ ಸ್ಥಳದ ಮಹಜರು ಹಾಗೂ ಕೃತ್ಯದ ಮರುಸೃಷ್ಟಿಗಾಗಿ ಆರೋಪಿಯನ್ನು ಸೋಮವಾರ ರಾತ್ರಿ ಗಾಯ್‌ಘಾಟಾ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆತ ಪೊಲೀಸ್ ಅಧಿಕಾರಿಯೊಬ್ಬರ ಸರ್ವೀಸ್ ರಿವಾಲ್ವರ್ ಕಸಿದುಕೊಂಡು ಸಿಬ್ಬಂದಿಯತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ಚಾಂದ್‌ಪಾರಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಆರೋಪಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ನಡೆದ ಮೂರನೇ ಎನ್‌ಕೌಂಟರ್ ಘಟನೆ ಇದಾಗಿದೆ ಎಂದು ವರದಿಯಾಗಿದೆ.
ಏನಿದು ಪ್ರಕರಣ?
ಶನಿವಾರ ರಾತ್ರಿ ಮನೆಯ ಸಮೀಪ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮವೊಂದಕ್ಕೆ ತೆರಳಿದ್ದ 11ನೇ ತರಗತಿಯ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಳು. ಭಾನುವಾರ ಬೆಳಿಗ್ಗೆ ಗಾಯ್‌ಘಾಟಾ ಪ್ರದೇಶದಲ್ಲಿ ನೆರೆಹೊರೆಯವರ ಮನೆಯೊಂದರ ಹೊರಭಾಗದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು.
ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಡಿ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ತನಿಖೆ ಮುಂದುವರಿದಿರುವ ಸಂದರ್ಭದಲ್ಲೇ, ಅಪರಾಧದ ಮರುಸೃಷ್ಟಿಗೆ ಕರೆದೊಯ್ದ ವೇಳೆ ಆರೋಪಿ ಪೊಲೀಸ್ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಧನ ವಾರ್ತೆ
Silk Manju-ಉಪೇಂದ್ರ ನಟನೆಯ ‘ಎ’ ಚಿತ್ರದ ನಿರ್ಮಾಪಕ ಸಿಲ್ಕ್ ಮಂಜು ನಿಧನ
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅ.26ರ ಸೋಮವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಹಲವು ಚಿತ್ರಗಳನ್ನು ನಿರ್ಮಿಸಿದ್ದ ಸಿಲ್ಕ್ ಮಂಜು
ಕನ್ನಡ ಚಿತ್ರರಂಗದಲ್ಲಿ ಸಿಲ್ಕ್ ಮಂಜು ಎಂದೇ ಪರಿಚಿತರಾಗಿದ್ದ ಅವರು, ಉಪೇಂದ್ರ ಅವರ ‘ಎ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಪ್ರತ್ಯರ್ಥ’, ‘ಸೂರ್ಯಕಾಂತಿ’, ‘ಹಗಲು ವೇಷ’, ‘ಸೈಕಿಕ್’ ಹಾಗೂ ‘ಟೆರರ್’ ಅವರು ನಿರ್ಮಿಸಿದ ಪ್ರಮುಖ ಚಿತ್ರಗಳಾಗಿವೆ.
‘ಟೆರರ್’ ಸಿನಿಮಾ ನಷ್ಟದಿಂದ ಆರ್ಥಿಕ ಸಂಕಷ್ಟ?
ಖಾಸಗಿ ವಾಹಿನಿಯೊಂದಕ್ಕೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಸಿಲ್ಕ್ ಮಂಜು ಅವರ ಸೊಸೆ ಆಶಾ ಅವರು ಕುಟುಂಬ ಎದುರಿಸುತ್ತಿದ್ದ ಸಂಕಷ್ಟಗಳ ಕುರಿತು ಮಾಹಿತಿ ಹಂಚಿಕೊಂಡಿದ್ದರು.
ಆಶಾ ಅವರ ಹೇಳಿಕೆಯ ಪ್ರಕಾರ, ‘ಟೆರರ್’ ಸಿನಿಮಾ ನಿರ್ಮಾಣಕ್ಕೆ ಸುಮಾರು 8 ಕೋಟಿ ರೂ. ವೆಚ್ಚ ಮಾಡಲಾಗಿತ್ತು. ಇದಕ್ಕಾಗಿ 2ರಿಂದ 3 ಕೋಟಿ ರೂ. ಸಾಲ ಮಾಡಿದ್ದಲ್ಲದೆ, ಮನೆಯನ್ನು ಕೂಡ ಅಡಮಾನ ಇಡಲಾಗಿತ್ತು ಎನ್ನಲಾಗಿದೆ. ಆದರೆ, ಸಿನಿಮಾ ಬಿಡುಗಡೆಯಾದ ಬಳಿಕ ನಿರೀಕ್ಷಿತ ಆದಾಯ ಬರಲಿಲ್ಲ. ಇದರಿಂದ ಮಂಜು ಅವರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಅವರು ತಿಳಿಸಿದ್ದಾರೆ.
ಸಿನಿಮಾದ ನಷ್ಟ ಹಾಗೂ ಸಾಲದ ಹೊರೆ ಮಂಜು ಅವರ ಮನಸ್ಸಿನ ಮೇಲೆ ಪರಿಣಾಮ ಬೀರಿತ್ತು. ಅವರ ಆರೋಗ್ಯ ಹದಗೆಡಲು ಆರ್ಥಿಕ ಸಂಕಷ್ಟವೂ ಪ್ರಮುಖ ಕಾರಣವಾಗಿತ್ತು ಎಂದು ಆಶಾ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಿರ್ಮಾಪಕ
ಸಿಲ್ಕ್ ಮಂಜು ಅವರು ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ಅವರ ಆರೋಗ್ಯದಲ್ಲಿ ನಿರೀಕ್ಷಿತ ಸುಧಾರಣೆ ಕಂಡುಬಂದಿರಲಿಲ್ಲ.
ಚಿಕಿತ್ಸೆಯ ವೆಚ್ಚ ಭರಿಸಲು ಕಷ್ಟವಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ನೆರವಿನ ನಿರೀಕ್ಷೆಯಲ್ಲಿದ್ದರು ಎಂದು ವರದಿಯಾಗಿದೆ. ಕುಟುಂಬಸ್ಥರು ಸಾಧ್ಯವಾದ ಎಲ್ಲ ಪ್ರಯತ್ನಗಳನ್ನೂ ಮಾಡಿದ್ದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಸೊಸೆ ಆಶಾ ನೋವು ಹಂಚಿಕೊಂಡಿದ್ದರು.
ಸಿಲ್ಕ್ ಮಂಜು ಅವರು ಇಬ್ಬರು ಮಕ್ಕಳು, ಸೊಸೆಯಂದಿರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರ ಇಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
-
ಸ್ಥಳೀಯ14 hours agoKumbale-ಕುಂಬಳೆ: ಚೆಂಡು ಹೆಕ್ಕಲು ಪೊದೆಯೊಳಗೆ ಕೈ ಹಾಕಿದ ವಿದ್ಯಾರ್ಥಿಗೆ ಹಾವು ಕಡಿತ
-
ಸ್ಥಳೀಯ12 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿ ಮುಖ್ಯಸ್ಥರ ಬದಲಾವಣೆಗೆ ಒತ್ತಡ..! ‘ಇದೊಂದು ಕಟ್ಟುಕತೆ’ ಆರೋಪ ತಳ್ಳಿಹಾಕಿದ ಗಿರೀಶ್ ಮಟ್ಟಣ್ಣವರ್
-
ಸ್ಥಳೀಯ12 hours agoSIT notice-ಸೌಜನ್ಯ ಪ್ರಕರಣದ ತನಿಖೆ ಚುರುಕು: ಹಿಂದಿನ ತನಿಖೆಯ ಭಾಗವಾಗಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ಐಟಿ ನೋಟಿಸ್
-
ನಿಧನ ವಾರ್ತೆ7 hours agoVitla-ವಿಟ್ಲ: ಒಕ್ಕೆತ್ತೂರು ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ನಿಧನ
-
ಅಪರಾಧ16 hours agoVitla-ವಿಟ್ಲ: ಬಸ್ಸಿನಲ್ಲಿ ಮಹಿಳೆಯ ಬ್ಯಾಗಿನಿಂದ 64 ಗ್ರಾಂ ಚಿನ್ನಾಭರಣ, ನಗದು ಕಳವು
-
ಮಂಗಳೂರು10 hours agoBlack pepper-ಕಾಳುಮೆಣಸಿಗೆ ಭರ್ಜರಿ ಬೇಡಿಕೆ: ಕೆ.ಜಿ.ಗೆ ₹760ರ ಗಡಿ ದಾಟಿದ ಧಾರಣೆ; ₹800ರ ನಿರೀಕ್ಷೆ! ಬಳ್ಳಿ ಮಾರಾಟದ ದಂಧೆಯ ಬಗ್ಗೆ ರೈತರು ಎಚ್ಚರ ವಹಿಸುವ ಅಗತ್ಯ
-
ಬಿಗ್ ನ್ಯೂಸ್15 hours agoSupraja Rao-ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಶಿಷ್ಯವೇತನಕ್ಕೆ ಪುತ್ತೂರಿನ ಸುಪ್ರಜಾ ರಾವ್ ಆಯ್ಕೆ
-
ಮೈಸೂರು13 hours agoMysuru-ಮೈಸೂರು ದಸರಾ ವಿವಾದ: ಪ್ರಮೋದಾದೇವಿ ಒಡೆಯರ್ಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು


















