Connect with us

ದಕ್ಷಿಣ ಕನ್ನಡ

ತನಿಖೆಗೆ ಆಗ್ರಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಅಶೋಕ್ ರೈ ವಿರುದ್ಧ ಪ್ರಸನ್ನ ಮಾರ್ತ ವಾಗ್ದಾಳಿ

Published

on



Ad Widget

Ad Widget

Ad Widget

Ad Widget

ಪುತ್ತೂರು: ಅ.10: ಟಿಕೆಟ್ ಹಂಚಿಕೆ ವಿಚಾರದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಹೇಳಿಕೆ ನೀಡಿರುವುದು ಜನಪ್ರತಿನಿಧಿಯ ಘನತೆಗೆ ತಕ್ಕುದಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸತೀಶ್ ಕುಂಪಲ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದಿರುವುದಾಗಿ ಹೇಳಲಾಗುತ್ತಿರುವ ಸ್ಟಿಂಗ್ ಆಪರೇಷನ್ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು. ಆದರೆ, ಇದಕ್ಕೆ ಸಮರ್ಪಕ ಉತ್ತರ ನೀಡುವ ಬದಲು ಶಾಸಕ ಅಶೋಕ್ ಕುಮಾರ್ ರೈ ಕೀಳುಮಟ್ಟದ ಭಾಷೆ ಬಳಸಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ತಮ್ಮ ಪಾತ್ರವಿಲ್ಲದಿದ್ದರೆ ತನಿಖೆಗೆ ಸಹಕರಿಸಲಿ

Ad Widget

Ad Widget <> Ad Widget

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂಬುದನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ತನಿಖೆಯ ಮೂಲಕ ಸಾಬೀತುಪಡಿಸಲಿ. ಆರೋಪಗಳ ಸತ್ಯಾಸತ್ಯತೆ ಹೊರಬರಲು ಸರ್ಕಾರ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಬೇಕೇ ಹೊರತು, ತನಿಖೆಗೆ ಒತ್ತಾಯಿಸಿದವರ ವಿರುದ್ಧ ವೈಯಕ್ತಿಕ ನಿಂದನೆಗೆ ಇಳಿಯಬಾರದು ಎಂದು ಪ್ರಸನ್ನ ಮಾರ್ತ ಹೇಳಿದ್ದಾರೆ.



Ad Widget

ಶಾಸಕ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಸ್ಥಾನದ ಘನತೆ ಕಾಪಾಡಿಕೊಳ್ಳಬೇಕು. ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದು ಪುತ್ತೂರಿನ ಜನತೆಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಪುತ್ತೂರಿನಲ್ಲಿ ಬಿಜೆಪಿ ಪ್ರೀತಿ ಮತ್ತು ವಿಶ್ವಾಸದ ರಾಜಕಾರಣಕ್ಕೆ ಆದ್ಯತೆ ನೀಡುತ್ತದೆಯೇ ಹೊರತು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್‌ನ ನಡೆಗೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಸನ್ನ ಮಾರ್ತ ಎಚ್ಚರಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

C.T. Ravi-ಮೈಸೂರು ರಾಜಮನೆತನದ ಗೌರವ ಉಳಿಸಬೇಕು, ರಾಜಮಾತೆಯ ಅಹವಾಲು ಆಲಿಸಿ: ಸಿ.ಟಿ. ರವಿ

Published

on



Ad Widget

Ad Widget

Ad Widget

Ad Widget

ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು ರಾಜಮನೆತನದ ಪರವಾಗಿ ಮಾತನಾಡಿದ್ದಾರೆ. ರಾಜಮನೆತನಕ್ಕೆ ಇರುವ ವಿಶೇಷ ಗೌರವವನ್ನು ಸರ್ಕಾರ ಅರ್ಥಮಾಡಿಕೊಂಡು, ಅವರ ಅಹವಾಲುಗಳನ್ನು ಸಹಾನುಭೂತಿಯಿಂದ ಆಲಿಸಬೇಕು ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು ರಾಜಮನೆತನದ ಪರವಾಗಿ ಮಾತನಾಡಿದ್ದಾರೆ. ರಾಜಮನೆತನಕ್ಕೆ ಇರುವ ವಿಶೇಷ ಗೌರವವನ್ನು ಸರ್ಕಾರ ಅರ್ಥಮಾಡಿಕೊಂಡು, ಅವರ ಅಹವಾಲುಗಳನ್ನು ಸಹಾನುಭೂತಿಯಿಂದ ಆಲಿಸಬೇಕು ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಮೈಸೂರು ರಾಜಮನೆತನದ ಬಗ್ಗೆ ತಮಗೆ ವಿಶೇಷ ಗೌರವವಿದೆ ಎಂದು ತಿಳಿಸಿದರು. ಮೈಸೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವ ಬ್ರ್ಯಾಂಡ್ ಆಗಿ ರೂಪಿಸುವಲ್ಲಿ ರಾಜಮನೆತನದ ಕೊಡುಗೆ ಮಹತ್ವದ್ದಾಗಿದೆ. ಕನ್ನಂಬಾಡಿ ಅಣೆಕಟ್ಟಿನ ನಿರ್ಮಾಣ ಪೂರ್ಣಗೊಳಿಸಲು ಮಹಾರಾಣಿ ತಮ್ಮ ಒಡವೆಗಳನ್ನು ನೀಡಿದ್ದರು ಎಂಬುದನ್ನು ಸ್ಮರಿಸಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದ ಸಂದರ್ಭದಲ್ಲಿ ರಾಜಮನೆತನಗಳೊಂದಿಗೆ ಒಪ್ಪಂದಗಳು ನಡೆದಿದ್ದವು. ರಾಜಮನೆತನಗಳಿಗೆ ಗೌರವ ನೀಡುವುದೂ ಆ ವ್ಯವಸ್ಥೆಯ ಭಾಗವಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು.



