Connect with us

ಸ್ಥಳೀಯ

Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ

Published

on



Ad Widget

Ad Widget

Ad Widget

Ad Widget

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.

Ad Widget

Ad Widget <> Ad Widget

ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.



Ad Widget
Ad Widget
Click to comment

Leave a Reply

ಬಿಗ್ ನ್ಯೂಸ್

Protest-ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ದುಸ್ಥಿತಿ: ನ.6 ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ

Published

on



Ad Widget

Ad Widget

Ad Widget

Ad Widget

ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಮಾರು 9.5 ಕಿ.ಮೀ. ಉದ್ದದ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ವಾಹನಗಳ ಸಂಚಾರಕ್ಕೂ ಜನರ ಓಡಾಟಕ್ಕೂ ತೀವ್ರ ಸಮಸ್ಯೆ ಎದುರಾಗಿದೆ. ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕರು ಒಗ್ಗೂಡಿದ್ದು, ಹೋರಾಟಕ್ಕಾಗಿ ರಚಿಸಿರುವ ‘ಸಮಾನ ವೇದಿಕೆ’ಯ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಕೆಲವೇ ದಿನಗಳಲ್ಲಿ ಸಾವಿರಾರು ಮಂದಿ ಸೇರ್ಪಡೆಯಾಗಿದ್ದಾರೆ. ರಸ್ತೆ ದುಸ್ಥಿತಿಯ ಬಗ್ಗೆ ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Ad Widget

Ad Widget <> Ad Widget

ನವೆಂಬರ್ 6ರಂದು ಸಂಜೆ 3 ಗಂಟೆಗೆ ತಣ್ಣೀರುಪಂತ ಗ್ರಾಮದ ಕಲ್ಲೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಕ್ಷಭೇದ ಮರೆತು ರಸ್ತೆ ದುರಸ್ತಿಗಾಗಿ ಒಗ್ಗಟ್ಟಿನಿಂದ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ.



Ad Widget

ನಾಲ್ಕು ವರ್ಷಗಳಿಂದಲೂ ಸಮಸ್ಯೆ
ಕಳೆದ ನಾಲ್ಕು ವರ್ಷಗಳಿಂದ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿದಾಗ ಮುಂದಿನ ಬೇಸಿಗೆಯಲ್ಲಿ ಕಾಮಗಾರಿ ನಡೆಸುವ ಭರವಸೆ ನೀಡಲಾಗುತ್ತದೆ. ಆದರೆ, ಬೇಸಿಗೆಯಲ್ಲಿ ಹೊಂಡಗಳಿಗೆ ತೇಪೆ ಹಾಕುವ ಕೆಲಸ ಮಾತ್ರ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಅವು ಕಿತ್ತುಹೋಗಿ ಮತ್ತೆ ರಸ್ತೆ ಗುಂಡಿಮಯವಾಗುತ್ತಿದೆ.

Ad Widget

Ad Widget

ಕಳೆದ ಬೇಸಿಗೆಯಲ್ಲಿ ಬೆಳ್ತಂಗಡಿ ಶಾಸಕರ 45 ಲಕ್ಷ ರೂ. ಅನುದಾನದಲ್ಲಿ ರಸ್ತೆಯ ದೊಡ್ಡ ಹೊಂಡಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರು ಸ್ವಲ್ಪ ನಿರಾಳರಾಗಿದ್ದರಾದರೂ, ಮಳೆಗಾಲದಲ್ಲಿ ತೇಪೆ ಕಿತ್ತುಹೋಗಿ ರಸ್ತೆಯಲ್ಲಿ ನೀರು ನಿಲ್ಲುವಂತಾಗಿದೆ. ರಸ್ತೆಯಲ್ಲಿರುವ ಹೊಂಡಗಳಿಂದ ವಾಹನಗಳ ಬಿಡಿಭಾಗಗಳು ಹಾನಿಗೊಳಗಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸಿ ಸಮಸ್ಯೆಯ ತೀವ್ರತೆಯನ್ನು ಅನುಭವಿಸಿದ್ದರೂ, ರಸ್ತೆ ಪರಿಸ್ಥಿತಿಯಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ ಎಂಬುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಪಕ್ಷಭೇದ ಮರೆತು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

Ad Widget
Continue Reading

ಮಂಗಳೂರು

Soujanya case-ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್ ಬಿಡುಗಡೆ?

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ.29: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

Ad Widget

Ad Widget

Ad Widget alt="Ad Widget"/>

Ad Widget

ಎಸ್‌ಐಟಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಎಸ್‌ಐಟಿಯ ನೂತನ ಮುಖ್ಯಸ್ಥರಾಗಿ ಲಾಬುರಾಮ್ ಅಥವಾ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.



Ad Widget

ಇದೇ ವೇಳೆ, ಎಸ್‌ಐಟಿಯ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನೂ ಬದಲಾಯಿಸುವ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಎಸಿಪಿ ಶ್ರೀನಿಧಿ ಅವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Continue Reading

ಸ್ಥಳೀಯ

Sudheer Kumar Reddy-BiG BREAKING:ಸೌಜನ್ಯ ಅವರ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ SITಗೆ ಯಾವುದೇ ಅನುಮಾನಗಳಿಲ್ಲ. : ಸುಧೀರ್ ಕುಮಾರ್ ರೆಡ್ಡಿ ಖಡಕ್ ರಿಪ್ಲೈ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಯಾವುದೇ ಅನುಮಾನಗಳಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಯಾವುದೇ ಅನುಮಾನಗಳಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

“ಸೌಜನ್ಯ ಅವರ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ ನಮಗೆ ಯಾವುದೇ ಅನುಮಾನಗಳಿಲ್ಲ. ನಾವು ತನಿಖೆಯ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ. ಪ್ರಕರಣಕ್ಕೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ತನಿಖೆ ನಡೆಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಸೌಜನ್ಯ ಮತ್ತು ಕುಸುಮಾವತಿ ಅವರ ನಡುವಿನ ಸಂಬಂಧದ ಕುರಿತು ತನಿಖೆ ನಡೆಸುವಂತೆ ಧರ್ಮಸ್ಥಳದ ನಿವಾಸಿ ಕಿಶೋರ್ ಎಂಬವರು ಎಸ್‌ಐಟಿಗೆ ದೂರು ಸಲ್ಲಿಸಿದ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ.



Ad Widget

ಯಾವುದಾದರೂ ಸ್ಥಳೀಯದ ವಿಚಾರದ ಬಗ್ಗೆ ಮನಸ್ತಾಪಗಳಿದ್ದರೇ ಅದು ಸ್ಥಳೀಯ ಪೊಲೀಸರ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ತಿಳಿಸಿದರು.

Ad Widget

Ad Widget

ಕಿಶೋರ್ ದೂರಿನಲ್ಲಿ ಏನಿದೆ?
ಮಂಗಳೂರಿನ ಎಸ್‌ಐಟಿ ಕಚೇರಿಗೆ ತೆರಳಿ ದೂರು ಸಲ್ಲಿಸಿರುವ ಕಿಶೋರ್, ಕುಸುಮಾವತಿ ಅವರು ಸೌಜನ್ಯ ಅವರ ತಾಯಿಯೇ ಎಂಬುದನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. 2015ರಲ್ಲಿ ಇಂದಿರಾವತಿ ಎಂಬ ಮಹಿಳೆಯ ಹೆಸರಿನಲ್ಲಿ ಧರ್ಮಸ್ಥಳದ ಪಾಂಗಳ ಗ್ರಾಮದಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಜಮೀನು ಮಂಜೂರಾಗಿರುವ ವಿಚಾರವನ್ನು ಉಲ್ಲೇಖಿಸಿರುವ ಅವರು, ಈ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಗುರುತಿನ ದಾಖಲೆಗಳನ್ನು ಪರಿಶೀಲಿಸಬೇಕೆಂದು ಕೋರಿದ್ದಾರೆ.

ಇಂದಿರಾವತಿ ಮತ್ತು ಕುಸುಮಾವತಿ ಒಬ್ಬರೇ ಎಂಬುದಾಗಿ ಸಲ್ಲಿಸಿರುವ ಪ್ರಮಾಣಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯಲ್ಲಿನ ದಾಖಲೆಗಳಲ್ಲೂ ವ್ಯತ್ಯಾಸಗಳಿವೆ ಎಂದು ಕಿಶೋರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಅಲ್ಲದೆ, ಸೌಜನ್ಯ ಮತ್ತು ಅವರ ಸಹೋದರಿ ಸೌಮ್ಯ ಅವರ ಜನನ ನೋಂದಣಿ, ಆಸ್ಪತ್ರೆ ಹಾಗೂ ಶಾಲಾ ದಾಖಲೆಗಳನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸಬೇಕು. ಕುಟುಂಬದ ವಂಶವೃಕ್ಷ, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ಪರಿಶೀಲಿಸಬೇಕು ಎಂದೂ ಮನವಿ ಮಾಡಿದ್ದಾರೆ. ಈ ಹಿಂದೆ ತಹಶೀಲ್ದಾರ್ ಹಾಗೂ ಸಹಾಯಕ ಆಯುಕ್ತರಿಗೂ ಈ ಸಂಬಂಧ ದೂರು ಸಲ್ಲಿಸಿದ್ದಾಗಿ ಅವರು ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!