ಬಿಗ್ ನ್ಯೂಸ್
SIR-ಕರ್ನಾಟಕದಲ್ಲಿ ಎಸ್‌ಐಆರ್ ಪೂರ್ಣ: ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರು ಕಡಿತ; 10 ಲಕ್ಷಕ್ಕೂ ಹೆಚ್ಚು ಹೊಸ ಮತದಾರರ ಸೇರ್ಪಡೆ
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32 ಲಕ್ಷದಷ್ಟು ಕಡಿಮೆಯಾಗಿದೆ. ಮತ್ತೊಂದೆಡೆ, ಕರಡು ಪಟ್ಟಿ ಪ್ರಕಟವಾದ ಬಳಿಕ 10 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.
ಬೆಂಗಳೂರು: ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32 ಲಕ್ಷದಷ್ಟು ಕಡಿಮೆಯಾಗಿದೆ. ಮತ್ತೊಂದೆಡೆ, ಕರಡು ಪಟ್ಟಿ ಪ್ರಕಟವಾದ ಬಳಿಕ 10 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಪರಿಷ್ಕರಣೆಯ ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ. ಮೃತರು, ಸ್ಥಳಾಂತರಗೊಂಡವರು ಹಾಗೂ ಅರ್ಹರಲ್ಲದವರ ಹೆಸರುಗಳನ್ನು ಪರಿಶೀಲನೆ ಪ್ರಕ್ರಿಯೆಯಲ್ಲಿ ತೆಗೆದುಹಾಕಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅಧಿಕಾರಿಗಳ ಮನೆಮನೆ ಪರಿಶೀಲನೆ, ಮತದಾರರ ವಿವರಗಳ ದೃಢೀಕರಣ ಹಾಗೂ ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ.
ಮಹಿಳಾ ಮತದಾರರೇ ಹೆಚ್ಚು: ರಾಜ್ಯದಲ್ಲಿ ಪ್ರತಿ 1,000 ಪುರುಷರಿಗೆ 1,017 ಮಹಿಳೆಯರು
ಅಂತಿಮ ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಿದೆ. ಒಟ್ಟು 2,29,14,063 ಮಹಿಳಾ ಮತದಾರರು ಹಾಗೂ 2,25,83,107 ಪುರುಷ ಮತದಾರರು ದಾಖಲಾಗಿದ್ದಾರೆ. ಅಂದರೆ, ಪುರುಷರಿಗಿಂತ 3,30,956 ಮಹಿಳಾ ಮತದಾರರು ಹೆಚ್ಚಿದ್ದಾರೆ. ತೃತೀಯ ಲಿಂಗದ 2,841 ಮತದಾರರೂ ಪಟ್ಟಿಯಲ್ಲಿದ್ದಾರೆ. ರಾಜ್ಯದ ಲಿಂಗಾನುಪಾತ ಪ್ರತಿ 1,000 ಪುರುಷರಿಗೆ 1,017 ಮಹಿಳೆಯರಷ್ಟಿದೆ.
10 ಲಕ್ಷಕ್ಕೂ ಹೆಚ್ಚು ಹೊಸ ಮತದಾರರ ಸೇರ್ಪಡೆ
ಆಗಸ್ಟ್ 24ರಂದು ಪ್ರಕಟಿಸಿದ್ದ ಕರಡು ಮತದಾರರ ಪಟ್ಟಿಯಲ್ಲಿ 4,46,80,151 ಮತದಾರರಿದ್ದರು. ಬಳಿಕ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗಾಗಿ 8,77,104 ಅರ್ಜಿಗಳು, ವಿದೇಶದಲ್ಲಿರುವ ಭಾರತೀಯ ಮತದಾರರ ನೋಂದಣಿಗಾಗಿ 2,312 ಅರ್ಜಿಗಳು ಹಾಗೂ ಸ್ಥಳಾಂತರಕ್ಕೆ ಸಂಬಂಧಿಸಿದಂತೆ 1,28,622 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಈ ಪ್ರಕ್ರಿಯೆಯಡಿ ಒಟ್ಟು 10,08,038 ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ವಿವಿಧ ಕಾರಣಗಳಿಂದ 1,88,324 ಹೆಸರುಗಳನ್ನು ತೆಗೆದುಹಾಕಲಾಗಿದೆ.
ಉಡುಪಿ ಜಿಲ್ಲೆಗೆ ಮೊದಲ ಸ್ಥಾನ
ರಾಜ್ಯದ ಅಂದಾಜು ಜನಸಂಖ್ಯೆಗೆ ಹೋಲಿಸಿದರೆ ನೋಂದಾಯಿತ ಮತದಾರರ ಪ್ರಮಾಣ ಶೇ.66.11ರಷ್ಟಿದೆ. 2011–2036ರ ಜನಸಂಖ್ಯಾ ಪ್ರಕ್ಷೇಪಣೆಯ ಆಧಾರದ ಮೇಲೆ ಈ ಅಂಕಿಅಂಶವನ್ನು ಲೆಕ್ಕಹಾಕಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಜನಸಂಖ್ಯೆಗೆ ಹೋಲಿಸಿದ ಮತದಾರರ ಪ್ರಮಾಣ ಶೇ.76.38ರಷ್ಟಿದ್ದು, ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.
ಈ ಪರಿಷ್ಕರಣೆಯ ಬಳಿಕವೂ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ನಿಗದಿತ ಪ್ರಕ್ರಿಯೆಯ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
ಬಿಗ್ ನ್ಯೂಸ್
Protest-ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ದುಸ್ಥಿತಿ: ನ.6 ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ
ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಉಪ್ಪಿನಂಗಡಿ: ಕುಪ್ಪೆಟ್ಟಿ–ಉಪ್ಪಿನಂಗಡಿ ನಡುವಿನ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ನಾಗರಿಕರು ನವೆಂಬರ್ 6ರಂದು ಕಲ್ಲೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಸುಮಾರು 9.5 ಕಿ.ಮೀ. ಉದ್ದದ ಈ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ವಾಹನಗಳ ಸಂಚಾರಕ್ಕೂ ಜನರ ಓಡಾಟಕ್ಕೂ ತೀವ್ರ ಸಮಸ್ಯೆ ಎದುರಾಗಿದೆ. ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕರು ಒಗ್ಗೂಡಿದ್ದು, ಹೋರಾಟಕ್ಕಾಗಿ ರಚಿಸಿರುವ ‘ಸಮಾನ ವೇದಿಕೆ’ಯ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಕೆಲವೇ ದಿನಗಳಲ್ಲಿ ಸಾವಿರಾರು ಮಂದಿ ಸೇರ್ಪಡೆಯಾಗಿದ್ದಾರೆ. ರಸ್ತೆ ದುಸ್ಥಿತಿಯ ಬಗ್ಗೆ ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನವೆಂಬರ್ 6ರಂದು ಸಂಜೆ 3 ಗಂಟೆಗೆ ತಣ್ಣೀರುಪಂತ ಗ್ರಾಮದ ಕಲ್ಲೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಕ್ಷಭೇದ ಮರೆತು ರಸ್ತೆ ದುರಸ್ತಿಗಾಗಿ ಒಗ್ಗಟ್ಟಿನಿಂದ ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ.
ನಾಲ್ಕು ವರ್ಷಗಳಿಂದಲೂ ಸಮಸ್ಯೆ
ಕಳೆದ ನಾಲ್ಕು ವರ್ಷಗಳಿಂದ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿದಾಗ ಮುಂದಿನ ಬೇಸಿಗೆಯಲ್ಲಿ ಕಾಮಗಾರಿ ನಡೆಸುವ ಭರವಸೆ ನೀಡಲಾಗುತ್ತದೆ. ಆದರೆ, ಬೇಸಿಗೆಯಲ್ಲಿ ಹೊಂಡಗಳಿಗೆ ತೇಪೆ ಹಾಕುವ ಕೆಲಸ ಮಾತ್ರ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಅವು ಕಿತ್ತುಹೋಗಿ ಮತ್ತೆ ರಸ್ತೆ ಗುಂಡಿಮಯವಾಗುತ್ತಿದೆ.
ಕಳೆದ ಬೇಸಿಗೆಯಲ್ಲಿ ಬೆಳ್ತಂಗಡಿ ಶಾಸಕರ 45 ಲಕ್ಷ ರೂ. ಅನುದಾನದಲ್ಲಿ ರಸ್ತೆಯ ದೊಡ್ಡ ಹೊಂಡಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರು ಸ್ವಲ್ಪ ನಿರಾಳರಾಗಿದ್ದರಾದರೂ, ಮಳೆಗಾಲದಲ್ಲಿ ತೇಪೆ ಕಿತ್ತುಹೋಗಿ ರಸ್ತೆಯಲ್ಲಿ ನೀರು ನಿಲ್ಲುವಂತಾಗಿದೆ. ರಸ್ತೆಯಲ್ಲಿರುವ ಹೊಂಡಗಳಿಂದ ವಾಹನಗಳ ಬಿಡಿಭಾಗಗಳು ಹಾನಿಗೊಳಗಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಜೀವಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸಿ ಸಮಸ್ಯೆಯ ತೀವ್ರತೆಯನ್ನು ಅನುಭವಿಸಿದ್ದರೂ, ರಸ್ತೆ ಪರಿಸ್ಥಿತಿಯಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ ಎಂಬುದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಪಕ್ಷಭೇದ ಮರೆತು ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಮಂಗಳೂರು
Soujanya case-ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್ ಬಿಡುಗಡೆ?
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.
ಮಂಗಳೂರು, ಅ.29: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.
ಎಸ್‌ಐಟಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಎಸ್‌ಐಟಿಯ ನೂತನ ಮುಖ್ಯಸ್ಥರಾಗಿ ಲಾಬುರಾಮ್ ಅಥವಾ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಎಸ್‌ಐಟಿಯ ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರನ್ನೂ ಬದಲಾಯಿಸುವ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಎಸಿಪಿ ಶ್ರೀನಿಧಿ ಅವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸ್ಥಳೀಯ
Sudheer Kumar Reddy-BiG BREAKING:ಸೌಜನ್ಯ ಅವರ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ SITಗೆ ಯಾವುದೇ ಅನುಮಾನಗಳಿಲ್ಲ. : ಸುಧೀರ್ ಕುಮಾರ್ ರೆಡ್ಡಿ ಖಡಕ್ ರಿಪ್ಲೈ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಯಾವುದೇ ಅನುಮಾನಗಳಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯ ನಡುವೆಯೇ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ಗುರುತಿನ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಶ್ನೆಗಳು ಎದ್ದಿರುವ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಯಾವುದೇ ಅನುಮಾನಗಳಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸ್‌ಐಟಿ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
“ಸೌಜನ್ಯ ಅವರ ತಾಯಿ ಕುಸುಮಾವತಿ ಎಂಬ ವಿಚಾರದಲ್ಲಿ ನಮಗೆ ಯಾವುದೇ ಅನುಮಾನಗಳಿಲ್ಲ. ನಾವು ತನಿಖೆಯ ವ್ಯಾಪ್ತಿಯನ್ನು ಮೀರಿ ಹೋಗುವುದಿಲ್ಲ. ಪ್ರಕರಣಕ್ಕೆ ಸಂಬಂಧವಿಲ್ಲದ ವಿಚಾರಗಳ ಬಗ್ಗೆ ತನಿಖೆ ನಡೆಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.
ಸೌಜನ್ಯ ಮತ್ತು ಕುಸುಮಾವತಿ ಅವರ ನಡುವಿನ ಸಂಬಂಧದ ಕುರಿತು ತನಿಖೆ ನಡೆಸುವಂತೆ ಧರ್ಮಸ್ಥಳದ ನಿವಾಸಿ ಕಿಶೋರ್ ಎಂಬವರು ಎಸ್‌ಐಟಿಗೆ ದೂರು ಸಲ್ಲಿಸಿದ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಿದ್ದಿದೆ.
ಯಾವುದಾದರೂ ಸ್ಥಳೀಯದ ವಿಚಾರದ ಬಗ್ಗೆ ಮನಸ್ತಾಪಗಳಿದ್ದರೇ ಅದು ಸ್ಥಳೀಯ ಪೊಲೀಸರ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ತಿಳಿಸಿದರು.
ಕಿಶೋರ್ ದೂರಿನಲ್ಲಿ ಏನಿದೆ?
ಮಂಗಳೂರಿನ ಎಸ್‌ಐಟಿ ಕಚೇರಿಗೆ ತೆರಳಿ ದೂರು ಸಲ್ಲಿಸಿರುವ ಕಿಶೋರ್, ಕುಸುಮಾವತಿ ಅವರು ಸೌಜನ್ಯ ಅವರ ತಾಯಿಯೇ ಎಂಬುದನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. 2015ರಲ್ಲಿ ಇಂದಿರಾವತಿ ಎಂಬ ಮಹಿಳೆಯ ಹೆಸರಿನಲ್ಲಿ ಧರ್ಮಸ್ಥಳದ ಪಾಂಗಳ ಗ್ರಾಮದಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಜಮೀನು ಮಂಜೂರಾಗಿರುವ ವಿಚಾರವನ್ನು ಉಲ್ಲೇಖಿಸಿರುವ ಅವರು, ಈ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಗುರುತಿನ ದಾಖಲೆಗಳನ್ನು ಪರಿಶೀಲಿಸಬೇಕೆಂದು ಕೋರಿದ್ದಾರೆ.
ಇಂದಿರಾವತಿ ಮತ್ತು ಕುಸುಮಾವತಿ ಒಬ್ಬರೇ ಎಂಬುದಾಗಿ ಸಲ್ಲಿಸಿರುವ ಪ್ರಮಾಣಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯಲ್ಲಿನ ದಾಖಲೆಗಳಲ್ಲೂ ವ್ಯತ್ಯಾಸಗಳಿವೆ ಎಂದು ಕಿಶೋರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಅಲ್ಲದೆ, ಸೌಜನ್ಯ ಮತ್ತು ಅವರ ಸಹೋದರಿ ಸೌಮ್ಯ ಅವರ ಜನನ ನೋಂದಣಿ, ಆಸ್ಪತ್ರೆ ಹಾಗೂ ಶಾಲಾ ದಾಖಲೆಗಳನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸಬೇಕು. ಕುಟುಂಬದ ವಂಶವೃಕ್ಷ, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರ ಹೇಳಿಕೆಗಳನ್ನು ಪರಿಶೀಲಿಸಬೇಕು ಎಂದೂ ಮನವಿ ಮಾಡಿದ್ದಾರೆ. ಈ ಹಿಂದೆ ತಹಶೀಲ್ದಾರ್ ಹಾಗೂ ಸಹಾಯಕ ಆಯುಕ್ತರಿಗೂ ಈ ಸಂಬಂಧ ದೂರು ಸಲ್ಲಿಸಿದ್ದಾಗಿ ಅವರು ತಿಳಿಸಿದ್ದಾರೆ.
-
ಮಂಗಳೂರು21 hours ago
ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಕೇಸ್: ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆ
-
ಮಂಗಳೂರು24 hours agoPrajwal R. Shetty-ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ಆಯ್ಕೆ
-
ಬಿಗ್ ನ್ಯೂಸ್24 hours agoShreyas C. Bhandari-ಪುತ್ತೂರಿನ ಶ್ರೇಯಸ್ ಸಿ. ಭಂಡಾರಿ ವಿಜ್ಞಾನ ಮಾದರಿಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ – ಜಪಾನ್ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆ
-
ದಕ್ಷಿಣ ಕನ್ನಡ9 hours ago
ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ₹6.86 ಕೋಟಿ ವಂಚನೆ ಆರೋಪ: ಕಾರ್ಯನಿರ್ವಾಹಣಾಧಿಕಾರಿ ಹಾಗೂ ಮಹಿಳೆ ವಿರುದ್ಧ FIR
-
ಅಪರಾಧ7 hours agoPuttur-ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ದೂರು: ಪ್ರಕರಣ ದಾಖಲು
-
ಮಂಗಳೂರು6 hours agoSoujanya Case-Big Breaking: ಸೌಜನ್ಯ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ : SIT ವಿಚಾರಣೆಗೆ ಆಗಮಿಸಿದ ಎಸ್ಐ ಯೋಗೀಶ್ – ಸಿಐಡಿ ಡಿವೈಎಸ್ಪಿ ರುದ್ರಮುನಿ – ಭಾಸ್ಕರ್ ರೈ
-
ಅಂತರ ರಾಜ್ಯ6 hours agoHigh Court-ಅನ್ಯಧರ್ಮದವರಿಗೆ ಹಿಂದೂ ದೇಗುಲ ಪ್ರವೇಶ ನಿರ್ಬಂಧ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು
-
ನಿಧನ ವಾರ್ತೆ5 hours agoUppinangadi-ತೆಂಗಿನಕಾಯಿ ಕೀಳಲು ಉಪ್ಪಿನಂಗಡಿಯಿಂದ ಕರೆದೊಯ್ದ ಕಾರ್ಮಿಕ ಶಿವಮೊಗ್ಗದಲ್ಲಿ ನಿಗೂಢ ಸಾವು; ದೂರು ದಾಖಲು


