Ad Widget

“ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ಆದರೆ, ನಾವ್ಯಾರೂ ರಾಜರಲ್ಲ. ರಾಜಮನೆತನಗಳಿಗೆ ಸಲ್ಲಬೇಕಾದ ಗೌರವವನ್ನು ನಾವು ಉಳಿಸಿಕೊಂಡಿಲ್ಲ. ಅಂದು ರಾಜಪ್ರಭುತ್ವವಿದ್ದಾಗಲೂ ಅವರು ಪ್ರಜಾಪ್ರಭುತ್ವದ ಆಶಯಗಳಿಗೆ ಪೂರಕವಾಗಿ ನಡೆದುಕೊಂಡಿದ್ದರು. ಆದರೆ, ಇಂದು ಪ್ರಜಾಪ್ರಭುತ್ವದಲ್ಲಿರುವ ಕೆಲವರು ರಾಜರಂತೆ ಮೆರೆಯುತ್ತಿದ್ದಾರೆ” ಎಂದು ಸಿ.ಟಿ. ರವಿ ಟೀಕಿಸಿದರು.

Ad Widget

Ad Widget

ಸರ್ಕಾರದ ವತಿಯಿಂದ ಆಯೋಜಿಸುವ ದಸರಾ ಕಾರ್ಯಕ್ರಮಗಳಿಗೆ ತಾವು ಎಂದಿಗೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜಮನೆತನದ ಸಂಪ್ರದಾಯಗಳು ಹಾಗೂ ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ದೇಶ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾಗ ಮೈಸೂರು ಮಹಾರಾಜರು ತಮ್ಮ ಖಾಸಗಿ ವಿಮಾನವನ್ನು ದೇಶದ ಗೃಹ ಸಚಿವರ ಬಳಕೆಗೆ ನೀಡಿದ್ದರು ಎಂಬುದನ್ನು ಉಲ್ಲೇಖಿಸಿದ ಸಿ.ಟಿ. ರವಿ, ಮೈಸೂರು ರಾಜಮನೆತನವು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಗೌರವದಿಂದ ಸ್ಮರಿಸಬೇಕು. ರಾಜಮನೆತನಕ್ಕೆ ಇರುವ ವಿಶೇಷ ಗೌರವವನ್ನು ಉಳಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕಾರು-ಆಕ್ಟಿವಾ ಡಿಕ್ಕಿ- ಸವಾರನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ. ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು-ಸುಳ್ಯ ರಸ್ತೆಯ ಕಾವು ಸಮೀಪ ಅ.27ರಂದು ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಡಿಕ್ಕಿಯ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಅಪರಾಧ

Vitla-ವಿಟ್ಲ: ಮಟ್ಕಾ ಆಟದಲ್ಲಿ ನಿರತನಾಗಿದ್ದ ವ್ಯಕ್ತಿ ಪೊಲೀಸ್‌ ವಶ

Published

on



Ad Widget

Ad Widget

Ad Widget

Ad Widget

ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ. ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಠಾಣಾ ಪೊಲೀಸರು ಅಡ್ಯನಡ್ಕ ಸಮೀಪ ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಂಧಿತನನ್ನು ಕೇಪು ಗ್ರಾಮದ ನಿವಾಸಿ ಯಶೋಧರ (42) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಎಸ್‌ಐ ರಾಮಕೃಷ್ಣ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.



Ad Widget

ಬಂಧಿತನಿಂದ ಮಟ್ಕಾ ಜೂಜಾಟಕ್ಕೆ ಬಳಸುತ್ತಿದ್ದ ಚೀಟಿಗಳು, ನಗದು ಹಣ ಹಾಗೂ ಮೊಬೈಲ್ ಫೋನ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading